ಎಕೆ ಫಾರ್​ ಪಿಎಂ?; ಕೇಜ್ರಿವಾಲ್‌ರ ಮೇಕ್​ ​ಇಂಡಿಯಾ ನಂ. 1 ಮಿಷನ್‌ ಗುರಿ ಏನು? - Vistara News

ದೇಶ

ಎಕೆ ಫಾರ್​ ಪಿಎಂ?; ಕೇಜ್ರಿವಾಲ್‌ರ ಮೇಕ್​ ​ಇಂಡಿಯಾ ನಂ. 1 ಮಿಷನ್‌ ಗುರಿ ಏನು?

ಇಂದು ದೆಹಲಿಯಲ್ಲಿ ಮೇಕ್​ ಇಂಡಿಯಾ ನಂಬರ್​ 1 ಎಂಬ ಹೊಸ ಆಂದೋಲನಕ್ಕೆ ಅರವಿಂದ್ ಕೇಜ್ರಿವಾಲ್​ ಚಾಲನೆ ಕೊಟ್ಟಿದ್ದಾರೆ. ಬನ್ನಿ ಕೈಜೋಡಿಸಿ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರನ್ನೂ ಕರೆದಿದ್ದಾರೆ.

VISTARANEWS.COM


on

AAP MLAs to hold door-to-door campaign against arrest of Sisodia, Jain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ರಾಜಕೀಯ ಸಿದ್ಧಾಂತಗಳು ಏನೇ ಇದ್ದರೂ, ಅವರು ಒಂದಿಲ್ಲೊಂದು ವಿನೂತನ, ಜನರಿಗೆ ಅನುಕೂಲವಾಗುವ ಕಾರ್ಯಕ್ರಮಗಳನ್ನು ಮಾಡುತ್ತಾರೆ ಮತ್ತು ಇದೇ ಕಾರಣಕ್ಕೆ ದೆಹಲಿ ಜನರಲ್ಲಿ ಭರವಸೆ ಮೂಡಿಸಿದ್ದಾರೆ. ಇದೀಗ ಅರವಿಂದ್ ಕೇಜ್ರಿವಾಲ್​ ಮತ್ತೊಂದು ಹೊಸ ಉಪಕ್ರಮವನ್ನು ಇಂದು ಲೋಕಾರ್ಪಣೆ ಗೊಳಿಸಿದ್ದಾರೆ. ‘ಇಡೀ ರಾಷ್ಟ್ರ ಮಟ್ಟದ ಆರೋಗ್ಯ, ಶಿಕ್ಷಣ, ಕೃಷಿ ಮತ್ತು ಉದ್ಯೋಗ ಕ್ಷೇತ್ರಗಳ ಅಭಿವೃದ್ಧಿಯನ್ನೇ ಮುಖ್ಯ ಧ್ಯೇಯ, ಗುರಿಯಾಗಿಟ್ಟುಕೊಂಡು ಮೇಕ್​ ​ಇಂಡಿಯಾ ನಂ.1 (Make In India No.1) ಮಿಷನ್​ ಪ್ರಾರಂಭ ಮಾಡಿದ್ದಾರೆ.’ ಈ ಮೇಕ್​ ಇಂಡಿಯಾ ನಂ.1 ಮಿಷನ್​ಗೆ ಕೈಜೋಡಿಸುವಂತೆ ಅವರು ಬಿಜೆಪಿ ಮತ್ತು ಕಾಂಗ್ರೆಸ್​ಗೂ ಕರೆಕೊಟ್ಟಿದ್ದಾರೆ. ಆರೋಗ್ಯ, ಶಿಕ್ಷಣ, ಕೃಷಿ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಭಾರತವನ್ನು ನಂಬರ್​ 1 ಮಾಡಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ.

ಇಂದು ಮೇಕ್​ ಇಂಡಿಯಾ ನಂಬರ್​ 1 ಉದ್ಘಾಟನೆಗೊಳಿಸಿ, ಜನರನ್ನು ಉದ್ದೇಶಿ ಮಾತನಾಡಿದ ಅರವಿಂದ್ ಕೇಜ್ರಿವಾಲ್​, ‘ಭಾರತಕ್ಕೆ ಸ್ವಾತಂತ್ರ್ಯ ಬಂದು 75ವರ್ಷಗಳಾದವು. ಈ 75ವರ್ಷದಲ್ಲಿ ನಾವು ತುಂಬ ಸಾಧನೆ ಮಾಡಿದ್ದೇವೆ, ಗಳಿಸಿದ್ದೇವೆ. ಆದರೂ ಭಾರತಕ್ಕಿಂತಲೂ ತಡವಾಗಿ ಸ್ವಾತಂತ್ರ್ಯ ಪಡೆದ ದೇಶಗಳು ಇಂದು ಹಲವು ಕ್ಷೇತ್ರಗಳಲ್ಲಿ, ವಿಚಾರಗಳಲ್ಲಿ ನಮ್ಮನ್ನು ಹಿಂದಿಕ್ಕಿವೆ. ಇದು ಹೇಗೆ ಸಾಧ್ಯವಾಯಿತು? ನಮ್ಮ ಭಾರತ ಹಿಂದೆ ಬಿದ್ದಿದ್ದೆಲ್ಲಿ? ಎಂಬ ಪ್ರಶ್ನೆಯನ್ನು ನಮ್ಮ ದೇಶದ ಅನೇಕರು ಕೋಪದಿಂದ, ಹತಾಶೆಯಿಂದ ಕೇಳುತ್ತಿದ್ದಾರೆ’ ಎಂದು ಹೇಳಿದರು.

