ISRO: ಇಸ್ರೋದಿಂದ ರಿಯೂಸೆಬಲ್ ಲಾಂಚ್ ವೆಹಿಕಲ್‌ನ ಅಟಾನಮಸ್‍ ಲ್ಯಾಂಡಿಂಗ್ ಪರೀಕ್ಷೆ ಸಕ್ಸೆಸ್! - Vistara News

ದೇಶ

ISRO: ಇಸ್ರೋದಿಂದ ರಿಯೂಸೆಬಲ್ ಲಾಂಚ್ ವೆಹಿಕಲ್‌ನ ಅಟಾನಮಸ್‍ ಲ್ಯಾಂಡಿಂಗ್ ಪರೀಕ್ಷೆ ಸಕ್ಸೆಸ್!

ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ(RLV)ದ ಆಟಾನಮಸ್‍ ಲ್ಯಾಂಡಿಂಗ್ ಮಿಷನ್ ಅನ್ನು ಇಸ್ರೋ ಯಶಸ್ವಿಯಾಗಿ ಭಾನುವಾರ ಪರೀಕ್ಷೆ ಮಾಡಿದೆ. ಈ ಮೂಲಕ ಇಸ್ರೋ(ISRO) ಮತ್ತೊಂದು ವಿಕ್ರಮಗೈದಿದೆ.

VISTARANEWS.COM


on

autonomous landing of Reusable Launch Vehicle test success, Says ISRO
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು, ಕರ್ನಾಟಕ: ಮರು ಬಳಕೆ ರಾಕೆಟ್‌ ವಿಷಯದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಮತ್ತೊಂದು ಹಂತಕ್ಕೆ ಏರಿದೆ. ಚಿತ್ರದುರ್ಗದ ಇಸ್ರೋ ಏರೋನಾಟಿಕಲ್ ಟೆಸ್ಟ್ ರೇಂಜ್(ATR)ನಲ್ಲಿ ಮರುಬಳಕೆ ಮಾಡಬಹುದಾದ ವಾಹನ(RLV)ದ ಆಟಾನಮಸ್‍ ಲ್ಯಾಂಡಿಂಗ್ ಮಿಷನ್ ಯಶಸ್ವಿಯಾಗಿ ಭಾನುವಾರ ಬೆಳಗ್ಗೆ ಪರೀಕ್ಷೆ ಮಾಡಲಾಗಿದೆ. ಈ ವಿಷಯವನ್ನು ಇಸ್ರೋ ತಿಳಿಸಿದೆ.

