Site icon Vistara News

Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

Asaduddin Owais

Asaduddin Owais

ನವದೆಹಲಿ: ಎಐಎಂಐಎಂ (AIMIM) ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಮಂಗಳವಾರ 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ʼಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದು, ವಿವಾದ ಎಬ್ಬಿಸಿದೆ. ಓವೈಸಿ ನಡೆಗೆ ಕಿಡಿಕಾರಿರುವ ಬಿಜೆಪಿ ಅವರ ಸದಸ್ಯತ್ವವನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದೆ. ಹಾಗಾದರೆ ಓವೈಸಿ ಸದಸ್ಯತ್ವ ರದ್ದಾಗುತ್ತ? ಕಾನೂನು ಏನು ಹೇಳುತ್ತದೆ? ಮುಂತಾದ ಪ್ರಶ್ನೆಗೆ ಇಲ್ಲಿದೆ ಉತ್ತರ.

ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಓವೈಸಿ ಕೊನೆಗೆ, ‘ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಹೈದರಾಬಾದ್‌ನಿಂದ ಕಣಕ್ಕಿಳಿದಿದ್ದ ಓವೈಸಿ ತಮ್ಮ ಪ್ರಬಲ ಸ್ಪರ್ಧಿ ಬಿಜೆಪಿಯ ಮಾಧವಿ ಲತಾ ಕೊಂಪೆಲ್ಲಾ ಅವರನ್ನು ಸೋಲಿಸಿ ಸತತ ಐದನೇ ಬಾರಿಗೆ ಲೋಕಸಭೆಗೆ ಪ್ರವೇಶಿಸಿದ್ದಾರೆ.

ಸಮರ್ಥಿಸಿಕೊಂಡ ಓವೈಸಿ

ʼಜೈ ಪ್ಯಾಲೆಸ್ತೀನ್​’ ಘೋಷಣೆಗೆ ಬಿಜೆಪಿ ತೀವ್ರ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದ ಓವೈಸಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಸದನದ ಹೊರಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್ ಎಂದು ಹೇಳುವುದರಲ್ಲಿ ಯಾವುದೇ ತಪ್ಪಿಲ್ಲʼʼ ಎಂದಿದ್ದಾರೆ. “ಇತರ ಸದಸ್ಯರು ಸಹ ವಿವಿಧ ರೀತಿಯ ಘೋಷಣೆ ಕೂಗುತ್ತಾರೆ. ಅದು ಹೇಗೆ ತಪ್ಪಾಗುತ್ತದೆ? ನಾನು ಏನು ಹೇಳಬೇಕೋ ಅದನ್ನು ಹೇಳಿದೆ. ಪ್ಯಾಲೆಸ್ತೀನ್ ಬಗ್ಗೆ ಮಹಾತ್ಮ ಗಾಂಧಿ ಹೇಳಿದ್ದನ್ನು ಓದಿ” ಎಂದು ಓವೈಸಿ ಹೇಳಿದ್ದಾರೆ.

ಓವೈಸಿ ಅವರ ಪ್ರಮಾಣ ವಚನದ ವಿಡಿಯೊ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಪ್ರಮಾಣ ವಚನ ಸ್ವೀಕರಿಸಲು ವೇದಿಕೆಯತ್ತ ಸಾಗುತ್ತಿದ್ದ ಓವೈಸಿ ಅವರನ್ನು ಬಿಜೆಪಿ ಸಂಸದರು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗುವ ಮೂಲಕ ಪ್ರಚೋದಿಸಿದ್ದಾರೆ ಎಂದು ಕೆಲವರು ಅವರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಯಾವೆಲ್ಲ ಕಾರಣಕ್ಕೆ ಸದಸ್ಯತ್ವ ರದ್ದಾಗುತ್ತದೆ?

ಇದೀಗ ಓವೈಸಿ ಅವರ ಸದಸ್ಯತ್ವ ರದ್ದಾಗುತ್ತ ಎನ್ನುವ ಪ್ರಶ್ನೆ ಎದ್ದಿದೆ. ಕಾನೂನು ಪ್ರಕಾರ ಯಾವೆಲ್ಲ ಕಾರಣಗಳಿಗೆ ಸದಸ್ಯತ್ವ ರದ್ದುಪಡಿಸಲಾಗುತ್ತದೆ ಎನ್ನುವ ವಿವರ ಇಲ್ಲಿದೆ.

ಈ ಪ್ರಕರಣವನ್ನು ಲೋಕಸಭೆಯ ನೈತಿಕ ಸಮಿತಿಗೆ ಕಳುಹಿಸಲಾಗುವುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸಮಿತಿ ಸದಸ್ಯರು ತನಿಖೆ ನಡೆಸಿ ಓವೈಸಿ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಲಿದ್ದಾರೆ. ಅದಾಗ್ಯೂ ಓವೈಸಿ ಅವರ ಸದಸ್ಯತ್ವ ರದ್ದಾಗುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

ಇದನ್ನೂ ಓದಿ: Chhatrapal Singh Gangwar: ಪ್ರಮಾಣ ವಚನದ ವೇಳೆ ʼಜೈ ಹಿಂದೂ ರಾಷ್ಟ್ರʼ ಘೋಷಣೆ ಮೊಳಗಿಸಿದ ಬಿಜೆಪಿ ಸಂಸದ!

2018ರಲ್ಲಿ, ನ್ಯಾಷನಲ್ ಕಾನ್ಫರೆನ್ಸ್ ಶಾಸಕ ಮೊಹಮ್ಮದ್ ಅಕ್ಬರ್ ಲೋನ್ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ʼಪಾಕಿಸ್ತಾನ್ ಜಿಂದಾಬಾದ್ʼ ಎಂಬ ಘೋಷಣೆಯನ್ನು ಕೂಗಿದ್ದರು. ಇದರ ಹೊರತಾಗಿಯೂ ಅವರು ತಮ್ಮ ಸದಸ್ಯತ್ವವನ್ನು ಕಳೆದುಕೊಂಡಿರಲಿಲ್ಲ.

Exit mobile version