‘ನಾವೆಲ್ಲರೂ ಒಟ್ಟಾಗಿ ಈ ಭಾರತವನ್ನು ವಿಶ್ವದ ನಂಬರ್​ 1 ರಾಷ್ಟ್ರವನ್ನಾಗಿ ಮಾಡಬೇಕು. ಭಾರತವನ್ನು ಮತ್ತೊಮ್ಮೆ ಉನ್ನತ ಸ್ಥಾನಕ್ಕೆ ಏರಿಸಬೇಕು. ಇದೇ ಕಾರಣಕ್ಕೆ ನಾವೀಗ ಮೇಕ್​ ಇಂಡಿಯಾ ನಂಬರ್​ 1ನ್ನು ಪ್ರಾರಂಭಿಸುತ್ತಿದ್ದೇವೆ. ಈ ನಮ್ಮ ಅಭಿಯಾನಕ್ಕೆ ದೇಶದ ಪ್ರತಿ ನಾಗರಿಕನೂ ಸೇರಬೇಕು. ಇಲ್ಲಿ ರಾಜಕೀಯ ಪಕ್ಷಭೇದವೂ ಇಲ್ಲ. ಬಿಜೆಪಿ-ಕಾಂಗ್ರೆಸ್​​ನವರೂ ನಮ್ಮೊಂದಿಗೆ ಬರಬೇಕು. ನಾವೆಲ್ಲ ಇಷ್ಟುವರ್ಷ ನಮ್ಮೊಳಗಿನ ಕಿತ್ತಾಟದಲ್ಲೇ ಕಳೆದು ಹೋದೆವು. ಆದರೆ ಇನ್ನು ಹಾಗಾಗುವುದು ಬೇಡ’ ಎಂದು ಅರವಿಂದ್ ಕೇಜ್ರಿವಾಲ್​ ಇಂದು ಹೇಳಿದರು.

‘ಇನ್ನಷ್ಟು ಶಾಲೆ, ಆಸ್ಪತ್ರೆಗಳನ್ನು ಪ್ರಾರಂಭಿಸುವುದು. ಯುವಕರಿಗೆ ಉದ್ಯೋಗ ನೀಡುವುದು, ಮಹಿಳಾ ಸಮಾನತೆ, ಕೃಷಿ ಅಭಿವೃದ್ಧಿಯನ್ನು ಮೇಕ್ ಇಂಡಿಯಾ ನಂಬರ್​ 1 ಮಿಷನ್​ ಒಳಗೊಂಡಿದೆ. ಎಲ್ಲ ರಾಜಕೀಯ ಪಕ್ಷಗಳೂ ಸೇರಿ ನಡೆಸುವ ಆಂದೋಲನ ಇದಾಗಲಿ ಎಂದು ಹೇಳಿದ ಕೇಜ್ರಿವಾಲ್​, ರಾಜಕೀಯದಲ್ಲಿ ಸ್ವಜನಪಕ್ಷಪಾತ ಇರಲೇಬಾರದು ಎಂದರು. ಸ್ವಜನಪಕ್ಷಪಾತಿ ರಾಜಕೀಯ ಪಕ್ಷಗಳ ವಿರುದ್ಧ, ಹೆಸರು ಹೇಳದೆ ಟೀಕಿಸಿದರು.

ಪ್ರಧಾನಿ ಅಭ್ಯರ್ಥಿಯೇ ಕೇಜ್ರಿವಾಲ್​?
2024ರ ಲೋಕಸಭೆ ಚುನಾವಣೆಯಲ್ಲಿ ಎನ್​ಡಿಎ ಒಕ್ಕೂಟದಿಂದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಎಂಬುದು ಒಂದು ಹಂತಕ್ಕೆ ಈಗ ಸ್ಪಷ್ಟವಾಗಿದೆ. ಆದರೆ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿ ಸ್ಥಾನಕ್ಕೆ ಯಾರೆಲ್ಲ ಆಕಾಂಕ್ಷಿಗಳು ಎಂಬ ಕುತೂಹಲಕ್ಕೆ ಸ್ಪಷ್ಟ ಉತ್ತರ ಇಲ್ಲದೆ ಹೋದರೂ, ಒಂದಷ್ಟು ಪ್ರಮುಖರು ತಮ್ಮ ನಡೆ, ಮಾತು, ಸಕ್ರಿಯತೆಯಿಂದ ಗಮನಸೆಳೆಯುತ್ತಿದ್ದಾರೆ. ಅದರಲ್ಲಿ ಅರವಿಂದ್ ಕೇಜ್ರಿವಾಲ್​ ಕೂಡ ಒಬ್ಬರು. ಅವರ ಪಕ್ಷದ ಒಬ್ಬ ತಳಮಟ್ಟದ ಕಾರ್ಯಕರ್ತನಿಂದ ಹಿಡಿದು, ಬಹುತೇಕ ಎಲ್ಲ ಸಂಸದ -ಶಾಸಕರು, ಇದೀಗ ಪಂಜಾಬ್​ ಮುಖ್ಯಮಂತ್ರಿಯಾಗಿರುವ ಭಗವಂತ್​ ಮಾನ್​ ವರೆಗೆ ಪ್ರತಿಯೊಬ್ಬರೂ ಅರವಿಂದ್ ಕೇಜ್ರಿವಾಲ್​ ಮುಂದಿನ ಲೋಕಸಭೆ ಚುನಾವಣೆಯ ಪ್ರಧಾನಿ ಅಭ್ಯರ್ಥಿ ಎಂದೇ ಹೇಳಿಕೊಂಡು ಬರುತ್ತಿದ್ದಾರೆ. ಅದೇ ಹೊತ್ತಲ್ಲಿ ಇಂದು ನಡೆದ ಮೇಕ್ ಇಂಡಿಯಾ ನಂಬರ್​ 1 ಉದ್ಘಾಟನೆಯಾಗಿದ್ದು ಇನ್ನಷ್ಟು ಮಹತ್ವ ಎನ್ನಿಸಿದೆ.

ಇಂದು ದೆಹಲಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರವಿಂದ್ ಕೇಜ್ರಿವಾಲ್​ ಬರೀ ದೆಹಲಿ ಬಗ್ಗೆ ಮಾತನಾಡದೆ, ರಾಷ್ಟ್ರ ಎಂದಿದ್ದಾರೆ. ಮಾತುಮಾತಿಗೂ ಈ ದೇಶದ ಒಳಿತು, ದೇಶದ ಅಭಿವೃದ್ಧಿ ಎಂದೇ ಹೇಳಿದ್ದಾರೆ. ಎಲ್ಲ ರಾಜಕೀಯ ಪಕ್ಷಗಳ ಒಗ್ಗಟ್ಟಿಗೂ ಕರೆ ನೀಡಿದ್ದಾರೆ. 2024 ಲೋಕಸಭೆ ಚುನಾವಣೆಯೇ ಇವತ್ತಿನ ಕಾರ್ಯಕ್ರಮದ ಟಾರ್ಗೆಟ್​ ಎಂಬ ಚರ್ಚೆ ಅದಾಗಲೇ ರಾಜಕೀಯ ವಲಯದಲ್ಲಿ ಶುರುವಾಗಿದೆ. ಕೇಜ್ರಿವಾಲ್​ ಈಗಲೇ ಲೋಕಸಭೆ ಚುನಾವಣೆ ಪ್ರಚಾರಕ್ಕೆ ನಾಂದಿ ಹಾಡಿದರು ಎನ್ನಲಾಗುತ್ತಿದೆ.