ಈ ಸಂಬಂಧ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಇಸ್ರೋ, ಭಾರತವು ಪ್ರಮುಖ ಸಾಧನೆಯನ್ನು ಮಾಡಿದೆ. ಡಿಆರ್‌ಡಿಒ ಜತೆಗೂಡಿ ಇಸ್ರೋ ಭಾನುವಾರ ಬೆಳಗ್ಗೆ, ಕರ್ನಾಟಕದ ಚಿತ್ರದುರ್ಗದಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್‌ನಲ್ಲಿ ರಿಯೂಸ್‌ಬಲ್ ಲಾಂಚ್ ವೆಹಿಕಲ್ ಆಟಾನಮಸ್‍ ಲ್ಯಾಂಡಿಂಗ್ ಮಿಷನ್(RLV LEX) ಯಶಸ್ವಿ ಪರೀಕ್ಷೆ ಮಾಡಲಾಗಿದೆ. ಭಾರತೀಯ ವಾಯು ಪಡೆಯ ಚೆನೋಕ್ ಹೆಲಿಕಾಪ್ಟ್ ಮೂಲಕ ಆರ್‌ಎಲ್‌ವಿ ಬೆಳಗ್ಗೆ 7.10ಕ್ಕೆ ಟೇಕ್ ಆಫ್ ಆಯ್ತು. ಆರ್‌ಎಲ್‌ವಿ ಬಿಡುಗಡೆಯು ಸ್ವಾಯತ್ತವಾಗಿತ್ತು. ನಂತರ ಇಂಟಿಗ್ರೇಟೆಡ್ ನ್ಯಾವಿಗೇಷನ್, ಗೈಡೆನ್ಸ್ ಮತ್ತು ಕಂಟ್ರೋಲ್ ಸಿಸ್ಟಮ್ ಅನ್ನು ಬಳಸಿಕೊಂಡು 7:40ಕ್ಕೆ ಆಟಾನಮಸ್‍ ಲ್ಯಾಂಡಿಂಗ್ ಯಶಸ್ವಿಯಾಗಿ ಪೂರ್ಣಗೊಂಡಿತು. ಈ ಮೂಲಕ ಬಾಹ್ಯಾಕಾಶ ವಾಹನದ ಆಟಾನಮಸ್‍ ಲ್ಯಾಂಡಿಂಗ್ ಅನ್ನು ಇಸ್ರೋ ಯಶಸ್ವಿಯಾಗಿ ಸಾಧಿಸಿ, ಮತ್ತೊಂದು ಹಂತಕ್ಕೆ ಏರಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಒಂದು ವೇಳೆ, ಬಾಹ್ಯಾಕಾಶದಿಂದ ರಾಕೆಟ್ ಬಂದರೆ ಯಾವ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆಯೋ ಅಂಥದ್ದೇ ಪರಿಸ್ಥಿತಿಯಲ್ಲಿ ಮರ ಬಳಸಬಹುದಾದ ಉಡಾವಣಾ ವಾಹನದ ಸ್ವಾಯತ್ತ ಲ್ಯಾಂಡಿಂಗ್ ಪರೀಕ್ಷೆಯನ್ನು ಕೈಗೊಳ್ಳಲಾಯಿತು. ಅಂದರೆ, ಮಾನವ ರಹಿತ ರಾಕೆಟ್, ಲ್ಯಾಂಡಿಂಗ್ ಹೈ ಸ್ಪೀಡ್ ಮತ್ತು ರಿಟರ್ನಿಂಗ್ ಸೇಮ್ ಪಾಥ್‌ನ ಸ್ಥಿತಿಗಳಲ್ಲಿ ಈ ಪರೀಕ್ಷೆಯನ್ನು ಕೈಗೊಳ್ಳಲಾಯಿತು. ಸ್ವಾಯತ್ತ ಲ್ಯಾಂಡಿಂಗ್ ಪರೀಕ್ಷೆಗೆ ಸ್ಥಳೀಯ ನ್ಯಾವಿಗೇಷನ್, ಉಪಕರಣಗಳು, ಸಂವೇದಕಗಳು ಸೇರಿದಂತೆ ಇತ್ಯಾದಿ ಸ್ಥಳೀಯ ವ್ಯವಸ್ಥೆಗಳನ್ನು ಬಳಸಿಕೊಂಡು ಮಾಡಿರುವುದು ಇಸ್ರೋದ ಹೆಚ್ಚುಗಾರಿಕೆಯಾಗಿದೆ. ಈ ಎಲ್ಲ ವ್ಯವಸ್ಥೆಗಳನ್ನು ಇಸ್ರೋ ಅಭಿವೃದ್ದಿಪಡಿಸಿದೆ.

ಇದನ್ನೂ ಓದಿ: ISRO YUVIKA: ಇಸ್ರೋ ಯುವ ವಿಜ್ಞಾನಿ ಕಾರ್ಯಕ್ರಮ ಯುವಿಕಾಗೆ ನೋಂದಣಿ ಶುರು, ಯಾವ ವಿದ್ಯಾರ್ಥಿಗಳು ಅರ್ಹರು?

