Arvind Kejriwal: ಸುಪ್ರೀಂಕೋರ್ಟ್‌ನಿಂದ ಮಧ್ಯಂತರ ಜಾಮೀನು; ಕೇಜ್ರಿವಾಲ್‌ಗೆ ಬಿಗ್‌ ರಿಲೀಫ್‌ - Vistara News

ದೇಶ

Arvind Kejriwal: ಸುಪ್ರೀಂಕೋರ್ಟ್‌ನಿಂದ ಮಧ್ಯಂತರ ಜಾಮೀನು; ಕೇಜ್ರಿವಾಲ್‌ಗೆ ಬಿಗ್‌ ರಿಲೀಫ್‌

Arvind Kejriwal:ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

VISTARANEWS.COM


on

Arvind Kejriwal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಅಬಕಾರಿ ನೀತಿ ಪ್ರಕರಣ(Delhi Excise policy)ದಲ್ಲಿ ಜೈಲುಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್(Arvind Kejriwal) ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಸುಪ್ರೀಂ ಕೋರ್ಟ್(Supreme Court) ಮಧ್ಯಂತರ ಜಾಮೀನು(Interim Bail) ನೀಡಿದೆ. ಜಾರಿ ನಿರ್ದೇಶನಾಲಯ (ಇಡಿ) ತನ್ನ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್ ಕೇಜ್ರಿವಾಲ್‌ ಅವರಿಗೆ ಜಾಮೀನು ನೀಡಿದೆ

ಏನಿದು ಪ್ರಕರಣ?

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಮಾತ್ರವಲ್ಲ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್​ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್‌ ಈ ಹಿಂದೆಯೇ ಆದೇಶಿಸಿತ್ತು. ಅದರಂತೆ ಅವರು ಜೈಲಿಗೆ ತೆರಳಿದ್ದರು.

ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಎರಡು ವಾರಗಳ ಹಿಂದೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿ ಅವೆನ್ಯೂ ಕೋರ್ಟ್‌ ಆದೇಶ ನೀಡಿದೆ. ಸಿಬಿಐ ನಡೆಸುತ್ತಿರುವ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ, ಅವರಿಗೆ ನೀಡಲಾಗಿದ್ದ ಜಾಮೀನನ್ನು ಪ್ರಶ್ನಿಸಲಾಗಿತ್ತು.
ತನಿಖೆ ಮತ್ತು ಮುಕ್ತ ನ್ಯಾಯಾಂಗ ಪ್ರಕ್ರಿಯೆಯ ದೃಷ್ಟಿಯಿಂದ ಕೇಜ್ರಿವಾಲ್ ಅವರನ್ನು ಕಸ್ಟಡಿಗೆ ಪಡೆಯುವುದು ಅಗತ್ಯವಿದೆ ಎಂದು ಸಿಬಿಐ ಹೇಳಿದೆ. ಮೂರು ದಿನಗಳ ಸಿಬಿಐ ಕಸ್ಟಡಿ ಅಂತ್ಯಗೊಂಡ ನಂತರ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆದೇಶವನ್ನು ವಿಶೇಷ ನ್ಯಾಯಾಧೀಶ ಸುನೇನಾ ಶರ್ಮಾ ಕಾಯ್ದಿರಿಸಿದ್ದರು. ಕೇಜ್ರಿವಾಲ್ ತನಿಖೆಗೆ ಸಹಕಾರ ನೀಡುತ್ತಿಲ್ಲ, ಸರಿಯಾದ ಉತ್ತರಗಳನ್ನು ಕೊಡುತ್ತಿಲ್ಲ ಎಂದು ಸಿಬಿಐ ರಿಮಾಂಡ್ ಅರ್ಜಿಯಲ್ಲಿ ಆರೋಪಿಸಿದೆ.

ಇದನ್ನೂ ಓದಿ: Govt Employees: ಸರ್ಕಾರಿ ನೌಕರರ ವಿಮಾ ಪಾಲಿಸಿಗಳ ಮೊತ್ತಕ್ಕೆ ಬೋನಸ್‌ ನೀಡಲು ರಾಜ್ಯ ಸರ್ಕಾರ ಆದೇಶ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Yamini Krishnamurthy: ಪದ್ಮವಿಭೂಷಣ ಪುರಸ್ಕೃತ ಭರತನಾಟ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ಇನ್ನಿಲ್ಲ

Yamini Krishnamurthy: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಮದನಪಲ್ಲಿವರಾದ ಯಾಮಿನಿ ಕೃಷ್ಣಮೂರ್ತಿ ಅವರ ನಿಧನಕ್ಕೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ಜಗನ್‌ ಮೋಹನ್‌ ರೆಡ್ಡಿ ಸೇರಿ ಹಲವರು ಕಂಬನಿ ಮಿಡಿದಿದ್ದಾರೆ. ಇವರಿಗೆ ಪದ್ಮಶ್ರೀ, ಪದ್ಮಭೂಷಣ ಹಾಗೂ ಪದ್ಮ ವಿಭೂಷಣ ಪ್ರಶಸ್ತಿಗಳು ಲಭಿಸಿವೆ.