ಈ ಸಲ ಪಂಜಾಬ್​​ನಲ್ಲಿ ಸರ್ಕಾರ ರಚನೆ ಮಾಡಿದ್ದೇ ತಡ ಆಮ್​ ಆದ್ಮಿ ಪಕ್ಷದ ಉತ್ಸಾಹ ಇಮ್ಮಡಿಯಾಗಿದೆ. ಮುಂಬರುವ ಹಿಮಾಚಲ ಪ್ರದೇಶ, ಗುಜರಾತ್​, ಮಧ್ಯಪ್ರದೇಶ ಚುನಾವಣೆ ಮೇಲೆ ಕೂಡ ಪಕ್ಷ ಕಣ್ಣಿಟ್ಟಿದೆ. ಗುಜರಾತ್​​ನಲ್ಲಿ ಚುನಾವಣೆ ಇನ್ನೂ ಐದು ತಿಂಗಳು ಬಾಕಿ ಇರುವಾಗಲೇ 10 ಜನ ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆ ಮಾಡಿದೆ. ಒಟ್ಟಾರೆ ಆಪ್​ ವೇಗ ಹೆಚ್ಚಿಸಿಕೊಂಡು, ಓಡುತ್ತಿರುವ ರಾಜಕೀಯ ಪಕ್ಷವಾಗಿದೆ.

ಇದನ್ನೂ ಓದಿ: ಯಾರೊಂದಿಗೂ ಮೈತ್ರಿಯಿಲ್ಲ, ಯಾರನ್ನಾದರೂ ಸೋಲಿಸಬೇಕೆಂಬ ಆಸೆಯೂ ಇಲ್ಲ: ಅರವಿಂದ್‌ ಕೇಜ್ರಿವಾಲ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವಾಣಿಜ್ಯ

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ ಇಳಿಕೆ

LPG Price Cut: ಜೂನ್‌ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 69.50 ರೂ. ಕಡಿಮೆ ಮಾಡಿವೆ. ಇದರೊಂದಿಗೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 69.50 ರೂ. ಕಡಿತಗೊಂಡು 1,756 ರೂ.ಗೆ ತಲುಪಿದೆ.

VISTARANEWS.COM


on

LPG Price Cut
Koo

ನವದೆಹಲಿ: ಜೂನ್‌ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 69.50 ರೂ. ಕಡಿಮೆ ಮಾಡಿವೆ (LPG Price Cut). ಇದರೊಂದಿಗೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 69.50 ರೂ. ಕಡಿತಗೊಂಡು 1,756 ರೂ.ಗೆ ತಲುಪಿದೆ.

ಇನ್ನು ದೆಹಲಿಯಲ್ಲಿ ಪರಿಷ್ಕೃತ ದರ 1,676 ರೂ. ಆಗಿದೆ. ಹಿಂದೆ 1745.50 ರೂ. ಆಗಿತ್ತು. ಮುಂಬೈಯಲ್ಲಿಯೂ 69.50 ರೂ. ಇಳಿಕೆಯಾಗಿದ್ದು ಹೊಸ ಬೆಲೆಯನ್ನು 1,629 ರೂ.ಗೆ ನಿಗದಿಪಡಿಸಲಾಗಿದೆ. ಚೆನ್ನೈನಲ್ಲಿ 1,840.5೦ ರೂ., ಕೋಲ್ಕತ್ತಾದಲ್ಲಿ ದರ ಪರಿಷ್ಕರಣೆಯ ಬಳಿಕ 1,787 ರೂ. ಇದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪ್ರತಿ ತಿಂಗಳ 1ನೇ ತಾರೀಕಿನಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ರೀತಿಯ ಏರಿಳಿತಗಳು ಸಾಮಾನ್ಯವಾಗಿ ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಡೈನಾಮಿಕ್ಸ್ ಬದಲಾವಣೆಗಳಿಂದ ಪ್ರಭಾವಿತವಾಗಿರುತ್ತವೆ.

ವಾಣಿಜ್ಯ ಎಲ್‌ಪಿಜಿ ಬೆಲೆಗಳ ಕಡಿತವು ಈ ಸಿಲಿಂಡರ್‌ಗಳನ್ನೇ ಅವಲಂಬಿಸಿರುವ ವ್ಯವಹಾರಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ. ಜಾಗತಿಕ ತೈಲ ಮಾರುಕಟ್ಟೆಯ ಪ್ರವೃತ್ತಿಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುವುದಾಗಿ ಮತ್ತು ದೇಶಾದ್ಯಂತದ ಗ್ರಾಹಕರಿಗೆ ನ್ಯಾಯಯುತ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಹೊಂದಾಣಿಕೆಗಳನ್ನು ಮಾಡುವುದಾಗಿ ಒಎಂಸಿಗಳು ಭರವಸೆ ನೀಡಿವೆ.

ಸತತ ಇಳಿಕೆ

ಕಳೆದ ತಿಂಗಳು ಕೂಡ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಕಡಿತಗೊಳಿಸಲಾಗಿತ್ತು. ಮೇ 1ರಂದು ದರ ಪರಿಷ್ಕರಿಸಿ 19 ರೂ. ಇಳಿಕೆ ಮಾಡಲಾಗಿತ್ತು. ಏಪ್ರಿಲ್‌ನಲ್ಲಿಯೂ 19 ಕೆಜಿಯ ಸಿಲಿಂಡರ್‌ ಬೆಲೆಯನ್ನು 30.50 ರೂ. ಇಳಿಸಲಾಗಿತ್ತು. ತೈಲ ಮಾರುಕಟ್ಟೆ ಕಂಪನಿಗಳು ಹಿಂದಿನ ಘೋಷಣೆಯನ್ನು ಮಾರ್ಚ್ 1ರಂದು ಮಾಡಿದ್ದು, ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳ ದರಗಳನ್ನು ಹೆಚ್ಚಿಸಿದ್ದವು. ಆ ಸಮಯದಲ್ಲಿ, OMCಗಳು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಗ್ಯಾಸ್ ಸಿಲಿಂಡರ್ ಬೆಲೆಗಳಲ್ಲಿ 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು 25 ರೂ. ಹೆಚ್ಚಿಸಿದ್ದವು.

