Viral Video | ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಬಸ್​ ತಳ್ಳಿ, ಸಹಾಯ ಮಾಡಿದ ಕೇಂದ್ರ ಸಚಿವ ಅನುರಾಗ್​ ಠಾಕೂರ್​ - Vistara News

ದೇಶ

Viral Video | ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಬಸ್​ ತಳ್ಳಿ, ಸಹಾಯ ಮಾಡಿದ ಕೇಂದ್ರ ಸಚಿವ ಅನುರಾಗ್​ ಠಾಕೂರ್​

ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ನವೆಂಬರ್​ 12ರಂದು ನಡೆಯಲಿದ್ದು, ತನ್ನಿಮಿತ್ತ ಪ್ರಚಾರ ನಡೆಸಲು ಅನುರಾಗ್ ಠಾಕೂರ್ ಅಲ್ಲಿಗೆ ಹೋಗಿದ್ದರು. ಈ ವೇಳೆ ಹೈವೇದಲ್ಲಿ ಬಸ್​ ಕೆಟ್ಟು ನಿಂತಿತ್ತು.

VISTARANEWS.COM


on

Anuragh Thakur
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೇಂದ್ರ ಯುವಜನ ಮತ್ತು ಕ್ರೀಡಾ ಸಚಿವ ಅನುರಾಗ್​ ಠಾಕೂರ್ ಇಷ್ಟು ಸಿಂಪಲ್​​ ವ್ಯಕ್ತಿನಾ? – ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಬಸ್​ನ್ನು ಸ್ಥಳೀಯರೊಂದಿಗೆ ಸೇರಿ ತಳ್ಳುವಷ್ಟು !. ಸಾಮಾನ್ಯವಾಗಿ ಸಚಿವರು, ಅದರಲ್ಲೂ ಕೇಂದ್ರ ಸಚಿವರು ತಾವು ಸಾಗುವ ಮಾರ್ಗದಲ್ಲಿ ಹಾಳಾಗಿ ನಿಂತ ವಾಹನಗಳ ಬಗ್ಗೆಯೆಲ್ಲ ಗಮನ ಹರಿಸುವುದಿಲ್ಲ. ಸಚಿವರು ಹೊರಟರೆ ಅವರ ಜತೆ ಬೆಂಗಾವಲು ವಾಹನಗಳೂ ಹೋಗುತ್ತವೆ. ಪೂರ್ತಿ ರಕ್ಷಣೆಯ ಮಧ್ಯೆಯೇ ಇರುತ್ತಾರೆ. ಹೀಗಿರುವಾಗ ಅನುರಾಗ್ ಠಾಕೂರ್​ ವಿಭಿನ್ನ ಎನ್ನಿಸಿದ್ದಾರೆ.

ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ನಿಮಿತ್ತ ಅನುರಾಗ್ ಠಾಕೂರ್​ ಅಲ್ಲಿ ಮಂಗಳವಾರ ಚುನಾವಣಾ ಪ್ರಚಾರ ಸಭೆ ನಡೆಸಿದ್ದರು. ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ ವಾಪಸ್ ಹೋಗುತ್ತಿದ್ದರು. ಅವರೊಂದಿಗೆ ಬೆಂಗಾವಲು ವಾಹನಗಳೂ ಇದ್ದವು. ಇದೇ ವೇಳೆ ಬಿಲಾಸ್​ಪುರ ಹೆದ್ದಾರಿಯಲ್ಲಿ ಬಸ್​ವೊಂದು ಕೆಟ್ಟು ನಿಂತ ಪರಿಣಾಮ, ಅಲ್ಲಿ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿತ್ತು. ಕೂಡಲೇ ತಮ್ಮ ವಾಹನ ನಿಲ್ಲಿಸುವಂತೆ ಹೇಳಿದ ಅನುರಾಗ್ ಠಾಕೂರ್​ ಕೆಳಗೆ ಇಳಿದು ಬಸ್​ ಬಳಿ ಹೋಗಿದ್ದಾರೆ. ಆಗ ಅಲ್ಲೊಂದಷ್ಟು ಜನ ಸೇರಿಕೊಂಡು ಬಸ್​​ನ್ನು ಹಿಮ್ಮುಖವಾಗಿ ತಳ್ಳುತ್ತಿದ್ದರು. ರಸ್ತೆ ಮಧ್ಯೆ ನಿಂತ ಬಸ್​ನ್ನು ಸ್ವಲ್ಪ ಹಿಂದಕ್ಕೆ, ಬದಿಗೆ ತಳ್ಳುವ ಪ್ರಯತ್ನದಲ್ಲಿ ಅವರು ತೊಡಗಿದ್ದರು. ಅಲ್ಲಿಗೆ ಹೋದ ಅನುರಾಗ್ ಠಾಕೂರ್​ ತಾವೂ ಕೈಸೇರಿಸಿದ್ದಾರೆ. ಬಸ್​​ ತಳ್ಳಿದ್ದಾರೆ. ಕೇಂದ್ರ ಸಚಿವರೇ ಹೋಗಿ ಬಸ್​ ನೂಕಿದ್ದನ್ನು ನೋಡಿ, ಬೆಂಗಾವಲು ಪಡೆ ಸಿಬ್ಬಂದಿಯೂ ಆ ಬಸ್​ ತಳ್ಳಿದ್ದಾರೆ. ಅಂತಿಮವಾಗಿ ಬಸ್​ ಚಲಿಸಿದೆ. ಅದರಲ್ಲಿದ್ದ ಪ್ರಯಾಣಿಕರ ಬಗ್ಗೆಯೂ ಅನುರಾಗ್​ ಠಾಕೂರ್​ ಅವರು ಡ್ರೈವರ್​ ಬಳಿ ವಿಚಾರಿಸಿ, ಏನೂ ತೊಂದರೆಯಾಗಿಲ್ಲ ಎಂದು ಖಚಿತ ಪಡಿಸಿಕೊಳ್ಳು ಅಲ್ಲಿಂದ ತೆರಳಿದ್ದಾರೆ. ವಿಡಿಯೊ ನೆಟ್ಟಿಗರ ಮನ ಗೆದ್ದಿದೆ.

