Arvind Kejriwal: ಅರವಿಂದ ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ; ಸುಪ್ರೀಂನಲ್ಲೂ ಸಿಗಲಿಲ್ಲ ರಿಲೀಫ್‌ - Vistara News

ದೇಶ

Arvind Kejriwal: ಅರವಿಂದ ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ; ಸುಪ್ರೀಂನಲ್ಲೂ ಸಿಗಲಿಲ್ಲ ರಿಲೀಫ್‌

Arvind Kejriwal:ಕೇಜ್ರಿವಾಲ್‌ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಈ ಸಂದರ್ಭದಲ್ಲಿ ನಾವು ಆದೇಶ ಹೊರಡಿಸಿದರೆ, ಅದು ಪೂರ್ವಾಗ್ರಹಪೀಡಿತ ಆದೇಶ ಎಂದೆನಿಸಿಕೊಳ್ಳಲಿದೆ ಎಂದುಹೇಳಿದೆ. ಆ ಮೂಲಕ ಬಿಡುಗಡೆಯ ಎದುರು ನೋಡುತ್ತಿರುವ ಕೇಜ್ರಿವಾಲ್‌ಗೆ ಆಸೆಗೆ ತನ್ನೀರೆರಚಿದೆ.

VISTARANEWS.COM


on

Arvind Kejriwal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ (Delhi Excise Policy Case) ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಕಾನೂನು ಸಮರದಲ್ಲಿ ಮತ್ತೆ ಹಿನ್ನಡೆಯಾಗಿದೆ. ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ಮಂಜೂರು ಮಾಡಿದ್ದ ರೋಸ್‌ ಅವೆನ್ಯೂ ಕೋರ್ಟ್‌ ಆದೇಶಕ್ಕೆ ದೆಹಲಿ ಹೈಕೋರ್ಟ್‌ (Delhi High Court) ಮಧ್ಯಂತರ ತಡೆಯಾಜ್ಞೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಕೇಜ್ರಿವಾಲ್‌ಗೆ ಅಲ್ಲೂ ರಿಲೀಫ್‌ ಸಿಕ್ಕಿಲ್ಲ.

ಕೇಜ್ರಿವಾಲ್‌ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಈ ಸಂದರ್ಭದಲ್ಲಿ ನಾವು ಆದೇಶ ಹೊರಡಿಸಿದರೆ, ಅದು ಪೂರ್ವಾಗ್ರಹಪೀಡಿತ ಆದೇಶ ಎಂದೆನಿಸಿಕೊಳ್ಳಲಿದೆ ಎಂದು ಹೇಳಿದೆ. ಹೀಗಾಗಿ ವಿಚಾರಣೆಯನ್ನು ಜೂ.26ರಂದು ಮುಂದೂಡಲಾಗಿದೆ. ಆ ಮೂಲಕ ಬಿಡುಗಡೆಯ ಎದುರು ನೋಡುತ್ತಿರುವ ಕೇಜ್ರಿವಾಲ್‌ಗೆ ಆಸೆಗೆ ತನ್ನೀರೆರಚಿದೆ.

ಕೇಜ್ರಿವಾಲ್‌ ಅವರಿಗೆ ರೋಸ್‌ ಅವೆನ್ಯೂ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಇ.ಡಿ ಅಧಿಕಾರಿಗಳು ಹೈಕೋರ್ಟ್‌ ಮೊರೆ ಹೋಗಿದ್ದರು. ವಿಚಾರಣೆ ನಡೆಸುವವರೆಗೂ ಬಿಡುಗಡೆ ಮಾಡಬಾರದು ಎಂಬುದಾಗಿ ದೆಹಲಿ ಕೋರ್ಟ್‌ ಶುಕ್ರವಾರ (ಜೂನ್‌ 21) ಬೆಳಗ್ಗೆ ಆದೇಶ ಹೊರಡಿಸಿತು. ಇದಾದ ಬಳಿಕ ನ್ಯಾಯಾಲಯವು ಇ.ಡಿ ಅರ್ಜಿಯನ್ನು ವಿಚಾರಣೆ ನಡೆಸಿತು. ರೋಸ್‌ ಅವೆನ್ಯೂ ನ್ಯಾಯಾಲಯದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದ ನ್ಯಾಯಾಲಯವು, ಆದೇಶವನ್ನು ಮೀಸಲಿರಿಸಿತು. ಇದರಿಂದಾಗಿ ಮಂಗಳವಾರದವರೆಗೆ ಅರವಿಂದ್‌ ಕೇಜ್ರಿವಾಲ್‌ ಅವರು ಜೈಲಿನಲ್ಲೇ ಕಾಲ ಕಳೆಯಬೇಕಿದೆ.

