Asad Ahmed Killed: ಅಸಾದ್‌ ಅಹ್ಮದ್‌ ಎನ್‌ಕೌಂಟರ್‌ ಹಿಂದಿನ ಮಾಸ್ಟರ್‌ ಮೈಂಡ್‌ ಅಮಿತಾಭ್‌ ಯಶ್‌, ಅಷ್ಟಕ್ಕೂ ಯಾರಿವರು? - Vistara News

ದೇಶ

Asad Ahmed Killed: ಅಸಾದ್‌ ಅಹ್ಮದ್‌ ಎನ್‌ಕೌಂಟರ್‌ ಹಿಂದಿನ ಮಾಸ್ಟರ್‌ ಮೈಂಡ್‌ ಅಮಿತಾಭ್‌ ಯಶ್‌, ಅಷ್ಟಕ್ಕೂ ಯಾರಿವರು?

Asad Ahmed Killed: ಐಪಿಎಸ್‌ ಅಧಿಕಾರಿಯಾಗಿರುವ ಅಮಿತಾಭ್‌ ಯಶ್‌ ಅವರು ಉತ್ತರ ಪ್ರದೇಶ, ಮಧ್ಯಪ್ರದೇಶ ಸೇರಿ ಹಲವೆಡೆ ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ಎಂದೇ ಖ್ಯಾತಿಯಾಗಿದ್ದಾರೆ. ಸದ್ಯ ಇವರೀಗ ಉತ್ತರ ಪ್ರದೇಶ ಎಸ್‌ಟಿಎಫ್‌ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

VISTARANEWS.COM


on

Asad Ahmed Killed: Who Is UP STF Chief Amitabh Yash? IPS Officer Behind The Encounter
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಬಹುಜನ ಸಮಾಜ ಪಾರ್ಟಿ ಶಾಸಕ ರಾಜುಪಾಲ್ ಹತ್ಯೆ ಮತ್ತು ಆ ಕೊಲೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್​ ಪಾಲ್​ನನ್ನು 2006ರಲ್ಲಿ ಅಪಹರಣ ಮಾಡಿದ್ದ ಆರೋಪದಡಿ ಜೈಲುಪಾಲಾಗಿ, ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ರಾಜಕಾರಣಿ/ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್​ನ (Asad Ahmed Killed) ಪುತ್ರ ಅಸಾದ್​ ಅಹ್ಮದ್‌ನನ್ನು ಉತ್ತರ ಪ್ರದೇಶ ಪೊಲೀಸರು ಎನ್‌ಕೌಂಟರ್‌ ಮಾಡಿದ್ದಾರೆ. ಎನ್‌ಕೌಂಟರ್‌ ಹಿಂದೆ ಉತ್ತರ ಪ್ರದೇಶ ವಿಶೇಷ ಕಾರ್ಯ ಪಡೆ (STF) ಯೋಜನೆಯಿದ್ದು, ಇದಕ್ಕೆ ಐಪಿಎಸ್‌ ಅಧಿಕಾರಿ, ಎಸ್‌ಟಿಎಫ್‌ ಮುಖ್ಯಸ್ಥ ಅಮಿತಾಭ್‌ ಯಶ್‌ ಅವರು ಉಸ್ತುವಾರಿ ವಹಿಸಿಕೊಂಡಿದ್ದಾರೆ. ಎನ್‌ಕೌಂಟರ್‌ ಬಳಿಕ ಇವರ ಹೆಸರೇ ಸುದ್ದಿಯಾಗುತ್ತಿದ್ದು, ಯಾರಿವರು, ಇವರ ಹಿನ್ನೆಲೆ ಏನು ಎಂಬ ಕುತೂಹಲ ಮೂಡಿದೆ.

ಎಸ್‌ಟಿಎಫ್‌ ತಂಡದಲ್ಲಿ ಇದ್ದವರು ಯಾರು?

ಅಸಾದ್‌ ಅಹ್ಮದ್‌ಗಾಗಿ ಕಾರ್ಯಾಚರಣೆ ನಡೆಸಲು ಉತ್ತರ ಪ್ರದೇಶದ ಎಸ್‌ಟಿಎಫ್‌ ತಂಡದಲ್ಲಿ ದಕ್ಷ ಅಧಿಕಾರಿಗಳ ಪಡೆಯೇ ಇತ್ತು. ಡೆಪ್ಯೂಟಿ ಎಸ್‌ಪಿಗಳಾದ ನವೇಂದು ಕುಮಾರ್‌ ಹಾಗೂ ವಿಮಲ್‌ ಕುಮಾರ್‌ ಸಿಂಗ್‌ ಅವರು ಎಸ್‌ಟಿಎಫ್‌ ತಂಡವನ್ನು ಮುನ್ನಡೆಸಿದ್ದರು. ಇವರಿಗೆ ಎಸ್‌ಟಿಎಫ್‌ ಮುಖ್ಯಸ್ಥ ಅಮಿತಾಭ್‌ ಯಶ್‌ ಅವರೇ ಮಾರ್ಗದರ್ಶನ ನೀಡುತ್ತಿದ್ದರು. ಇವರೇ ಇಡೀ ಕಾರ್ಯಾಚರಣೆಯ ನೇತೃತ್ವ ವಹಿಸಿಕೊಂಡಿದ್ದರು.

ಯಾರಿದು ಅಮಿತಾಭ್‌ ಯಶ್?‌

ಬಿಹಾರದ ಭೋಜ್‌ಪುರ ಜಿಲ್ಲೆಯಲ್ಲಿ 1971ರ ಏಪ್ರಿಲ್‌ 11ರಂದು ಜನಿಸಿದ ಅಮಿತಾಭ್‌ ಯಶ್‌ ದಕ್ಷ ಅಧಿಕಾರಿ ಎನಿಸಿದ್ದಾರೆ. ಇವರು ಐಪಿಎಸ್‌ ಅಧಿಕಾರಿಯಾಗಿದ್ದು, ಎಡಿಜಿಯಾಗಿ 2021ರಲ್ಲಿ ಬಡ್ತಿ ಪಡೆದಿದ್ದಾರೆ. ಉತ್ತರ ಪ್ರದೇಶ, ಬಿಹಾರ ಹಾಗೂ ಮಧ್ಯಪ್ರದೇಶದಲ್ಲಿ ಇವರು ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ಎನಿಸಿದ್ದಾರೆ. ಮಾಯಾವತಿ ಅವರು ಮುಖ್ಯಮಂತ್ರಿಯಾಗಿದ್ದಾಗ ಎಸ್‌ಟಿಎಫ್‌ ಎಸ್‌ಎಸ್‌ಪಿ ಆಗಿದ್ದ ಅಮಿತಾಭ್‌ ಯಶ್‌, ಉತ್ತರ ಪ್ರದೇಶ ಹಾಗೂ ಮಧ್ಯಪ್ರದೇಶ ಗಡಿಯಲ್ಲಿ ಅಪರಾಧ ಕೃತ್ಯ ಎಸಗುತ್ತಿದ್ದ ಶಿವ ಕುಮಾರ್‌ ಪಟೇಲ್‌ನನ್ನು ಎನ್‌ಕೌಂಟರ್‌ ಮಾಡುವಲ್ಲಿ ಇವರು ನಿರ್ಣಾಯಕ ಪಾತ್ರ ನಿರ್ವಹಿಸಿದ್ದರು.