ವಿಎಸ್‌ಎಸ್‌ಸಿ ನಿರ್ದೇಶಕ ಡಾ ಎಸ್ ಉನ್ನಿಕೃಷ್ಣನ್ ನಾಯರ್ ಮತ್ತು ಎಟಿಎಸ್‌ಪಿ ಕಾರ್ಯಕ್ರಮ ನಿರ್ದೇಶಕ ಶ್ಯಾಮ್ ಮೋಹನ್ ಎನ್ ತಂಡಗಳಿಗೆ ಮಾರ್ಗದರ್ಶನ ನೀಡಿದರು. ಆರ್‌ಎಲ್‌ವಿ ಯೋಜನಾ ನಿರ್ದೇಶಕ ಡಾ.ಜಯಕುಮಾರ್ ಎಂ ಅವರು ಮಿಷನ್ ನಿರ್ದೇಶಕರಾಗಿದ್ದರು. ಆರ್‌ಎಲ್‌ವಿಯ ಸಹಾಯಕ ಯೋಜನಾ ನಿರ್ದೇಶಕರಾದ ಮುತ್ತುಪಾಂಡಿಯನ್ ಜೆ ಮಿಷನ್‌ಗೆ ವಾಹನ ನಿರ್ದೇಶಕರಾಗಿದ್ದರು. ಈ ಸಂದರ್ಭದಲ್ಲಿ ISTRAC ನಿರ್ದೇಶಕ ರಾಮಕೃಷ್ಣ ಉಪಸ್ಥಿತರಿದ್ದರು. ಅಧ್ಯಕ್ಷರು, ಇಸ್ರೋ/ಕಾರ್ಯದರ್ಶಿ, ಡಿಒಎಸ್ ಸೋಮನಾಥ್ ಅವರು ಪರೀಕ್ಷೆಯನ್ನು ವೀಕ್ಷಿಸಿದರು ಮತ್ತು ತಂಡವನ್ನು ಅಭಿನಂದಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Latest

ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಟೀಕಿಸಿದ ಖರ್ಗೆ; ಕ್ಷಮೆ ಯಾಚನೆಗೆ ಯಡಿಯೂರಪ್ಪ ಆಗ್ರಹ

VISTARANEWS.COM


on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅರನ್ನು ‘ಭಯೋತ್ಪಾದಕ’ ಎಂದು ಟೀಕಿಸಿರುವ ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹಿರಿಯ ಬಿಜೆಪಿ ಮಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಎಕ್ಸ್‌ ನಲ್ಲಿ ಅವರು ವಿವರವಾದ ಹೇಳಿಕೆ ನೀಡಿದ್ದು, ಇಂತಹ ಹೇಳಿಕೆ ನಿಮ್ಮ ಅಹಂಕಾರವನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ. ತಮ್ಮ ಹೇಳಿಕೆಗೆ ಕೂಡಲೇ ಕ್ಷಮೆಯಾಚಿಸಬೇಕು ಎಂದೂ ಆಗ್ರಹಪಡಿಸಿದ್ದಾರೆ.


ತೀರಾಕೀಳು ಮಟ್ಟದಲ್ಲಿ ನೀವು ನೀಡಿರುವ ಹೇಳಿಕೆ ನಿಮ್ಮ ದುರಹಂಕಾರದ ಪರಮಾವಧಿ ಮಾತ್ರವಲ್ಲ, ಅದು ನಿಮ್ಮ ಕೊಳಕು, ವಿಷಕಾರಿ ಮನಸ್ಥಿತಿಯನ್ನು ಅನಾವರಣಗೊಳಿಸಿದೆ. ಖರ್ಗೆಯವರೇ, ಪ್ರಧಾನಿ ಮೋದಿ ರವರ ನಾಯಕತ್ವದ ಮೇಲೆ ಅಚಲ ವಿಶ್ವಾಸವಿಟ್ಟು ಭಾರತದ ಜನತೆ ಸತತ ಮೂರನೇ ಬಾರಿಗೆ ಅವರನ್ನು ಪ್ರಧಾನಿ ಪೀಠದಲ್ಲಿ ಕೂರಿಸಿದ್ದಾರೆ. ಅವರನ್ನು ಟೀಕಿಸುವ ಭರದಲ್ಲಿ ಹೀಗೆ ಅವಮಾನಿಸುವುದು ಎಂದರೆ ಮೋದಿ ರವರನ್ನು ಬೆಂಬಲಿಸಿದ ಕೋಟ್ಯಂತರ ಭಾರತೀಯರನ್ನು ಅಪಮಾನಿಸಿದಂತೆ! ಕಾಂಗ್ರೆಸ್ ನಾಯಕರಿಗೆ ಇಂತಹ ದುರ್ವರ್ತನೆ ಅಭ್ಯಾಸವಾಗಿಬಿಟ್ಟಿದೆ. ಚುನಾವಣೆ ಬಂದಾಗಲೆಲ್ಲ ಇಂತಹ ಕೀಳು ಮಟ್ಟದ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದು, ಜನರು ನಿಮಗೆ ಪಾಠ ಕಳಿಸುತ್ತಲೇ ಬಂದಿದ್ದಾರೆ. ಆದರೂ ತಿದ್ದಿಕೊಳ್ಳದ ನಿಮ್ಮ ವರ್ತನೆ ನಿಮ್ಮ ಅಹಂಕಾರಕ್ಕೆ ಕನ್ನಡಿ ಹಿಡಿದಿದೆ.


