Ayodhya Ram Mandir: ಪ್ರಾಣ ಪ್ರತಿಷ್ಠೆಗೆ ಜನವರಿ 22ನ್ನೇ ಆಯ್ಕೆ ಮಾಡಿಕೊಂಡಿದ್ದು ಯಾಕೆ? ಇಲ್ಲಿದೆ ಕಾರಣ - Vistara News

ದೇಶ

Ayodhya Ram Mandir: ಪ್ರಾಣ ಪ್ರತಿಷ್ಠೆಗೆ ಜನವರಿ 22ನ್ನೇ ಆಯ್ಕೆ ಮಾಡಿಕೊಂಡಿದ್ದು ಯಾಕೆ? ಇಲ್ಲಿದೆ ಕಾರಣ

Ayodhya Ram Mandir: ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠೆ ನಡೆಯುವ ಜನವರಿ 22 ಹಲವು ಮಹತ್ವ ಹೊಂದಿದ ದಿನ. ಅದು ಹೇಗೆ ಎನ್ನುವುದರ ವಿವರ ಇಲ್ಲಿದೆ.

VISTARANEWS.COM


on

ram mandir gharbhagudi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಯೋಧ್ಯೆ: ರಾಮಮಂದಿರದಲ್ಲಿ (Ayodhya Ram Mandir) ರಾಮ ಲಲ್ಲಾ (Ram lalla) ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆ (Pran prathishta) ನಡೆಯುವ ಜನವರಿ 22 ಅತ್ಯಂತ ಮಹತ್ವದ ದಿನ ಎನಿಸಿಕೊಂಡಿದೆ. ಸಂಖ್ಯಾ ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಮತ್ತು ಪಂಚಾಂಗದ ಪ್ರಕಾರ ಜ. 22 ದಿನಾಂಕಕ್ಕೆ ಅದರದ್ದೇ ಆದ ವಿಶೇಷತೆ ಇದೆ. ಅದೇನು ಎನ್ನುವುದರ ವಿವರ ಇಲ್ಲಿದೆ.

ಪಂಚಾಂಗ

ಮಿಥಿಲಾ ಪಂಚಾಂಗದ ಪ್ರಕಾರ, ಸೋಮವಾರದ ಅಧಿಪತಿ ಚಂದ್ರ. ಸೂರ್ಯೋದಯ ಮತ್ತು ಪ್ರಾಣ ಪ್ರತಿಷ್ಠೆ ವೇಳೆ ಶುಕ್ಲ ಪಕ್ಷದ ದ್ವಾದಶಿ ತಿಥಿ ನಡೆಯಲಿದೆ. ಅಲ್ಲದೆ ಅದೇ ದಿನ ರಾತ್ರಿ ತ್ರಯೋದಶಿ ತಿಥಿಯ ಛಾಯೆ ಕೂಡ ತನ್ನ ಪ್ರಭಾವ ಬೀರಲಿದೆ. ಅಂದು ಸಂಜೆ 7.50ಕ್ಕೆ ತ್ರಯೋದಶಿ ತಿಥಿ ಆರಂಭವಾಗಲಿದೆ. ಆ ದಿನ ಚಂದ್ರ ಮೃಗಶಿರ ನಕ್ಷತ್ರದಲ್ಲಿ ಇರಲಿದ್ದಾನೆ. ಮೃಗಶಿರ ನಕ್ಷತ್ರವನ್ನು ಅತ್ಯಂತ ಪರಿಶುದ್ಧವೆಂದು ಪರಿಗಣಿಸಲಾಗುತ್ತದೆ. ಮಂಗಳನಿಂದ ಆಳಲ್ಪಡುವ ಮೃಗಶಿರವು ಚಟುವಟಿಕೆ ಮತ್ತು ನಿರಂತರ ಚಲನೆಯಿಂದ ನಿರೂಪಿಸಲ್ಪಟ್ಟಿದೆ. ಹಿಂದೂ ಸಂಪ್ರದಾಯವು ಮೃಗಶಿರವನ್ನು ವಿವಿಧ ಆಚರಣೆಗಳಿಗೆ ಮಂಗಳಕರವೆಂದು ಪರಿಗಣಿಸುತ್ತದೆ. ಪ್ರಾಣ ಪ್ರತಿಷ್ಠೆ ವೇಳೆ ಇಂದ್ರ ಯೋಗ ಮತ್ತು ಬಲವ ಕರಣ ಸಕ್ರಿಯವಾಗಿರುತ್ತದೆ. ಅಲ್ಲದೆ ಆ ದಿನ ಪೂರ್ತಿ ಸರ್ವಾರ್ಥ ಸಿದ್ಧಿ ಯೋಗ, ರವಿ ಯೋಗ ಮತ್ತು ಅಮೃತ ಸಿದ್ಧಿ ಯೋಗ ಇರಲಿದೆ.

