Site icon Vistara News

Anurag Thakur: ಇಂಡಿಯಾ ಕೂಟದ ಕೊಳಕು ರಾಜಕಾರಣ ತೆರೆದಿಟ್ಟ ಅನುರಾಗ್ ಠಾಕೂರ್; ಈ ವಿಡಿಯೊ ತಪ್ಪದೇ ನೋಡಿ ಎಂದ ಮೋದಿ!

anurag thakur

ನವದೆಹಲಿ: ಜಾತಿಗಣತಿ ವಿಚಾರವಾಗಿ ನಿನ್ನೆ ಸಂಸತ್‌ನಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ(Rahul Gandhi) ಮತ್ತು ಸಮಾವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌(Akhilesh Yadav)ಗೆ ಸಖತ್‌ ಟಾಂಗ್‌ ಕೊಟ್ಟ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌(Anurag Thakur)ಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಮೆಚ್ಚು ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಿನ್ನೆ ನಡೆದ ವಾಕ್ಸಮರದ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಎಲ್ಲರೂ ಕೇಳಿ ಎಂದು ಮನವಿ ಮಾಡಿದ್ದಾರೆ.

ಸಂಸತ್‌ನಲಿ ಮಾತನಾಡಿದ ಅನುರಾಗ್‌ ಠಾಕೂರ್‌, “ದೇಶದಲ್ಲಿ ಜಾತಿಗಣತಿ ಬಗ್ಗೆ ತುಂಬ ಮಾತನಾಡುತ್ತಾರೆ. ಜಾತಿಗಣತಿಯನ್ನು ಲೋಕಸಭೆಯಲ್ಲಿ ಮಂಡಿಸುತ್ತೇವೆ ಎನ್ನುತ್ತಾರೆ. ಆದರೆ, ಜಾತಿಗಣತಿ ಬಗ್ಗೆ ಮಾತನಾಡುವವರಿಗೇ ತಮ್ಮ ಜಾತಿ ಯಾವುದು ಎಂದು ಗೊತ್ತಿಲ್ಲ” ಎಂಬುದಾಗಿ ಅನುರಾಗ್‌ ಠಾಕೂರ್‌ ಟೀಕಿಸಿದರು. ಇದೀಗ ಈ ವಿಡಿಯೋವನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದು, ನನ್ನ ಸಂಪುಟ ಸಹೋದ್ಯೋಗಿಯ ಭಾಷಣವನ್ನು ಕೇಳಲೇಬೇಕು. ನೈಜಾಂಶ ಮತ್ತು ಹಾಸ್ಯಭರಿತವಾದ ಅವರ ಮಾತುಗಳು ಇಂಡಿ ಒಕ್ಕೂಟದ ಕೊಳಕು ರಾಜಕೀಯವನ್ನು ಬಯಲಿಗೆಳೆದಿದೆ ಎಂದಿದ್ದಾರೆ.

“ದೇಶದಲ್ಲಿ ಜಾತಿಗಣತಿ ಬಗ್ಗೆ ತುಂಬ ಮಾತನಾಡುತ್ತಾರೆ. ಜಾತಿಗಣತಿಯನ್ನು ಲೋಕಸಭೆಯಲ್ಲಿ ಮಂಡಿಸುತ್ತೇವೆ ಎನ್ನುತ್ತಾರೆ. ಆದರೆ, ಜಾತಿಗಣತಿ ಬಗ್ಗೆ ಮಾತನಾಡುವವರಿಗೇ ತಮ್ಮ ಜಾತಿ ಯಾವುದು ಎಂದು ಗೊತ್ತಿಲ್ಲ” ಎಂಬುದಾಗಿ ಅನುರಾಗ್‌ ಠಾಕೂರ್‌ ಟೀಕಿಸಿದರು. ಇದಕ್ಕೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಅವರು ತಿರುಗೇಟು ನೀಡಿದರು. “ಬೇರೆಯವರ ಜಾತಿಯನ್ನು ಕೇಳುವುದು ಎಷ್ಟು ಸರಿ” ಎಂದು ತಿರುಗೇಟು ನೀಡಿದರು.

ಅನುರಾಗ್‌ ಠಾಕೂರ್‌ ಹೇಳಿಕೆಗೆ ರಾಹುಲ್‌ ಗಾಂಧಿ ಪ್ರತ್ಯುತ್ತರ ನೀಡಿದರು. “ನೀವು ನನ್ನನ್ನು ಎಷ್ಟು ಅವಮಾನಿಸುತ್ತೀರೋ ಅವಮಾನಿಸಿ. ಆದರೆ, ನಾವು ಸಂಸತ್‌ನಲ್ಲಿ ಜಾತಿಗಣತಿ ವಿಧೇಯಕ ಮಂಡಿಸುತ್ತೇವೆ ಎಂಬುದನ್ನು ನೀವು ಮರೆಯದಿರಿ” ಎಂದರು. “ಅನುರಾಗ್‌ ಠಾಕೂರ್‌ ಅವರು ನನ್ನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ನನ್ನನ್ನು ಅವಮಾನಿಸಿದ್ದಾರೆ. ಆದರೆ, ನಾನು ಅವರು ಕ್ಷಮೆ ಕೇಳಿ ಎಂಬುದಾಗಿ ಆಗ್ರಹಿಸುವುದಿಲ್ಲ. ಎಷ್ಟು ಬೇಕಾದರೂ ಅವಮಾನ ಮಾಡಲಿ” ಎಂದರು.

ಸಂಸತ್‌ನಲ್ಲಿ ಸೋಮವಾರ (ಜುಲೈ 29) ರಾಹುಲ್‌ ಗಾಂಧಿ ಅವರು ಕೇಂದ್ರದ ವಿರುದ್ಧ ಹರಿಹಾಯ್ದಿದ್ದರು. ದೇಶದ ಜನರ ಸುತ್ತ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೆಣೆದ ಚಕ್ರವ್ಯೂಹವನ್ನು ನಾವು ಭೇದಿಸುತ್ತೇವೆ. ಚಕ್ರವ್ಯೂಹವನ್ನು ನಮಗೆ ಭೇದಿಸುವುದು ಗೊತ್ತಿದೆ. ಯಾವ ಜಾತಿಗಣತಿ ಎಂದರೆ ನೀವು (ಬಿಜೆಪಿ) ಹೆದರುತ್ತೀರೋ, ಅದೇ ಜಾತಿಗಣತಿಯನ್ನು ಇದೇ ಸದನದಲ್ಲಿ ನಾವು ಮಂಡಿಸುತ್ತೇವೆ. ನಿಮಗೆ ಇಷ್ಟ ಇದೆಯೋ ಇಲ್ಲವೋ, ನಾವು ಇದೇ ಸದನದಲ್ಲಿ ಜಾತಿಗಣತಿಯನ್ನು ಮಂಡಿಸುತ್ತೇವೆ. ದೇಶದ ಜನ ಅರ್ಜುನನ ರೀತಿ ಚಕ್ರವ್ಯೂಹವನ್ನು ಭೇದಿಸಲಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದರು.

ಇದನ್ನೂ ಓದಿ:Rahul Gandhi: ರಾಹುಲ್‌ ಮಾತಿಗೆ ಹಣೆ ಚಚ್ಚಿಕೊಂಡು, ಮುಖ ಮುಚ್ಚಿಕೊಂಡ ಸಚಿವೆ ನಿರ್ಮಲಾ: ಭಾರೀ ವೈರಲಾಗ್ತಿದೆ ಈ ವಿಡಿಯೋ

Exit mobile version