ಖರ್ಗೆಯವರೇ, ಭಾರತದ ಪ್ರಧಾನಿ @narendramodi ರವರು ಅಪ್ರತಿಮ ಜಾಗತಿಕ ನಾಯಕ ಎಂದು ವಿಶ್ವದ ಹಲವಾರು ದೇಶಗಳ ನೇತಾರರು ಕೊಂಡಾಡುತ್ತಿದ್ದಾರೆ. ವಿಶ್ವದ 26ಕ್ಕೂ ಅಧಿಕ ರಾಷ್ಟ್ರಗಳು ತಮ್ಮ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ನೀಡಿ ಮೋದಿ ಅವರನಾಯಕತ್ವವನ್ನು ಗೌರವಿಸಿವೆ. ಇಡೀ ಜಗತ್ತೇ ಭಾರತದತ್ತ ಹೆಮ್ಮೆಯಿಂದ ನೋಡುತ್ತಿರುವಾಗ, ಕೇವಲ ನಿಮ್ಮ ರಾಜಕೀಯ ವೈಷಮ್ಯಕ್ಕಾಗಿ ದೇಶದ ಪ್ರಧಾನಮಂತ್ರಿಗಳ ಬಗ್ಗೆ ಇಷ್ಟು ಕೀಳುಮಟ್ಟದ ಶಬ್ದಗಳನ್ನು ಬಳಸುವುದು, ನಿಮ್ಮ ಕೀಳು ಮನಸ್ಥಿತಿಯನ್ನು ಮತ್ತು ನಿಮ್ಮ ರಾಜಕೀಯ ಹತಾಶೆಯನ್ನು ಸಾಬೀತುಪಡಿಸಿದೆ. ಅಧಿಕಾರದ ಹಪಾಹಪಿಯಲ್ಲಿ, ಒಂದು ಮನೆತನವನ್ನು ಸಂತೋಷಪಡಿಸುವ ಭರದಲ್ಲಿ ನಿಮ್ಮ ಘನತೆಯನ್ನು ಕಳೆದುಕೊಂಡಿದ್ದೀರಿ. ಹಿರಿಯರಾದ ನಿಮ್ಮಿಂದ ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನಾಡಿನ ಜನತೆ ಎಂದಿಗೂ ಕ್ಷಮಿಸುವುದಿಲ್ಲ. ಇಂತಹ ಕೀಳು ಮಟ್ಟದ ಅಸಂಬದ್ಧ ಹೇಳಿಕೆಗೆ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಯಡಿಯೂರಪ್ಪ ಒತ್ತಾಯಿಸಿದ್ದಾರೆ.

Continue Reading

Latest

ಗುಜರಾತ್‌ ನಲ್ಲಿ ಬೃಹತ್‌ ಸೈಬರ್‌ ವಂಚನೆ ಜಾಲ ಪತ್ತೆ: 2,500 ಕೋಟಿ ಹಣ ವಂಚನೆ

VISTARANEWS.COM


on

ಗುಜರಾತ್‌: ಗುಜರಾತ್‌ನಲ್ಲಿ ಪತ್ತೆಯಾದ ಈ ಬೃಹತ್ ಸೈಬರ್ ವಂಚನೆ ಪ್ರಕರಣವು ದೇಶದ ಬ್ಯಾಂಕಿಂಗ್ ವ್ಯವಸ್ಥೆಯನ್ನೇ ಆತಂಕಕ್ಕೆ ತಳ್ಳಿದೆ. ಸುಮಾರು 2,500 ಕೋಟಿ ರೂ. ಮೊತ್ತದ ಈ ಹಗರಣದಲ್ಲಿ ಭಾಗಿಯಾಗಿದ್ದ 20 ಆರೋಪಿಗಳನ್ನು ರಾಜ್‌ಕೋಟ್ ಪೊಲೀಸರು ಬಂಧಿಸಿದ್ದು, ಇವರಲ್ಲಿ ಎಚ್.ಡಿಎಫ್.ಸಿ, ಯೆಸ್ ಮತ್ತು ಆಕ್ಸಿಸ್ ಬ್ಯಾಂಕ್‌ನಂತಹ ಪ್ರತಿಷ್ಠಿತ ಸಂಸ್ಥೆಗಳ ಅಧಿಕಾರಿಗಳೂ ಸೇರಿರುವುದು ಗಂಭೀರ ವಿಚಾರವಾಗಿದೆ.