VISTARANEWS.COM


on

Yamini Krishnamurthy
Koo

ನವದೆಹಲಿ: ದೇಶದ ಖ್ಯಾತ ಭರತನಾಟ್ಯ ಕಲಾವಿದೆ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಯಾಮಿನಿ ಕೃಷ್ಣಮೂರ್ತಿ (84) (Yamini Krishnamurthy) ಅವರು ಶನಿವಾರ (ಆಗಸ್ಟ್‌ 3) ಸಂಜೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ದೆಹಲಿಯಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ (Apollo Hospital) ಕೊನೆಯುಸಿರೆಳೆದಿದ್ದಾರೆ. “ಯಾಮಿನಿ ಕೃಷ್ಣಮೂರ್ತಿ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಅವರು ಕಳೆದ 7 ತಿಂಗಳಿಂದಲೂ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ” ಎಂದು ಯಾಮಿನಿ ಕೃಷ್ಣಮೂರ್ತಿ ಅವರ ಮ್ಯಾನೇಜರ್‌ ಗಣೇಶ್‌ ಅವರು ಪಿಟಿಐಗೆ ತಿಳಿಸಿದ್ದಾರೆ.

ಯಾಮಿನಿ ಕೃಷ್ಣಮೂರ್ತಿ ಅವರ ಪಾರ್ಥಿವ ಶರೀರವನ್ನು ಅಪೋಲೊ ಆಸ್ಪತ್ರೆಯಿಂದ ಭಾನುವಾರ (ಆಗಸ್ಟ್‌ 4) ಬೆಳಗ್ಗೆ 9 ಗಂಟೆಗೆ ಅವರ ಯಾಮಿನಿ ಸ್ಕೂಲ್‌ ಆಫ್‌ ಡಾನ್ಸ್‌ ಇನ್‌ಸ್ಟಿಟ್ಯೂಟ್‌ಗೆ ತರಲಾಗುತ್ತದೆ. ಅಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಆದಾಗ್ಯೂ, ಅವರ ಅಂತ್ಯಸಂಸ್ಕಾರದ ಕುರಿತು ಕುಟುಂಬಸ್ಥರಿಂದ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಯಾಮಿನಿ ಅವರು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

ಗಣ್ಯರ ಸಂತಾಪ

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಮದನಪಲ್ಲಿವರಾದ ಯಾಮಿನಿ ಕೃಷ್ಣಮೂರ್ತಿ ಅವರ ನಿಧನಕ್ಕೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ಜಗನ್‌ ಮೋಹನ್‌ ರೆಡ್ಡಿ ಸೇರಿ ಹಲವರು ಕಂಬನಿ ಮಿಡಿದಿದ್ದಾರೆ. “ಭರತನಾಟ್ಯ ಹಾಗೂ ಕೂಚಿಪುಡಿಯಲ್ಲಿ ಪರಿಣತಿ ಸಾಧಿಸಿದ್ದ, ಖ್ಯಾತಿ ಗಳಿಸಿದ್ದ ಯಾಮಿನಿ ಕೃಷ್ಣಮೂರ್ತಿ ಅವರ ಅಗಲಿಕೆಯ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಮಾಜಿ ಸಿಎಂ ಪೋಸ್ಟ್‌ ಮಾಡಿದ್ದಾರೆ. ಕೇಂದ್ರ ಸಾಂಸ್ಕೃತಿಕ ಸಚಿವಾಲಯದ ಸಂಗೀತ ನಾಟಕ ಅಕಾಡೆಮಿ ಕೂಡ ಸಂತಾಪ ವ್ಯಕ್ತಪಡಿಸಿದೆ.

ಭರತನಾಟ್ಯ ಹಾಗೂ ಕೂಚಿಪುಡಿ ನೃತ್ಯದಲ್ಲಿ ಪ್ರಖ್ಯಾತಿ ಗಳಿಸಿದ್ದ ಯಾಮಿನಿ ಕೃಷ್ಣಮೂರ್ತಿ ಅವರಿಗೆ 1968ರಲ್ಲಿ ಪದ್ಮಶ್ರೀ, 2001ರಲ್ಲಿ ಪದ್ಮಭೂಷಣ ಹಾಗೂ 2016ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇವರು ಎ ಪ್ಯಾಷನ್‌ ಫಾರ್‌ ಡಾನ್ಸ್‌ ಎಂಬ ಕೃತಿಯನ್ನೂ ರಚಿಸಿದ್ದಾರೆ. ದೆಹಲಿಯಲ್ಲಿ ಯಾಮಿನಿ ಸ್ಕೂಲ್‌ ಆಫ್‌ ಡಾನ್ಸ್‌ ಇನ್‌ಸ್ಟಿಟ್ಯೂಟ್‌ ತೆರೆದು ಸಾವಿರಾರು ಮಕ್ಕಳಿಗೆ ನೃತ್ಯ ತರಬೇತಿ ನೀಡಿದ್ದಾರೆ. ಇವರು ತಿರುಮಲ ತಿರುಪತಿ ದೇವಸ್ಥಾನದ ಆಸ್ಥಾನದ ನರ್ತಕಿಯಾಗಿಯೂ ಗುರುತಿಸಿಕೊಂಡಿದ್ದರು.

