Site icon Vistara News

AP Election Results 2024 Live: ಆಂಧ್ರ ಪ್ರದೇಶ ವಿಧಾನಸಭೆ; ಎನ್‌ಡಿಎಗೆ ಭರ್ಜರಿ ಮುನ್ನಡೆ

Andhra Assembly Result 2024

Andhra Assembly Result 2024

ಹೈದರಾಬಾದ್‌: ಲೋಕಸಭಾ ಚುನಾವಣೆಯ ನಡುವೆ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ ಕೂಡ ನಡೆದಿದ್ದು, ಮತ ಎಣಿಕೆ ಆರಂಭವಾಗಿದೆ. ಲೋಕಸಭಾ ಚುನಾವಣೆಯ ಜತೆಗೆ ವಿಧಾನಸಭೆಯ 175 ಕ್ಷೇತ್ರಗಳಿಗೆ ಮೇ 13ರಂದು ಮತದಾನ ನಡೆದಿತ್ತು. ಈ ದಕ್ಷಿಣದ ರಾಜ್ಯದಲ್ಲಿ ಬಿಜೆಪಿ ತನ್ನ ಛಾಪು ಮೂಡಿಸಲು ಪ್ರಯತ್ನಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರ‍್ಯಾಲಿ ನಡೆಸಿ ಗಮನ ಸೆಳೆದಿದ್ದರು. ಇದೀಗ ಮೊದಲ ಹಂತದಲ್ಲಿ ಎನ್‌ಡಿಎ ಮುನ್ನಡೆ ಸಾಧಿಸಿದೆ (AP Election results 2024 live).

ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷ (YSRCP), ಕಾಂಗ್ರೆಸ್ ನೇತೃತ್ವದ ʼಇಂಡಿಯಾʼ ಒಕ್ಕೂಟ ಮತ್ತು ಬಿಜೆಪಿ, ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (TDP) ಮತ್ತು ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ (JSP) ಒಳಗೊಂಡ ಎನ್‌ಡಿಎ (NDA) ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. 2019ರ ವಿಧಾನಸಭಾ ಚುನಾವಣೆಯಲ್ಲಿ ವೈಎಸ್‌ಆರ್‌ಪಿ 151 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಚುನಾವಣೋತ್ತರ ಸಮೀಕ್ಷೆಗಳು ವೈಎಸ್‌ಆರ್‌ಪಿಗೆ ಹಿನ್ನಡೆಯಾಗಬಹುದು ಎಂದು ಅಂದಾಜಿಸಿವೆ (Andhra pradesh Election results 2024 live updates).

ವಿವಿಧ ಸಮೀಕ್ಷೆಗಳ ಪ್ರಕಾರ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಮತ್ತು ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಮೈತ್ರಿಕೂಟ ಜಯಗಳಿಸಲಿದೆ. 175 ಸ್ಥಾನಗಳ ಪೈಕಿ ಮೈತ್ರಿಕೂಟ 160 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಅಧಿಕಾರ ಪಡೆಯಲಿದೆ ಎಂದು ಭವಿಷ್ಯ ನುಡಿಯಲಾಗಿದೆ (Assembly Election results 2024 live updates).

ಹೇಗಿದೆ ಚಿತ್ರಣ?

ಆಂಧ್ರಪ್ರದೇಶದ 175 ವಿಧಾನಸಭಾ ಸ್ಥಾನಗಳಲ್ಲಿ ಟಿಡಿಪಿ 30 ಸ್ಥಾನಗಳಲ್ಲಿ ಅಲ್ಪ ಮುನ್ನಡೆ ಸಾಧಿಸಿದೆ. ವೈಎಸ್‌ಆರ್‌ಪಿ ಮೂರು ಸ್ಥಾನಗಳಲ್ಲಿ ಮಾತ್ರ ಮುಂದಿದೆ. ಲೋಕಸಭಾ ಚುನಾವಣೆಯಲ್ಲಿ ಟಿಡಿಪಿ ನಾಲ್ಕು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ವೈಎಸ್‌ಆರ್‌ಪಿ ಎರಡು ಮತ್ತು ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ (AP Election 2024 counting). ರಾಜ್ಯದಲ್ಲಿ ಅಧಿಕಾರ ಪಡೆಯಲು 88 ಕ್ಷೇತ್ರಗಳಲ್ಲಿ ಜಯ ಗಳಿಸುವುದು ಅಗತ್ಯ.