ಈ ಬ್ಯಾಂಕ್ ಅಧಿಕಾರಿಗಳು ಸೈಬರ್ ಕ್ರಿಮಿನಲ್‌ಗಳೊಂದಿಗೆ ಶಾಮೀಲಾಗಿ, ನಕಲಿ ದಾಖಲೆಗಳನ್ನು ಬಳಸಿ ಸುಮಾರು 85ಕ್ಕೂ ಹೆಚ್ಚು ‘ಮ್ಯೂಲ್ ಅಕೌಂಟ್’ಗಳನ್ನು (ನಕಲಿ ಖಾತೆ) ತೆರೆದಿದ್ದರು. ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ದೊಡ್ಡ ಮೊತ್ತದ ಹಣ ವರ್ಗಾವಣೆ ಮಾಡುತ್ತಿದ್ದ ಇವರು, ವ್ಯವಸ್ಥೆಯಲ್ಲಿ ಬರುವ ಎಚ್ಚರಿಕೆಗಳನ್ನು (Internal Alerts) ಬೇಕೆಂದೇ ನಿರ್ಲಕ್ಷಿಸುತ್ತಿದ್ದರು. ಬಳಿಕ ಈ ಹಣವನ್ನು ಹವಾಲಾ ದಂಧೆಯ ಮೂಲಕ ಬೇರೆಡೆ ರವಾನಿಸಿ, ವಂಚಕರಿಂದ ದೊಡ್ಡ ಮೊತ್ತದ ಕಮಿಷನ್ ಪಡೆಯುತ್ತಿದ್ದರು.

ಗೊಂಡಲ್ ಮಾರ್ಕೆಟಿಂಗ್ ಯಾರ್ಡ್‌ನ ಕಂಪನಿಯೊಂದರ ಖಾತೆಯಲ್ಲಿ ನಡೆದ 200 ಕೋಟಿ ರೂ.ಗಳ ಸಂಶಯಾಸ್ಪದ ವ್ಯವಹಾರವು ಈ ಮಹಾ ಹಗರಣವನ್ನು ಬಯಲಿಗೆಳೆದಿದೆ. ಪ್ರಸ್ತುತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ 535 ದೂರುಗಳು ದಾಖಲಾಗಿದ್ದು, 35 ನಕಲಿ ಸಂಸ್ಥೆಗಳನ್ನು ಪೊಲೀಸರು ಗುರುತಿಸಿದ್ದಾರೆ. ತನಿಖೆ ಮುಂದುವರಿದಂತೆ ಇನ್ನೂ ಹೆಚ್ಚಿನ ಬ್ಯಾಂಕ್ ನೌಕರರು ಸಿಕ್ಕಿಬೀಳುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

Latest

ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧ ಸಿಎಂ ಯೋಗಿ ಆದಿತ್ಯನಾಥ ಆಕ್ರೋಶ