ಇದನ್ನೂ ಓದಿ: Alur Nagappa: ‘ಸಾವಿರ ಹಾಡುಗಳ ಸರದಾರ’ ಖ್ಯಾತಿಯ ಜಾನಪದ ಹಾಡುಗಾರ, ಸಾಹಿತಿ ಆಲೂರು ನಾಗಪ್ಪ ಇನ್ನಿಲ್ಲ

Continue Reading

ದೇಶ

UPSC Aspirant: ‘ನಾನು ಸತ್ರೆ ಬ್ರೇಕಿಂಗ್‌ ನ್ಯೂಸ್‌ ಆಗತ್ತೆ’ ಎಂದು ಬರೆದಿಟ್ಟು ಯುಪಿಎಸ್‌ಸಿ ಅಭ್ಯರ್ಥಿ ಆತ್ಮಹತ್ಯೆ!

UPSC Aspirant: ದೆಹಲಿಯ ಓಲ್ಡ್‌ ರಾಜೇಂದ್ರ ನಗರದಲ್ಲಿ ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಹಾರಾಷ್ಟ್ರ ಮೂಲದ 26 ವರ್ಷದ ಅಂಜಲಿ ಜುಲೈ 21ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಡೆತ್‌ನೋಟ್‌ ಬಹಿರಂಗವಾಗಿದೆ. ಡೆತ್‌ನೋಟ್‌ನಲ್ಲಿ ಆಕೆ, ತಂದೆ-ತಾಯಿಯ ಕ್ಷಮೆ ಕೇಳಿದ್ದಾಳೆ.

VISTARANEWS.COM


on

UPSC Aspirant
Koo

ನವದೆಹಲಿ: ನೀಟ್‌ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದೆ. ಯುಪಿಎಸ್‌ಸಿ ಪರೀಕ್ಷೆಯಲ್ಲೂ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಹಣಕಾಸು, ಪೋಷಕರ ಒತ್ತಡ, ಡಾಕ್ಟರ್‌, ಎಂಜಿನಿಯರ್‌, ಯುಪಿಎಸ್‌ಸಿ ಅಧಿಕಾರಿಯಾಗಬೇಕು ಎಂಬ ಒತ್ತಡದ ಮಧ್ಯೆ ವಿದ್ಯಾರ್ಥಿಗಳಿಗೆ ಹೊಸ ಚಿಂತೆ ಶುರುವಾಗಿದೆ. ಇನ್ನು, ನೀಟ್‌, ಜೆಇಇ, ಐಎಎಸ್‌ ಸೇರಿ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್‌ ಸೆಂಟರ್‌ಗಳಲ್ಲಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ದೆಹಲಿಯಲ್ಲಿ (Delhi) ಯುಪಿಎಸ್‌ಸಿ ಅಭ್ಯರ್ಥಿಯೊಬ್ಬಳು (UPSC Aspirant) ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹೌದು, ದೆಹಲಿಯ ಓಲ್ಡ್‌ ರಾಜೇಂದ್ರ ನಗರದಲ್ಲಿ ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಹಾರಾಷ್ಟ್ರ ಮೂಲದ 26 ವರ್ಷದ ಅಂಜಲಿ ಜುಲೈ 21ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಡೆತ್‌ನೋಟ್‌ ಬಹಿರಂಗವಾಗಿದೆ. “ಮಮ್ಮಿ, ಪಪ್ಪಾ, ನನ್ನನ್ನು ಕ್ಷಮಿಸಿ ಬಿಡಿ. ನನಗೆ ನಿಜವಾಗಿಯೂ ಆಗುತ್ತಿಲ್ಲ. ಇಲ್ಲಿ ಬರೀ ಸಮಸ್ಯೆಗಳೇ ಇವೆ, ತೊಂದರೆಗಳೇ ಕಾಡುತ್ತಿವೆ. ಮನಸ್ಸಿಗೆ ಶಾಂತಿ ಎಂಬುದೇ ಇಲ್ಲ. ಖಿನ್ನತೆಯಿಂದ ಹೊರಬರಲು ನಾನು ಎಲ್ಲವನ್ನೂ ಮಾಡಿದೆ. ಆದರೆ ಆಗುತ್ತಿಲ್ಲ, ನನಗೆ ಶಾಂತಿ ಬೇಕು” ಎಂಬುದಾಗಿ ಅಂಜಲಿ ಡೆತ್‌ನೋಟ್‌ನಲ್ಲಿ ಬರೆದಿದ್ದಾಳೆ.