ಇದನ್ನೂ ಓದಿ: ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದ ಎನ್‌ಜಿಒ ವರದಿ ತಿರಸ್ಕರಿಸಿದ ಭಾರತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Heat Wave: ಬಿಹಾರದಲ್ಲಿ ಬಿಸಿಲಾಘಾತ; ಶಾಖಕ್ಕೆ 10 ಮತಗಟ್ಟೆ ಸಿಬ್ಬಂದಿ ಸೇರಿ 14 ಮಂದಿ ಬಲಿ

Heat Wave: ಬಿಹಾರದಲ್ಲಿ ಬಿಸಿಗಾಳಿಯ ಶಾಖಕ್ಕೆ ಜನ ತತ್ತರಿಸಿ ಹೋಗಿದ್ದು, 24 ಗಂಟೆಗಳಲ್ಲಿ 10 ಮತಗಟ್ಟೆ ಸಿಬ್ಬಂದಿ ಸೇರಿ ಸುಮಾರು 14 ಮಂದಿ ಬಿಸಿಲಿನ ಶಾಖಕ್ಕೆ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಸಾವು ನೋವು ಭೋಜ್‌ಪುರದಲ್ಲಿ ನಡೆದಿದ್ದು, ಅಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ 5 ಮಂದಿ ಮೃತಪಟ್ಟಿದ್ದಾರೆ. ರೋಹ್ಟಾಸ್‌ನಲ್ಲಿ ಮೂವರು ಚುನಾವಣಾ ಅಧಿಕಾರಿಗಳು, ಕೈಮೂರ್ ಮತ್ತು ಔರಂಗಾಬಾದ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಜೀವ ಕಳೆದುಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

VISTARANEWS.COM


on

Heat Wave
Koo

ಪಟನಾ: ದೇಶದಲ್ಲಿ ಕಂಡು ಕೇಳರಿಯದ ಪ್ರಮಾಣದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿದೆ. ಜತೆಗೆ ಉತ್ತರ ಭಾರತದ ವಿವಿಧ ಭಾಗದಲ್ಲಿ ಬಿಸಿಗಾಳಿ (Heat Wave) ಬೀಸುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಅದರಲ್ಲಿಯೂ ಬಿಹಾರ(Bihar)ದಲ್ಲಿ ಬಿಸಿಗಾಳಿಯ ಶಾಖಕ್ಕೆ ಜನ ತತ್ತರಿಸಿ ಹೋಗಿದ್ದಾರೆ. 24 ಗಂಟೆಗಳಲ್ಲಿ 10 ಮತಗಟ್ಟೆ ಸಿಬ್ಬಂದಿ ಸೇರಿ ಸುಮಾರು 14 ಮಂದಿ ಬಿಸಿಲಿನ ಶಾಖಕ್ಕೆ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಪತ್ತು ನಿರ್ವಹಣಾ ಇಲಾಖೆ ಹೊರಡಿಸಿದ ಪ್ರಕಟಣೆಯಲ್ಲಿ ಈ ವಿವರಗಳನ್ನು ನೀಡಲಾಗಿದೆ. ಹೆಚ್ಚಿನ ಸಾವು ನೋವು ಭೋಜ್‌ಪುರದಲ್ಲಿ ನಡೆದಿದ್ದು, ಅಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ 5 ಮಂದಿ ಮೃತಪಟ್ಟಿದ್ದಾರೆ. ರೋಹ್ಟಾಸ್‌ನಲ್ಲಿ ಮೂವರು ಚುನಾವಣಾ ಅಧಿಕಾರಿಗಳು, ಕೈಮೂರ್ ಮತ್ತು ಔರಂಗಾಬಾದ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಜೀವ ಕಳೆದುಕೊಂಡಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

ಜತೆಗೆ ರಾಜ್ಯದ ವಿವಿಧ ಭಾಗಳಲ್ಲಿಯೂ ಅನೇಕರು ಬಿಸಿಲಿನ ಝಳಕ್ಕೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ. ರಾಜ್ಯದ ಹಲವೆಡೆ ತಾಪಮಾನ 44 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಗುರುವಾರ ಬಕ್ಸಾರ್‌ನಲ್ಲಿ ಅತೀ ಹೆಚ್ಚು 47.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಬಿಸಿ ಗಾಳಿ ವ್ಯಾಪಕವಾಗಿ ಬೀಸುತ್ತಿರುವ ಪರಿಣಾಮ ಎಲ್ಲ ಶಾಲೆಗಳು, ಕೋಚಿಂಗ್‌ ಸೆಂಟರ್‌ಗಳು ಮತ್ತು ಅಂಗನವಾಡಿಗಳಿಗೆ ಜೂನ್‌ 8ರ ತನಕ ರಜೆ ಸಾರಲಾಗಿದೆ.

ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್ ಶಾಲೆಗಳಿಗೆ ಶಿಕ್ಷಕರು ಬರಬೇಕು ಎನ್ನುವ ಸರ್ಕಾರದ ಆದೇಶದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ “ಪ್ರತಿಪಕ್ಷಗಳ ಒತ್ತಡದಿಂದಾಗಿ ಸರ್ಕಾರಿ ಶಾಲೆಗಳನ್ನು ಈಗಾಗಲೇ ಮುಚ್ಚಲಾಗಿದೆ. ಈ ತೀವ್ರ ಶಾಖದ ಅಲೆ ಎಲ್ಲೆಡೆ ವ್ಯಾಪಿಸಿರುವಾಗ ಶಿಕ್ಷಕರನ್ನು ಶಾಲೆಗಳಿಗೆ ಬರಲು ಏಕೆ ಹೇಳಲಾಗುತ್ತಿದೆ? ವಿದ್ಯಾರ್ಥಿಗಳು ಸ್ವತಃ ಶಾಲೆಯಲ್ಲಿ ಇಲ್ಲದಿದ್ದಾಗ ಶಿಕ್ಷಕರು ಏನು ಮಾಡುತ್ತಾರೆ? ಈ ಸುಡುವ ಬಿಸಿಲಿನಲ್ಲಿ ಶಿಕ್ಷಕರಿಗೂ ರಜೆ ನೀಡಬೇಕುʼʼ ಎಂದು ಆಗ್ರಹಿಸಿದ್ದಾರೆ. ಲೋಕಸಭಾ ಚುನಾವಣೆ ಕೊನೆಯ ಹಂತದ ಮತದಾನ ಇಂದು (ಶನಿವಾರ) ನಡೆಯುತ್ತಿದ್ದು, ಉಷ್ಣಾಂಶದ ಹೆಚ್ಚಳ ಪರಿಣಾಮ ಬೀರುವ ಸಾಧ್ಯತೆ ಇದೆ.

ಇದನ್ನೂ ಓದಿ: Heat Wave: ಬಿಸಿಗಾಳಿ ಶಾಖಕ್ಕೆ ಉತ್ತರ ಭಾರತ ಸಂಪೂರ್ಣ ತತ್ತರ; ಎಮರ್ಜೆನ್ಸಿ ಘೋಷಣೆ ಆಗುತ್ತಾ?

ನಾಗ್ಪುರದಲ್ಲಿ 56 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಾಖಲೆಯ 52.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿರುವ ಎರಡು ದಿನಗಳ ನಂತರ ಮಹಾರಾಷ್ಟ್ರದ ನಾಗ್ಪುರದಲ್ಲಿ ತಾಪಮಾನ 50 ಡಿಗ್ರಿ ಸೆಲ್ಸಿಯಸ್ ಮೀರಿದೆ. ಗುರುವಾರ ಇದು 56 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಇದು ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಾರಾಷ್ಟ್ರದ ಉತ್ತರ ಅಂಬಾಜಾರಿ ರಸ್ತೆಯ ರಾಮದಾಸ್​ಪೇಟ್​​ನ ಪಿಡಿಕೆವಿಯಲ್ಲಿರುವ 24 ಹೆಕ್ಟೇರ್ ತೆರೆದ ಕೃಷಿ ಕ್ಷೇತ್ರದಲ್ಲಿರುವ ಹವಾಮಾನ ಕೇಂದ್ರದಲ್ಲಿ 56 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಸೋನೆಗಾಂವ್​ನ ಪ್ರಾದೇಶಿಕ ಹವಾಮಾನ ಕೇಂದ್ರದಲ್ಲಿ 54 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಿಸಿದೆ. ವಾರ್ಧಾ ರಸ್ತೆಯ ಖಾಪ್ರಿಯಲ್ಲಿರುವ ಸೆಂಟ್ರಲ್ ಇನ್ಸ್​ಟಿಟ್ಯೂಟ್​ ಆಫ್ ಕಾಟನ್ ರಿಸರ್ಚ್ ಪ್ರದೇಶದ ಹೊಲಗಳಲ್ಲಿನ ಅಂಗನವಾಡಿ ಕೇಂದ್ರವು 44 ಡಿಗ್ರಿ ಸೆಲ್ಸಿಯಸ್ ಮತ್ತು ರಾಮ್ಟೆಕ್ ಎಡಬ್ಲ್ಯೂಎಸ್ 44 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕಂಡು ಬಂದಿದೆ.