ಜ್ಯೋತಿಷ್ಯ ಶಾಸ್ತ್ರ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಜನವರಿ 22ರಂದು ಅನೇಕ ಮಂಗಳಕರ ಯೋಗಗಳು ರೂಪುಗೊಳ್ಳುತ್ತವೆ. ಯಾವುದೇ ಶುಭ ಕಾರ್ಯವನ್ನು ಮಾಡಲು ಈ ದಿನವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಈ ಯೋಗಗಳಲ್ಲಿ ಯಾವುದೇ ಕೆಲಸವನ್ನು ಮಾಡಿದರೂ ಎಲ್ಲ ರೀತಿಯ ಯಶಸ್ಸನ್ನು ದೊರೆಯಲಿದೆ ಎಂದು ಹೇಳಲಾಗಿದೆ.

ಸಂಖ್ಯಾ ಶಾಸ್ತ್ರ

ಸಂಖ್ಯಾ ಶಾಸ್ತ್ರದ ಪ್ರಕಾರವೂ ಗ್ರೆಗೋ​ರಿ​ಯನ್‌ ಕ್ಯಾಲೆಂಡರ್‌ನ ಜನವರಿ 22 ದಿನಾಂಕ ಹಲವು ವಿಶೇಷತೆಗಳಿಂದ ಕೂಡಿದೆ. 2024ರ ಜ. 22 ಅಂದರೆ ಹುಟ್ಟಿದ ದಿನ 4 ಎಂದಾಗುತ್ತದೆ. ಅಲ್ಲದೆ 22 ಎನ್ನುವುದು ಕನಸು ನನಸಾಗುವ ಸಂಖ್ಯೆ ಎಂದು ನಂಬಲಾಗಿದೆ. ಅಂದರೆ ಕೋಟ್ಯಂತರ ಮಂದಿಯ ರಾಮ ಮಂದಿರದ ಕನಸು ಪ್ರಾಣ ಪ್ರತಿಷ್ಠೆ ಮೂಲಕ ನನಸಾಗುವುದನ್ನು ಈ ಸಂಖ್ಯೆ ಪ್ರತಿನಿಧಿಸುತ್ತದೆ. 22 ಸುಖ, ಸಮೃದ್ಧಿ, ಯಶಸ್ಸು ಮತ್ತು ಧಾರ್ಮಿಕತೆಯ ಸಂಕೇತವಾಗಿಯೂ ಪರಿಗಣಿಸಲ್ಪಡುತ್ತದೆ.

ಇದನ್ನೂ ಓದಿ: Ayodhya Ram Mandir: ರಾಮ ಮಂದಿರದಲ್ಲಿ ಮಂಡಲ ಪೂಜೆಗೆ ರಾಯಚೂರಿನ ವೈದಿಕರ ತಂಡ ಆಯ್ಕೆ