students self harming
students self harming

“ದೆಹಲಿಯಲ್ಲಿ ಬಾಡಿಗೆ ಜಾಸ್ತಿ ಇದೆ. ನಾನು ಹಲವು ಬಾರಿ ಯುಪಿಎಸ್‌ಸಿ ಬರೆದರೂ ತೇರ್ಗಡೆ ಹೊಂದಲು ಆಗುತ್ತಿಲ್ಲ. ಇದರಿಂದಾಗಿ ನನ್ನ ಮಾನಸಿಕ ನೆಮ್ಮದಿಯು ಹಾಳಾಗಿ ಹೋಗಿದೆ. ನೀವು ನನಗೆ ಪ್ರತಿಯೊಂದು ಹೆಜ್ಜೆಯಲ್ಲೂ ಬೆಂಬಲವಾಗಿ ನಿಂತಿರಿ. ಆದರೆ, ನನ್ನನ್ನು ನಾನು ನಿಯಂತ್ರಿಸಿಕೊಳ್ಳಲು ಆಗುತ್ತಿಲ್ಲ. ನಾನು ಮೃತಪಟ್ಟರೆ ಬ್ರೇಕಿಂಗ್‌ ನ್ಯೂಸ್‌ ಆಗುತ್ತದೆ ಎಂಬುದು ಗೊತ್ತು. ಆದರೂ, ನಾನು ನನ್ನ ಶಾಂತಿಗಾಗಿ ಇಂತಹ ತೀರ್ಮಾನ ತೆಗೆದುಕೊಂಡಿದ್ದೇನೆ” ಎಂಬುದಾಗಿ ಅಂಜಲಿ ತಿಳಿಸಿದ್ದಾಳೆ.

ಕೋಟಾದಲ್ಲಿ ಇದೇ ವರ್ಷ 14 ವಿದ್ಯಾರ್ಥಿಗಳ ಆತ್ಮಹತ್ಯೆ

ನೀಟ್‌, ಜೆಇಇ ತೇರ್ಗಡೆಯಾಗದಿರುವುದು, ತೇರ್ಗಡೆಯಾಗದಿರುವ ಭಯ, ಹಲವು ಅನಗತ್ಯ ಒತ್ತಡಗಳಿಂದಾಗಿ ಕೋಟಾದಲ್ಲಿ 2023ರಲ್ಲಿ 26 ವಿದ್ಯಾರ್ಥಿಗಳು ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಿಂದಾಗಿ ಕೋಚಿಂಗ್‌ ಸೆಂಟರ್‌ಗಳು, ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಮಾಲೀಕರು ಹಿಂಜರಿಯುವಂತಾಗಿದೆ. ಇನ್ನು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಶಿಕ್ಷಣ ವ್ಯವಸ್ಥೆಯ ಮೇಲೆಯೇ ದೂರುಗಳು ಕೇಳಿಬರುವಂತೆ ಮಾಡಿವೆ. ಪೋಷಕರು ಕೂಡ ಕೋಟಾಗೆ ಮಕ್ಕಳನ್ನು ಕಳುಹಿಸಲು ಹಿಂಜರಿಯುವಂತಾಗಿದೆ. ಅಂದಹಾಗೆ, 2022ರಲ್ಲಿ ಕೋಟಾದಲ್ಲಿ 15 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಸಕ್ತ ವರ್ಷದಲ್ಲಿ ಇದುವರೆಗೆ 14 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ: Self Harming : ಉಕ್ಕಿ ಹರಿಯುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು

Continue Reading

ದೇಶ

ಕೋರ್ಟ್‌ನಲ್ಲೇ ಅಳಿಯನನ್ನು ಗುಂಡಿಕ್ಕಿ ಕೊಂದ ಮಾಜಿ ಪೊಲೀಸ್‌ ಅಧಿಕಾರಿ; ಕೃತ್ಯಕ್ಕೆ ಕಾರಣವೇನು?

ಮಾಲ್ವಿಂದರ್‌ ಸಿಂಗ್‌ ಹಾಗೂ ಹರ್‌ಪ್ರೀತ್‌ ಸಿಂಗ್‌ ಮಧ್ಯೆ ಕೌಟುಂಬಿಕ ಸಮಸ್ಯೆ, ಕಂದಕ ಉಂಟಾಗಿತ್ತು. ಹಾಗಾಗಿ, ಅವರು ನ್ಯಾಯಾಲಯ ಮೆಟ್ಟಿಲೇರಿದ್ದರು. ಹಾಗಾಗಿ, ಇಬ್ಬರೂ ಕೌಟುಂಬಿಕ ನ್ಯಾಯಾಲಯಕ್ಕೆ ತೆರಳಿದ್ದರು. ಇದೇ ವೇಳೆ ಇಬ್ಬರ ಮಧ್ಯೆ ಮಧ್ಯಸ್ಥಿಕೆ ಪ್ರಕ್ರಿಯೆ ನಡೆಯುತ್ತಿತ್ತು. ಕೆಲ ನಿಮಿಷಗಳ ಬಳಿಕ ಇಬ್ಬರೂ ಹೊರಬಂದಿದ್ದು, ಜನರಿಗೆ ಗುಂಡಿನ ಸದ್ದು ಕೇಳಿದೆ. ನಂತರ ಏನಾಯಿತು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Chandigarh Court
Koo

