ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನದ (Atal Birth Anniversary) ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿ ಹಲವು ಗಣ್ಯರು ಸಂಸತ್ ಭವನದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮಾರಕ ‘ಸದೈವ ಅಟಲ್’ಗೆ ತೆರಳಿ ಗೌರವ ನಮನ ಸಲ್ಲಿಸಿದರು.
ಗೌರವ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಮಿತ್ ಶಾ, “ವಾಜಪೇಯಿ ಅವರ ದೇಶಪ್ರೇಮ, ಬದ್ಧತೆಯು ದೇಶದ ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕವಾಗಿದೆ. ಅಟಲ್ ಅವರು ಭಾರತದ ರಾಜಕೀಯದ ಶಿಖರ ಇದ್ದಹಾಗೆ. ವಿಶ್ವದ ಪ್ರತಿಯೊಂದು ರಾಷ್ಟ್ರವೂ ಭಾರತದ ಬಗ್ಗೆ ಗೌರವದ ಭಾವನೆಯಿಂದ ನೋಡುವಂತೆ ಮಾಡಿದ್ದು ಅವರೇ” ಎಂದು ಹೇಳಿದರು.
ಅಟಲ್ ಆಡಳಿತದಲ್ಲಿ ಅಭಿವೃದ್ಧಿ: ಸ್ಪೀಕರ್ ಓಂ ಬಿರ್ಲಾ
“ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಭಾರತವು ಗಣನೀಯವಾಗಿ ಅಭಿವೃದ್ಧಿ ಹೊಂದಿದೆ” ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದರು. ಅಟಲ್ ಸ್ಮರಣಾರ್ಥ ಆಚರಿಸುವ ‘ಉತ್ತಮ ಆಡಳಿತ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ದೇಶದ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಅಣ್ವಸ್ತ್ರ ಹೊಂದುವಲ್ಲಿ ವಾಜಪೇಯಿ ಅವರ ಕೊಡುಗೆ ಅಪಾರವಾಗಿದೆ” ಎಂದು ಸ್ಮರಿಸಿದರು.
ಇದನ್ನೂ ಓದಿ | Atal Bihari Vajpayee Birth Day | ಭಾರತದ ಭದ್ರತಾ ವ್ಯವಸ್ಥೆಗೆ ಅಟಲ್ ಬಿಹಾರಿ ವಾಜಪೇಯಿ ಅವರ 5 ಕೊಡುಗೆಗಳು