ಮಹತ್ವದ ದಿನವಾಗಿ ಬದಲಾಗಲಿದೆ

ರಾಮ ಲಲ್ಲಾ ಪ್ರಾಣ ಪ್ರತಿಷ್ಠೆ ನಡೆಯುವ ಜನವರಿ 22 ಇನ್ನು ಮುಂದೆ ಮಹತ್ವದ ದಿನವಾಗಿ ಜಗತ್ತಿನಾದ್ಯಂತ ಗುರುತಿಸಲ್ಪಡಲಿದೆ. ಯೋಗ ದಿನದಂತೆ ಪ್ರತಿಷ್ಠಾ ದಿನವೂ ಮುಂದಿನ ದಿನಗಳಲ್ಲಿ ಜನಪ್ರಿಯವಾಗಲಿದೆ ಎನ್ನುತ್ತಾರೆ ತಜ್ಞರು. ಹೊಸ ಭಾರತ ಉದಯವಾದ ದಿನವಾಗಿಯೂ ಜ. 22 ಗುರುತಿಸಲ್ಪಡಲಿದೆ. ಅಲ್ಲದೆ ಧಾರ್ಮಿಕ ಪ್ರವಾಸೋದ್ಯಮ, ಯೋಗ, ಧ್ಯಾನ, ಜ್ಯೋತಿಷ್ಯ ಶಾಸ್ತ್ರ ಸೇರಿದಂತೆ ಸಂಬಂಧಿತ ಕ್ಷೇತ್ರಗಳಲ್ಲಿಯೂ ಗಣನೀಯ ವರ್ಧನೆ ದಾಖಲಾಗಲಿದೆ. ಆರ್ಥಿಕ ಕ್ಷೇತ್ರದಲ್ಲಿಯೂ ಚೇತರಿಕೆ ಕಂಡು ಬರಲಿದೆ ಎಂದು ತಜ್ಞರು ಊಹಿಸಿದ್ದಾರೆ. ಒಟ್ಟಿನಲ್ಲಿ ಜ. 22 ಎನ್ನುವುದು ಆಧುನಿಕ ಭಾರತದ ಚಿತ್ರಣವನ್ನೇ ಬದಲಿಸಲಿದೆ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ರಾಹುಲ್‌ ಗಾಂಧಿ, ಕೇಜ್ರಿವಾಲ್‌ಗೆ ಪಾಕ್‌ ಬೆಂಬಲ; ತನಿಖೆಯಾಗಲಿ ಎಂದ ಮೋದಿ

Narendra Modi: ಅರವಿಂದ ಕೇಜ್ರಿವಾಲ್‌ ಹಾಗೂ ರಾಹುಲ್‌ ಗಾಂಧಿ ಅವರಿಗೆ ಪಾಕಿಸ್ತಾನದ ನಾಯಕರು ಬಾಹ್ಯ ಬೆಂಬಲ ನೀಡುತ್ತಿರುವ ಕುರಿತು ತನಿಖೆಯಾಗಬೇಕಿದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಇತ್ತೀಚೆಗೆ, ಪಾಕಿಸ್ತಾನದ ಕೆಲ ನಾಯಕರು ಇಬ್ಬರ ಪರವಾಗಿ ಪೋಸ್ಟ್‌ ಮಾಡಿದ್ದರು. ಹಾಗಾಗಿ, ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದರೂ ರಾಜಕೀಯ ನಾಯಕರ ಅಬ್ಬರದ ಹೇಳಿಕೆ, ಟೀಕೆ, ವ್ಯಂಗ್ಯ, ವಾಗ್ವಾದಗಳು ನಿಲ್ಲುತ್ತಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಹಾಗೂ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ (Arvind Kejriwal) ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದ್ದಾರೆ. “ಅರವಿಂದ ಕೇಜ್ರಿವಾಲ್‌ ಹಾಗೂ ರಾಹುಲ್‌ ಗಾಂಧಿ ಅವರಿಗೆ ಪಾಕಿಸ್ತಾನದ ನಾಯಕರು ಬೆಂಬಲ ನೀಡುತ್ತಿರುವ ಕುರಿತು ತನಿಖೆಯಾಗಬೇಕಿದೆ” ಎಂಬುದಾಗಿ ಪ್ರಧಾನಿ ಹೇಳಿದ್ದಾರೆ.