ಚಂಡೀಗಢ: ಪಂಜಾಬ್‌ನ ಚಂಡೀಗಢ ಕೋರ್ಟ್‌ನಲ್ಲಿ (Chandigarh Court) ಮಾಜಿ ಪೊಲೀಸ್‌ ಅಧಿಕಾರಿಯೊಬ್ಬರು ನೀರಾವರಿ ಇಲಾಖೆಯಲ್ಲಿ ಐಆರ್‌ಎಸ್‌ ಅಧಿಕಾರಿಯಾಗಿರುವ (IRS Officer) ವ್ಯಕ್ತಿಯೊಬ್ಬರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಮೃತರನ್ನು ಹರ್‌ಪ್ರೀತ್‌ ಸಿಂಗ್‌ ಎಂದು ಗುರುತಿಸಿದರೆ, ಕೊಲೆ ಆರೋಪಿಯನ್ನು ಮಾಲ್ವಿಂದರ್‌ ಸಿಂಗ್‌ ಸಿಧು ಎಂಬುದಾಗಿ ಗುರುತಿಸಲಾಗಿದೆ. ಮಾಲ್ವಿಂದರ್‌ ಸಿಂಗ್‌ಗೆ ಹರ್‌ಪ್ರೀತ್‌ ಸಿಂಗ್‌ ಅಳಿಯ (ಮಗಳ ಗಂಡ) ಆಗಬೇಕು ಎಂಬ ಸಂಗತಿಯು ಬಳಿಕ ಬಯಲಾಗಿದೆ.

ಮಾಲ್ವಿಂದರ್‌ ಸಿಂಗ್‌ ಹಾಗೂ ಹರ್‌ಪ್ರೀತ್‌ ಸಿಂಗ್‌ ಮಧ್ಯೆ ಕೌಟುಂಬಿಕ ಸಮಸ್ಯೆ, ಕಂದಕ ಉಂಟಾಗಿತ್ತು. ಹಾಗಾಗಿ, ಅವರು ನ್ಯಾಯಾಲಯ ಮೆಟ್ಟಿಲೇರಿದ್ದರು. ಹಾಗಾಗಿ, ಇಬ್ಬರೂ ಕೌಟುಂಬಿಕ ನ್ಯಾಯಾಲಯಕ್ಕೆ ತೆರಳಿದ್ದರು. ಇದೇ ವೇಳೆ ಇಬ್ಬರ ಮಧ್ಯೆ ಮಧ್ಯಸ್ಥಿಕೆ ಪ್ರಕ್ರಿಯೆ ನಡೆಯುತ್ತಿತ್ತು. ಆಗ, ಮಾಲ್ವಿಂದರ್‌ ಸಿಂಗ್‌, ಶೌಚಾಲಯಕ್ಕೆ ಹೋಗಿಬರುತ್ತೇನೆ ಎಂದು ಕೋಣೆಯಿಂದ ಹೊರಬಂದರು. ಇದೇ ವೇಳೆ ಮಾವನಿಗೆ ದಾರಿ ತೋರಿಸುತ್ತೇನೆ ಎಂದು ಹರ್‌ಪ್ರೀತ್‌ ಸಿಂಗ್‌ ಕೂಡ ಹೊರಬಂದರು. ಇದಾದ ಬಳಿಕ ಐದು ಬಾರಿ ಗುಂಡು ಹಾರಿಸಿದ ಸದ್ದು ಕೇಳಿದ ಕಾರಣ ಇಡೀ ಕೋರ್ಟ್‌ನಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು.

ಮಾಲ್ವಿಂದರ್‌ ಸಿಂಗ್‌ ಅಳಿಯನಿಗೇ ಐದು ಬಾರಿ ಗುಂಡು ಹಾರಿಸಿದ್ದಾರೆ. ಐದರ ಪೈಕಿ ಎರಡು ಗುಂಡುಗಳು ಹರ್‌ಪ್ರೀತ್‌ ಸಿಂಗ್‌ಗೆ ತಗುಲಿವೆ. ಹರ್‌ಪ್ರೀತ್‌ ಸಿಂಗ್‌ ಕೋರ್ಟ್‌ನಲ್ಲಿ ಕೆಳಗೆ ಬಿದ್ದಿರುವ ವಿಡಿಯೊ ಲಭ್ಯವಾಗಿದೆ. “ಅವರಿಗೆ ಗುಂಡು ತಗುಲಿದೆ. ಯಾರಾದರೂ ಆಸ್ಪತ್ರೆಗೆ ಕರೆದುಕೊಂಡು ನಡೆಯಿರಿ” ಎಂದು ವ್ಯಕ್ತಿಯೊಬ್ಬ ಹೇಳುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಬಳಿಕ ಹರ್‌ಪ್ರೀತ್‌ ಸಿಂಗ್‌ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರೂ ಮಾರ್ಗ ಮಧ್ಯೆಯೇ ಅಧಿಕಾರಿ ಮೃತಪಟ್ಟರು ಎಂದು ತಿಳಿದುಬಂದಿದೆ.