ಏನಿದು ಪ್ರಕರಣ?

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಮಾತ್ರವಲ್ಲ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್​ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್‌ ಈ ಹಿಂದೆಯೇ ಆದೇಶಿಸಿತ್ತು.

ಇದನ್ನೂ ಓದಿ: Shashi Tharoor Controversy: ಉತ್ತರಪ್ರದೇಶದ ಬಗ್ಗೆ ಶಶಿ ತರೂರ್‌ ಹೇಳಿದ್ದೇನು ಗೊತ್ತಾ?; ಭಾರೀ ವಿವಾದಕ್ಕೀಡಾಗ್ತಿದೆ ಈ ಪೋಸ್ಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

VISTARANEWS.COM


on

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ ಮಾಡಿದ್ದಾರೆ. ಕೋಲ್ಕತ್ತಾದ ಬ್ರಿಗೇಡ್‌ ಪರೇಡ್‌ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಆರ್‌.ಎನ್‌.ರವಿ ಅವರು ಸುವೇಂದು ಅಧಿಕಾರಿಗೆ ಪ್ರತಿಜ್ಞಾ ವಿಧಿ ಭೋಧಿಸಿದರು. ದೇವರ ಹೆಸರಿನಲ್ಲಿ ಸುವೇಂದು ಅಧಿಕಾರಿ ಪ್ರಮಾಣ ಸ್ವೀಕರಿಸಿದರು.

ಇದೇ ವೇಳೆ ಬಿಜೆಪಿಯ ಹಿರಿಯ ನಾಯಕರಾದ ದಿಲೀಪ್‌ ಘೋಷ್‌, ಅಗ್ನಿಮಿತ್ರಾ ಪಾಲ್‌, ಅಶೋಕ್‌ ಕೀರ್ತನಿಯಾ, ಕ್ಷುದಿರಾಮ್‌ ಟುಡು, ನಿಶಿತ್‌ ಪ್ರಾಮಾಣಿಕ್‌ ಅವರು ಸಚಿವರಾಗಿ ಪ್ರಮಾಣ ಸ್ವೀಕರಿಸಿದರು..

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ನಿತಿನ್‌ ಗಡ್ಕರಿ, ಧರ್ಮೇಂದ್ರ ಪ್ರಧಾನ್‌, ಶಿವರಾಜ್‌ ಸಿಂಗ್‌ ಚೌಹಾಣ್‌, ಸುರೇಶ್‌ ಗೋಪಿ ಭಾಗವಹಿಸಿದ್ದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ, ರವೀಂದ್ರನಾಥ ಠಾಗೂರ್‌ ರವರ ಜಯಂತಿ ಹಿನ್ನೆಲೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ್ರು. ಸಮಾರಂಭದ ವೇದಿಕೆಗೆ ಆಗಮಿಸಿದ ಮೋದಿ, ಪಶ್ಚಿಮ ಬಂಗಾಳದ ಅತ್ಯಂತ ಹಿರಿಯ ಬಿಜೆಪಿ ಕಾರ್ಯಕರ್ತನ ಕಾಲಿಗೆ ನಮಸ್ಕರಿಸಿದ್ರು.

ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ದಾಖಲೆ ನಿರ್ಮಿಸಿದ್ದಾರೆ.