Continue Reading

ಪ್ರಮುಖ ಸುದ್ದಿ

New Driving Licence Rules: ಇಂದಿನಿಂದ ಹೊಸ ಟ್ರಾಫಿಕ್‌ ರೂಲ್ಸ್: ತರಬೇತಿ ಕೇಂದ್ರಗಳಲ್ಲೇ ಟೆಸ್ಟ್‌, ಅಪ್ರಾಪ್ತರಿಗೆ ವಾಹನ ಕೊಟ್ರೆ ನೋಂದಣಿ ರದ್ದು

Driving Licence: ಜೂನ್ 1 ರಿಂದ, ಅರ್ಜಿದಾರರು ಸರ್ಕಾರಿ ಸ್ವಾಮ್ಯದ ಆರ್‌ಟಿಒಗಳಿಗೆ ಹೋಗುವ ಬದಲು ಖಾಸಗಿ ಚಾಲನಾ ತರಬೇತಿ ಕೇಂದ್ರಗಳಲ್ಲಿ ಚಾಲನಾ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು. ಇದು ಪರವಾನಗಿ ಅರ್ಹತೆಗಾಗಿ ಪ್ರಮಾಣಪತ್ರಗಳನ್ನು ನೀಡಲು ಸಹ ಅಧಿಕಾರ ನೀಡುತ್ತದೆ.

VISTARANEWS.COM


on

driving licence
Koo

ಹೊಸದಿಲ್ಲಿ: ಇಂದಿನಿಂದ (ಜೂನ್ 1) ದೇಶಾದ್ಯಂತ ಚಾಲನಾ ಪರವಾನಗಿ (Driving licence) ನಿಯಮಗಳಲ್ಲಿ ಹಲವು ಬದಲಾವಣೆಗಳು ಆಗಲಿವೆ. ರಸ್ತೆ ಸಾರಿಗೆ ಸಚಿವಾಲಯವು ಡ್ರೈವಿಂಗ್‌ ಲೈಸೆನ್ಸ್‌ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ಉದ್ದನೆಯ ಸರತಿ ಸಾಲುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಹೊಸ ನಿಯಮಗಳನ್ನು (New Driving licence Rules) ಪ್ರಕಟಿಸಿದೆ.

ಜೂನ್ 1 ರಿಂದ, ಅರ್ಜಿದಾರರು ಸರ್ಕಾರಿ ಸ್ವಾಮ್ಯದ ಆರ್‌ಟಿಒಗಳಿಗೆ ಹೋಗುವ ಬದಲು ಖಾಸಗಿ ಚಾಲನಾ ತರಬೇತಿ ಕೇಂದ್ರಗಳಲ್ಲಿ ಚಾಲನಾ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು. ಇದು ಪರವಾನಗಿ ಅರ್ಹತೆಗಾಗಿ ಪ್ರಮಾಣಪತ್ರಗಳನ್ನು ನೀಡಲು ಸಹ ಅಧಿಕಾರ ನೀಡುತ್ತದೆ. ಈ ಕ್ರಮವು ಸರ್ಕಾರಿ ಸ್ವಾಮ್ಯದ ಆರ್‌ಟಿಒಗಳ ಮೇಲಿನ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ಸುದೀರ್ಘ ಅವಧಿಯ ಕಾಯುವ ಸಮಯವನ್ನು ಕಡಿಮೆ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ.

ಹೆಚ್ಚುವರಿಯಾಗಿ, ಹೊಸ ಪರವಾನಗಿ ಅರ್ಜಿಗಳಿಗೆ ದಾಖಲಾತಿ ಅವಶ್ಯಕತೆಗಳನ್ನು ಸರ್ಕಾರ ಸರಳಗೊಳಿಸಿದೆ. ಜೂನ್‌ನಿಂದ, ವಾಹನದ ಪ್ರಕಾರದ ಆಧಾರದ ಮೇಲೆ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಇದು ಆರ್‌ಟಿಒಗಳಲ್ಲಿ ಭೌತಿಕ ಪರಿಶೀಲನೆಯ ಅಗತ್ಯವನ್ನು ಕಡಿಮೆ ಮಾಡುತ್ತದೆ.

ಅಪ್ರಾಪ್ತರಿಗೆ ವಾಹನ ಕೊಟ್ರೆ ನೋಂದಣಿಯೇ ರದ್ದು

ಹೊಸ ನಿಯಮಗಳ ಮತ್ತೊಂದು ಪ್ರಮುಖ ಅಂಶವೆಂದರೆ ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸುವುದು ಕಂಡುಬಂದರೆ ಹೆಚ್ಚಿನ ದಂಡ ವಿಧಿಸಲಾಗುತ್ತದೆ. ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸಿ ಸಿಕ್ಕಿಬಿದ್ದರೆ, 25,000 ರೂ.ಗಳ ದಂಡ ವಿಧಿಸಲಾಗುವುದು ಮತ್ತು ವಾಹನ ಮಾಲೀಕರ ನೋಂದಣಿಯನ್ನು ರದ್ದುಗೊಳಿಸಲಾಗುವುದು. ಇದಲ್ಲದೆ, ಶಿಕ್ಷೆಗೊಳಗಾದ ಅಪ್ರಾಪ್ತ ವಯಸ್ಕರು 25 ವರ್ಷ ವಯಸ್ಸಿನವರೆಗೆ ಚಾಲನಾ ಪರವಾನಗಿಗೆ ಅರ್ಹರಾಗಿರುವುದಿಲ್ಲ. ಈ ಕಠಿಣ ಕ್ರಮವು ಅಪ್ರಾಪ್ತ ವಯಸ್ಕರ ವಾಹನ ಚಾಲನೆಯನ್ನು ತಡೆಯುತ್ತದೆ ಮತ್ತು ರಸ್ತೆ ಸುರಕ್ಷತೆಯನ್ನು ಸುಧಾರಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.

ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ಪ್ರಯತ್ನದಲ್ಲಿ, ಸುಮಾರು 9,00,000ರಷ್ಟು ಹಳೆಯ ಸರ್ಕಾರಿ ವಾಹನಗಳನ್ನು ಹಂತ ಹಂತವಾಗಿ ತೆಗೆದುಹಾಕುವ ಯೋಜನೆಯನ್ನು ಸರ್ಕಾರ ಘೋಷಿಸಿದೆ. ಈ ಉಪಕ್ರಮವು ಇಂಗಾಲ ಹೊರಸೂಸುವಿಕೆಯ ಕಠಿಣ ಮಾನದಂಡಗಳನ್ನು ಜಾರಿಗೊಳಿಸುವ ಮತ್ತು ಪರಿಸರ ಸ್ನೇಹಿ ಅಭ್ಯಾಸಗಳನ್ನು ಉತ್ತೇಜಿಸುವ ವಿಶಾಲ ಕಾರ್ಯತಂತ್ರದ ಭಾಗವಾಗಿದೆ. ಹಳೆಯ, ಹೆಚ್ಚು ಮಾಲಿನ್ಯಕಾರಕ ವಾಹನಗಳನ್ನು ರಸ್ತೆಗಳಿಂದ ತೆಗೆದುಹಾಕುವ ಮೂಲಕ, ದೇಶದ ಇಂಗಾಲದ ಹೆಜ್ಜೆಗುರುತನ್ನು ಕಡಿಮೆ ಮಾಡಲು ಮತ್ತು ಗಾಳಿಯ ಗುಣಮಟ್ಟವನ್ನು ಸುಧಾರಿಸಲು ಸರ್ಕಾರ ಉದ್ದೇಶಿಸಿದೆ.

ತರಬೇತಿ ಕೇಂದ್ರಗಳಿಗೆ ಜಮೀನಿರಬೇಕು

ತರಬೇತಿ ಕೇಂದ್ರಗಳಿಗೆ ಸರ್ಕಾರ ಹೊಸ ನಿಯಮಗಳನ್ನು ರೂಪಿಸಿದೆ. ಈ ಕೇಂದ್ರಗಳು ಲಘು ಮೋಟಾರು ವಾಹನಗಳ ತರಬೇತಿಗಾಗಿ ಕನಿಷ್ಠ 1 ಎಕರೆ ಭೂಮಿಯನ್ನು ಹೊಂದಿರಬೇಕು ಮತ್ತು ಭಾರಿ ಮೋಟಾರು ವಾಹನ ತರಬೇತಿಗಾಗಿ 2 ಎಕರೆ ಭೂಮಿ ಬೇಕಾಗುತ್ತದೆ. ಇದಲ್ಲದೆ, ಈ ಕೇಂದ್ರಗಳು ತಮ್ಮ ಪರೀಕ್ಷಾ ಸೌಲಭ್ಯಗಳಿಗೆ ಪ್ರವೇಶವನ್ನು ಒದಗಿಸಬೇಕಾಗುತ್ತದೆ, ಚಾಲನಾ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಮಾನದಂಡಗಳನ್ನು ಪೂರೈಸುತ್ತವೆ ಎಂದು ಖಚಿತಪಡಿಸಿಕೊಳ್ಳಬೇಕು.

ಹೊಸ ನಿಯಮಗಳ ಪ್ರಕಾರ, ಕಲಿಕಾ ಪರವಾನಗಿ ವಿತರಣೆಗೆ 150 ರೂ., ಕಲಿಕಾ ಪರವಾನಗಿ ಪರೀಕ್ಷೆಗೆ ಅರ್ಜಿದಾರರು 50 ರೂ. ಚಾಲನಾ ಪರೀಕ್ಷೆಗಳಿಗೆ 300 ರೂ., ಚಾಲನಾ ಪರವಾನಗಿ ನೀಡಲು 200 ರೂ. ಅರ್ಜಿಗಳನ್ನು ಸಂಸ್ಕರಿಸಲು ಮತ್ತು ಪರೀಕ್ಷೆಗಳನ್ನು ನಡೆಸಲು ಸಂಬಂಧಿಸಿದ ಆಡಳಿತಾತ್ಮಕ ವೆಚ್ಚಗಳನ್ನು ಭರಿಸಲು ಈ ಶುಲ್ಕಗಳನ್ನು ವಿನ್ಯಾಸಗೊಳಿಸಲಾಗಿದೆ.