ಅಳಿಯನಿಗೇ ಗುಂಡು ಹಾರಿಸಿದ ವ್ಯಕ್ತಿಯನ್ನು ಕೆಲ ವಕೀಲರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದಾದ ಬಳಿಕ ಪೊಲೀಸರು ಮಾಲ್ವಿಂದರ್‌ ಸಿಂಗ್‌ ಅವರನ್ನು ಬಂಧಿಸಿದರು. ಕೋರ್ಟ್‌ನಲ್ಲೇ ಹರ್‌ಪ್ರೀತ್‌ ಸಿಂಗ್‌ ರಕ್ತದ ಮಡುವಿನಲ್ಲಿ ಬಿದ್ದ ವಿಡಿಯೊ ಕೂಡ ಲಭ್ಯವಾಗಿದೆ. ಇಬ್ಬರ ನಡುವಿನ ಕೌಂಟುಂಬಿಕ ಸಮಸ್ಯೆ ಏನು? ಮಗಳಿಗೆ ಹರ್‌ಪ್ರೀತ್‌ ಸಿಂಗ್‌ ಕಿರುಕುಳ ಕೊಡುತ್ತಿದ್ದರಾ? ಸಂಧಾನಕ್ಕೆ ಬಂದವರ ಮಧ್ಯೆ ಗಲಾಟೆ ಏಕೆ ನಡೆಯಿತು ಎಂಬುದು ಸೇರಿ ಕೃತ್ಯಕ್ಕೆ ಕಾರಣ ಏನು ಎಂಬುದು ಇದುವರೆಗೆ ಗೊತ್ತಾಗಿಲ್ಲ. ಮಾಲ್ವಿಂದರ್‌ ಸಿಂಗ್‌ ಅವರು ಅಸಿಸ್ಟಂಟ್‌ ಐಜಿಪಿಯಾಗಿದ್ದರು ಹಾಗೂ ಅವರು ಅಮಾನತಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Murder Case: ಒಂಟಿ ಕೈ ರೌಡಿಯಿಂದ ಇನ್ನೊಬ್ಬ ರೌಡಿಯ ಕೊಚ್ಚಿ ಕೊಲೆ

Continue Reading

ದೇಶ

Moon: ಭೂಮಿಯಿಂದ ದೂರ ಹೊರಟ ಚಂದ್ರ, ಮುಂದೆ ದಿನಕ್ಕೆ 24 ಅಲ್ಲ 25 ಗಂಟೆಗಳು ಇರಲಿವೆ!

Moon: ವರ್ಷದಿಂದ ವರ್ಷಕ್ಕೆ ಚಂದಿರನು ಭೂಮಿಯಿಂದ ದೂರವಾಗುತ್ತಿದ್ದಾನೆ ಎಂದು ಅಮೆರಿಕದ ಯುನಿವರ್ಸಿಟಿ ಆಫ್‌ ವಿಸ್ಕಾನ್ಸಿನ್-ಮ್ಯಾಡಿಸನ್‌ನ ತಜ್ಞರು ಮಾಡಿದ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸುಮಾರು 90 ದಶಲಕ್ಷ ವರ್ಷದಷ್ಟು ಹಳೆಯದಾದ ಶಿಲೆಯ ಮೇಲೆ ಗಮನ ಕೇಂದ್ರೀಕರಿಸಿ ಅಧ್ಯಯನ ನಡೆಸಲಾಗಿದ್ದು, ಭೂಮಿಯಿಂದ ಚಂದ್ರನು ಬೇರ್ಪಡುವುದರಿಂದ ಆಗುವ ಪರಿಣಾಮಗಳ ಕುರಿತು ಕೂಡ ಅವರು ಬೆಳಕು ಚೆಲ್ಲಿದ್ದಾರೆ.