ಅಷ್ಟೇ ಏಕೆ, ಉಮೇಶ್‌ ಪಾಲ್‌ ಹತ್ಯೆಯಾದ ಬಳಿಕ ಅತೀಕ್‌ ಅವರ ಸಹೋದರಿಯು ಎಸ್‌ಟಿಎಫ್‌ ಚೀಫ್‌ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಅಮಿತಾಭ್‌ ಯಶ್‌ ಅವರು ನನ್ನ ಸಹೋದರರನ್ನು ಎನ್‌ಕೌಂಟರ್‌ ಮಾಡುತ್ತಾರೆ ಎಂದು ಅವರು ಹೇಳಿದ್ದರು. ಅದರಂತೆ ಈಗ ಅಸಾದ್‌ ಅಹ್ಮದ್‌ನನ್ನು ಎನ್‌ಕೌಂಟರ್‌ ಮಾಡಿಸುವಲ್ಲಿ ಅಮಿತಾಭ್‌ ಯಶಸ್ವಿಯಾಗಿದ್ದಾರೆ. ಅಮಿತಾಭ್‌ ಯಶ್‌ ಅವರಿಗೆ 2019ರಲ್ಲಿ ಕುಂಭ ಸೇವಾ ಮೆಡಲ್‌ ದೊರೆತಿದೆ. ಇವರ ಉತ್ಕೃಷ್ಟ ಸೇವೆ ಪರಿಗಣಿಸಿ 2023ರಲ್ಲಿ ಉತ್ಕೃಷ್ಟ ಸೇವಾ ಪದಕ ನೀಡಿ ಗೌರವಿಸಲಾಗಿದೆ. ಇದೇ ಕಾರಣಕ್ಕಾಗಿಯೇ ಎಸ್‌ಟಿಎಫ್‌ ಹಾಗೂ ಅಮಿತಾಭ್‌ ಯಶ್‌ ಅವರ ಬಗ್ಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: Atiq Ahmed: ಗ್ಯಾಂಗ್​ಸ್ಟರ್​ ಅತೀಕ್​ ಅಹ್ಮದ್​​ನ ಪುತ್ರನನ್ನು ಎನ್​ಕೌಂಟರ್​​​ನಲ್ಲಿ ಕೊಂದು ಹಾಕಿದ ಉತ್ತರ ಪ್ರದೇಶ ಪೊಲೀಸ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Physical Abuse : ತಪಾಸಣೆಗೆ ಬಂದ ರೋಗಿಗಳಿಬ್ಬರನ್ನು ಅತ್ಯಾಚಾರ ಮಾಡಿದ ಸರ್ಕಾರಿ ವೈದ್ಯ; ಜೂನಿಯರ್​ ವೈದ್ಯರ ಪೆಟ್ಟು ತಿಂದು ಐಸಿಯು ಸೇರಿದ ಆರೋಪಿ

Physical Abuse : ಮಂಗಳಬಾಗ್ ಪೊಲೀಸ್ ಠಾಣೆಗೆ ಸೋಮವಾರ ಇಬ್ಬರು ರೋಗಿಗಳಿಂದ ಲಿಖಿತ ದೂರು ನೀಡಿದ್ದರು. ಅದರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ” ಎಂದು ಕಟಕ್ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ಎಡಿಸಿಪಿ ಅನಿಲ್ ಮಿಶ್ರಾ) ತಿಳಿಸಿದ್ದಾರೆ. ನಿವಾಸಿ ವೈದ್ಯರ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೂವರು ಸದಸ್ಯರ ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ.

VISTARANEWS.COM


on

Physical Abuse
Koo

ಕಟಕ್: ಕೋಲ್ಕತಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಭದ್ರತಾ ಸಿಬ್ಬಂದಿಯೊಬ್ಬ ಮಹಿಳಾ ವೈದ್ಯೆಯನ್ನು ಭೀಕರವಾಗಿ ಅತ್ಯಾಚಾರ ಮತ್ತು ಕೊಲೆ ಮಾಡಿರುವ ಬಗ್ಗೆ ರಾಷ್ಟ್ರವ್ಯಾಪಿ ಆಕ್ರೋಶದ ವ್ಯಕ್ತಗೊಳ್ಳುತ್ತಿರುವ ನಡುವೆಯೇ ಒಡಿಶಾದ ಕಟಕ್​​ನ ಎಸ್ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ರೋಗಿಗಳಿಬ್ಬರಿಗೆ ಅಲ್ಲಿನ ವೈದ್ಯನೊಬ್ಬ ಲೈಂಗಿಕ ಕಿರುಕುಳ ನೀಡಿದ (Physical Abuse) ಪ್ರಕರಣ ನಡೆದಿದೆ. ಆದರೆ, ವಿಷಯ ತಿಳಿದ ತಕ್ಷಣವೇ ಜೂನಿಯರ್ ವೈದ್ಯರುಗಳು ಆತನಿಗೆ ಥಳಿಸಿದ್ದು, ಗಂಭೀರವಾಗಿ ಗಾಯಗೊಂಡ ಆತ ಐಸಿಯು ಸೇರಿದ್ದಾನೆ.

ವೈದ್ಯಕೀಯ ಕಾಲೇಜಿನ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯ ತಾಯಿ ಮತ್ತು ಚಿಕ್ಕಮ್ಮ ಶುಕ್ರವಾರ ತಪಾಸಣೆಗಾಗಿ ಹೃದ್ರೋಗ ವಿಭಾಗಕ್ಕೆ ಹೋಗಿದ್ದಾಗ ಆರೋಪಿ ವೈದ್ಯ ಕೃತ್ಯ ಎಸಗಿದ್ದಾನೆ. ಇಬ್ಬರು ಮಹಿಳೆಯರಿಗೆ ಎಕೋಕಾರ್ಡಿಯೋಗ್ರಾಮ್​ಗೆ ಸಲಹೆ ನೀಡಲಾಗಿತ್ತು ಕಾರ್ಡಿಯಾಲಜಿ ಎಂಡಿ ವಿದ್ಯಾರ್ಥಿಯಾಗಿರುವ ಪುರುಷ ವೈದ್ಯ ಇಸಿಜಿ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. .

ವಿಷಯ ತಿಳಿದ ಕಿರಿಯ ವೈದ್ಯರ ಸಂಘದ ಸದಸ್ಯರು ಆರೋಪಿ ವೈದ್ಯನಿಗೆ ಚೆನ್ನಾತಿ ಥಳಿಸಿದ್ದಾರೆ. ಅವರಿಗೆ ಗಂಭೀರ ಗಾಯಗಳಾಗಿದ್ದು, ಪ್ರಸ್ತುತ ಅದೇ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆಯರು ಆರಂಭದಲ್ಲಿ ಪ್ರಕರಣ ದಾಖಲಿಸಲು ಹಿಂಜರಿದಿದ್ದರು. ವೈದ್ಯಕೀಯ ಕಾಲೇಜಿನ ಹಿರಿಯ ವೈದ್ಯರು ಮಧ್ಯಪ್ರವೇಶಿಸಿ ಹಾಗೆ ಮಾಡಲು ಮನವೊಲಿಸಿದ ನಂತರ ಅವರು ಎಫ್ಐಆರ್ ದಾಖಲಿಸಿದ್ದಾರೆ.

