Site icon Vistara News

Supreme Court: ಜಡ್ಜ್ ನೇಮಕಾತಿ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ! 10 ತಿಂಗಳಾದ್ರೂ ಶಿಫಾರಸು ಕ್ಲಿಯರ್ ಮಾಡಿಲ್ಲ ಸರ್ಕಾರ

8 votes cast in Chandigarh mayoral election were Valid Says Supreme Court

ನವದೆಹಲಿ: ಜಡ್ಜ್‌ಗಳ ನೇಮಕಾತಿ ವಿಷಯಕ್ಕೆ (Appointment of Judges) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ (Supreme Court) ಹಾಗೂ ಕೇಂದ್ರ ಸರ್ಕಾರ (Central Government) ನಡುವೆ ಮತ್ತೊದು ಸುತ್ತಿನ ಜಟಾಪಟಿ ಶುರುವಾಗುವ ಸಾಧ್ಯತೆಗಳಿವೆ. ಹೈಕೋರ್ಟ್‌ ಶಿಫಾರಸಗಳನ್ನು (High court Recommendations) ಕೊಲಿಜಿಯಂಗೆ (Collegium) ಏಕೆ ಕಳುಹಿಸಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಮಂಗಳವಾರ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹೈಕೋರ್ಟ್‌ ನ್ಯಾಯಮೂರ್ತಿಗಳ ಹೆಸರು ಅಂತಿಮಗೊಳಿಸುವ ಸಂಬಂಧ ಕೇಂದ್ರ ಸರ್ಕಾರವು ವಿಳಂ ಧೋರಣೆಯನ್ನು ಅನುಸರಿಸುತ್ತಿದೆ ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರಿದ್ದ ಪೀಠವು ಹೇಳಿದೆ. ಅಲ್ಲದೇ ಈ ವಿಷಯವನ್ನು ಸುಪ್ರೀಂ ಕೋರ್ಟ್ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿಸಿದೆ.

ಹೆಸರುಗಳನ್ನು ತೆರವುಗೊಳಿಸುವಲ್ಲಿ ಕೇಂದ್ರವು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿರುವ ಅರ್ಜಿಗಳನ್ನು ಆಲಿಸಿದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರ ಪೀಠವು ಈ ವಿಷಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದರು. ಹೈಕೋರ್ಟ್‌ನಿಂದ ಶಿಫಾರಸು ಮಾಡಿದ 80 ಹೆಸರುಗಳು 10 ತಿಂಗಳ ಅವಧಿಗೆ ಬಾಕಿ ಉಳಿದಿವೆ ಎಂದು ನ್ಯಾಯಮೂರ್ತಿ ಕೌಲ್ ಕೇಂದ್ರ ಸರ್ಕಾರವನ್ನು ಉದ್ದೇಶಿಸಿ ಹೇಳಿದರು.

ಹೆಸರನ್ನು ತೆರವುಗೊಳಿಸುವುದರಲ್ಲಿ ಕೇಂದ್ರ ಸರ್ಕಾರದ ವಿಳಂಭವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠವು, 26 ನ್ಯಾಯಾಧೀಶರ ವರ್ಗಾವಣೆ ಮತ್ತು ‘ಸೂಕ್ಷ್ಮ ಹೈಕೋರ್ಟ್’ನಲ್ಲಿ ಮುಖ್ಯ ನ್ಯಾಯಮೂರ್ತಿ ನೇಮಕ ಬಾಕಿ ಇದೆ ಎಂದು ಪೀಠ ಹೇಳಿದೆ. ಹೈಕೋರ್ಟ್ ಶಿಫಾರಸು ಮಾಡಿದ್ದರೂ ಕೊಲಿಜಿಯಂಗೆ ಕಳುಹಿಸಲಾಗದ ಎಷ್ಟು ಹೆಸರುಗಳು ಬಾಕಿ ಉಳಿದಿವೆ ಎಂಬ ಮಾಹಿತಿ ನನ್ನ ಬಳಿ ಇದೆ ಎಂದು ನ್ಯಾಯಮೂರ್ತಿ ಕೌಲ್ ಹೇಳಿದರು.

ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ಕೇಂದ್ರ ಸರ್ಕಾರದ ಪ್ರತಿಕ್ರಿಯೆಗೆ ವಾರ ಕಾಲ ಸಮಯ ಕೇಳಿದರು. ಪೀಠವು ಕೇಂದ್ರ ಸರ್ಕಾರಕ್ಕೆ ಎರಡು ವಾರಗಳ ಸಮಯವನ್ನು ನೀಡಿದೆ. ಅಲ್ಲದೇ, ಕೇಂದ್ರ ಸರ್ಕಾರದ ಪ್ರತಿಕ್ರಿಯೆಯೊಂದಿಗೆ ಮರಳಬೇಕು ಎಂದು ಅಟಾರ್ನಿ ಜನರಲ್‌ಗೆ ಸೂಚಿಸಿ, ವಿಚಾರಣೆಯನ್ನು ಅಕ್ಟೋಬರ್ 9ಕ್ಕೆ ಮುಂದೂಡಿತು.

ಈ ಸುದ್ದಿಯನ್ನೂ ಓದಿ: Supreme Court: ಮುಸ್ಲಿಂ ಬಾಲಕನಿಗೆ ಶಾಲೆಯಲ್ಲಿ ಕಪಾಳ ಮೋಕ್ಷ, ಇದು ದೇಶದ ಅಂತಃಸಾಕ್ಷಿ ಅಲುಗಾಡಿಸುವ ಕೇಸ್!

ನ್ಯಾಯಮೂರ್ತಿಗಳ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ನಡೆದುಕೊಳ್ಳುತ್ತಿರುವ ರೀತಿಗೆ ನಾನು ಬಹಳಷ್ಟು ಹೇಳಬೇಕಿದೆ. ಆದರೆ, ನನ್ನಷ್ಟಕ್ಕೆ ತಡೆದುಕೊಳ್ಳುತ್ತಿದ್ದೇನೆ. ನಾನು ಶಾಂತವಾಗಿದ್ದೇನೆ. ಯಾಕೆಂದರೆ, ಅಟಾರ್ನಿ ಜನರಲ್ ಒಂದು ವಾರ ಸಮಯ ಕೇಳಿದ್ದಾರೆ. ಆದರೆ, ಮುಂದಿನ ದಿನಾಂಕದಲ್ಲಿ ನಾನು ಸುಮ್ಮನೆ ಇರಲಾರೆ ಎಂದು ಜಸ್ಟೀಸ್ ಕೌಲ್ ಅವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

ನ್ಯಾಯಮೂರ್ತಿಗಳ ನೇಮಕಾತಿ ವಿಷಯವು ಯಾವಾಗಲೂ ಸುಪ್ರೀಂ ಕೋರ್ಟ್ ಹಾಗೂ ಕಾರ್ಯಾಂಗದ ನಡುವಿನ ಜಟಾಪಟಿ ವಿಷಯವಾಗಿ ಮಾರ್ಪಟ್ಟಿದೆ. ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಕೇಂದ್ರ ಸರ್ಕಾರದ ಪಾತ್ರ ಇರಬೇಕು ಎಂದು ಕೆಲವು ಕೇಂದ್ರ ಸಚಿವರು ವಾದಿಸುತ್ತಾರೆ. ನ್ಯಾಯಾಧೀಶರ ನೇಮಕಾತಿಯಲ್ಲಿ ಸರ್ಕಾರದ ದೊಡ್ಡ ಪಾತ್ರವನ್ನು ನೀಡುವ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 2015 ರಲ್ಲಿ ರದ್ದುಗೊಳಿಸಿತ್ತು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version