VISTARANEWS.COM


on

Moon
Koo

ನವದೆಹಲಿ: ಚಂದಿರನಿಗೂ ಮಾನವನಿಗೂ ಎಲ್ಲಿಲ್ಲದ ನಂಟು. ಚಂದಿರನನ್ನು ತೋರಿಸಿ ಅಮ್ಮ ಕೈತುತ್ತು ತಿನಿಸಿದ, ಚಂದ್ರನ ಬೆಳಕಿನಲ್ಲಿ ರಾತ್ರಿ ರೈತ ಜಮೀನಿನಲ್ಲಿ ಕೆಲಸ ಮಾಡಿದ, ಚಂದಿರನ ಬೆಳದಿಂಗಳಲ್ಲಿ ಊರೆಲ್ಲ ಸುತ್ತಾಡಿದ ನೆನಪುಗಳು ಕಾಡುತ್ತವೆ. ಇನ್ನು ದೇಶದ ಕವಿಗಳೂ ಅಷ್ಟೇ, ಚಂದಿರನ ಬಗ್ಗೆ ಬಗೆಬಗೆಯ ಕವಿತೆಗಳನ್ನು ಬರೆಯುವ ಮೂಲಕ ನಮಗೆ ಚಂದಿರ ಏಕೆ ಮುಖ್ಯ ಎಂಬುದನ್ನು ಸಾರಿದ್ದಾರೆ. ಚಂದಮಾಮ ಎಂದೂ ಕೂಡ ವರ್ಣಿಸಿದ್ದಾರೆ. ಇಂತಹ ಚಂದಮಾಮ ಈಗ ಭೂಮಿಯಿಂದ ದೂರವಾಗುತ್ತಿದ್ದಾನೆ. ಅಷ್ಟೇ ಅಲ್ಲ, ಮುಂದೆ ನಮಗೆ ದಿನದಲ್ಲಿ 24 ಗಂಟೆ ಬದಲು 25 ಗಂಟೆ ಇರಲಿವೆ ಎಂದು ಅಧ್ಯಯನವೊಂದು ಭೀಕರ ಮಾಹಿತಿಯನ್ನು ಬಿಚ್ಚಿಟ್ಟಿದೆ.

ಹೌದು, ವರ್ಷದಿಂದ ವರ್ಷಕ್ಕೆ ಚಂದಿರನು ಭೂಮಿಯಿಂದ ದೂರವಾಗುತ್ತಿದ್ದಾನೆ ಎಂದು ಅಮೆರಿಕದ ಯುನಿವರ್ಸಿಟಿ ಆಫ್‌ ವಿಸ್ಕಾನ್ಸಿನ್-ಮ್ಯಾಡಿಸನ್‌ನ ತಜ್ಞರು ಮಾಡಿದ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸುಮಾರು 90 ದಶಲಕ್ಷ ವರ್ಷದಷ್ಟು ಹಳೆಯದಾದ ಶಿಲೆಯ ಮೇಲೆ ಗಮನ ಕೇಂದ್ರೀಕರಿಸಿ ಅಧ್ಯಯನ ನಡೆಸಲಾಗಿದ್ದು, ಭೂಮಿಯಿಂದ ಚಂದ್ರನು ಬೇರ್ಪಡುವುದರಿಂದ ಆಗುವ ಪರಿಣಾಮಗಳ ಕುರಿತು ಕೂಡ ಅವರು ಬೆಳಕು ಚೆಲ್ಲಿದ್ದಾರೆ. ಈ ಅಧ್ಯಯನ ವರದಿ ಈಗ ಜಗತ್ತಿನಾದ್ಯಂತ ಸುದ್ದಿಯಾಗಿದೆ.

ದಿನಕ್ಕೆ 25 ಗಂಟೆ ಹೇಗೆ?

ಪ್ರತಿ ವರ್ಷ ಚಂದ್ರನು ಭೂಮಿಯಿಂದ 3.8 ಸೆಂಟಿಮೀಟರ್‌ ದೂರವಾಗುತ್ತಿದ್ದಾನೆ. ಇದರಿಂದಾಗಿ ಭೂಮಿಯ ಒಂದು ದಿನದ ಅವಧಿಯು ಹೆಚ್ಚಾಗುತ್ತದೆ. ಅಂದರೆ, ಈಗ ದಿನಕ್ಕೆ 24 ಗಂಟೆ ಇದ್ದರೆ, ಮುಂಬರುವ ವರ್ಷಗಳಲ್ಲಿ ದಿನಕ್ಕೆ 25 ಗಂಟೆ ಇರಲಿವೆ. ಕಾಲಕಾಲಕ್ಕೆ ಭೂಮಿಯ ಮೇಲಿನ ಒಂದು ದಿನದಲ್ಲಿರುವ ಗಂಟೆಗಳ ಸಂಖ್ಯೆ ಹೆಚ್ಚಾಗುತ್ತದೆ. ಇದು ಸಹಜ ಪ್ರಕ್ರಿಯೆಯಾಗಿದೆ ಎಂಬುದಾಗಿ ವಿಜ್ಞಾನಿಗಳು ತಿಳಿಸಿದ್ದಾರೆ.