ಮಂಗಳಬಾಗ್ ಪೊಲೀಸ್ ಠಾಣೆಗೆ ಸೋಮವಾರ ಇಬ್ಬರು ರೋಗಿಗಳಿಂದ ಲಿಖಿತ ದೂರು ನೀಡಿದ್ದರು. ಅದರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ” ಎಂದು ಕಟಕ್ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ಎಡಿಸಿಪಿ ಅನಿಲ್ ಮಿಶ್ರಾ) ತಿಳಿಸಿದ್ದಾರೆ. ನಿವಾಸಿ ವೈದ್ಯರ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೂವರು ಸದಸ್ಯರ ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ. ಆರೋಪಿಯನ್ನು ರೋಗಿಗಳ ಕೆಲವು ಸಂಬಂಧಿಕರು ಥಳಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಸಂಬಂಧ ಪೊಲೀಸರಿಗೆ ಯಾವುದೇ ದೂರು ಬಂದಿಲ್ಲ ಎಂದು ಮಿಶ್ರಾ ಹೇಳಿದರು.

ಸಿಆರ್ಪಿಸಿಯ ಸೆಕ್ಷನ್ 161 ಮತ್ತು 164 ರ ಅಡಿಯಲ್ಲಿ ಸಂತ್ರಸ್ತರ ಹೇಳಿಕೆಗಳನ್ನು ದಾಖಲಿಸಲಾಗಿದೆ. ಆಗಸ್ಟ್ 11ರಂದು ಈ ಘಟನೆ ನಡೆದಿದೆ. ಅತ್ಯಾಚಾರ ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ. ಪ್ರಕರಣವು ಸೂಕ್ಷ್ಮವಾಗಿರುವುದರಿಂದ, ನಾವು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಬಯಸುವುದಿಲ್ಲ ಹೆಚ್ಚುವರಿ ಡಿಸಿಪಿ ಅನಿಲ್ ಮಿಶ್ರಾ ಹೇಳಿದ್ದಾರೆ.

ಅಪ್ರಾಪ್ತೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೊ ಹರಿಬಿಟ್ಟ ಯುವಕ!

ಧಾರವಾಡ: ಅಪ್ರಾಪ್ತೆ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ (Physical abuse) ಎಸಗಿರುವ ಘಟನೆ ಧಾರವಾಡ ನಗರದಲ್ಲಿ ನಡೆದಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ಅದನ್ನು ವಿಡಿಯೊ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: Hindenburg Report : ಸೆಬಿ ಅಧ್ಯಕ್ಷರ ವಜಾಗೆ ಆಗ್ರಹಿಸಿದ ಕಾಂಗ್ರೆಸ್​ನಿಂದ ಆಗಸ್ಟ್​​ 22ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ

ಆಗಸ್ಟ್ 8 ರಂದು ಲಾಡ್ಜ್ ಒಂದಕ್ಕೆ ಕರೆದುಕೊಂಡು ಹೋಗಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಳಿಕ ಆ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಹಲವು ವಾಟ್ಸ್‌ಆ್ಯಪ್ ಗ್ರೂಪ್‌ಗೂ ಹಾಕಿದ್ದು, ಹಲವರು ಬೇರೆ ಗ್ರೂಪ್‌ಗೆ ಶೇರ್‌ ಮಾಡಿದ್ದಾರೆ.

ಸದ್ಯ ಯುವಕನನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜತೆಗೆ ಬೇರೆ ಬೇರೆ ಗ್ರೂಪ್‌ನಲ್ಲಿ ವಿಡಿಯೋ ಶೇರ್‌ ಮಾಡಿದ್ದ 9 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಸದ್ಯ ದೌರ್ಜನ್ಯ ಎಸಗಿದ ಆರೋಪಿ ಮೇಲೆ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

Continue Reading

ತಂತ್ರಜ್ಞಾನ

Independence Day 2024: ವಾಟ್ಸ್‌ಆಪ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಸ್ಟಿಕ್ಕರ್‌, ಮೆಸೆಜ್‌, ಇಮೇಜ್‌ ಪಡೆಯುವುದು ಹೇಗೆ?

ಈ ಬಾರಿ ಸ್ವಾತಂತ್ರ್ಯ ದಿನಾಚರಣೆಗೆ (Independence day 2024) ವಾಟ್ಸ್ ಆಪ್ ಮೂಲಕ ಸ್ನೇಹಿತರು, ಬಂಧುಗಳಿಗೆ ಶುಭ ಹಾರೈಸಿ. ಇದಕ್ಕಾಗಿ ಸ್ಟಿಕ್ಕರ್‌, ಸಂದೇಶ ಅಥವಾ ಚಿತ್ರಗಳನ್ನು ಎಲ್ಲಿಂದ, ಹೇಗೆ ಪಡೆಯಬಹುದು ಎನ್ನುವ ಕುರಿತ ಮಾಹಿತಿ ಇಲ್ಲಿದೆ. ಇದನ್ನು ಬಳಸಿಕೊಂಡು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಸ್ನೇಹಿತರು ಮತ್ತು ಬಂಧುಗಳೊಂದಿಗೆ ಹಂಚಿಕೊಳ್ಳಿ.

VISTARANEWS.COM


on

By

Independence day 2024
Koo

ಭಾರತದ 78ನೇ ಸ್ವಾತಂತ್ರ್ಯ ದಿನದ (Independence day 2024) ಸಂಭ್ರಮ ಈಗಾಗಲೇ ಎಲ್ಲೆಲ್ಲೂ ರಂಗು ತುಂಬಲಾರಂಭಿಸಿದೆ. ಆಗಸ್ಟ್ 15ರಂದು ಇದರ ಆಚರಣೆಗೆ ಸಜ್ಜಾಗುತ್ತಿರುವ ಅನೇಕರು ಈ ಮಹತ್ವದ ದಿನದ ಸಂತೋಷವನ್ನು (joy of this significant day) ಸ್ನೇಹಿತರು ಮತ್ತು ಕುಟುಂಬದೊಂದಿಗೆ ಹಂಚಿಕೊಳ್ಳಲು ವಿವಿಧ ದಾರಿಗಳನ್ನು ಹುಡುಕುತ್ತಿರುತ್ತಾರೆ. ಈ ಬಾರಿ ವಿಶೇಷವಾಗಿ ವಾಟ್ಸ್ ಆಪ್ (whatsapp) ಸ್ಟಿಕ್ಕರ್‌ಗಳು, ಶುಭಾಶಯ ಸಂದೇಶಗಳ ಮೂಲಕ ಸ್ವಾತಂತ್ರ್ಯ ದಿನಕ್ಕೆ ಶುಭಾಶಯಗಳನ್ನು ಕೋರಬಹುದು. ವಾಟ್ಸ್ ಆಪ್ ಸ್ಟಿಕ್ಕರ್‌ , ಮೆಸೆಜ್‌ ಮತ್ತು ಚಿತ್ರಗಳ ಬಳಕೆ ಸೇರಿದಂತೆ ಡಿಜಿಟಲ್ ವಿಧಾನಗಳ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಹೇಗೆ ಹೆಚ್ಚಿಸಬಹುದು ಎನ್ನುವ ಮಾಹಿತಿ ಇಲ್ಲಿದೆ.