ಐಎಎನ್‌ಎಸ್‌ ಸುದ್ದಿಸಂಸ್ಥೆಗೆ ಸಂದರ್ಶನ ನೀಡುವ ವೇಳೆ ಮೋದಿ ಅವರು ಈ ವಿಷಯ ಪ್ರಸ್ತಾಪಿಸಿದ್ದಾರೆ. ಪಾಕಿಸ್ತಾನದ ನಾಯಕರ ಬೆಂಬಲದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮೋದಿ, “ನಾನು ಪ್ರಧಾನಿ ಸ್ಥಾನ ಹೊಂದಿದ್ದು, ಅಂತಹ ವಿಷಯಗಳ ಬಗ್ಗೆ ಮಾತನಾಡಬಾರದು. ಆದರೆ, ನಿಮ್ಮ ಕಾಳಜಿ ನನಗೆ ಅರ್ಥವಾಗುತ್ತದೆ. ಕೆಲವರು ನಮ್ಮ ವಿರುದ್ಧ ದ್ವೇಷ ಕಾರುತ್ತಾರೆ. ಆ ದ್ವೇಷ ಕಾರುವವರೇ ನಮ್ಮ ನಾಯಕರಿಗೆ ಬೆಂಬಲ ಸೂಚಿಸುತ್ತಾರೆ. ಆಯ್ಕೆಯ ಆಧಾರದ ಮೇಲೆಯೇ ದ್ವೇಷ ಕಾರುವವರು ಬೆಂಬಲ ನೀಡುತ್ತಾರೆ. ಈ ಕುರಿತು ತನಿಖೆಯಾಗಬೇಕಿದೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದರು.

ಏನಿದು ಪ್ರಕರಣ?

ಮೇ ತಿಂಗಳ ಆರಂಭದಲ್ಲಿ ಪಾಕಿಸ್ತಾನದ ಮಾಜಿ ಸಚಿವ ಚೌಧರಿ ಫವಾದ್‌ ಅವರು ರಾಹುಲ್‌ ಗಾಂಧಿ ಅವರ ಪೋಸ್ಟ್‌ಅನ್ನು ಹಂಚಿಕೊಂಡು, ಅವರ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದರು. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ಸಿಕ್ಕಾಗಲೂ ಚೌಧರಿ ಫವಾದ್‌ ಪ್ರತಿಕ್ರಿಯಿಸಿದ್ದರು. ಆಗ ಅವರು, “ಅರವಿಂದ್‌ ಕೇಜ್ರಿವಾಲ್‌ ಬಿಡುಗಡೆಯಾಗಿದ್ದಾರೆ. ಇದರಿಂದ ಮೋದಿ ಮತ್ತೊಂದು ಯುದ್ಧ ಸೋತಂತಾಗಿದೆ. ಇದು ಭಾರತಕ್ಕೆ ಶುಭ ಸುದ್ದಿ” ಎಂದಿದ್ದರು. ಚುನಾವಣೆ ವೇಳೆಯೂ, “ದ್ವೇಷ ಹಾಗೂ ತೀವ್ರವಾದದ ವಿರುದ್ಧ ಶಾಂತಿ ಹಾಗೂ ಸಾಮರಸ್ಯ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ” ಎಂದು ಚೌಧರಿಯು ಕೇಜ್ರಿವಾಲ್‌ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದರು.