VISTARANEWS.COM


on

ಲಖನೌ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷಗಳು ತಮ್ಮ ಮಹಿಳಾ ವಿರೋಧಿ ನೀತಿಯನ್ನು ಪ್ರದರ್ಶಿಸಿವೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಲಖನೌದಲ್ಲಿ ಇಂದು ನಡೆದ ಜನ ಆಕ್ರೋಶ ಮಹಿಳಾ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿರು. ದೇಶಾದ್ಯಂತ ಮಹಿಳೆಯರು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ವಿರುದ್ಧ ಬೀದಿಬೀದಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್, ಸಮಾಜವಾದಿ, ಟಿಎಂಸಿ ಮತ್ತು ಡಿಎಂಕೆ ಪಕ್ಷಗಳ ಮಹಿಳಾ ವಿರೋಧಿ ನೀತಿಯನ್ನು ಖಂಡಿಸಿ ಮಹಿಳೆಯರು ಆಕ್ರೋಶ ಹೊರಹಾಕುತ್ತಿದ್ದಾರೆ. ಅವರ ಅಸಮಾಧಾನ ಈ ಪಾದಯಾತ್ರೆಯಲ್ಲಿ ಕಂಡುಬರುತ್ತಿದೆ ಎಂದರು. ಮಹಿಳಾ ಮೀಸಲಾತಿಗೆ ಸಂಬಂಧಿಸಿದ ನಿರ್ಣಾಯಕ ತಿದ್ದುಪಡಿ ಮಸೂದೆಗೆ ಕಾಂಗ್ರೆಸ್‌ ನೇತೃತ್ವದ ಪಕ್ಷಗಳ ನಡೆ ವಿರುದ್ಧ ಈ ಪಾದಯಾತ್ರೆಯನ್ನು ಉತ್ತರಪ್ರದೇಶ ರಾಜ್ಯ ಸರ್ಕಾರ ಆಯೋಜಿಸಿತ್ತು.

Continue Reading

Latest

ಭಾರತ ಈಗ ‘ವಿಶ್ವಗುರು’ ಅಲ್ಲ, ಆ ಪದ ಬಳಸಬೇಡಿ: ಮುರಳಿ ಮನೋಹರ ಜೋಶಿ ಪ್ರತಿಪಾದನೆ

VISTARANEWS.COM


on

ನವದೆಹಲಿ: ಭಾರತವು ಪ್ರಸ್ತುತ ‘ವಿಶ್ವಗುರು’ ಆಗಿ ಉಳಿದಿಲ್ಲ, ಆದ್ದರಿಂದ ಆ ಪದವನ್ನು ಬಳಸುವುದರಿಂದ ನಾವು ದೂರವಿರಬೇಕು ಎಂದು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ ಜೋಶಿ ಹೇಳಿದ್ದಾರೆ. ದೆಹಲಿಯಲ್ಲಿ ಆರ್‌ಎಸ್‌ಎಸ್ ಅಂಗಸಂಸ್ಥೆಯಾದ ‘ಸಂಸ್ಕೃತ ಭಾರತಿ’ ಕೇಂದ್ರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈ ವಿಚಾರವಾಗಿ ತಮ್ಮ ವೈಯಕ್ತಿಕ ಮತ್ತು ವಾಸ್ತವಿಕ ನಿಲುವನ್ನು ಬಿಚ್ಚಿಟ್ಟರು.

ಸತ್ಯವನ್ನು ಒಪ್ಪಿಕೊಳ್ಳಬೇಕು:
ಭಾರತವು ‘ವಿಶ್ವಗುರು’ ಆಗುತ್ತಿರುವ ಮತ್ತು ಎ.ಐ (AI) ಕೇಂದ್ರವಾಗುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ನಾವು ಒಂದು ಕಾಲದಲ್ಲಿ ವಿಶ್ವಗುರು ಆಗಿದ್ದೆವು ಎಂಬುದು ಸತ್ಯ. ಆದರೆ ಇಂದು ನಾವು ಹಾಗಿಲ್ಲ ಎಂಬ ವಾಸ್ತವವನ್ನು ಒಪ್ಪಿಕೊಳ್ಳಬೇಕು. ಈ ಹಂತದಲ್ಲಿ ನಾವು ವಿಶ್ವಗುರು ಅಲ್ಲ, ಬದಲಾಗಿ ಆ ಸ್ಥಾನಕ್ಕೇರಲು ಪ್ರಯತ್ನಿಸಬೇಕಷ್ಟೇ,” ಎಂದು ಮಾರ್ಮಿಕವಾಗಿ ನುಡಿದರು.