ವಾಟ್ಸ್‌ಆಪ್ ಸ್ಟಿಕ್ಕರ್‌ಗಳು

ಶುಭಾಶಯಗಳನ್ನು ಹಂಚಿಕೊಳ್ಳಲು ಆಧುನಿಕ ಮಾರ್ಗವಾಗಿರುವ ವಾಟ್ಸ್ ಆಪ್ ಸ್ಟಿಕ್ಕರ್‌ಗಳು ಶೀಘ್ರವಾಗಿ ಶುಭಾಶಯಗಳನ್ನು ಕಳುಹಿಸಲು ಅನುಕೂಲಕರವಾದ ಮಾರ್ಗವಾಗಿದೆ. ವಾಟ್ಸ್ ಆಪ್‌ನಲ್ಲಿ ಸ್ವಾತಂತ್ರ್ಯ ದಿನದ ಸ್ಟಿಕ್ಕರ್‌ಗಳನ್ನು ಹೇಗೆ ಡೌನ್‌ಲೋಡ್ ಮಾಡಬಹುದು ಎನ್ನುವ ಮಾಹಿತಿ ಇಲ್ಲಿದೆ.

Google Play Store ಅಥವಾ Apple ಆಪ್ ಸ್ಟೋರ್‌ನಲ್ಲಿ “Sticker.ly” ಅಥವಾ “ಭಾರತೀಯ ಸ್ವಾತಂತ್ರ್ಯ ದಿನದ ಸ್ಟಿಕ್ಕರ್‌ಗಳು” (indian independence day stickers)ನಂತಹ ಅಪ್ಲಿಕೇಶನ್‌ ಅನ್ನು ಹುಡುಕಿ. ಈ ಅಪ್ಲಿಕೇಶನ್‌ಗಳು ವಿವಿಧ ಸ್ವಾತಂತ್ರ್ಯ ದಿನದ ವಿಷಯದ ಸ್ಟಿಕ್ಕರ್ ಪ್ಯಾಕ್‌ಗಳನ್ನು ನೀಡುತ್ತವೆ.

ಅಪ್ಲಿಕೇಶನ್ ಅನ್ನು ಡೌನ್ ಲೋಡ್ ಮಾಡಿ ತೆರೆಯಿರಿ. ಬಳಿಕ ಅದರಲ್ಲಿ ನೀವು ಇಷ್ಟಪಡುವ ಸ್ಟಿಕ್ಕರ್ ಅನ್ನು ಆಯ್ಕೆ ಮಾಡಿ ಮತ್ತು ವಾಟ್ಸ್ ಆಪ್‌ಗೆ ಸೇರಿಸಲು ಟ್ಯಾಪ್ ಮಾಡಿ. ಇದು ವಾಟ್ಸ್ ಆಪ್ ಖಾತೆಗೆ ಸ್ಟಿಕ್ಕರ್‌ಗಳನ್ನು ಸಂಯೋಜಿಸುತ್ತದೆ. ಬಳಿಕ ವಾಟ್ಸ್ ಆಪ್‌ನಲ್ಲಿ ಯಾವುದೇ ಚಾಟ್ ತೆರೆಯಿರಿ. ಎಮೋಜಿ ಐಕಾನ್ ಮೇಲೆ ಟ್ಯಾಪ್ ಮಾಡಿ ಸ್ಟಿಕ್ಕರ್ ಟ್ಯಾಬ್ ಆಯ್ಕೆ ಮಾಡಿ. ಇಲ್ಲಿ ಹೊಸದಾಗಿ ಸೇರಿಸಲಾದ ಸ್ವಾತಂತ್ರ್ಯ ದಿನದ ಸ್ಟಿಕ್ಕರ್‌ಗಳನ್ನು ಕಾಣಬಹುದು ಮತ್ತು ಅದನ್ನು ಹಂಚಿಕೊಳ್ಳಬಹುದು.


ಶುಭಾಶಯ ಸಂದೇಶ

ಸ್ಟಿಕ್ಕರ್‌ಗಳ ಹೊರತಾಗಿ ಪ್ರೀತಿಪಾತ್ರರಿಗೆ ಸ್ವಾತಂತ್ರ್ಯ ದಿನದ ಶುಭಾಶಯ ಅಥವಾ ಸಂದೇಶಗಳನ್ನೂ ಕಳುಹಿಸಬಹುದು. ಪಠ್ಯ, ಚಿತ್ರ ಮತ್ತು ಜಿಫ್‌ಗಳೊಂದಿಗೆ ಸಂದೇಶಗಳನ್ನು ಕಳುಹಿಸಲು ವಾಟ್ಸ್ ಆಪ್ ಅನುಮತಿ ನೀಡುತ್ತದೆ.

ಜಿಫ್ ಹುಡುಕಲು ವಾಟ್ಸ್ ಆಪ್ ತೆರೆಯಿರಿ. ಯಾವುದೇ ಸಂಪರ್ಕದೊಂದಿಗೆ ಚಾಟ್ ಪ್ರಾರಂಭಿಸಿ. ಎಮೋಜಿ ವಿಭಾಗದ ಪರದೆಯ ಕೆಳಗಿನ ಎಡಭಾಗದಲ್ಲಿರುವ ಎಮೋಜಿ ಐಕಾನ್ ಅನ್ನು ಟ್ಯಾಪ್ ಮಾಡಿ ಜಿಫ್ ಅನ್ನು ಆಯ್ಕೆ ಮಾಡಿ. ಜಿಫ್ ವಿಭಾಗದಲ್ಲಿ “ಸ್ವಾತಂತ್ರ್ಯ ದಿನ” ಜಿಫ್‌ಗಳನ್ನು ಹುಡುಕಲು ಹುಡುಕಾಟ ಪಟ್ಟಿಯನ್ನು ಬಳಸಿ. ನಿಮಗೆ ಇಷ್ಟವಾಗುವ ಜಿಫ್ ಅನ್ನು ಆಯ್ಕೆ ಮಾಡಿ ಮತ್ತು ಅದನ್ನು ಒಂದೇ ಟ್ಯಾಪ್‌ನಲ್ಲಿ ಕಳುಹಿಸಿ.

Independence day 2024
Independence day 2024


ಚಿತ್ರಗಳು

ಚಿತ್ರ ಅಥವಾ ವೆಕ್ಟರ್ ಕಲೆಯನ್ನು ಹಂಚಿಕೊಳ್ಳಲು ಆದ್ಯತೆ ನೀಡುವವರಿಗೆ ಹಲವಾರು ಆಯ್ಕೆಗಳು ಲಭ್ಯವಿದೆ. ಆನ್‌ಲೈನ್‌ನಲ್ಲಿ ತ್ವರಿತ ಹುಡುಕಾಟ ನಡೆಸುವ ಮೂಲಕ ಉತ್ತಮ ಗುಣಮಟ್ಟದ ಸ್ವಾತಂತ್ರ್ಯ ದಿನಾಚರಣೆಯ ಚಿತ್ರಗಳನ್ನು ಪಡೆಯಬಹುದು.

ಇದನ್ನೂ ಓದಿ: Independence day 2024: ಕೆಂಪು ಕೋಟೆ ಮೇಲೆ ಭಾಷಣ; ನೆಹರೂ, ಇಂದಿರಾ ಬಳಿಕ ಮೋದಿ ಹೊಸ ದಾಖಲೆ!