ಮಣಿಶಂಕರ್‌ ಅಯ್ಯರ್‌ಗೆ ಟಾಂಗ್‌ ಕೊಟ್ಟಿದ್ದ ಮೋದಿ

ಕೆಲ ದಿನಗಳ ಹಿಂದೆ ಇಂಡಿಯಾ ಟಿವಿ ಚಾನೆಲ್‌ ಜತೆ ಸಂವಾದ ನಡೆಸುವ ವೇಳೆ, ಮಣಿಶಂಕರ್‌ ಅಯ್ಯರ್‌ ಹೇಳಿಕೆ ಕುರಿತು ಸಂದರ್ಶಕ ಕೇಳಿದ ಪ್ರಶ್ನೆಗೆ ನರೇಂದ್ರ ಮೋದಿ ಅವರು ಮಾರ್ಮಿಕವಾಗಿ ಉತ್ತರ ನೀಡಿದರು. “ನಾನೇ ಲಾಹೋರ್‌ಗೆ ತೆರಳಿ ಆ ಪಾಕಿಸ್ತಾನದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ. ನನ್ನನ್ನು ನೋಡಿ, ಪಾಕಿಸ್ತಾನದ ಒಬ್ಬ ಪತ್ರಕರ್ತ ಆಶ್ಚರ್ಯದಿಂದ ಕೇಳಿದ. ‘ವೀಸಾ ಇಲ್ಲದೆ ನೀವೇಗೆ ಇಲ್ಲಿಗೆ ಬಂದಿದ್ದೀರಿ’ ಎಂದ. ಅದಕ್ಕೆ ನಾನು, ‘ಪಾಕಿಸ್ತಾನ ಒಂದು ಕಾಲಕ್ಕೆ ನಮ್ಮದೇ ದೇಶದ ಭಾಗವಾಗಿತ್ತು’ ಎಂಬುದಾಗಿ ಉತ್ತರಿಸಿದೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದಾರೆ. ಆ ಮೂಲಕ ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ವ್ಯಂಗ್ಯವಾಗಿಯೇ ಉತ್ತರ ಕೊಟ್ಟಿದ್ದರು.

ಇದನ್ನೂ ಓದಿ: Varanasi: ಮೋದಿ ಕುರಿತು ವಾರಾಣಸಿಯಲ್ಲಿರುವ ಕನ್ನಡಿಗರು ಏನಂತಾರೆ? ಇಲ್ಲಿದೆ ‘ವಿಸ್ತಾರ ನ್ಯೂಸ್’ ಗ್ರೌಂಡ್‌ ರಿಪೋರ್ಟ್!

Continue Reading

ದೇಶ

INDIA Bloc: ಜೂನ್‌ 1ರಂದು ‘ಇಂಡಿಯಾ’ ಸಭೆಗೆ ಮಮತಾ ಬ್ಯಾನರ್ಜಿ ಗೈರು; ಆದ್ಯತೆ ಬೇರೆ ಎಂದ ದೀದಿ

INDIA Bloc: ಜೂನ್ 4ರಂದು‌ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಇದಕ್ಕಾಗಿ ಜೂನ್‌ 1ರ ಸಭೆಯು ಮಹತ್ವ ಪಡೆದುಕೊಂಡಿದೆ. ಇನ್ನು, 1ರಂದು ಇಂಡಿಯಾ ಒಕ್ಕೂಟದ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂಬುದಾಗಿ ಮೊದಲೇ ತಿಳಿದಿತ್ತು. ಆದರೆ, ಸಭೆ ನಡೆಯುವ ದಿನವೇ ಬೇರೆ ರಾಜ್ಯಗಳಂತೆ ಪಶ್ಚಿಮ ಬಂಗಾಳದಲ್ಲೂ ಮತದಾನ ನಡೆಯುವ ಕಾರಣ ಬರಲು ಆಗುವುದಿಲ್ಲ ಎಂಬುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

VISTARANEWS.COM


on

INDIA Bloc
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದು ನಿಂತಿದೆ. ಆರು ಹಂತಗಳ ಮತದಾನ ಮುಕ್ತಾಯಗೊಂಡಿದ್ದು, ಜೂನ್‌ 1ರಂದು ಏಳನೇ ಅಥವಾ ಕೊನೆಯ ಹಂತದ ಮತದಾನದ ಮೂಲಕ ಸಾರ್ವತ್ರಿಕ ಚುನಾವಣೆ ಮುಗಿಯಲಿದೆ. ಇನ್ನು, ಕೊನೆಯ ಹಂತದ ಮತದಾನದ ದಿನವಾದ ಜೂನ್‌ 1ರಂದೇ ಇಂಡಿಯಾ ಒಕ್ಕೂಟದ (INDIA Bloc) ಪಕ್ಷಗಳ ಸಭೆ ನಡೆಯಲಿದೆ. ಆದರೆ, ಇಂಡಿಯಾ ಒಕ್ಕೂಟದ ಮಹತ್ವದ ಸಭೆಗೆ ಗೈರಾಗಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ತಿಳಿಸಿದ್ದಾರೆ. ಇದು ಈಗ ಭಾರಿ ಚರ್ಚೆಗೆ ಕಾರಣವಾಗಿದೆ.

