Site icon Vistara News

Rajasthan Polls: 400 ರೂ.ಗೆ ಸಿಲಿಂಡರ್‌, ಜಾತಿಗಣತಿ, ಉದ್ಯೋಗ; ಕಾಂಗ್ರೆಸ್‌ ಭರ್ಜರಿ ಭರವಸೆ

Congress Manifesto In Rajasthan

Ashok Gehlot releases Congress's Rajasthan poll manifesto, promises caste census

ಜೈಪುರ: ಮಧ್ಯಪ್ರದೇಶ, ಛತ್ತೀಸ್‌ಗಢ ಸೇರಿ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯು 2024ರ ಲೋಕಸಭೆ ಚುನಾವಣೆಯ (Lok Sabha Election 2024) ಸೆಮಿಫೈನಲ್‌ ಎಂದೇ ಹೇಳಲಾಗುತ್ತಿದೆ. ಹಾಗಾಗಿ, ಐದೂ ರಾಜ್ಯಗಳಲ್ಲಿ ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳು ಜನರ ಮತ ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಬಿಜೆಪಿ ಹಾಗೂ ಕಾಂಗ್ರೆಸ್‌ ಅಂತೂ ಉಚಿತ ಕೊಡುಗೆಗಳ ಭರವಸೆ ಮೂಲಕ ಜನರ ವಿಶ್ವಾಸ ಗಳಿಸಲು ಯತ್ನಿಸುತ್ತಿವೆ. ಅದರಂತೆ, ರಾಜಸ್ಥಾನದಲ್ಲಿ (Rajasthan Polls) ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆ (Congress Manifesto) ಬಿಡುಗಡೆ ಮಾಡಿದ್ದು, ಜನರಿಗೆ ಭರಪೂರ ಭರವಸೆಗಳನ್ನು ನೀಡಿದೆ.

ರಾಜಸ್ಥಾನ ರಾಜಧಾನಿ ಜೈಪುರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಸೇರಿ ಹಲವರು ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ ಮಾಡಿದರು. “ದೇಶದ ಯಾವುದೇ ರಾಜ್ಯದಲ್ಲಿ ಜನರಿಗೆ ನೀಡುವ ಭರವಸೆಗಳನ್ನು ಈಡೇರಿಸುತ್ತದೆ ಎಂದರೆ ಅದು ಕಾಂಗ್ರೆಸ್‌ ಮಾತ್ರ. ರಾಜಸ್ಥಾನದಲ್ಲಿ ಕಳೆದ ಚುನಾವಣೆ ಘೋಷಿಸಿದ ಪ್ರಣಾಳಿಕೆಯ ಶೇ.90ರಷ್ಟು ಭರವಸೆಗಳನ್ನು ಈಡೇರಿಸಲಾಗಿದೆ. ಮುಂದಿನ ದಿನಗಳಲ್ಲೂ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದೇ ನಮ್ಮ ಗುರಿಯಾಗಿದೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕಾಂಗ್ರೆಸ್‌ ನೀಡಿದ ಪ್ರಮುಖ ಭರವಸೆಗಳು

ಇದನ್ನೂ ಓದಿ: ಪೆಟ್ರೋಲ್‌ ಬೆಲೆ ಇಳಿಕೆ, ಉಚಿತ ಅಯೋಧ್ಯೆ ಯಾತ್ರೆ; ತೆಲಂಗಾಣದಲ್ಲಿ ಬಿಜೆಪಿ ‘ಪ್ರಣಾಳಿಕೆ’ ಅಸ್ತ್ರ

ರಾಜಸ್ಥಾನದಲ್ಲಿ ಬಿಜೆಪಿ ಭರವಸೆಗಳು ಏನೇನು?

ರಾಜಸ್ಥಾನದಲ್ಲಿ ಬಿಜೆಪಿಯೂ ಪ್ರಣಾಳಿಕೆ ಮೂಲಕ ಜನರಿಗೆ ಹಲವು ಭರವಸೆ ನೀಡಿದೆ. ಗ್ರಾಮೀಣ ಪ್ರದೇಶದ ಮಹಿಳೆಯರನ್ನು ಸ್ವಾವಲಂಬಿ ಮಾಡುವುದಕ್ಕಾಗಿ ಬಿಜೆಪಿಯು ಸುಮಾರು 6 ಲಕ್ಷ ಮಹಿಳೆಯರಿಗೆ ಲಕಪತಿ ದೀದಿ ಸ್ಕೀಮ್‌ನಲ್ಲಿ ತರಬೇತಿ ಮತ್ತು ಆರ್ಥಿಕ ಬೆಂಬಲ ನೀಡುವುದಾಗಿ ಘೋಷಿಸಿದೆ. ಅಲ್ಲದೇ, ಉಜ್ವಲ ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಮೇಲೆ 450 ರೂ. ಸಬ್ಸಿಡಿ ದೊರೆಯಲಿದೆ. ಹಾಗೆಯೇ, ಮಾತೃ ವಂದನಾ ಯೋಜನೆಯ ಮೊತ್ತವನ್ನು 5000 ರೂ.ನಿಂದ 8000 ರೂ.ವರೆಗೆ ಹೆಚ್ಚಿಸಲಾಗುವುದು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವೆಚ್ಚಗಳಿಗಾಗಿ ನೇರ ನಗದು ಮೂಲಕ 1200 ರೂ. ನೀಡುವ ಭರವಸೆಯನ್ನು ಬಿಜೆಪಿ ನೀಡಿದೆ.

ರಾಜಸ್ಥಾನ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ರಾಜಸ್ಥಾನ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅನ್ನು ರಾಜ್ಯದ ಪ್ರತಿ ವಿಭಾಗದಲ್ಲಿ ಆರಂಭಿಸಲಾಗುವುದು. ಏಮ್ಸ್ ಮತ್ತು ಐಐಟಿಗಳ ರೀತಿಯಲ್ಲಿ, ಆರೋಗ್ಯ ಮೂಲಸೌಕರ್ಯವನ್ನು ನವೀಕರಿಸಲು ಮತ್ತು ಸುಧಾರಿಸಲು 40,000 ಕೋಟಿ ರೂ. ವೆಚ್ಚ ಮಾಡಲಾಗುವುದು. 15,000 ವೈದ್ಯರು ಮತ್ತು 20,000 ಅರೆವೈದ್ಯಕೀಯ ಸಿಬ್ಬಂದಿ ನೇಮಕ ಮಾಡುವುದಾಗಿ ಬಿಜೆಪಿ ಹೇಳಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version