ಅನೇಕ ವೆಬ್‌ಸೈಟ್‌ಗಳು ದೇಶಭಕ್ತಿಯ ಚಿತ್ರಗಳ ಉಚಿತ ಡೌನ್‌ಲೋಡ್‌ಗಳಿಗೆ ಅನುಮತಿ ನೀಡುತ್ತವೆ. ಅಲ್ಲದೇ ‘Canva’ ಮತ್ತು ‘Pixabay’ ನಂತಹ ಅಪ್ಲಿಕೇಶನ್‌ಗಳು ವಾಟ್ಸಾಪ್ ಅಥವಾ ಇತರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಮೂಲಕ ನೇರವಾಗಿ ಹಂಚಿಕೊಳ್ಳಬಹುದಾದ ಸ್ವಾತಂತ್ರ್ಯ ದಿನದ ಚಿತ್ರಗಳು ಮತ್ತು ವೆಕ್ಟರ್ ಕಲೆಯನ್ನು ಒದಗಿಸುತ್ತವೆ.

Continue Reading

ದೇಶ

Independence day 2024: ಆಗಸ್ಟ್ 15ರಂದು ಪ್ರಧಾನಿ ಮೋದಿ ಭಾಷಣವನ್ನು ಎಷ್ಟು ಹೊತ್ತಿಗೆ, ಎಲ್ಲಿ ವೀಕ್ಷಿಸಬಹುದು?

ದೇಶಾದ್ಯಂತ ಈಗ 78ನೇ ಸ್ವಾತಂತ್ರ್ಯ ದಿನಾಚರಣೆಯ (Independence day 2024) ಸಂಭ್ರಮ ಎದ್ದು ಕಾಣುತ್ತಿದೆ. ಎಲ್ಲೆಲ್ಲೂ ರಾಷ್ಟ್ರ ಭಕ್ತಿ ಗೀತೆಗಳ ಗಾಯನ ಮೊಳಗುತ್ತಿದೆ. ಆಗಸ್ಟ್ 15ರಂದು (Independence day 2024) ನಡೆಯುವ ಕಾರ್ಯಕ್ರಮಕ್ಕೆ ಎಲ್ಲರೂ ಕಾತರರಾಗಿದ್ದಾರೆ. ಈ ದಿನ ಎಲ್ಲರ ಚಿತ್ತ ಕೆಂಪುಕೋಟೆಯ ಮೇಲಿರಲಿದೆ. ಯಾಕೆಂದರೆ ಇಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನಡೆಸಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಯಾವಾಗ, ಎಲ್ಲಿ ಪ್ರಸಾರವಾಗಲಿದೆ ಎನ್ನುವ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Independence day 2024
Koo

ಭಾರತದಾದ್ಯಂತ ಈ ಬಾರಿ 78ನೇ ಸ್ವಾತಂತ್ರ್ಯ ದಿನವನ್ನು (Independence day 2024) ಆಚರಿಸಲು ಸಿದ್ಧತೆಗಳು ಜೋರಾಗಿವೆ. ಈ ದಿನ ಎಲ್ಲರ ಚಿತ್ತ ಕೆಂಪುಕೋಟೆಯ (delhi Red Fort) ಮೇಲಿರುತ್ತದೆ. ಯಾಕೆಂದರೆ ಇಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಧ್ವಜಾರೋಹಣ ನಡೆಸಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ಆಗಸ್ಟ್‌ 15ರಂದು ಬೆಳಗ್ಗೆ 7.30ಕ್ಕೆ ರಾಷ್ಟ್ರಧ್ವಜವನ್ನು ಹಾರಿಸಿ, ಆ ಬಳಿಕ ದೇಶವನ್ನು ಉದ್ದೇಶಿಸಿ ಸತತ 11ನೇ ಸ್ವಾತಂತ್ರ್ಯ ದಿನದ ಭಾಷಣ ಮಾಡಲಿದ್ದಾರೆ.


ಸ್ವಾತಂತ್ರ್ಯ ದಿನದ ನೇರ ಪ್ರಸಾರ ಎಲ್ಲಿ?

ಕೆಂಪು ಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ನೇರ ಪ್ರಸಾರ ಕಾರ್ಯಕ್ರಮವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಲಾಗುತ್ತದೆ. ವಿಸ್ತಾರ ನ್ಯೂಸ್‌ ಟಿವಿ ಮತ್ತು ವಿಸ್ತಾರ ನ್ಯೂಸ್‌ ಯುಟ್ಯೂಬ್‌ ಚಾನೆಲ್‌ ಮೂಲಕವೂ ಮೋದಿಯವರ ಭಾಷಣ ನೇರ ಪ್ರಸಾರ ನೋಡಬಹುದು.

ಅಲ್ಲದೇ ಕಾರ್ಯಕ್ರಮವನ್ನು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (PIB) ಯೂಟ್ಯೂಬ್ ಚಾನೆಲ್‌ ಜೊತೆಗೆ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಾದ ಎಕ್ಸ್‌ನಲ್ಲಿ @PIB_India ಮತ್ತು PMO ಟ್ವಿಟರ್ ಹ್ಯಾಂಡಲ್ ಮೂಲಕವೂ ಪ್ರಸಾರ ಮಾಡಲಾಗುತ್ತದೆ.


ಈ ಬಾರಿಯ ಥೀಮ್ ಏನು?

ಈ ಬಾರಿ ಸ್ವಾತಂತ್ರ್ಯ ದಿನದ ಥೀಮ್ “ವಿಕಸಿತ ಭಾರತ”. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತಿಸುವ ಸರ್ಕಾರದ ದೃಷ್ಟಿಕೋನವನ್ನು ಇದು ಸಾರುತ್ತದೆ. ಈ ವಿಷಯವು ಶಿಕ್ಷಣ, ಆರೋಗ್ಯ ರಕ್ಷಣೆ, ಮೂಲಸೌಕರ್ಯ ಮತ್ತು ತಂತ್ರಜ್ಞಾನದಲ್ಲಿ ಸಮಗ್ರ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುತ್ತದೆ. ಆರ್ಥಿಕ ಬೆಳವಣಿಗೆ, ಸಾಮಾಜಿಕ ಪ್ರಗತಿ ಮತ್ತು ಸುಸ್ಥಿರ ಅಭಿವೃದ್ಧಿಯ ಮೂಲಕ ಭಾರತದ ಜಾಗತಿಕ ಸ್ಥಾನಮಾನವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.


ಆಗಸ್ಟ್ 15ರಂದು ಪ್ರಧಾನಿಯವರು ರಾಷ್ಟ್ರವನ್ನು ಉದ್ದೇಶಿಸಿ ಹಿಂದಿನ ಸಾಧನೆಗಳ ಕುರಿತು ವಿವರಿಸಿ, ಭವಿಷ್ಯದ ಗುರಿ ಮತ್ತು ನೀತಿಗಳನ್ನು ವಿವರಿಸುತ್ತಾರೆ. ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸುತ್ತಾರೆ. ಪ್ರಧಾನಿ ಭಾಷಣದ ಅನಂತರ ಭಾರತದ ಮಿಲಿಟರಿ ಸಾಮರ್ಥ್ಯ, ಸಾಂಸ್ಕೃತಿಕ ವೈವಿಧ್ಯತೆ ಮತ್ತು ತಾಂತ್ರಿಕ ಪ್ರಗತಿಯನ್ನು ಪ್ರದರ್ಶಿಸುವ ಭವ್ಯ ಮೆರವಣಿಗೆ ನಡೆಯಲಿದೆ. ಸಂಜೆ ವೇಳೆ ಪ್ರಮುಖ ಕಟ್ಟಡಗಳು, ಸ್ಮಾರಕಗಳಿಗೆ ದೀಪಾಲಂಕಾರ ಮಾಡಲಾಗಿದ್ದು, ಹಬ್ಬದ ವಾತಾವರಣವನ್ನು ಹೆಚ್ಚಿಸಲಿದೆ.