ವಿವಿಧ ನಗರಗಳಲ್ಲಿ ಪರಿಷ್ಕೃತ ದರ

ನಗರಪರಿಷ್ಕೃತ ದರಹಿಂದಿನ ದರ
ಬೆಂಗಳೂರು1,756 ರೂ.1,825.50
ಕೋಲ್ಕತ್ತಾ1,787 ರೂ.1,859 ರೂ.
ಮುಂಬೈ1,629 ರೂ.1,698.50 ರೂ.
ಚೆನ್ನೈ1,840.50 ರೂ.1,911 ರೂ.
ನವದೆಹಲಿ1,676 ರೂ.1745.50 ರೂ.

ಗೃಹಬಳಕೆಯ ಸಿಲಿಂಡರ್‌ ಬೆಲೆ ಯಥಾಸ್ಥಿತಿ

ಈ ಮಧ್ಯೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಇಳಿಕೆ ಅಥವಾ ಏರಿಕೆ ಆಗಿಲ್ಲ. ಬೆಂಗಳೂರಿನಲ್ಲಿ ಗೃಹಬಳಕೆಯ ಸಿಲಿಂಡರ್‌ ಬೆಲೆ 805.50 ರೂ. ಇದೆ.

ಇದನ್ನೂ ಓದಿ: LPG Aadhaar Link: ಎಲ್‌ಪಿಜಿ ಕನೆಕ್ಷನ್‌ಗೆ ಆಧಾರ್ ಲಿಂಕ್ ಮಾಡಿಸುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

Continue Reading

ದೇಶ

Heat Wave: ಬಿಹಾರದಲ್ಲಿ ಬಿಸಿಲಾಘಾತ; ಶಾಖಕ್ಕೆ 10 ಮತಗಟ್ಟೆ ಸಿಬ್ಬಂದಿ ಸೇರಿ 14 ಮಂದಿ ಬಲಿ

Heat Wave: ಬಿಹಾರದಲ್ಲಿ ಬಿಸಿಗಾಳಿಯ ಶಾಖಕ್ಕೆ ಜನ ತತ್ತರಿಸಿ ಹೋಗಿದ್ದು, 24 ಗಂಟೆಗಳಲ್ಲಿ 10 ಮತಗಟ್ಟೆ ಸಿಬ್ಬಂದಿ ಸೇರಿ ಸುಮಾರು 14 ಮಂದಿ ಬಿಸಿಲಿನ ಶಾಖಕ್ಕೆ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಸಾವು ನೋವು ಭೋಜ್‌ಪುರದಲ್ಲಿ ನಡೆದಿದ್ದು, ಅಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ 5 ಮಂದಿ ಮೃತಪಟ್ಟಿದ್ದಾರೆ. ರೋಹ್ಟಾಸ್‌ನಲ್ಲಿ ಮೂವರು ಚುನಾವಣಾ ಅಧಿಕಾರಿಗಳು, ಕೈಮೂರ್ ಮತ್ತು ಔರಂಗಾಬಾದ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಜೀವ ಕಳೆದುಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

VISTARANEWS.COM


on

Heat Wave
Koo

ಪಟನಾ: ದೇಶದಲ್ಲಿ ಕಂಡು ಕೇಳರಿಯದ ಪ್ರಮಾಣದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿದೆ. ಜತೆಗೆ ಉತ್ತರ ಭಾರತದ ವಿವಿಧ ಭಾಗದಲ್ಲಿ ಬಿಸಿಗಾಳಿ (Heat Wave) ಬೀಸುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಅದರಲ್ಲಿಯೂ ಬಿಹಾರ(Bihar)ದಲ್ಲಿ ಬಿಸಿಗಾಳಿಯ ಶಾಖಕ್ಕೆ ಜನ ತತ್ತರಿಸಿ ಹೋಗಿದ್ದಾರೆ. 24 ಗಂಟೆಗಳಲ್ಲಿ 10 ಮತಗಟ್ಟೆ ಸಿಬ್ಬಂದಿ ಸೇರಿ ಸುಮಾರು 14 ಮಂದಿ ಬಿಸಿಲಿನ ಶಾಖಕ್ಕೆ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಪತ್ತು ನಿರ್ವಹಣಾ ಇಲಾಖೆ ಹೊರಡಿಸಿದ ಪ್ರಕಟಣೆಯಲ್ಲಿ ಈ ವಿವರಗಳನ್ನು ನೀಡಲಾಗಿದೆ. ಹೆಚ್ಚಿನ ಸಾವು ನೋವು ಭೋಜ್‌ಪುರದಲ್ಲಿ ನಡೆದಿದ್ದು, ಅಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ 5 ಮಂದಿ ಮೃತಪಟ್ಟಿದ್ದಾರೆ. ರೋಹ್ಟಾಸ್‌ನಲ್ಲಿ ಮೂವರು ಚುನಾವಣಾ ಅಧಿಕಾರಿಗಳು, ಕೈಮೂರ್ ಮತ್ತು ಔರಂಗಾಬಾದ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಜೀವ ಕಳೆದುಕೊಂಡಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

ಜತೆಗೆ ರಾಜ್ಯದ ವಿವಿಧ ಭಾಗಳಲ್ಲಿಯೂ ಅನೇಕರು ಬಿಸಿಲಿನ ಝಳಕ್ಕೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ. ರಾಜ್ಯದ ಹಲವೆಡೆ ತಾಪಮಾನ 44 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಗುರುವಾರ ಬಕ್ಸಾರ್‌ನಲ್ಲಿ ಅತೀ ಹೆಚ್ಚು 47.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಬಿಸಿ ಗಾಳಿ ವ್ಯಾಪಕವಾಗಿ ಬೀಸುತ್ತಿರುವ ಪರಿಣಾಮ ಎಲ್ಲ ಶಾಲೆಗಳು, ಕೋಚಿಂಗ್‌ ಸೆಂಟರ್‌ಗಳು ಮತ್ತು ಅಂಗನವಾಡಿಗಳಿಗೆ ಜೂನ್‌ 8ರ ತನಕ ರಜೆ ಸಾರಲಾಗಿದೆ.

ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್ ಶಾಲೆಗಳಿಗೆ ಶಿಕ್ಷಕರು ಬರಬೇಕು ಎನ್ನುವ ಸರ್ಕಾರದ ಆದೇಶದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ “ಪ್ರತಿಪಕ್ಷಗಳ ಒತ್ತಡದಿಂದಾಗಿ ಸರ್ಕಾರಿ ಶಾಲೆಗಳನ್ನು ಈಗಾಗಲೇ ಮುಚ್ಚಲಾಗಿದೆ. ಈ ತೀವ್ರ ಶಾಖದ ಅಲೆ ಎಲ್ಲೆಡೆ ವ್ಯಾಪಿಸಿರುವಾಗ ಶಿಕ್ಷಕರನ್ನು ಶಾಲೆಗಳಿಗೆ ಬರಲು ಏಕೆ ಹೇಳಲಾಗುತ್ತಿದೆ? ವಿದ್ಯಾರ್ಥಿಗಳು ಸ್ವತಃ ಶಾಲೆಯಲ್ಲಿ ಇಲ್ಲದಿದ್ದಾಗ ಶಿಕ್ಷಕರು ಏನು ಮಾಡುತ್ತಾರೆ? ಈ ಸುಡುವ ಬಿಸಿಲಿನಲ್ಲಿ ಶಿಕ್ಷಕರಿಗೂ ರಜೆ ನೀಡಬೇಕುʼʼ ಎಂದು ಆಗ್ರಹಿಸಿದ್ದಾರೆ. ಲೋಕಸಭಾ ಚುನಾವಣೆ ಕೊನೆಯ ಹಂತದ ಮತದಾನ ಇಂದು (ಶನಿವಾರ) ನಡೆಯುತ್ತಿದ್ದು, ಉಷ್ಣಾಂಶದ ಹೆಚ್ಚಳ ಪರಿಣಾಮ ಬೀರುವ ಸಾಧ್ಯತೆ ಇದೆ.

ಇದನ್ನೂ ಓದಿ: Heat Wave: ಬಿಸಿಗಾಳಿ ಶಾಖಕ್ಕೆ ಉತ್ತರ ಭಾರತ ಸಂಪೂರ್ಣ ತತ್ತರ; ಎಮರ್ಜೆನ್ಸಿ ಘೋಷಣೆ ಆಗುತ್ತಾ?

ನಾಗ್ಪುರದಲ್ಲಿ 56 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಾಖಲೆಯ 52.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿರುವ ಎರಡು ದಿನಗಳ ನಂತರ ಮಹಾರಾಷ್ಟ್ರದ ನಾಗ್ಪುರದಲ್ಲಿ ತಾಪಮಾನ 50 ಡಿಗ್ರಿ ಸೆಲ್ಸಿಯಸ್ ಮೀರಿದೆ. ಗುರುವಾರ ಇದು 56 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಇದು ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಾರಾಷ್ಟ್ರದ ಉತ್ತರ ಅಂಬಾಜಾರಿ ರಸ್ತೆಯ ರಾಮದಾಸ್​ಪೇಟ್​​ನ ಪಿಡಿಕೆವಿಯಲ್ಲಿರುವ 24 ಹೆಕ್ಟೇರ್ ತೆರೆದ ಕೃಷಿ ಕ್ಷೇತ್ರದಲ್ಲಿರುವ ಹವಾಮಾನ ಕೇಂದ್ರದಲ್ಲಿ 56 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಸೋನೆಗಾಂವ್​ನ ಪ್ರಾದೇಶಿಕ ಹವಾಮಾನ ಕೇಂದ್ರದಲ್ಲಿ 54 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಿಸಿದೆ. ವಾರ್ಧಾ ರಸ್ತೆಯ ಖಾಪ್ರಿಯಲ್ಲಿರುವ ಸೆಂಟ್ರಲ್ ಇನ್ಸ್​ಟಿಟ್ಯೂಟ್​ ಆಫ್ ಕಾಟನ್ ರಿಸರ್ಚ್ ಪ್ರದೇಶದ ಹೊಲಗಳಲ್ಲಿನ ಅಂಗನವಾಡಿ ಕೇಂದ್ರವು 44 ಡಿಗ್ರಿ ಸೆಲ್ಸಿಯಸ್ ಮತ್ತು ರಾಮ್ಟೆಕ್ ಎಡಬ್ಲ್ಯೂಎಸ್ 44 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕಂಡು ಬಂದಿದೆ.

Continue Reading

ಪ್ರಮುಖ ಸುದ್ದಿ

New Driving Licence Rules: ಇಂದಿನಿಂದ ಹೊಸ ಟ್ರಾಫಿಕ್‌ ರೂಲ್ಸ್: ತರಬೇತಿ ಕೇಂದ್ರಗಳಲ್ಲೇ ಟೆಸ್ಟ್‌, ಅಪ್ರಾಪ್ತರಿಗೆ ವಾಹನ ಕೊಟ್ರೆ ನೋಂದಣಿ ರದ್ದು

Driving Licence: ಜೂನ್ 1 ರಿಂದ, ಅರ್ಜಿದಾರರು ಸರ್ಕಾರಿ ಸ್ವಾಮ್ಯದ ಆರ್‌ಟಿಒಗಳಿಗೆ ಹೋಗುವ ಬದಲು ಖಾಸಗಿ ಚಾಲನಾ ತರಬೇತಿ ಕೇಂದ್ರಗಳಲ್ಲಿ ಚಾಲನಾ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು. ಇದು ಪರವಾನಗಿ ಅರ್ಹತೆಗಾಗಿ ಪ್ರಮಾಣಪತ್ರಗಳನ್ನು ನೀಡಲು ಸಹ ಅಧಿಕಾರ ನೀಡುತ್ತದೆ.