Get smarter responses, upload files a

Continue Reading

ದೇಶ

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

VISTARANEWS.COM


on

Rakshit Shetty Richard Anthony Produce By Hombale

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೊಸ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಚುನಾವಣೆಯಲ್ಲಿ ಮಮತಾ ವಿರುದ್ಧ ಸೆಣಸಿ ಗೆದ್ದಿರುವ ಸುವೇಂದು ಅಧಿಕಾರಿ ಹೊಸ ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ. ಶನಿವಾರ ಬೆಳಗ್ಗೆ ೧೧ ಗಂಟೆಗೆ ಸುವೇಂದು ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಅಮಿತ್‌ ಶಾ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಸುವೇಂದು ಅಧಿಕಾರಿಯನ್ನು ಪ.ಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಯಿತು. ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಹೆಸರು ಇತಿಹಾಸದಲ್ಲಿ ದಾಖಲಾಗಲಿದೆ.
ಇದೇ ವೇಳೆ ಯಾವುದೇ ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿಸದೇ ಇರಲು ಬಿಜೆಪಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

Continue Reading

ದೇಶ

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

VISTARANEWS.COM


on

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಹಿಂಸಾಚಾರ ಭುಗಿಲೆದ್ದಿದೆ. ಸಿಎಂ ರೇಸ್‌‌ನಲ್ಲಿರೋ ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌‌ ಹತ್ಯೆ ಆಗಿದೆ. ಆದ್ರೆ, ದುಷ್ಕರ್ಮಿಗಳ ಟಾರ್ಗೆಟ್‌‌‌‌‌ ಇದಿದ್ದು, ಸುವೇಂದು ಅಧಿಕಾರಿ, ಚಂದ್ರನಾಥ್‌ ಸುವೇಂದು‌ ಅವರ ಕಾರಿನಲ್ಲೇ ಮನೆಗೆ ಹೋಗ್ತಿದ್ದಾಗ ದುಷ್ಕಿರ್ಮಿಗಳು ಅಡ್ಡಗಟ್ಟಿ ಪಿಸ್ತೂಲ್‌‌ನಿಂದ ಶೂಟೌಟ್‌‌‌‌ ಮಾಡಿ ಕೊಲೆ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಆಗ್ಬೇಕೆಂದು ಕಣ್ಣೀರು ಹಾಕುತ್ತಲೆ ಸುವೇಂದು ಅಧಿಕಾರಿ ಗುಡುಗಿದ್ದಾರೆ. ಇದೆಲ್ಲದರ ಮಧ್ಯೆ ಪಶ್ಚಿಮ ಬಂಗಾಳದ ಗದ್ದುಗೆ ಯಾರು ಏರ್ತಾರೆ ಅನ್ನೋ ಕುತೂಹಲಕ್ಕೆ ನಾಳೆ ಬ್ರೇಕ್‌ ಬೀಳಲಿದೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸಹ ವೀಕ್ಷಕ ಒಡಿಶಾದ ಮುಖ್ಯಮಂತ್ರಿ ಮೋಹನ್ ಮಾಝಿ ನೇತೃತ್ವದಲ್ಲಿ ನಾಳೆ ಸಂಜೆ 4 ಗಂಟೆಗೆ ನೂತನ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಸಭೆಯಲ್ಲೇ ಪಶ್ಚಿಮ ಬಂಗಾಳದ ಸಿಎಂ ಯಾರಾಗಬೇಕು ಅನ್ನೋದು ಫೈನಲ್‌ ಆಗಲಿದೆ.
ಇವತ್ತಿಗೆ ಮಮತಾ ಬ್ಯಾನರ್ಜಿ ಆಡಳಿತಾವಧಿ ಮುಕ್ತಾಯಗೊಂಡಿದೆ. ಮೇ 9ರಂದು ನೂತನ ಮುಖ್ಯಮಂತ್ರಿ ಮತ್ತು ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಸುವೇಂದು ಅಧಿಕಾರಿಯವರ ಜನಪ್ರಿಯತೆಯೋ ಅಥವಾ ದಿಲೀಪ್ ಘೋಷ್, ಸಮಿಕ್ ಭಟ್ಟಾಚಾರ್ಯ ಅವರ ಸಂಘಟನಾ ನಿಷ್ಠೆಯೋ? ಹೈಕಮಾಂಡ್ ಯಾರಿಗೆ ಮನ್ನಣೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

