ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ (Delhi CM) ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ‘ಅಸಾಮಾನ್ಯ ಮಧ್ಯಂತರ ಜಾಮೀನು’ (extraordinary interim bail) ಮೇಲೆ ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ದೆಹಲಿ ಹೈಕೋರ್ಟ್ (Dehli High Court) ತಿರಸ್ಕರಿಸಿದೆ. ಜೊತೆಗೆ ಅರ್ಜಿದಾರರಿಗೆ ₹75,000 ಕೋರ್ಟ್ ಖರ್ಚುವೆಚ್ಚವನ್ನು ವಿಧಿಸಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧಿಕಾರಾವಧಿ ಪೂರ್ಣಗೊಳ್ಳುವವರೆಗೆ ಜಾರಿ ನಿರ್ದೇಶನಾಲಯ ಮತ್ತು ರಾಜ್ಯವು ದಾಖಲಿಸಿರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳಲ್ಲಿ “ಅಸಾಧಾರಣ ಮಧ್ಯಂತರ ಜಾಮೀನು” ಮೇಲೆ ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ನ್ಯಾಯಾಲಯವು ಅರ್ಜಿದಾರರ ಮೇಲೆ ₹75,000 ವೆಚ್ಚವನ್ನು ವಿಧಿಸಿದೆ.
ನ್ಯಾಯಾಲಯದ ಆದೇಶದ ಮೇರೆಗೆ ಆಮ್ ಆದ್ಮಿ ಪಕ್ಷದ ನಾಯಕ ಕೇಜ್ರಿವಾಲ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ʼವೀ ದಿ ಪೀಪಲ್ ಆಫ್ ಇಂಡಿಯಾ’ ಎಂಬ ಹೆಸರಿನಲ್ಲಿ ನಾಲ್ಕನೇ ವರ್ಷದ ಕಾನೂನು ವಿದ್ಯಾರ್ಥಿಯೊಬ್ಬರು ಅವರ ಜಾಮೀನಿಗೆ ಮನವಿಯನ್ನು ಸಲ್ಲಿಸಿದ್ದರು. ಇದನ್ನು ನಿರ್ವಹಿಸಲಾಗುವುದಿಲ್ಲ. ಏಕೆಂದರೆ ನ್ಯಾಯಾಲಯವು ತನ್ನ ರಿಟ್ ಅಧಿಕಾರ ವ್ಯಾಪ್ತಿಯಲ್ಲಿ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಯ ವಿರುದ್ಧ ಬಾಕಿ ಉಳಿದಿರುವ ಪ್ರಕರಣಗಳಲ್ಲಿ ಅಸಾಮಾನ್ಯ ಮಧ್ಯಂತರ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ರಾಹುಲ್ ಮೆಹ್ರಾ, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಂಪೂರ್ಣವಾಗಿ ಒಪ್ಪಲಾಗದಂಥದ್ದು ಹಾಗೂ ತಪ್ಪುದಾರಿಗೆಳೆಯುವಂಥದ್ದು ಎಂದು ಕರೆದಿದ್ದಾರೆ. ಅರ್ಜಿದಾರರು ನ್ಯಾಯಾಲಯವನ್ನು ರಾಜಕೀಯ ವೇದಿಕೆಯನ್ನಾಗಿ ಮಾಡುತ್ತಿದ್ದಾರೆ ಎಂದು ಹೇಳಿದರು.
“ಅವರು (ಅರ್ಜಿದಾರರು) ಕಾಲೇಜಿನಲ್ಲಿ ತರಗತಿಗಳಿಗೆ ಹಾಜರಾಗುತ್ತಾರೆಯೇ? ಅವರು ಕಾನೂನಿನ ತತ್ವಗಳನ್ನು ಅನುಸರಿಸುತ್ತಿಲ್ಲ ಎಂದು ತೋರುತ್ತದೆ” ಎಂದು ನ್ಯಾಯಮೂರ್ತಿ ಮನ್ಮೀತ್ ಪಿಎಸ್ ಅರೋರಾ ಅವರನ್ನೊಳಗೊಂಡ ಪೀಠ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ. ಎಎಪಿ ನಾಯಕನಿಗೆ ತನ್ನ ಕಾನೂನು ಪರಿಹಾರಗಳನ್ನು ಪಡೆಯಲು ಸಾಕಷ್ಟು ವಿಧಾನವಿದೆ. ಮತ್ತು ಈ ಅರ್ಜಿದಾರನು ಅವರ ಪರವಾಗಿ ಅರ್ಜಿ ಸಲ್ಲಿಕೆ ಮಾಡಲು ಯಾವುದೇ ಅಧಿಕಾರವನ್ನು ಹೊಂದಿಲ್ಲ ಎಂದು ನ್ಯಾಯಾಲಯವು ಟೀಕಿಸಿತು.
“ಆ ವ್ಯಕ್ತಿಯು ಕಾನೂನಿನ ಪ್ರಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ನೀವು ಯಾರು? ನಿಮ್ಮ ಬಗ್ಗೆ ನಿಮಗೆ ಕೆಲವು ಉತ್ಪ್ರೇಕ್ಷಿತ ಕಲ್ಪನೆಗಳಿವೆ” ಎಂದು ನ್ಯಾಯಾಲಯ ಟೀಕಿಸಿದೆ.
ಇದನ್ನೂ ಓದಿ: Drought Relief: ಒಂದು ವಾರದಲ್ಲಿ ಕರ್ನಾಟಕಕ್ಕೆ ಬರ ಪರಿಹಾರ; ಸುಪ್ರೀಂಗೆ ಕೇಂದ್ರ ಮಹತ್ವದ ಮಾಹಿತಿ