VISTARANEWS.COM


on

driving licence
Koo

ಹೊಸದಿಲ್ಲಿ: ಇಂದಿನಿಂದ (ಜೂನ್ 1) ದೇಶಾದ್ಯಂತ ಚಾಲನಾ ಪರವಾನಗಿ (Driving licence) ನಿಯಮಗಳಲ್ಲಿ ಹಲವು ಬದಲಾವಣೆಗಳು ಆಗಲಿವೆ. ರಸ್ತೆ ಸಾರಿಗೆ ಸಚಿವಾಲಯವು ಡ್ರೈವಿಂಗ್‌ ಲೈಸೆನ್ಸ್‌ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ಉದ್ದನೆಯ ಸರತಿ ಸಾಲುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಹೊಸ ನಿಯಮಗಳನ್ನು (New Driving licence Rules) ಪ್ರಕಟಿಸಿದೆ.

ಜೂನ್ 1 ರಿಂದ, ಅರ್ಜಿದಾರರು ಸರ್ಕಾರಿ ಸ್ವಾಮ್ಯದ ಆರ್‌ಟಿಒಗಳಿಗೆ ಹೋಗುವ ಬದಲು ಖಾಸಗಿ ಚಾಲನಾ ತರಬೇತಿ ಕೇಂದ್ರಗಳಲ್ಲಿ ಚಾಲನಾ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು. ಇದು ಪರವಾನಗಿ ಅರ್ಹತೆಗಾಗಿ ಪ್ರಮಾಣಪತ್ರಗಳನ್ನು ನೀಡಲು ಸಹ ಅಧಿಕಾರ ನೀಡುತ್ತದೆ. ಈ ಕ್ರಮವು ಸರ್ಕಾರಿ ಸ್ವಾಮ್ಯದ ಆರ್‌ಟಿಒಗಳ ಮೇಲಿನ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ಸುದೀರ್ಘ ಅವಧಿಯ ಕಾಯುವ ಸಮಯವನ್ನು ಕಡಿಮೆ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ.

ಹೆಚ್ಚುವರಿಯಾಗಿ, ಹೊಸ ಪರವಾನಗಿ ಅರ್ಜಿಗಳಿಗೆ ದಾಖಲಾತಿ ಅವಶ್ಯಕತೆಗಳನ್ನು ಸರ್ಕಾರ ಸರಳಗೊಳಿಸಿದೆ. ಜೂನ್‌ನಿಂದ, ವಾಹನದ ಪ್ರಕಾರದ ಆಧಾರದ ಮೇಲೆ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಇದು ಆರ್‌ಟಿಒಗಳಲ್ಲಿ ಭೌತಿಕ ಪರಿಶೀಲನೆಯ ಅಗತ್ಯವನ್ನು ಕಡಿಮೆ ಮಾಡುತ್ತದೆ.

ಅಪ್ರಾಪ್ತರಿಗೆ ವಾಹನ ಕೊಟ್ರೆ ನೋಂದಣಿಯೇ ರದ್ದು

ಹೊಸ ನಿಯಮಗಳ ಮತ್ತೊಂದು ಪ್ರಮುಖ ಅಂಶವೆಂದರೆ ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸುವುದು ಕಂಡುಬಂದರೆ ಹೆಚ್ಚಿನ ದಂಡ ವಿಧಿಸಲಾಗುತ್ತದೆ. ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸಿ ಸಿಕ್ಕಿಬಿದ್ದರೆ, 25,000 ರೂ.ಗಳ ದಂಡ ವಿಧಿಸಲಾಗುವುದು ಮತ್ತು ವಾಹನ ಮಾಲೀಕರ ನೋಂದಣಿಯನ್ನು ರದ್ದುಗೊಳಿಸಲಾಗುವುದು. ಇದಲ್ಲದೆ, ಶಿಕ್ಷೆಗೊಳಗಾದ ಅಪ್ರಾಪ್ತ ವಯಸ್ಕರು 25 ವರ್ಷ ವಯಸ್ಸಿನವರೆಗೆ ಚಾಲನಾ ಪರವಾನಗಿಗೆ ಅರ್ಹರಾಗಿರುವುದಿಲ್ಲ. ಈ ಕಠಿಣ ಕ್ರಮವು ಅಪ್ರಾಪ್ತ ವಯಸ್ಕರ ವಾಹನ ಚಾಲನೆಯನ್ನು ತಡೆಯುತ್ತದೆ ಮತ್ತು ರಸ್ತೆ ಸುರಕ್ಷತೆಯನ್ನು ಸುಧಾರಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.

ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ಪ್ರಯತ್ನದಲ್ಲಿ, ಸುಮಾರು 9,00,000ರಷ್ಟು ಹಳೆಯ ಸರ್ಕಾರಿ ವಾಹನಗಳನ್ನು ಹಂತ ಹಂತವಾಗಿ ತೆಗೆದುಹಾಕುವ ಯೋಜನೆಯನ್ನು ಸರ್ಕಾರ ಘೋಷಿಸಿದೆ. ಈ ಉಪಕ್ರಮವು ಇಂಗಾಲ ಹೊರಸೂಸುವಿಕೆಯ ಕಠಿಣ ಮಾನದಂಡಗಳನ್ನು ಜಾರಿಗೊಳಿಸುವ ಮತ್ತು ಪರಿಸರ ಸ್ನೇಹಿ ಅಭ್ಯಾಸಗಳನ್ನು ಉತ್ತೇಜಿಸುವ ವಿಶಾಲ ಕಾರ್ಯತಂತ್ರದ ಭಾಗವಾಗಿದೆ. ಹಳೆಯ, ಹೆಚ್ಚು ಮಾಲಿನ್ಯಕಾರಕ ವಾಹನಗಳನ್ನು ರಸ್ತೆಗಳಿಂದ ತೆಗೆದುಹಾಕುವ ಮೂಲಕ, ದೇಶದ ಇಂಗಾಲದ ಹೆಜ್ಜೆಗುರುತನ್ನು ಕಡಿಮೆ ಮಾಡಲು ಮತ್ತು ಗಾಳಿಯ ಗುಣಮಟ್ಟವನ್ನು ಸುಧಾರಿಸಲು ಸರ್ಕಾರ ಉದ್ದೇಶಿಸಿದೆ.

