ನವದೆಹಲಿ: ಬ್ರಿಟನ್‌ನ ಪ್ರಮುಖ ಆನ್‌ಲೈನ್ ಫ್ಯಾಷನ್ ಕಂಪನಿ ಎಎಸ್‌ಒಎಸ್ ನ (ಎಸೋಸ್) ಉತ್ಪನ್ನಗಳನ್ನು ಭಾರತದಲ್ಲಿ ಮಾರಾಟ ಮಾಡಲು ರಿಲಯನ್ಸ್ ರಿಟೇಲ್ (Reliance Retail) ಕಂಪನಿಯು ದೀರ್ಘಾವಧಿಯ ಪಾಲುದಾರಿಕೆ ಮಾಡಿಕೊಂಡಿದ್ದು, ಈ ಒಪ್ಪಂದದ ಪ್ರಕಾರ, ರಿಲಯನ್ಸ್ ರಿಟೇಲ್ ಕಂಪನಿಯು ಭಾರತದಲ್ಲಿ ತನ್ನ ಆನ್‌ಲೈನ್ ಮತ್ತು ಆಫ್‌ಲೈನ್ ಪ್ಲಾಟ್‌ಫಾರಂಗಳಲ್ಲಿ (ASOS) ಎಎಸ್‌ಒಎಸ್‌ನ ಉತ್ಪನ್ನಗಳು ಲಭ್ಯವಾಗುವಂತೆ ಮಾಡಲಿದೆ.
ಎಎಸ್‌ಒಎಸ್ ಕಂಪನಿಯು ಜಗತ್ತಿನಾದ್ಯಂತ ಯುವ ಪೀಳಿಗೆಯಲ್ಲಿ ಜನಪ್ರಿಯವಾಗಿದ್ದು, 200ಕ್ಕೂ ಅಧಿಕ ಮಾರುಕಟ್ಟೆಗಳಲ್ಲಿ ಕಂಪನಿಯ ಉತ್ಪನ್ನಗಳು ಲಭ್ಯವಿವೆ.
ಇದನ್ನೂ ಓದಿ: Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ
ಈ ಕುರಿತು ರಿಲಿಯನ್ಸ್ ರಿಟೇಲ್ ವೆಂಚರ್ಸ್‌ನ ನಿರ್ದೇಶಕಿ ಇಶಾ ಅಂಬಾನಿ ಮಾತನಾಡಿ, ನಮ್ಮ ಫ್ಯಾಷನ್ ಕುಟುಂಬಕ್ಕೆ ಎಎಸ್‌ಒಎಸ್ ಅನ್ನು ಸ್ವಾಗತಿಸುತ್ತೇವೆ. ಜಾಗತಿಕ ಫ್ಯಾಷನ್ ಅನ್ನು ಭಾರತದ ಮಾರುಕಟ್ಟೆಗೆ ತರುವ ನಿಟ್ಟಿನಲ್ಲಿ ಇದೊಂದು ಮಹತ್ವದ ಮೈಲಿಗಲ್ಲು. ಭಾರತದ ರಿಟೇಲ್ ಮಾರುಕಟ್ಟೆಯಲ್ಲಿ ನಮಗಿರುವ ಸ್ಥಾನವನ್ನು ಈ ಪಾಲುದಾರಿಕೆಯು ಸೂಚಿಸುತ್ತದೆ. ಅಲ್ಲದೆ, ನಮ್ಮ ಗ್ರಾಹಕರು ಬಯಸುವ ಫ್ಯಾಷನ್ ಉತ್ಪನ್ನಗಳನ್ನು ಅವರಿಗೆ ಒದಗಿಸುವ ಖಾತರಿಯನ್ನೂ ನೀಡುತ್ತದೆ ಎಂದು ತಿಳಿಸಿದರು.
ಈ ಬಗ್ಗೆ ಎಎಸ್‌ಒಎಸ್ (ASOS) ನ ಸಿಇಒ ಜೋಸ್ ಆಂಟೋನಿಯೋ ಮಾತನಾಡಿ, ರಿಲಯನ್ಸ್ ರಿಟೇಲ್ ಜತೆಗೂಡಿ ನಮ್ಮ ಫ್ಯಾಷನ್ ಬ್ರ್ಯಾಂಡ್‌ಗಳಲ್ಲಿ ಕೆಲವೊಂದನ್ನು ನಾವು ಭಾರತದ ಗ್ರಾಹಕರಿಗೆ ನೀಡಲು ಉತ್ಸುಕರಾಗಿದ್ದೇವೆ. ಮುಖ್ಯವಾಗಿ ಜಗತ್ತಿನಲ್ಲಿಯೇ ಬ್ರಿಟಿಷ್ ಫ್ಯಾಷನ್ ಬ್ರ್ಯಾಂಡ್‌ಗಳಲ್ಲಿ ಒಂದಾಗಿರುವ ಎಎಸ್‌ಒಎಸ್ ವಿನ್ಯಾಸವನ್ನು ನೀಡಲು ಕಾತುರರಾಗಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ: Bengaluru News: ವ್ಯಾಸ-ದಾಸ ಸಾಹಿತ್ಯ ಜ್ಞಾನ ಪ್ರಸಾರಕ್ಕೆ ಮಾನ್ಯತೆ ನೀಡಿ; ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ
ಆರ್‌ಐಎಲ್ (ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್) ಸಮೂಹದ ಎಲ್ಲಾ ರೀಟೇಲ್ ಕಂಪನಿಗಳನ್ನು ಒಳಗೊಂಡಿರುವ ಕಂಪನಿಯೇ ರಿಲಿಯನ್ಸ್ ರಿಟೇಲ್ ವೆಂಚರ್ಸ್ ಲಿಮಿಟೆಡ್ (ರಿಲಯನ್ಸ್ ರಿಟೇಲ್). ರಿಲಯನ್ಸ್ ರಿಟೇಲ್ 18,836ಕ್ಕೂ ಅಧಿಕ ಮಳಿಗೆಗಳು ಮತ್ತು ಡಿಜಿಟಲ್ ಇ-ಕಾಮರ್ಸ್ ಮೂಲಕ ಕಾರ್ಯಾಚರಿಸುತ್ತದೆ. ರಿಲಯನ್ಸ್ ರಿಟೇಲ್ ಕಂಪನಿಯು ತನ್ನ ಹೊಸ ವಾಣಿಜ್ಯ ಯೋಜನೆಯ ಭಾಗವಾಗಿ 30 ಲಕ್ಷಕ್ಕೂ ಅಧಿಕ ವ್ಯಾಪಾರಿಗಳೊಂದಿಗೆ ಪಾಲುದಾರಿಕೆ ಮಾಡಿಕೊಂಡಿದೆ.