ಇದನ್ನೂ ಓದಿ: Bengaluru Traffic: ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ ಹೊಸ ತಂತ್ರಜ್ಞಾನ; ಸಂಚಾರ ಇಲಾಖೆಯ ಪ್ಲಾನ್

Continue Reading

ದೇಶ

Lok Sabha Election: ಇಂದು ಕೊನೇ ಹಂತದ ಮತದಾನ; ಸಂಜೆ ಎಕ್ಸಿಟ್‌ ಪೋಲ್, ಇಂದೇ ತಿಳಿಯಲಿದೆ ಭವಿಷ್ಯ!

Lok Sabha Election: ಶನಿವಾರ 7 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶ ಸೇರಿ 57 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದೆ. ಶನಿವಾರ ಸಂಜೆಯೇ ಮತಗಟ್ಟೆ ಸಮೀಕ್ಷೆಗಳ ವರದಿಗಳು ಪ್ರಕಟವಾಗುವ ಕಾರಣ ಸಂಜೆಯೇ ಚುನಾವಣೆ ಫಲಿತಾಂಶದ ಅಂದಾಜು ಸಿಗಲಿದೆ.

VISTARANEWS.COM


on

Lok Sabha Election
Koo

ನವದೆಹಲಿ: ದೇಶದ ಭವಿಷ್ಯವನ್ನು ನಿರ್ಧರಿಸುವ ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದಿದೆ. ಇಂದು (ಜೂನ್‌ 1) ಏಳನೇ ಅಥವಾ ಕೊನೆಯ ಹಂತದ ಮತದಾನ ನಡೆಯಲಿದ್ದು, ಇದರೊಂದಿಗೆ ಸಾರ್ವತ್ರಿಕ ಚುನಾವಣೆ ಕೊನೆಗೊಳ್ಳಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದ್ದು, ಎಲ್ಲರ ಗಮನವೀಗ ಫಲಿತಾಂಶದ ಕಡೆ ವಾಲಿದೆ. ಶನಿವಾರ 7 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶ ಸೇರಿ 57 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದೆ.

ಉತ್ತರ ಪ್ರದೇಶದ 13 ಲೋಕಸಭೆ ಕ್ಷೇತ್ರಗಳು, ಪಂಜಾಬ್‌ 13, ಪಶ್ಚಿಮ ಬಂಗಾಳ 9, ಬಿಹಾರ 8, ಒಡಿಶಾ 6, ಹಿಮಾಚಲ ಪ್ರದೇಶ 4, ಜಾರ್ಖಂಡ್‌ 3 ಹಾಗೂ ಚಂಡೀಗಢದ 1 ಲೋಕಸಭೆ ಕ್ಷೇತ್ರದಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ನಡೆಯಲಿದೆ. ಸಂಜೆ 6 ಗಂಟೆವರೆಗೆ ಜನ ಹಕ್ಕು ಚಲಾಯಿಸಬಹುದಾಗಿದ್ದು, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆಗಾಗಿ ಆಯೋಗವು ಬಿಗಿ ಬಂದೋಬಸ್ತ್‌ ಸೇರಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರ ಭವಿಷ್ಯವು ಶನಿವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

ಇಂದು ಸಂಜೆ ಎಕ್ಸಿಟ್‌ ಪೋಲ್‌

ಶನಿವಾರ ಸಂಜೆ 6 ಗಂಟೆಗೆ ಮತದಾನ ಮುಗಿಯಲಿದ್ದು, 6.30ರ ಸುಮಾರಿಗೆ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಲಿವೆ. ಹಾಗಾಗಿ, ರಾಜಕೀಯ ನಾಯಕರು, ತಜ್ಞರು, ನಾಗರಿಕರು ಸೇರಿದಂತೆ ಎಲ್ಲರ ಗಮನ ಈಗ ಎಕ್ಸಿಟ್ ಪೋಲ್‌ಗಳತ್ತ ಇದೆ. ಜೂನ್‌ 1ರಂದು ಸಂಜೆ 6.30ರ ಹೊತ್ತಿಗೆ ವಿವಿಧ ಮಾಧ್ಯಮಗಳ ಎಕ್ಸಿಟ್‌ ಪೋಲ್‌ ಪ್ರಕಟವಾಗಲಿದೆ. ಕಳೆದ ಅನೇಕ ವರ್ಷಗಳಲ್ಲಿ ಎಕ್ಸಿಟ್ ಪೋಲ್‌ಗಳು ಮತದಾರರ ಚಿತ್ತವನ್ನು ಅಳೆಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಚುನಾವಣಾ ಆಯೋಗದ ಅಧಿಕೃತ ಘೋಷಣೆಯ ಮೊದಲೇ ಚುನಾವಣಾ ಫಲಿತಾಂಶದ ನಿಖರವಾದ ವಿವರಣೆ ಲಭ್ಯವಾಗುತ್ತದೆ.

ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳುತ್ತವೆ. ಆದರೆ ಅದರ ನಿಖರತೆಯು ಭೌಗೋಳಿಕ ವ್ಯಾಪ್ತಿ ಮತ್ತು ಮತದಾರರ ನಿಷ್ಕಪಟತೆಯಂತಹ ಬಹು ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ. ಸಾಮಾನ್ಯವಾಗಿ ಜನರು ಗುಂಪುಗಳಲ್ಲಿ ಮತ ಚಲಾಯಿಸಿದಾಗ ಗಾಳಿ ಯಾವ ಕಡೆಗೆ ಬೀಸುತ್ತಿದೆ ಎಂಬುದನ್ನು ಅಳೆಯುವುದು ಸುಲಭ. ಆದರೆ ಒಂದು ಭಾಗದ ಜನರು ತಮ್ಮ ಒಲವನ್ನು ತೋರಿಸದಿರಲು ನಿರ್ಧರಿಸಿದರೆ ಅಲ್ಲಿಯೇ ಸಮೀಕ್ಷೆದಾರರು ಸಂಖ್ಯೆಗಳನ್ನು ತಪ್ಪಾಗಿ ಬಿಡುತ್ತದೆ. ಎಕ್ಸಿಟ್ ಪೋಲ್‌ಗಳು ಕೆಲವೊಮ್ಮೆ ಸರಿ ಮತ್ತು ಕೆಲವೊಮ್ಮೆ ತಪ್ಪಾಗಿವೆ.

ಇದನ್ನೂ ಓದಿ: Modi Meditation: ಮೋದಿ ಮಾಡ್ತಿರೋದು ‘ಧ್ಯಾನ’ ಅಲ್ಲ ‘ಡ್ರಾಮಾ’ ಎಂದ ಮಲ್ಲಿಕಾರ್ಜುನ ಖರ್ಗೆ!

Continue Reading

ದೇಶ

Modi Meditation: ವಿವೇಕಾನಂದರ ಮೂರ್ತಿ ಎದುರು ಮೋದಿ ಗಾಢ ಧ್ಯಾನ; ಇಲ್ಲಿವೆ ಫೋಟೊಗಳು

Modi Medidation: Modi Meditation: ನರೇಂದ್ರ ಮೋದಿ ಅವರು ಕೇರಳ ರಾಜಧಾನಿ ತಿರುವನಂತಪುರಂನಿಂದ ಕನ್ಯಾಕುಮಾರಿಗೆ ಆಗಮಿಸಿದರು. ಧ್ಯಾನ ಆರಂಭಿಸುವ ಮೊದಲು ಅವರು ಭಗವತಿ ಅಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದಾದ ಬಳಿಕ ಮೋದಿ ಅವರು ಧ್ಯಾನ ಆರಂಭಿಸಿದರು. ಸುಮಾರು 45 ಗಂಟೆಗಳವರೆಗೆ ಮೋದಿ ಧ್ಯಾನ ಮಾಡಲಿದ್ದಾರೆ. ಇದೇ ವೇಳೆ ಅವರು ಎರಡು ದಿನವೂ ಆಹಾರ ಸೇವಿಸುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಅವರು ಧ್ಯಾನ ಮಾಡುತ್ತಿರುವ ಫೋಟೊಗಳು ಇಲ್ಲಿವೆ.

VISTARANEWS.COM


on

Modi Meditation
Koo

ಕನ್ಯಾಕುಮಾರಿ: ಲೋಕಸಭೆ ಚುನಾವಣೆ (Lok Sabha Election 2024), ಅಬ್ಬರದ ಪ್ರಚಾರ, ಸಾಲು ಸಾಲು ರ‍್ಯಾಲಿಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು (Narendra Modi) ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಶಿಲೆ ಸ್ಮಾರಕದಲ್ಲಿ (Vivekananda Rock Memorial) ಗುರುವಾರದಿಂದ (ಮೇ 30) 45 ಗಂಟೆಗಳ ಧ್ಯಾನ (Modi Meditation) ಆರಂಭಿಸಿದ್ದಾರೆ. ಜೂನ್‌ 1ರವರೆಗೆ ಮೋದಿ ಅವರು ಧ್ಯಾನಸ್ಥರಾಗಿಯೇ ಇರಲಿದ್ದಾರೆ. ಮೋದಿ ಅವರು ಗಾಢವಾಗಿ ಧ್ಯಾನ ಮಾಡುತ್ತಿರುವ ಫೋಟೊಗಳು ಇಲ್ಲಿವೆ.