ತರಬೇತಿ ಕೇಂದ್ರಗಳಿಗೆ ಜಮೀನಿರಬೇಕು

ತರಬೇತಿ ಕೇಂದ್ರಗಳಿಗೆ ಸರ್ಕಾರ ಹೊಸ ನಿಯಮಗಳನ್ನು ರೂಪಿಸಿದೆ. ಈ ಕೇಂದ್ರಗಳು ಲಘು ಮೋಟಾರು ವಾಹನಗಳ ತರಬೇತಿಗಾಗಿ ಕನಿಷ್ಠ 1 ಎಕರೆ ಭೂಮಿಯನ್ನು ಹೊಂದಿರಬೇಕು ಮತ್ತು ಭಾರಿ ಮೋಟಾರು ವಾಹನ ತರಬೇತಿಗಾಗಿ 2 ಎಕರೆ ಭೂಮಿ ಬೇಕಾಗುತ್ತದೆ. ಇದಲ್ಲದೆ, ಈ ಕೇಂದ್ರಗಳು ತಮ್ಮ ಪರೀಕ್ಷಾ ಸೌಲಭ್ಯಗಳಿಗೆ ಪ್ರವೇಶವನ್ನು ಒದಗಿಸಬೇಕಾಗುತ್ತದೆ, ಚಾಲನಾ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಮಾನದಂಡಗಳನ್ನು ಪೂರೈಸುತ್ತವೆ ಎಂದು ಖಚಿತಪಡಿಸಿಕೊಳ್ಳಬೇಕು.

ಹೊಸ ನಿಯಮಗಳ ಪ್ರಕಾರ, ಕಲಿಕಾ ಪರವಾನಗಿ ವಿತರಣೆಗೆ 150 ರೂ., ಕಲಿಕಾ ಪರವಾನಗಿ ಪರೀಕ್ಷೆಗೆ ಅರ್ಜಿದಾರರು 50 ರೂ. ಚಾಲನಾ ಪರೀಕ್ಷೆಗಳಿಗೆ 300 ರೂ., ಚಾಲನಾ ಪರವಾನಗಿ ನೀಡಲು 200 ರೂ. ಅರ್ಜಿಗಳನ್ನು ಸಂಸ್ಕರಿಸಲು ಮತ್ತು ಪರೀಕ್ಷೆಗಳನ್ನು ನಡೆಸಲು ಸಂಬಂಧಿಸಿದ ಆಡಳಿತಾತ್ಮಕ ವೆಚ್ಚಗಳನ್ನು ಭರಿಸಲು ಈ ಶುಲ್ಕಗಳನ್ನು ವಿನ್ಯಾಸಗೊಳಿಸಲಾಗಿದೆ.

ಇದನ್ನೂ ಓದಿ: Bengaluru Traffic: ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ ಹೊಸ ತಂತ್ರಜ್ಞಾನ; ಸಂಚಾರ ಇಲಾಖೆಯ ಪ್ಲಾನ್

Continue Reading

ದೇಶ

Lok Sabha Election: ಇಂದು ಕೊನೇ ಹಂತದ ಮತದಾನ; ಸಂಜೆ ಎಕ್ಸಿಟ್‌ ಪೋಲ್, ಇಂದೇ ತಿಳಿಯಲಿದೆ ಭವಿಷ್ಯ!

Lok Sabha Election: ಶನಿವಾರ 7 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶ ಸೇರಿ 57 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದೆ. ಶನಿವಾರ ಸಂಜೆಯೇ ಮತಗಟ್ಟೆ ಸಮೀಕ್ಷೆಗಳ ವರದಿಗಳು ಪ್ರಕಟವಾಗುವ ಕಾರಣ ಸಂಜೆಯೇ ಚುನಾವಣೆ ಫಲಿತಾಂಶದ ಅಂದಾಜು ಸಿಗಲಿದೆ.

VISTARANEWS.COM


on

Lok Sabha Election
Koo

ನವದೆಹಲಿ: ದೇಶದ ಭವಿಷ್ಯವನ್ನು ನಿರ್ಧರಿಸುವ ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದಿದೆ. ಇಂದು (ಜೂನ್‌ 1) ಏಳನೇ ಅಥವಾ ಕೊನೆಯ ಹಂತದ ಮತದಾನ ನಡೆಯಲಿದ್ದು, ಇದರೊಂದಿಗೆ ಸಾರ್ವತ್ರಿಕ ಚುನಾವಣೆ ಕೊನೆಗೊಳ್ಳಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದ್ದು, ಎಲ್ಲರ ಗಮನವೀಗ ಫಲಿತಾಂಶದ ಕಡೆ ವಾಲಿದೆ. ಶನಿವಾರ 7 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶ ಸೇರಿ 57 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದೆ.

ಉತ್ತರ ಪ್ರದೇಶದ 13 ಲೋಕಸಭೆ ಕ್ಷೇತ್ರಗಳು, ಪಂಜಾಬ್‌ 13, ಪಶ್ಚಿಮ ಬಂಗಾಳ 9, ಬಿಹಾರ 8, ಒಡಿಶಾ 6, ಹಿಮಾಚಲ ಪ್ರದೇಶ 4, ಜಾರ್ಖಂಡ್‌ 3 ಹಾಗೂ ಚಂಡೀಗಢದ 1 ಲೋಕಸಭೆ ಕ್ಷೇತ್ರದಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ನಡೆಯಲಿದೆ. ಸಂಜೆ 6 ಗಂಟೆವರೆಗೆ ಜನ ಹಕ್ಕು ಚಲಾಯಿಸಬಹುದಾಗಿದ್ದು, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆಗಾಗಿ ಆಯೋಗವು ಬಿಗಿ ಬಂದೋಬಸ್ತ್‌ ಸೇರಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರ ಭವಿಷ್ಯವು ಶನಿವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