2019ರ ಚಿತ್ರಣ

2019ರ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ವೈಎಸ್‌ಆರ್‌ಸಿಪಿ 151 ಸ್ಥಾನಗಳಲ್ಲಿ ಜಯಭೇರಿ ಬಾರಿಸಿ ವೈಎಸ್ ಜಗನ್ ಮೋಹನ್ ರೆಡ್ಡಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. ಆಗ ಆಡಳಿತದಲ್ಲಿದ್ದ ಟಿಡಿಪಿ ಕೇವಲ 23 ಸ್ಥಾನಗಳನ್ನು ಗೆದ್ದು ಸೋತಿತ್ತು. ಪವನ್‌ ಕಲ್ಯಾಣ್‌ ನೇತೃತ್ವದ ಜೆಎಸ್‌ಪಿ ಒಂದೇ ಒಂದು ಸ್ಥಾನವನ್ನು ಗೆದ್ದಿದ್ದರೆ, ಕಾಂಗ್ರೆಸ್‌ ಹಾಗೂ ಬಿಜೆಪಿಗೆ ಖಾತೆ ತೆರೆದಿರಲಿಲ್ಲ.

ಪ್ರಮುಖ ಅಭ್ಯರ್ಥಿಗಳು

ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ (ವೈಎಸ್‌ಆರ್‌ಸಿಪಿ), ಎನ್. ಚಂದ್ರಬಾಬು ನಾಯ್ಡು (ಟಿಡಿಪಿ), ಪವನ್ ಕಲ್ಯಾಣ್ (ಜೆಎಸ್‌ಪಿ), ಕಿಲ್ಲಿ ಕೃಪಾರಾಣಿ (ಕಾಂಗ್ರೆಸ್), ಧರ್ಮನಾ ಪ್ರಸಾದ ರಾವ್ (ವೈಎಸ್‌ಆರ್‌ಸಿಪಿ), ಧರ್ಮನಾ ಕೃಷ್ಣ ದಾಸ್ (ವೈಎಸ್‌ಆರ್‌ಸಿಪಿ), ಪಾಮುಲಾ ಪುಷ್ಪ ಶ್ರೀವಾಣಿ ( ವೈಎಸ್‌ಆರ್‌ಸಿಪಿ), ನಲ್ಲಮಿಲ್ಲಿ ರಾಮಕೃಷ್ಣ ರೆಡ್ಡಿ (ಬಿಜೆಪಿ), ರಘು ರಾಮ ಕೃಷ್ಣರಾಜು (ಟಿಡಿಪಿ), ಚಿಂತಾಮನೇನಿ ಪ್ರಭಾಕರ್ (ಟಿಡಿಪಿ), ವೈಎಸ್ ಚೌಧರಿ (ಬಿಜೆಪಿ), ನಾದೆಂಡ್ಲ ಮನೋಹರ್ (ಜೆಎಸ್‌ಪಿ), ಕನ್ನಾ ಲಕ್ಷ್ಮೀನಾರಾಯಣ (ಟಿಡಿಪಿ), ಅದಾಲ ಪ್ರಭಾಕರ ರೆಡ್ಡಿ (ವೈಎಸ್‌ಆರ್‌ಸಿಪಿ), ಅಮ್ಜತ್ ಬಾಷಾ ಶೇಕ್ ಬೇಪಾರಿ (ವೈಎಸ್‌ಆರ್‌ಸಿಪಿ), ನಂದಮೂರಿ ಬಾಲಕೃಷ್ಣ (ಟಿಡಿಪಿ), ನಲ್ಲಾರಿ ಕಿಶೋರ್ ಕುಮಾರ್ ರೆಡ್ಡಿ (ಟಿಡಿಪಿ), ನಾರಾ ಲೋಕೇಶ್ (ಟಿಡಿಪಿ) ಮತ್ತಿತರರು ಆಂಧ್ರಪ್ರದೇಶದ ವಿಧಾನಸಭಾ ಕಣದಲ್ಲಿರುವ ಕೆಲವು ಪ್ರಮುಖ ಅಭ್ಯರ್ಥಿಗಳು.

ಇದನ್ನೂ ಓದಿ: Odisha Assembly Result 2024: ಅಸೆಂಬ್ಲಿ ಎಲೆಕ್ಷನ್‌; ಮತ ಎಣಿಕೆ ಶುರು-ಒಡಿಶಾದಲ್ಲಿ ಮತ್ತೆ ಗದ್ದುಗೆ ಏರುತ್ತಾ ಬಿಜೆಡಿ?

Exit mobile version