ಮುಂದಿನ 200 ದಶಲಕ್ಷ ವರ್ಷಗಳ ಬಳಿಕ ದಿನದಲ್ಲಿ 25 ಗಂಟೆ ಇರಲಿವೆ ಎಂದು ವಿಜ್ಞಾನಿಗಳು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಸುಮಾರು 1.4 ಶತಕೋಟಿ ವರ್ಷಗಳ ಹಿಂದೆ, ಭೂಮಿಯ ಅವಧಿಯು ದಿನಕ್ಕೆ ಕೇವಲ 18 ಗಂಟೆಯಾಗಿತ್ತು. ಕಾಲಕಾಲಕ್ಕೆ ಅದು ಹೆಚ್ಚಾಗುತ್ತ 24 ಗಂಟೆಗೆ ಏರಿಕೆಯಾಗಿದೆ. “ಭೂಮಿಯಿಂದ ಸೂರ್ಯನು ದೂರವಾಗುತ್ತ ಹೋದರೆ, ಭೂಮಿಯ ಮೇಲಿನ ಒಂದು ದಿನದ ಅವಧಿಯು ವಿಸ್ತರಣೆಯಾಗುತ್ತದೆ” ಎಂದು ವಿವಿ ಪ್ರೊಫೆಸರ್‌ ಸ್ಟೀಫನ್‌ ಮೇಯರ್ಸ್‌ ಹೇಳಿದ್ದಾರೆ.

ಇದನ್ನೂ ಓದಿ: DMK leader Controversy: ಶ್ರೀರಾಮನ ಅಸ್ತಿತ್ವಕ್ಕೆ ಪುರಾವೆಗಳೇ ಇಲ್ಲ: ಡಿಎಂಕೆ ನಾಯಕನ ವಿಡಿಯೋ ಫುಲ್‌ ವೈರಲ್‌

Continue Reading
Advertisement
KHIR City project Launch on August 23 at bengaluru says Minister MB Patil
ಕರ್ನಾಟಕ2 mins ago

KHIR City: ಬೆಂಗಳೂರಿನಲ್ಲಿ ದೇಶದಲ್ಲೇ ಮೊದಲ ‘ನಾಲೆಡ್ಜ್, ಹೆಲ್ತ್, ಇನ್ನೋವೇಶನ್ ಆಂಡ್ ರೀಸರ್ಚ್ ಸಿಟಿ’; ಆ.23ರಂದು ಉದ್ಘಾಟನೆ

IND vs SL ODI
ಪ್ರಮುಖ ಸುದ್ದಿ3 mins ago

IND vs SL ODI : ಶ್ರೀಲಂಕಾ ವಿರುದ್ಧ ಭಾನುವಾರ ಎರಡನೇ ಪಂದ್ಯ; ಮತ್ತೊಂದು ಥ್ರಿಲ್ಲರ್ ನಿರೀಕ್ಷೆ

Indian Organ Donation Day program inauguration by Minister Dinesh Gundurao at Belagavi
ಕರ್ನಾಟಕ9 mins ago

Belagavi News: ಸ್ವಾತಂತ್ರ್ಯ ದಿ‌ನಾಚರಣೆಯಂದು ಅಂಗಾಂಗ ದಾನಿಗಳ ಕುಟುಂಬಗಳಿಗೆ ಗೌರವ; ದಿ‌ನೇಶ್ ಗುಂಡೂರಾವ್

Minister MB Patil statement in janandolana programme by congress party at ramanagara
ಕರ್ನಾಟಕ16 mins ago

MB Patil: ರಾಜ್ಯ ಸರ್ಕಾರವನ್ನು ಉರುಳಿಸಲು ಬಿಜೆಪಿ, ಜೆಡಿಎಸ್ ಷಡ್ಯಂತ್ರ; ಎಂ‌.ಬಿ. ಪಾಟೀಲ ಆರೋಪ

Wayanad Tragedy
Latest18 mins ago

Wayanad Tragedy: ವಯನಾಡ್ ಭೂಕುಸಿತ; ದಕ್ಷಿಣ ಭಾರತದ ಸಿನಿಮಾ ನಟರಿಂದ ಸಂತ್ರಸ್ತರಿಗೆ ನೆರವಿನ‌ ಮಹಾಪೂರ

Yamini Krishnamurthy
ದೇಶ44 mins ago

Yamini Krishnamurthy: ಪದ್ಮವಿಭೂಷಣ ಪುರಸ್ಕೃತ ಭರತನಾಟ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ಇನ್ನಿಲ್ಲ

Namma Metro
ಪ್ರಮುಖ ಸುದ್ದಿ46 mins ago

Namma Metro: ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ; ಹಸಿರು ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ

New National Cricket Academy
ಪ್ರಮುಖ ಸುದ್ದಿ1 hour ago

National Cricket Academy : ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ 45 ಪಿಚ್​ಗಳಿರುವ ಬೃಹತ್​​ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ

UPSC Aspirant
ದೇಶ1 hour ago

UPSC Aspirant: ‘ನಾನು ಸತ್ರೆ ಬ್ರೇಕಿಂಗ್‌ ನ್ಯೂಸ್‌ ಆಗತ್ತೆ’ ಎಂದು ಬರೆದಿಟ್ಟು ಯುಪಿಎಸ್‌ಸಿ ಅಭ್ಯರ್ಥಿ ಆತ್ಮಹತ್ಯೆ!

PSI Parshuram Death Case
ಕರ್ನಾಟಕ1 hour ago

PSI Parashuram Case: ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ8 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