ಸಂಸ್ಕೃತಕ್ಕೆ ಅಗ್ರಸ್ಥಾನ ನೀಡಲು ಕರೆ:
ಸಂಸ್ಕೃತ ಭಾಷೆಯ ಮಹತ್ವದ ಬಗ್ಗೆ ಮಾತನಾಡಿದ ಜೋಶಿ, ಕ್ವಾಂಟಮ್ ಕಂಪ್ಯೂಟಿಂಗ್‌ನಂತಹ ಆಧುನಿಕ ತಂತ್ರಜ್ಞಾನಗಳಲ್ಲಿ ಸಂಸ್ಕೃತವನ್ನು ಬಳಸಬೇಕು ಎಂದು ಆಶಿಸಿದರು. ಸಂಸ್ಕೃತವನ್ನು ಭಾರತದ ಅಧಿಕೃತ ಭಾಷೆಯನ್ನಾಗಿ ಮಾಡಲು ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕ ಮಹನೀಯರು ಶ್ರಮಿಸಿದ್ದರು. ಸಂಸ್ಕೃತದ ಹೆಚ್ಚಿನ ಪ್ರಚಾರ ಮತ್ತು ಬಳಕೆಯಿಂದ ಮಾತ್ರ ಭಾರತವು ತನ್ನ ಪ್ರಾಚೀನ ಗೌರವವನ್ನು ಮರಳಿ ಪಡೆಯಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

Continue Reading
Advertisement
Latest7 ನಿಮಿಷಗಳು ago

ಮಹಿಳಾ ಮೀಸಲಾತಿಗೆ ಬೆಂಬಲ; ಡಿಲಿಮಿಟೇಷನ್‌ ಗೆ ವಿರೋಧ:ಸಿಎಂ ಸಿದ್ದರಾಮಯ್ಯ ಸಷ್ಟನೆ

Latest12 ನಿಮಿಷಗಳು ago

ಕುಮಾರಸ್ವಾಮಿಗೆ ಬೆಂಗಳೂರಿನ ಬಗ್ಗೆ ಅರಿವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

Latest16 ನಿಮಿಷಗಳು ago

ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಟೀಕಿಸಿದ ಖರ್ಗೆ; ಕ್ಷಮೆ ಯಾಚನೆಗೆ ಯಡಿಯೂರಪ್ಪ ಆಗ್ರಹ

Latest23 ನಿಮಿಷಗಳು ago

ಇಡಿ ದಾಳಿ: ನಳಪಾಡ್‌ ಫಸ್ಟ್‌ ರಿಯಾಕ್ಷನ್‌ ಏನಿತ್ತು? ಅವರು ಕೊಟ್ಟ ಸ್ಪಷ್ಟನೆ ಏನು?

Latest28 ನಿಮಿಷಗಳು ago

ದಲಿತರಿಗೆ ಒಳ ಮೀಸಲಾತಿ: ಏ.24ರಂದು ವಿಶೇಷ ಸಂಪುಟ ಸಭೆ

Latest42 ನಿಮಿಷಗಳು ago

“ಗ್ರೇಟರ್ ಇಸ್ರೇಲ್” ಸಾಕಾರಕ್ಕೆ ನೆತನ್ಯಾಹು ಬಿಗ್‌ ಪ್ಲಾನ್:‌ ಮಧ್ಯ ಪ್ರಾಚ್ಯದಲ್ಲಿ ಶಾಂತಿಗಿಲ್ಲ ನೆಲೆ

Latest55 ನಿಮಿಷಗಳು ago

ಜೆಡಿಎಸ್‌ ಗೆ ಮರಳುತ್ತೀರಾ?; ಸಚಿವ ಜಮೀರ್‌ ಅಹಮದ್‌ ಕೊಟ್ಟ ಉತ್ತರ ಏನು?

Latest1 ಗಂಟೆ ago

ಬೇಸಿಗೆಯಲ್ಲೂ ಸಣ್ಣ ನೀರಾವರಿ ಕೆರೆಗಳಲ್ಲಿ ಸಮೃದ್ದ ನೀರು ಸಂಗ್ರಹ: ಸಚಿವ ಎನ್‌ ಎಸ್‌ ಭೋಸರಾಜು

Latest1 ಗಂಟೆ ago

ಗುಜರಾತ್‌ ನಲ್ಲಿ ಬೃಹತ್‌ ಸೈಬರ್‌ ವಂಚನೆ ಜಾಲ ಪತ್ತೆ: 2,500 ಕೋಟಿ ಹಣ ವಂಚನೆ

Latest2 ಗಂಟೆಗಳು ago

ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧ ಸಿಎಂ ಯೋಗಿ ಆದಿತ್ಯನಾಥ ಆಕ್ರೋಶ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