Site icon Vistara News

Arvind Kejriwal: ಕೇಜ್ರಿವಾಲ್‌ಗೆ ಮತ್ತೊಂದು ರಿಲೀಫ್‌; ಸಿಎಂ ಸ್ಥಾನ ವಜಾಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ

AAP Funds

AAP received Rs 7.08 crore foreign funds from 2014-2022, violated forex norms: ED

ನವದೆಹಲಿ:ದೆಹಲಿ ಅಬಕಾರಿ ನೀತಿ (Delhi Excise policy) ಹಗರಣದಲ್ಲಿ ಅರೆಸ್ಟ್‌ ಆಗಿ, ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ (Aam Admi Party) ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme court) ತಿರಸ್ಕರಿಸಿದೆ. ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ಮಧ್ಯಂತರ ಜಾಮೀನು ಪಡೆಯವಲ್ಲಿ ಯಶಸ್ವಿಯಾಗಿದ್ದ ಕೇಜ್ರಿವಾಲ್‌ಗೆ ಇದೀಗ ಮತ್ತೊಂದು ಗೆಲುವು ಸಿಕ್ಕಂತಾಗಿದೆ.

ಕಾಂತ್‌ ಭಾಟಿ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಮತ್ತು ದೀಪಾಂಕರ್‌ ದತ್ತಾ ಇದ್ದ ನ್ಯಾಯಪೀಠ, ಸಿಎಂ ಸ್ಥಾನದಿಂದ ಕೇಜ್ರಿವಾಲ್‌ ವಜಾಗೊಳಿಸುವ ವಿಚಾರದಲ್ಲಿ ಕೋರ್ಟ್‌ ಹಸ್ತಕ್ಷೇಪ ಮಾಡುವುದಿಲ್ಲ. ಅದು ದಿಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ ಅವರಿಗೆ ಬಿಟ್ಟ ವಿಚಾರ ಎಂದು ಸ್ಪಷ್ಟವಾಗಿ ಹೇಳಿದೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ (ED) ಬಂಧಿಸಲ್ಪಟ್ಟ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ಏಳು ಹಂತದ ಲೋಕಸಭೆ ಚುನಾವಣೆಯ (Lok Sabha Election 2024) ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ರಿಲೀಫ್‌ ಸಿಕ್ಕಿದೆ. ಹೀಗಾಗಿ ಕೇಜ್ರಿವಾಲ್‌ ಅವರು ಜೈಲಿನಿಂದ ಹೊರಬರುತ್ತಲೇ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಜಾಮೀನು ನೀಡುವ ಮೊದಲು ನ್ಯಾಯಾಲಯ ಯಾವುದೇ ಕಡತಗಳಿಗೆ ಸಹಿ ಹಾಕಬಾರದು ಎಂಬುದು ಸೇರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಹಲವು ಷರತ್ತುಗಳನ್ನು ವಿಧಿಸಿದೆ.

ಅಬಕಾರಿ ನೀತಿ ಪ್ರಕರಣವೇನು?

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.

ಇದನ್ನೂ ಓದಿ:Viral Video: ಸಾಲಿನಲ್ಲಿ ಬನ್ನಿ ಅಂದಿದ್ದೇ ತಪ್ಪಾಯ್ತಾ? ಮತದಾರನಿಗೆ MLA ಕಪಾಳಮೋಕ್ಷ

ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ ₹ 100 ಕೋಟಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಆರೋಪಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು.

Exit mobile version