ಬೆಂಗಳೂರು: ಹಿಂದಿ ಬಿಗ್ ಬಾಸ್-16ರ ಟಾಪ್ 5 ಫೈನಲಿಸ್ಟ್ ಅರ್ಚನಾ ಗೌತಮ್ (Archana Gautam) ಅವರ ತಂದೆ ತಮ್ಮ ಮಗಳಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪಿಎ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ. ಪ್ರಿಯಾಂಕಾ ಅವರ ಪಿಎ ಸಂದೀಪ್ ಕುಮಾರ್ ವಿರುದ್ಧ ಪರತಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಜತೆಗೆ ಜಾತಿ ನಿಂದನೆಯನ್ನೂ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ವರದಿ ಪ್ರಕಾರ ಸ್ವತಃ ಅರ್ಚನಾ ಗೌತಮ್ ಫೇಸ್‌ಬುಕ್ ಲೈವ್‌ನಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ ಎನ್ನಲಾಗಿದೆ. ಮೀರತ್ ಪೊಲೀಸರು ಸಂದೀಪ್ ಸಿಂಗ್ ವಿರುದ್ಧ ಪರ್ತಾಪುರ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 504, 506 ಮತ್ತು ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಪ್ರಿಯಾಂಕಾ ಗಾಂಧಿಯವರ ಆಹ್ವಾನದ ಮೇರೆಗೆ ಫೆಬ್ರವರಿ26ರಂದು ಕಾಂಗ್ರೆಸ್ ಮಹಾಧಿವೇಶನದಲ್ಲಿ ಪಾಲ್ಗೊಳ್ಳಲು ತಮ್ಮ ಮಗಳು ಛತ್ತೀಸ್‌ಗಢದ ರಾಯ್‌ಪುರಕ್ಕೆ ಹೋಗಿದ್ದರು ಎಂದು ಅರ್ಚನಾ ಗೌತಮ್ ಅವರ ತಂದೆ ಗೌತಮ್ ಬುದ್ಧ ಆರೋಪಿಸಿದ್ದಾರೆ. ಮಗಳು ಪಿಎ ಸಂದೀಪ್ ಸಿಂಗ್ ಅವರಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಲು ಕೇಳಿದರು. ಆದರೆ, ಪ್ರಿಯಾಂಕಾ ಗಾಂಧಿಗೆ ಪರಿಚಯಿಸಲು ನಿರಾಕರಿಸಿದ್ದ. ಅಲ್ಲದೆ ಅರ್ಚನಾ ಜತೆ ಅಸಭ್ಯವಾಗಿ ಮಾತನಾಡುವಾಗ ಜಾತಿ ನಿಂದನೆ ಹಾಗೂ ಅವಾಚ್ಯ ಶಬ್ಧಗಳನ್ನು ಬಳಸಿದ್ದಾನೆ. ಇದಲ್ಲದೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಗೌತಮ್ ತಂದೆ ಆರೋಪಿಸಿದ್ದಾರೆ.
ಇದನ್ನೂ ಓದಿ: Deepika Das And Chris Gayle: ಕ್ರಿಕೆಟಿಗ ಕ್ರಿಸ್ ಗೇಲ್ ಭೇಟಿಯಾದ ಬಿಗ್ ಬಾಸ್ ಸ್ಪರ್ಧಿ ದೀಪಿಕಾ ದಾಸ್
ಅರ್ಚನಾ ಗೌತಮ್ ಅವರ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮೀರತ್ ಸಿಟಿಯ ಎಸ್ಪಿ ಪಿಯೂಷ್ ಸಿಂಗ್ ತಿಳಿಸಿದ್ದಾರೆ.
“ಬಿಗ್ ಬಾಸ್ ಮಾಜಿ ಸ್ಪರ್ಧಿ ಮತ್ತು ಕಾಂಗ್ರೆಸ್ ನಾಯಕಿ ಅರ್ಚನಾ ಗೌತಮ್ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪಿಎ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ” ಎಸ್ಪಿ ಮೀರತ್ ತಿಳಿಸಿದ್ದಾರೆ.