Site icon Vistara News

Assam Rifles: ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಅಸ್ಸಾಂ ರೈಫಲ್ಸ್​ನ ಯೋಧ

shoot out

shoot out

ನವದೆಹಲಿ: ದಕ್ಷಿಣ ಮಣಿಪುರದ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಸ್ಸಾಂ ರೈಫಲ್ಸ್ (Assam Rifles-AR)ನ ಯೋಧ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯಲ್ಲಿ ಆರು ಸೈನಿಕರು ಗಾಯಗೊಂಡಿದ್ದು, ಅವರನ್ನು ಚುರಾಚಂದ್‌ಪುರದ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಆರ್ ಬೆಟಾಲಿಯನ್ ಆವರಣದಲ್ಲಿ ಈ ಘಟನೆ ನಡೆದಿದೆ. ಗುಂಡಿನ ದಾಳಿ ನಡೆಸಿದ ಯೋಧ ಹಿಂಸಾಚಾರ ಪೀಡಿತ ಚುರಾಚಂದ್‌ಪುರ ಮೂಲದವರು ಎಂದು ಗುರುತಿಸಲಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಅಸ್ಸಾಂ ರೈಫಲ್ಸ್ “ಯಾವುದೇ ಸಂಭಾವ್ಯ ವದಂತಿಗಳನ್ನು ನಿವಾರಿಸಲು ದುರಂತ ಘಟನೆಯ ವಿವರಗಳನ್ನು ಪಾರದರ್ಶಕವಾಗಿ ಹಂಚಿಕೊಳ್ಳಲಾಗುತ್ತಿದೆʼʼ ಎಂದು ಹೇಳಿದೆ. ʼʼಗಾಯಗೊಂಡವರಲ್ಲಿ ಯಾರೂ ಮಣಿಪುರದವರಲ್ಲ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಈ ಘಟನೆಯನ್ನು ನಡೆಯುತ್ತಿರುವ ಸಂಘರ್ಷದೊಂದಿಗೆ ಹೋಲಿಕೆ ಮಾಡಬಾರದುʼʼ ಎಂದೂ ಮನವಿ ಮಾಡಿದೆ.

“ಎಲ್ಲ ಅಸ್ಸಾಂ ರೈಫಲ್ಸ್ ಬೆಟಾಲಿಯನ್‌ ಮಣಿಪುರದ ವಿವಿಧ ಸಮುದಾಯಗಳಿಗೆ ಸೇರಿದವರನ್ನು ಒಳಗೊಂಡಂತೆ ಮಿಶ್ರ ವರ್ಗ ಸಂಯೋಜನೆಯನ್ನು ಹೊಂದಿವೆ. ಮಣಿಪುರದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಯ್ದುಕೊಳ್ಳಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Manipur Violence: ಮಣಿಪುರ ಹಿಂಸಾಚಾರದಲ್ಲಿ ಮಯನ್ಮಾರ್‌ ಬಂಡುಕೋರರು ಶಾಮೀಲು!

ಮೈಟಿ ಮತ್ತು ಕುಕಿ-ಝೋ ಸಮುದಾಯಗಳ ನಡುವಿನ ಘರ್ಷಣೆಯಿಂದಾಗಿ ಮಣಿಪುರವು ಕಳೆದ ವರ್ಷ ಮೇ ತಿಂಗಳಿನಿಂದ ಜನಾಂಗೀಯ ಹಿಂಸಾಚಾರದಲ್ಲಿ ಸಿಲುಕಿದೆ. ಈ ಹಿಂಸಾಚಾರವು ಸುಮಾರು 50,000 ಜನರ ಸ್ಥಳಾಂತರಕ್ಕೆ ಮತ್ತು ಕನಿಷ್ಠ 207 ಮಂದಿಯ ಸಾವಿಗೆ ಕಾರಣವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Exit mobile version