ʼಹರ್ ಘರ್ ತಿರಂಗʼ ಅಭಿಯಾನ

‘ಹರ್ ಘರ್ ತಿರಂಗ’ ಅಭಿಯಾನಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಆಗಸ್ಟ್ 9ರಿಂದ 15ರವರೆಗೆ ಈ ಕಾರ್ಯಕ್ರಮ ನಡೆಯಲಿದೆ. ಈ ಉಪಕ್ರಮವು ಪ್ರತಿಯೊಬ್ಬ ಭಾರತೀಯನನ್ನು ರಾಷ್ಟ್ರಧ್ವಜವನ್ನು ಹಾರಿಸಲು ಪ್ರೋತ್ಸಾಹಿಸುವ ಮೂಲಕ ದೇಶಭಕ್ತಿ ಮತ್ತು ರಾಷ್ಟ್ರೀಯ ಹೆಮ್ಮೆಯನ್ನು ಬೆಳೆಸುವ ಗುರಿಯನ್ನು ಹೊಂದಿದೆ. ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಅಭಿಯಾನದ ಮಹತ್ವವನ್ನು ತಿಳಿಸಿದ್ದು, ಪ್ರತಿಯೊಬ್ಬ ಭಾರತೀಯನೂ ರಾಷ್ಟ್ರಧ್ವಜವನ್ನು ಹಾರಿಸಲು ಪ್ರೋತ್ಸಾಹಿಸುವ ಮೂಲಕ ನಾಗರಿಕರಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯ ಹೆಮ್ಮೆಯ ಮನೋಭಾವವನ್ನು ಹುಟ್ಟುಹಾಕುವ ಉದ್ದೇಶವನ್ನು ಈ ಉಪಕ್ರಮವು ಹೊಂದಿದೆ ಎಂದು ಹೇಳಿದ್ದಾರೆ.

Independence day 2024
Independence day 2024


“ಏಕ್ ಪೇಡ್ ಮಾ ಕೆ ನಾಮ್” ಅಭಿಯಾನ

ಸ್ವಾತಂತ್ರ್ಯ ದಿನಾಚರಣೆಯ ಜೊತೆಗೆ, ರಕ್ಷಣಾ ಸಚಿವಾಲಯವು ‘ಏಕ್ ಪೇಡ್ ಮಾ ಕೆ ನಾಮ್’ ತಾಯಿಯ ಹೆಸರಲ್ಲಿ ಒಂದು ಮರ ಅಭಿಯಾನದ ಅಡಿಯಲ್ಲಿ ರಾಷ್ಟ್ರವ್ಯಾಪಿ ಮರ ನೆಡುವ ಅಭಿಯಾನವನ್ನು ಪ್ರಾರಂಭಿಸಿದೆ.

ಇದನ್ನೂ ಓದಿ: Independence Day 2024: ಸ್ವಾತಂತ್ರ್ಯ ದಿನಾಚರಣೆಗೆ ಮಾಣಿಕ್‌ ಷಾ ಮೈದಾನ ಸಿದ್ಧ; ಪಾರ್ಕಿಂಗ್‌ ಮತ್ತಿತರ ವಿವರ ಇಲ್ಲಿದೆ

ಜೂನ್ 5ರಂದು ವಿಶ್ವ ಪರಿಸರ ದಿನದಂದು ಪ್ರಧಾನಿ ಮೋದಿ ಅವರು ಪ್ರಾರಂಭಿಸಿರುವ ಈ ಅಭಿಯಾನವು ಭಾರತದಾದ್ಯಂತ 1.5 ಕೋಟಿ ಮರಗಳನ್ನು ನೆಡುವ ಗುರಿಯನ್ನು ಹೊಂದಿದೆ. ಈ ಪ್ರಯತ್ನವು ಮೂರು ಸಶಸ್ತ್ರ ಸೇವೆಗಳು ಮತ್ತು ಡಿಆರ್‌ಡಿಒ, ರಕ್ಷಣಾ ಪಿಎಸ್‌ಯುಗಳು, ಸಿಜಿಡಿಎ, ಎನ್‌ಸಿಸಿ, ಸೈನಿಕ ಶಾಲೆಗಳು ಮತ್ತು ಆರ್ಡನೆನ್ಸ್ ಫ್ಯಾಕ್ಟರಿಗಳು ಸೇರಿದಂತೆ ವಿವಿಧ ಸಂಬಂಧಿತ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಯುತ್ತಿದೆ.

Continue Reading

ಆಟೋಮೊಬೈಲ್

Tata Nexon EV: ಕೇವಲ 200 ರೂ. ಖರ್ಚಿನಲ್ಲಿ ಈ ಕಾರು 323 ಕಿ.ಮೀ ದೂರ ಸಾಗುತ್ತದೆ!

ದೆಹಲಿಯಿಂದ ನೈನಿತಾಲ್‌ಗೆ ಸರಿಸುಮಾರು 323 ಕಿಲೋ ಮೀಟರ್ ದೂರವಿದೆ. ಅಂತಹ ಪರಿಸ್ಥಿತಿಯಲ್ಲಿ ಈ ಕಾರು ಒಮ್ಮೆ ಚಾರ್ಜ್ ಮಾಡಿದ ಅನಂತರ ದೆಹಲಿಯಿಂದ ನೈನಿತಾಲ್‌ಗೆ ಸರಿಸುಮಾರು 200 ರೂ. ವೆಚ್ಚದಲ್ಲಿ ನಿಮ್ಮನ್ನು ಸುಲಭವಾಗಿ ಕರೆದೊಯ್ಯಬಹುದು. ಇದು ಸಾಮಾನ್ಯ ಕಾರು ಅಲ್ಲ. ದೇಶದ ಸುಪ್ರಸಿದ್ದ ಕಂಪನಿ ಟಾಟಾದ ನೆಕ್ಸಾನ್ ಇವಿ (Tata Nexon EV). ಕೈಗೆಟುಕುವ ಬೆಲೆ ಮತ್ತು ಟಾಟಾದ ವಿಶ್ವಾಸಾರ್ಹತೆಯಿಂದಾಗಿ ಈ ಕಾರು ಈಗಾಗಲೇ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ.

VISTARANEWS.COM


on

By

Tata Nexon EV
Koo

ಕೇವಲ 200 ರೂಪಾಯಿಯಲ್ಲಿ ದೆಹಲಿಯಿಂದ 323 ಕಿಲೋ ಮೀಟರ್ ದೂರದ ನೈನಿತಾಲ್‌ಗೆ (Delhi to Nainital) ಹೋಗಬಹುದು! ಅದು ಹೇಗೆ ಅಂತೀರಾ? ಟಾಟಾ ನೆಕ್ಸಾನ್ ಇವಿ (Tata Nexon EV) ಕಾರಿನಲ್ಲಿ! ಹೌದು, ಅತ್ಯಂತ ಕಡಿಮೆ ಬೆಲೆಯಲ್ಲಿ 323 ಕಿಲೋ ಮೀಟರ್ ದೂರದವರೆಗೆ ಪ್ರಯಾಣ ನಡೆಸಲು ಸಾಧ್ಯ ಎನ್ನುವ ಭರವಸೆಯನ್ನು ನೀಡುತ್ತಿದೆ ಈ ಕಾರು.

