ನವದೆಹಲಿ: ಇತ್ತೀಚೆಗೆ ಅದ್ಧೂರಿಯಾಗಿ ವಿವಾಹಪೂರ್ವ ಕಾರ್ಯಕ್ರಮ ಆಚರಿಸಿದ್ದ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ (Mukesh Ambani) ಪುತ್ರ ಅನಂತ್ ಅಂಬಾನಿ (Anant Ambani) ಹಾಗೂ ಉದ್ಯಮಿ ವಿರೇನ್ ಮರ್ಚಂಟ್ ಪುತ್ರಿ ರಾಧಿಕಾ ಮರ್ಚಂಟ್ (Radhika Merchant) ಜುಲೈಯಲ್ಲಿ ಸಪ್ತಪದಿ ತುಳಿಯಲಿದ್ದಾರೆ. ಇದೀಗ ಈ ಪ್ರತಿಷ್ಠಿತ ವಿವಾಹ ನಡೆಯುವ ಸ್ಥಳದ ಮಾಹಿತಿ ಬಹಿರಂಗಗೊಂಡಿದೆ. ಲಂಡನ್‌ನ ಸ್ಟೋಕ್ ಪಾರ್ಕ್ ಎಸ್ಟೇಟ್ (Stoke Park estate)ನಲ್ಲಿ ನಡೆಯಲಿರುವ ವೈಭವದ ಸಮಾರಂಭದಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ವಿವಾಹವಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ (Anant-Radhika Wedding).
ಈಗಾಗಲೇ ಬಾಲಿವುಡ್‌ನ ಖ್ಯಾತ ಕಲಾವಿದರಿಗೆಲ್ಲ ಆಮಂತ್ರಣ ಪತ್ರಿಕೆ ನೀಡಲಾಗಿದೆ ಎಂದು ವರದಿಯೊಂದು ಹೇಳಿದೆ. ಮದುವೆಯ ಸಿದ್ಧತೆಗಳೆಲ್ಲ ಈಗಾಗಲೇ ಆರಂಭವಾಗಿದ್ದು, ಅನಂತ್ ಅವರ ತಾಯಿ ನೀತಾ ಅಂಬಾನಿ ಎಲ್ಲದರ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಪ್ರಿ ವೆಡ್ಡಿಂಗ್ ಕಾರ್ಯಕ್ರಮವನ್ನೂ ನೀತಾ ಅಂಬಾನಿ ಅವರೇ ಯಶಸ್ವಿಯಾಗಿ ನಿರ್ವಹಿಸಿದ್ದರು.
ಸ್ಟೋಕ್ ಪಾರ್ಕ್‌ನಲ್ಲಿ ಆಯೋಜಿಸಲಾಗುವ ಈ ಸಮಾರಂಭದ ಥೀಮ್ ಇನ್ನೂ ಬಹಿರಂಗಗೊಂಡಿಲ್ಲ. ಇಲ್ಲಿ ಕಾಕ್‌ಟೈಲ್ ಅಥವಾ ಸಂಗೀತ್ ನೈಟ್ ಆಯೋಜಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿದೆ. ಈ ತಿಂಗಳ ಆರಂಭದಲ್ಲಿ ಅನಂತ್ ಮತ್ತು ರಾಧಿಕಾ ದುಬೈಯ ಎರಡು ಪ್ರತಿಷ್ಠಿತ ಮಾಲ್‌ಗಳಲ್ಲಿ ಬಿಗಿ ಭದ್ರತೆಯ ನಡುವೆ ಶಾಪಿಂಗ್ ಮಾಡುತ್ತಿರುವ ವಿಡಿಯೊ ವೈರಲ್ ಆಗಿತ್ತು.