ಸುಮಾರು 131 ವರ್ಷಗಳ ಹಿಂದೆ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಧ್ಯಾನ ಮಂಟಪದಲ್ಲಿ ನರೇಂದ್ರ ಮೋದಿ ಧ್ಯಾನ ಮಾಡುತ್ತಿದ್ದಾರೆ.
ನರೇಂದ್ರ ಮೋದಿ ಅವರು ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸುವುದಿಲ್ಲ. ಹಣ್ಣುಗಳನ್ನು ಕೂಡ ಅವರು ಸೇವಿಸುವುದಿಲ್ಲ. ಎರಡು ದಿನವೂ ಅವರು ಪಾನೀಯ ಮಾತ್ರ ಸೇವಿಸಲಿದ್ದಾರೆ.
ನರೇಂದ್ರ ಮೋದಿ ಅವರು ಧ್ಯಾನ ಆರಂಭಿಸುವ ಮೊದಲು ಅವರು ಭಗವತಿ ಅಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದಾದ ಬಳಿಕ ಮೋದಿ ಅವರು ಧ್ಯಾನ ಆರಂಭಿಸಿದರು.
ನರೇಂದ್ರ ಮೋದಿ ಧ್ಯಾನದ ಹಿನ್ನೆಲೆಯಲ್ಲಿ ಸ್ಮಾರಕದ ಸುತ್ತ ಭದ್ರತೆಗಾಗಿ 2 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ವಿವೇಕಾನಂದ ಅವರನ್ನು ತಮ್ಮ ಜೀವನಕ್ಕೆ ಆದರ್ಶ ಎಂದು ಪರಿಗಣಿಸುತ್ತಾರೆ. ಸ್ವಾಮಿ ವಿವೇಕಾನಂದರು ಸ್ಥಾಪಿಸಿರುವ ರಾಮಕೃಷ್ಣ ಮಿಷನ್‌ನ ಸದಸ್ಯರೂ ಆಗಿದ್ದಾರೆ.

ಇದನ್ನೂ ಓದಿ: Modi Meditation: ಮೋದಿ ಮಾಡ್ತಿರೋದು ‘ಧ್ಯಾನ’ ಅಲ್ಲ ‘ಡ್ರಾಮಾ’ ಎಂದ ಮಲ್ಲಿಕಾರ್ಜುನ ಖರ್ಗೆ!

Continue Reading
Advertisement
Heat Wave
ದೇಶ11 mins ago

Heat Wave: ಬಿಹಾರದಲ್ಲಿ ಬಿಸಿಲಾಘಾತ; ಶಾಖಕ್ಕೆ 10 ಮತಗಟ್ಟೆ ಸಿಬ್ಬಂದಿ ಸೇರಿ 14 ಮಂದಿ ಬಲಿ

driving licence
ಪ್ರಮುಖ ಸುದ್ದಿ16 mins ago

New Driving Licence Rules: ಇಂದಿನಿಂದ ಹೊಸ ಟ್ರಾಫಿಕ್‌ ರೂಲ್ಸ್: ತರಬೇತಿ ಕೇಂದ್ರಗಳಲ್ಲೇ ಟೆಸ್ಟ್‌, ಅಪ್ರಾಪ್ತರಿಗೆ ವಾಹನ ಕೊಟ್ರೆ ನೋಂದಣಿ ರದ್ದು

Cardamom Benefits
ಆರೋಗ್ಯ51 mins ago

Cardamom Benefits: ಏಲಕ್ಕಿ ಕೇವಲ ಘಮದಲ್ಲಷ್ಟೇ ಅಲ್ಲ, ಇದರ ಪ್ರಯೋಜನಗಳು ಎಷ್ಟೊಂದು!

Karnataka Weather Forecast
ಮಳೆ1 hour ago

Karnataka Weather : ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಿಸ್‌ಯಿಲ್ಲದೇ ಮಳೆ ಹಾಜರ್‌

Healthy Salad Tips
ಆಹಾರ/ಅಡುಗೆ2 hours ago

Healthy Salad Tips: ನೀವು ಸಲಾಡ್‌ ಪ್ರಿಯರೇ? ಸಲಾಡ್‌ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

Lok Sabha Election
ದೇಶ3 hours ago

Lok Sabha Election: ಇಂದು ಕೊನೇ ಹಂತದ ಮತದಾನ; ಸಂಜೆ ಎಕ್ಸಿಟ್‌ ಪೋಲ್, ಇಂದೇ ತಿಳಿಯಲಿದೆ ಭವಿಷ್ಯ!

Dina Bhavishya
ಭವಿಷ್ಯ3 hours ago

Dina Bhavishya : ತಿಂಗಳ ಮೊದಲ ದಿನವೇ ಉದ್ಯೋಗದ ಸ್ಥಳದಲ್ಲಿ ಈ ರಾಶಿಯವರಿಗೆ ಕಿರಿಕಿರಿ ಅನುಭವ

Anti Islam Rally
ವಿದೇಶ8 hours ago

Anti Islam Rally: ಇಸ್ಲಾಂ ವಿರೋಧಿ ರ‍್ಯಾಲಿಯಲ್ಲಿ ಸಿಕ್ಕಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ; ಗುಂಡಿಕ್ಕಿದ ಪೊಲೀಸರು

Modi Meditation
ದೇಶ8 hours ago

Modi Meditation: ವಿವೇಕಾನಂದರ ಮೂರ್ತಿ ಎದುರು ಮೋದಿ ಗಾಢ ಧ್ಯಾನ; ಇಲ್ಲಿವೆ ಫೋಟೊಗಳು

Yamaha has opened a new Blue Square outlet in Bengaluru
ಬೆಂಗಳೂರು10 hours ago

Yamaha: ಬೆಂಗಳೂರಿನಲ್ಲಿ ಹೊಸ ‘ಬ್ಲೂ ಸ್ಕ್ವೇರ್’ ಔಟ್‌ಲೆಟ್ ತೆರೆದ ಯಮಹಾ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