ಭಾರತದ ಸುಪ್ರಸಿದ್ಧ ಆಟೋಮೊಬೈಲ್ ತಯಾರಕ ಕಂಪನಿಯಾಗಿರುವ ಟಾಟಾ ಮೋಟಾರ್ಸ್ (Tata Motors) ತಯಾರಿಸಿದ ಎಲೆಕ್ಟ್ರಿಕ್ ಎಸ್‌ಯುವಿ (EV SUV) ಭಾರತದಲ್ಲಿ ಹೆಚ್ಚುತ್ತಿರುವ ಎಲೆಕ್ಟ್ರಿಕ್ ವಾಹನಗಳ ಬೇಡಿಕೆಯನ್ನು ಪೂರೈಸಲು ಈ ಕಾರನ್ನು ಬಿಡುಗಡೆ ಮಾಡಲಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಕೈಗೆಟುಕುವ ಮತ್ತು ವಿಶ್ವಾಸಾರ್ಹ ಎಲೆಕ್ಟ್ರಿಕ್ ಎಸ್‌ಯುವಿ ಎಂದೇ ಪರಿಗಣಿಸ6ಲಾಗಿದೆ. ಟಾಟಾ ನೆಕ್ಸಾನ್ ಇವಿಯು ಹಲವಾರು ವೈಶಿಷ್ಟ್ಯವನ್ನು ಹೊಂದಿದ್ದು, ಇದರ ಸಂಪೂರ್ಣ ವಿವರ ಇಲ್ಲಿದೆ.


ವಿನ್ಯಾಸ ಹೇಗಿದೆ?

ಹೊರಾಂಗಣದ ಟಾಟಾ ನೆಕ್ಸಾನ್ ಇವಿ ವಿನ್ಯಾಸವು ಅತ್ಯಂತ ಆಕರ್ಷಕ ಮತ್ತು ಆಧುನಿಕವಾಗಿದೆ. ಈ ಎಸ್‌ಯುವಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು ಮತ್ತು ಮುಂಭಾಗದಲ್ಲಿ ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ಸ್ಪೋರ್ಟಿ ಹಾಗೂ ಸ್ಟ್ರಾಂಗ್ ಲುಕ್‌ನೊಂದಿಗೆ ಬರಲಿದೆ. ಇದಲ್ಲದೆ, ಕಾರು ಬ್ಲ್ಯಾಕ್‌-ಔಟ್ ರೂಫ್ ಮತ್ತು ಸ್ಪೋರ್ಟಿ ವೀಲ್ಸ್‌ಗಳನ್ನು ಹೊಂದಿರುತ್ತದೆ.

ಒಳಾಂಗಣವು ಪ್ರೀಮಿಯಂ ಫಿನಿಶಿಂಗ್‌ನೊಂದಿಗೆ ಡ್ಯುಯಲ್-ಟೋನ್ ಬಣ್ಣದ ಥೀಮ್ ಹೊಂದಿದೆ. ಇದು 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸ್ಟೀರಿಂಗ್- ಮೌಂಟೆಡ್ ಕಂಟ್ರೋಲ್‌ಗಳು ಮತ್ತು ಪುಶ್-ಬಟನ್ ಸ್ಟಾರ್ಟ್‌ನಂತಹ ಆಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.


ಬ್ಯಾಟರಿ ಪವರ್‌

ಟಾಟಾ ನೆಕ್ಸಾನ್ ಇವಿ 30.2 ಕೆಡಬ್ಲ್ಯೂ ಎಚ್ ಲಿಥಿಯಂ- ಐಯಾನ್ ಬ್ಯಾಟರಿಯನ್ನು ಹೊಂದಿದೆ. ಒಂದು ಸಂಪೂರ್ಣ ಚಾರ್ಜ್‌ನಲ್ಲಿ ಸುಮಾರು 325-400 ಕಿ.ಮೀ ವ್ಯಾಪ್ತಿಯನ್ನು ನೀಡುತ್ತದೆ. ಆದರೆ ನೈಜ ಕ್ಷಮತೆ ಚಾಲನಾ ಪರಿಸ್ಥಿತಿಗಳನ್ನು ಅವಲಂಬಿಸಿರುತ್ತದೆ. ದೂರದಲ್ಲಿ ಸ್ವಲ್ಪ ಹೆಚ್ಚು ಕಡಿಮೆ ಆಗಬಹುದು.

ವೇಗದ ಚಾರ್ಜರ್ ಅನ್ನು ಬಳಸಿದರೆ ನೆಕ್ಸಾನ್ ಇವಿ ಅನ್ನು ಶೇ. 0-80ರಷ್ಟು ಚಾರ್ಜ್ ಮಾಡಲು ಸುಮಾರು 60 ನಿಮಿಷಗಳು ಬೇಕಾಗುತ್ತದೆ. ಹೋಮ್ ಚಾರ್ಜರ್‌ನೊಂದಿಗೆ ಸಂಪೂರ್ಣವಾಗಿ ಚಾರ್ಜ್ ಮಾಡಲು ಇದು ಸುಮಾರು 8- 9 ಗಂಟೆಗಳನ್ನು ತೆಗೆದುಕೊಳ್ಳುತ್ತದೆ.


ಕಾರ್ಯಕ್ಷಮತೆ ಹೇಗಿದೆ?

ನೆಕ್ಸಾನ್ ಇವಿ 129 ಪಿಎಸ್ ಪವರ್ ಮತ್ತು 245 ಎನ್ ಎಂ ಟಾರ್ಕ್ ಅನ್ನು ಉತ್ಪಾದಿಸುವ ಪರ್ಮನೆಂಟ್‌ ಮ್ಯಾಗ್ನೆಟ್ ಸಿಂಕ್ರೊನಸ್ ಮೋಟರ್ ಅನ್ನು ಹೊಂದಿದೆ. ಈ ಎಸ್‌ಯುವಿ ಸುಮಾರು 9.9 ಸೆಕೆಂಡುಗಳಲ್ಲಿ 0-100 MPHನಿಂದ ವೇಗವನ್ನು ಹೆಚ್ಚಿಸಬಹುದು. ಇದು ಅದರ ವರ್ಗದಲ್ಲಿ ತ್ವರಿತ ಎಸ್‌ಯುವಿ ಆಗಿರುತ್ತದೆ.


ವೈಶಿಷ್ಟ್ಯಗಳು ಏನೇನು?

ಇದು ಡ್ಯುಯಲ್ ಏರ್‌ಬ್ಯಾಗ್‌ಗಳು, ಇಬಿಡಿ ಜೊತೆಗೆ ಎಬಿಎಸ್ , ಕಾರ್ನರ್ ಸ್ಟೆಬಿಲಿಟಿ ಕಂಟ್ರೋಲ್ ಮತ್ತು ಐಸೊಫಿಕ್ಸ್ ಮೌಂಟ್‌ಗಳಂತಹ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಜಿಯೋ ಫೆನ್ಸಿಂಗ್, ಸ್ಥಳ ಟ್ರ್ಯಾಕಿಂಗ್, ರಿಮೋಟ್ ಡಯಾಗ್ನೋಸ್ಟಿಕ್ಸ್ ಇತ್ಯಾದಿಗಳನ್ನು ಒಳಗೊಂಡಂತೆ ಝಡ್ ಕನೆಕ್ಷನ್ ಅಪ್ಲಿಕೇಶನ್ ಮೂಲಕ 35ಕ್ಕೂ ಹೆಚ್ಚು ಸಂಪರ್ಕಿತ ವೈಶಿಷ್ಟ್ಯಗಳು ಲಭ್ಯವಿದೆ. 7 ಇಂಚಿನ ಟಚ್‌ ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಯನ್ನು ಇದು ಬೆಂಬಲಿಸುತ್ತದೆ.