ಇಂದು ಸಂಜೆ ಎಕ್ಸಿಟ್‌ ಪೋಲ್‌

ಶನಿವಾರ ಸಂಜೆ 6 ಗಂಟೆಗೆ ಮತದಾನ ಮುಗಿಯಲಿದ್ದು, 6.30ರ ಸುಮಾರಿಗೆ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಲಿವೆ. ಹಾಗಾಗಿ, ರಾಜಕೀಯ ನಾಯಕರು, ತಜ್ಞರು, ನಾಗರಿಕರು ಸೇರಿದಂತೆ ಎಲ್ಲರ ಗಮನ ಈಗ ಎಕ್ಸಿಟ್ ಪೋಲ್‌ಗಳತ್ತ ಇದೆ. ಜೂನ್‌ 1ರಂದು ಸಂಜೆ 6.30ರ ಹೊತ್ತಿಗೆ ವಿವಿಧ ಮಾಧ್ಯಮಗಳ ಎಕ್ಸಿಟ್‌ ಪೋಲ್‌ ಪ್ರಕಟವಾಗಲಿದೆ. ಕಳೆದ ಅನೇಕ ವರ್ಷಗಳಲ್ಲಿ ಎಕ್ಸಿಟ್ ಪೋಲ್‌ಗಳು ಮತದಾರರ ಚಿತ್ತವನ್ನು ಅಳೆಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಚುನಾವಣಾ ಆಯೋಗದ ಅಧಿಕೃತ ಘೋಷಣೆಯ ಮೊದಲೇ ಚುನಾವಣಾ ಫಲಿತಾಂಶದ ನಿಖರವಾದ ವಿವರಣೆ ಲಭ್ಯವಾಗುತ್ತದೆ.

ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳುತ್ತವೆ. ಆದರೆ ಅದರ ನಿಖರತೆಯು ಭೌಗೋಳಿಕ ವ್ಯಾಪ್ತಿ ಮತ್ತು ಮತದಾರರ ನಿಷ್ಕಪಟತೆಯಂತಹ ಬಹು ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ. ಸಾಮಾನ್ಯವಾಗಿ ಜನರು ಗುಂಪುಗಳಲ್ಲಿ ಮತ ಚಲಾಯಿಸಿದಾಗ ಗಾಳಿ ಯಾವ ಕಡೆಗೆ ಬೀಸುತ್ತಿದೆ ಎಂಬುದನ್ನು ಅಳೆಯುವುದು ಸುಲಭ. ಆದರೆ ಒಂದು ಭಾಗದ ಜನರು ತಮ್ಮ ಒಲವನ್ನು ತೋರಿಸದಿರಲು ನಿರ್ಧರಿಸಿದರೆ ಅಲ್ಲಿಯೇ ಸಮೀಕ್ಷೆದಾರರು ಸಂಖ್ಯೆಗಳನ್ನು ತಪ್ಪಾಗಿ ಬಿಡುತ್ತದೆ. ಎಕ್ಸಿಟ್ ಪೋಲ್‌ಗಳು ಕೆಲವೊಮ್ಮೆ ಸರಿ ಮತ್ತು ಕೆಲವೊಮ್ಮೆ ತಪ್ಪಾಗಿವೆ.

ಇದನ್ನೂ ಓದಿ: Modi Meditation: ಮೋದಿ ಮಾಡ್ತಿರೋದು ‘ಧ್ಯಾನ’ ಅಲ್ಲ ‘ಡ್ರಾಮಾ’ ಎಂದ ಮಲ್ಲಿಕಾರ್ಜುನ ಖರ್ಗೆ!

Continue Reading
Advertisement
Neeraj Chopra
ಕ್ರೀಡೆ8 mins ago

Neeraj Chopra: 2 ತಿಂಗಳು ವಿದೇಶದಲ್ಲಿ ಕಠಿಣ ತರಬೇತಿ ಪಡೆಯಲಿದ್ದಾರೆ ನೀರಜ್ ಚೋಪ್ರಾ

Neha Gowda is pregnant the actress shared the good news
ಕಿರುತೆರೆ17 mins ago

Neha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿ ಗೊಂಬೆ-ಚಂದನ್‌ ದಂಪತಿ

Vastu Tips
ಧಾರ್ಮಿಕ17 mins ago

Vastu Tips: ಮನೆಯ ಯಾವ ಕೋಣೆಗೆ ಯಾವ ಬಣ್ಣ ಇದ್ದರೆ ನೆಮ್ಮದಿ ಸಿಗುತ್ತದೆ? ವಾಸ್ತು ಸಲಹೆ ಹೀಗಿದೆ

prajwal revanna case mobile
ಪ್ರಮುಖ ಸುದ್ದಿ18 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲ್‌ ಮಂಗಮಾಯ! ಏನಂತಾರೆ ಪ್ರಜ್ವಲ್ಲು?

LPG Price Cut
ವಾಣಿಜ್ಯ26 mins ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ ಇಳಿಕೆ

Paris Olympics 2024
ಕ್ರೀಡೆ32 mins ago

Paris Olympics 2024: ಒಲಿಂಪಿಕ್ಸ್‌ಗೆ‌ ಅರ್ಹತೆ ಪಡೆದ ಬಾಕ್ಸರ್ ನಿಶಾಂತ್ ದೇವ್

Dolly Dhananjay kotee distribution rights held by KRG Studios
ಸ್ಯಾಂಡಲ್ ವುಡ್36 mins ago

Dolly Dhananjay: ಕೆಆರ್​ಜಿ ಸ್ಟುಡಿಯೋಸ್ ಪಾಲಾದ ‘ಕೋಟಿ‌’ ವಿತರಣಾ ಹಕ್ಕು; ರಿಲೀಸ್‌ಗೆ ಕೌಂಟ್‌ ಡೌನ್!

bhavani revanna case
ಪ್ರಮುಖ ಸುದ್ದಿ1 hour ago

Bhavani Revanna: `ಮನೆಗೆ ಬನ್ನಿʼ ಎಂದ ಭವಾನಿ ರೇವಣ್ಣ ಮನೆಯಲ್ಲಿಲ್ಲ! ಹಾಗಾದ್ರೆ ಎಲ್ಲಿ?

KCET Result 2024
ಬೆಂಗಳೂರು1 hour ago

KCET Result 2024 : ಜೂನ್‌ ಮೊದಲ ವಾರ ಸಿಇಟಿ ಪರೀಕ್ಷೆ ಫಲಿತಾಂಶ ಖಚಿತ!

Heat Wave
ದೇಶ1 hour ago

Heat Wave: ಬಿಹಾರದಲ್ಲಿ ಬಿಸಿಲಾಘಾತ; ಶಾಖಕ್ಕೆ 10 ಮತಗಟ್ಟೆ ಸಿಬ್ಬಂದಿ ಸೇರಿ 14 ಮಂದಿ ಬಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