ಅದ್ಧೂರಿ ಪ್ರೀ ವೆಡ್ಡಿಂಗ್
ಗುಜರಾತ್‌ನ ಜಾಮ್‌ನಗರದಲ್ಲಿ ಕಳೆದ ತಿಂಗಳು ಅದ್ಧೂರಿ ಪ್ರೀ ವೆಡ್ಡಿಂಗ್ ಸಮಾರಂಭ ಆಯೋಜಿಸಲಾಗಿತ್ತು. ಅಂದಾಜು 12,00 ಕೋಟಿ ರೂ.ಗಳಲ್ಲಿ ಈ ಸಮಾರಂಭ ನಡೆದಿತ್ತು. ದೇಶ-ವಿದೇಶಗಳ ಗಣ್ಯರ ಉಪಸ್ಥಿತಿ, ಬಾಲಿವುಡ್ ನಟ-ನಟಿಯರ ಹಾಡು, ನೃತ್ಯ, ಮೋಜು-ಮಸ್ತಿಯನ್ನು ಆಯೋಜಿಸಲಾಗಿತ್ತು. ಖ್ಯಾತ ಪಾಪ್ ಗಾಯಕಿ ರಿಹಾನಾ, ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ ಕುಟುಂಬಸ್ಥರು, ಸಲ್ಮಾನ್ ಖಾನ್, ಶಾರುಖ್ ಖಾನ್, ಆಮೀರ್ ಖಾನ್, ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಗೌತಮ್ ಅದಾನಿ, ಆಲಿಯಾ ಭಟ್, ರಣಬೀರ್ ಕಪೂರ್, ಬಿಲ್ ಗೇಟ್ಸ್ ಸೇರಿ ದೇಶ-ವಿದೇಶಗಳ ನೂರಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಅನಂತ್ ಮತ್ತು ರಾಧಿಕಾ ಅವರ ವಿವಾಹ ನಿಶ್ಚಿತಾರ್ಥ ಆಪ್ತರ ಸಮ್ಮುಖದಲ್ಲಿ 2023ರ ಜನವರಿಯಲ್ಲಿ ಮುಂಬೈಯಲ್ಲಿ ಸಾಂಪ್ರದಾಯಿಕವಾಗಿ ನಡೆದಿತ್ತು. ವಿವಾಹ ನಡೆಯಲಿರುವ ಸ್ಟೋಕ್ ಪಾರ್ಕ್ ಎಸ್ಟೇಟ್ ಸುಮಾರು 900 ವರ್ಷಗಳ ಇತಿಹಾಸ ಹೊಂದಿದ್ದು, ಈ ಐತಿಹಾಸಿಕ ಸ್ಥಳದಲ್ಲಿ ಬಹಳ ವಿಶೇಷ ರೀತಿಯಲ್ಲೇ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂಧು ಮೂಲಗಳು ಹೇಳಿವೆ.
ಇದನ್ನೂ ಓದಿ: Anant Ambani wedding: 2500 ಐಟಂ, 20 ಲೇಡಿ ಶೆಫ್‌ಗಳು… ಇನ್ನೂ ಇದೆ ಅನಂತ್ ಅಂಬಾನಿ- ರಾಧಿಕಾ ಮದುವೆ ವಿಶೇಷ!
An Auspicious Beginning
— Nita Mukesh Ambani Cultural Centre (@nmacc_india) February 25, 2024
Ushering in Anant Ambani and Radhika Merchant's much-awaited wedding, the Ambani family has facilitated the construction of new temples within a sprawling temple complex in Jamnagar, Gujarat. pic.twitter.com/xKZwCauWzG
ಜಾಮ್‌ನಗರದ ವಿಶೇಷತೆ
ಅನಂತ್ ಮತ್ತು ರಾಧಿಕಾ ಅವರ ವಿವಾಹಪೂರ್ವ ಸಮಾರಂಭ ನಡೆದ ಜಾಮ್‌ನಗರಕ್ಕೂ ಅಂಬಾನಿ ಕುಟುಂಬಕ್ಕೂ ಬಿಡಿಸಲಾರದ ನಂಟಿದೆ. “ಜಾಮ್‌ನಗರದಲ್ಲೇ ವಿವಾಹ ಪೂರ್ವ ಕಾರ್ಯಕ್ರಮ ಆಯೋಜಿಸಲು ಬೇರೆ ದೇಶಗಳ ಬದಲು ದೇಶದಲ್ಲಿಯೇ ಮದುವೆಯಾಗಿ (Wed In India) ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದು ನನಗೆ ಸ್ಫೂರ್ತಿಯಾಯಿತು. ಇನ್ನು, ಜಾಮ್‌ನಗರವು ನನ್ನ ಅಜ್ಜಿಯ ಜನ್ಮಸ್ಥಳವಾಗಿದೆ. ಅಷ್ಟೇ ಅಲ್ಲ, ನನ್ನ ಅಜ್ಜ ಧೀರೂಭಾಯಿ ಅಂಬಾನಿ ಹಾಗೂ ಅಪ್ಪ ಮುಕೇಶ್ ಅಂಬಾನಿ ಅವರು ಜಾಮ್‌ನಗರದಿಂದಲೇ ಉದ್ಯಮ ಆರಂಭಿಸಿದ್ದಾರೆ. ಹಾಗಾಗಿ, ಜಾಮ್‌ನಗರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ” ಎಂದು ಅನಂತ್ ಈ ಹಿಂದೆ ತಿಳಿಸಿದ್ದರು.