ಬೆಲೆ ಎಷ್ಟು?

ಟಾಟಾ ನೆಕ್ಸಾನ್ ಇವಿ ಬೆಲೆಗಳು ವಿವಿಧ ಮಾಡೆಲ್‌ಗಳನ್ನು ಅವಲಂಬಿಸಿ ಬದಲಾಗುತ್ತವೆ. ಆದರೆ ಸಾಮಾನ್ಯವಾಗಿ ಈ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಸುಮಾರು 14 ಲಕ್ಷ ರೂ. ನಿಂದ 17 ಲಕ್ಷ ರೂ.ವರೆಗೆ ಲಭ್ಯವಿದೆ. ಭಾರತದಲ್ಲಿ ಲಭ್ಯವಿರುವ ಎಂಜಿ ಝಡ್ ಎಸ್‌ಇವಿ ಮತ್ತು ಹುಂಡೈ ಕೋನಾ ಎಲೆಕ್ಟ್ರಿಕ್‌ನಂತಹ ಇತರ ಎಲೆಕ್ಟ್ರಿಕ್ ಎಸ್‌ಯುವಿಗಳಿಗೆ ಟಾಟಾ ನೆಕ್ಸಾನ್ ಇವಿ ಸ್ಪರ್ಧೆ ನೀಡುವಂತಿದೆ.

ಇದನ್ನೂ ಓದಿ: Best Selling Cars: ಜುಲೈನಲ್ಲಿ ಅತೀ ಹೆಚ್ಚು ಮಾರಾಟವಾದ ಕಾರುಗಳು ಯಾವವು?

ಟಾಟಾ ನೆಕ್ಸಾನ್ ಇವಿ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಎಲೆಕ್ಟ್ರಿಕ್ ವಾಹನಗಳಲ್ಲಿ ಒಂದಾಗಿದೆ. ಕೈಗೆಟುಕುವ ಬೆಲೆ, ದೀರ್ಘ-ಶ್ರೇಣಿಯ ಮತ್ತು ಟಾಟಾದ ವಿಶ್ವಾಸಾರ್ಹತೆಯಿಂದಾಗಿ ಈ ಕಾರು ಗ್ರಾಹಕರಲ್ಲಿ ಬಹಳ ಜನಪ್ರಿಯವಾಗಿದೆ. ಪರಿಸರ ಪ್ರಜ್ಞೆಯುಳ್ಳವರಿಗೆ ಮತ್ತು ಎಲೆಕ್ಟ್ರಿಕ್ ವಾಹನವನ್ನು ಖರೀದಿಸುವ ಆಲೋಚನೆಯಲ್ಲಿರುವವರಿಗೆ ಈ ಕಾರು ಉತ್ತಮ ಆಯ್ಕೆಯಾಗಿದೆ ಎನ್ನುತ್ತಾರೆ ವಾಹನ ಪರಿಣತರು.

Continue Reading
Advertisement
Natasa Stankovic
ಕ್ರಿಕೆಟ್21 mins ago

Natasa Stankovic : ‘ಹೊಸ ಹೆಸರನ್ನು ಪಡೆಯುತ್ತಿದ್ದೇನೆ’; ಕುತೂಹಲ ಮೂಡಿಸಿದ ನತಾಶಾ ಸ್ಟಾಂಕೊವಿಕ್​ ಹೊಸ ಪೋಸ್ಟ್​​​

Government Employees
ಕರ್ನಾಟಕ24 mins ago

Government Employees: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಆ.17ರಂದು ವಿಶೇಷ ಸಾಂದರ್ಭಿಕ ರಜೆ

Physical Abuse
ಪ್ರಮುಖ ಸುದ್ದಿ1 hour ago

Physical Abuse : ತಪಾಸಣೆಗೆ ಬಂದ ರೋಗಿಗಳಿಬ್ಬರನ್ನು ಅತ್ಯಾಚಾರ ಮಾಡಿದ ಸರ್ಕಾರಿ ವೈದ್ಯ; ಜೂನಿಯರ್​ ವೈದ್ಯರ ಪೆಟ್ಟು ತಿಂದು ಐಸಿಯು ಸೇರಿದ ಆರೋಪಿ

Independence day 2024
ತಂತ್ರಜ್ಞಾನ1 hour ago

Independence Day 2024: ವಾಟ್ಸ್‌ಆಪ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಸ್ಟಿಕ್ಕರ್‌, ಮೆಸೆಜ್‌, ಇಮೇಜ್‌ ಪಡೆಯುವುದು ಹೇಗೆ?

Manu Bhaker
ಪ್ರಮುಖ ಸುದ್ದಿ2 hours ago

Manu Bhaker : ಶೂಟಿಂಗ್​​ನಿಂದ ಬ್ರೇಕ್ ತೆಗೆದುಕೊಂಡ ಮನು ಭಾಕರ್​​, ಡೆಲ್ಲಿಯಲ್ಲಿ ನಡೆಯುವ ವಿಶ್ವಕಪ್​ಗೆ ಅಲಭ್ಯ

Muda Scam
ಕರ್ನಾಟಕ2 hours ago

Muda Scam: ಸಿಎಂ ವಿರುದ್ಧದ ಸ್ನೇಹಮಯಿ ಕೃಷ್ಣ ಅರ್ಜಿ ಆದೇಶ ಆ.20ಕ್ಕೆ ಕಾಯ್ದಿರಿಸಿದ ಕೋರ್ಟ್‌; ಅಬ್ರಹಾಂ ಅರ್ಜಿ ವಿಚಾರಣೆ ಮುಂದೂಡಿಕೆ

Lakshmi Hebbalkar
ಕರ್ನಾಟಕ2 hours ago

Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

Independence day 2024
ದೇಶ2 hours ago

Independence day 2024: ಆಗಸ್ಟ್ 15ರಂದು ಪ್ರಧಾನಿ ಮೋದಿ ಭಾಷಣವನ್ನು ಎಷ್ಟು ಹೊತ್ತಿಗೆ, ಎಲ್ಲಿ ವೀಕ್ಷಿಸಬಹುದು?

Ian Bell
ಕ್ರಿಕೆಟ್2 hours ago

Ian Bell : ಲಂಕಾ ತಂಡದ ನೂತನ ಬ್ಯಾಟಿಂಗ್​ ಕೋಚ್​ ಆಗಿ ಇಯಾನ್ ಬೆಲ್​ ನೇಮಕ

Prime fashion week
ಫ್ಯಾಷನ್2 hours ago

Prime Fashion week: ಪ್ರೈಮ್‌ ಫ್ಯಾಷನ್‌ ವೀಕ್‌ನಲ್ಲಿ ಸಂಜಯ್‌ ಚೊಲಾರಿಯಾ ಡಿಸೈನರ್‌ ವೇರ್ಸ್ ಅನಾವರಣ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