Continue Reading

ರಾಜಕೀಯ

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

VISTARANEWS.COM


on

ತಮಿಳುನಾಡು ರಾಜಕೀಯ ಕ್ಷಣಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿದೆ. ವಿಜಯ್‌ ಪ್ರಮಾಣವಚನಕ್ಕೆ ಗವರ್ನರ್‌ ಎರಡನೇ ಸಲವೂ ಬ್ರೇಕ್‌ ಹಾಕಿದ್ದಾರೆ. ೧೧೮ ಶಾಸಕರ ಬೆಂಬಲದ ಪತ್ರ ತನ್ನಿ, ಅಲ್ಲಿಯವರೆಗೆ ಉಳಿದ ಯಾವ ಪಕ್ಷಕ್ಕೂ ಪ್ರಮಾಣವಚನಕ್ಕೆ ಆಹ್ವಾನಿಸುವುದಿಲ್ಲ ಎಂದು ಗವರ್ನರ್‌ ರಾಜೇಂದ್ರ ಅರ್ಲೇಕರ್‌ ಟಿವಿಕೆ ಮುಖ್ಯಸ್ಥ ವಿಜಯ್‌ಗೆ ಸೂಚಿಸಿದ್ದಾರೆ.
ಈ ಮಧ್ಯೆ, ಟಿವಿಕೆ ಪಕ್ಷ ಬೆಂಬಲಕ್ಕಾಗಿ ವಿಸಿಕೆಯನ್ನು ಸಂಪರ್ಕಿಸಿದೆ. ಸಿಪಿಐ ಮತ್ತು ಸಿಪಿಎಂ ಪಕ್ಷಗಳನ್ನೂ ವಿಜಯ್‌ ಮಾತುಕತೆ ನಡೆಸುತ್ತಿದ್ದಾರೆ. ವಿಸಿಕೆ, ಸಿಪಿಐ ಮತ್ತು ಸಿಪಿಎಂ ತಲಾ ಇಬ್ಬರು ಶಾಸಕರನ್ನು ಹೊಂದಿದೆ. ಮೂರೂ ಪಕ್ಷಗಳು ಇದುವರೆಗೆ ವಿಜಯ್‌ಗೆ ಅಧಿಕೃತ ಬೆಂಬಲ ಘೋಷಿಸಿಲ್ಲ.
ಮತ್ತೊಂದು ಕಡೆ, ಚೆನ್ನೈನಲ್ಲಿ ವಿಜಯ್‌ ಬೆಂಬಲಿಗರ ಜಮಾವಣೆ ಏರುತ್ತಿದೆ. ರಾಜ್ಯಪಾಲರ ನಡೆಯಿಂದ ಆಕ್ರೋಶಗೊಂಡಿರುವ ಟಿವಿಕೆ ನಾಯಕರು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಪ್ರಮಾಣ ವಚನ ಸ್ವೀಕರಿಸಲು ವಿಜಯ್‌ಗೆ ಆಹ್ವಾನ ನೀಡುವಂತೆ ರಾಜ್ಯಪಾಲರಿಗೆ ಸೂಚಿಸಬೇಕು ಎಂದು ರಾಷ್ಟ್ರಪತಿಗೆ ಇ-ಮೇಲ್‌ ರವಾನಿಸಿದ್ದಾರೆ

Continue Reading
Advertisement
Latest47 minutes ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ18 hours ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ18 hours ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ18 hours ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

ದೇಶ2 days ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ2 days ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ2 days ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ2 days ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

ಕ್ರೈಂ2 days ago

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

Latest3 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