ಇಂಡಿಯಾ ಒಕ್ಕೂಟದ ಪಕ್ಷಗಳ ಸಭೆಗೆ ಗೈರಾಗುವ ಕುರಿತು ಕೋಲ್ಕೊತಾದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಮತಾ ಬ್ಯಾನರ್ಜಿ ಅವರೇ ಹೇಳಿದ್ದಾರೆ. “ಜೂನ್‌ 1ರಂದು ಇಂಡಿಯಾ ಒಕ್ಕೂಟದ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂಬುದಾಗಿ ಮೊದಲೇ ತಿಳಿದಿತ್ತು. ಆದರೆ, ಜೂನ್‌ 1ರಂದು ಬೇರೆ ರಾಜ್ಯಗಳಂತೆ ಪಶ್ಚಿಮ ಬಂಗಾಳದಲ್ಲೂ ಮತದಾನ ನಡೆಯುವ ಕಾರಣ ಬರಲು ಆಗುವುದಿಲ್ಲ ಎಂಬುದಾಗಿ ತಿಳಿಸಿದ್ದೇನೆ. ಈಗ ರೆಮಾಲ್‌ ಚಂಡಮಾರುತವು ಕೂಡ ರಾಜ್ಯವನ್ನು ಬಾಧಿಸುತ್ತಿದೆ. ಇಂಡಿಯಾ ಒಕ್ಕೂಟದ ಸಭೆಯಲ್ಲಿ ಪಾಲ್ಗೊಳ್ಳುವ ಬದಲು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ. ರಾಜ್ಯದ ಜನರೇ ನನ್ನ ಮೊದಲ ಆದ್ಯತೆ” ಎಂಬುದಾಗಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇಂಡಿಯಾ ಒಕ್ಕೂಟದ ಸಭೆ ಏಕೆ?

ಜೂನ್‌ 1ರಂದು ಲೋಕಸಭೆ ಚುನಾವಣೆ ಸಮಾರೋಪಗೊಳ್ಳಲಿದೆ. ಕಾಂಗ್ರೆಸ್‌, ಸಿಪಿಎಂ ಸೇರಿ ಹಲವು ಪಕ್ಷಗಳು ಒಗ್ಗೂಡಿ ಇಂಡಿಯಾ ಒಕ್ಕೂಟವನ್ನು ರಚಿಸಲಾಗಿದೆ. ಜೂನ್‌ 4ರಂದು ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಇದಕ್ಕಾಗಿ ಜೂನ್‌ 1ರ ಸಭೆಯು ಮಹತ್ವ ಪಡೆದುಕೊಂಡಿದೆ. ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟವು ಹೆಚ್ಚು ಸ್ಥಾನಗಳನ್ನು ಗೆದ್ದರೆ ಮುಂದೆ ಹೇಗೆ ತೀರ್ಮಾನ ತೆಗೆದುಕೊಳ್ಳಬೇಕು? ಎಲ್ಲ ಪ್ರತಿಪಕ್ಷಗಳು ಒಗ್ಗಟ್ಟಿನಿಂದ ಹೇಗೆ ಇರಬೇಕು? ಹಿನ್ನಡೆಯಾದರೆ ಏನು ಮಾಡಬೇಕು ಎಂಬುದು ಸೇರಿ ಹಲವು ವಿಷಯಗಳ ಕುರಿತು ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳ ನಾಯಕರು ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಫಲೋಡಿ ಸಟ್ಟಾ ಬಜಾರ್‌ ಸಮೀಕ್ಷೆ ಪ್ರಕಟಿಸಿದೆ. ಬಿಜೆಪಿಯೊಂದೇ 304-306 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು ಎನ್‌ಡಿಎ ಮೈತ್ರಿಕೂಟವು ಸುಲಭವಾಗಿ 325-330 ಕ್ಷೇತ್ರಗಳಲ್ಲಿ ಜಯಿಸಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಪಕ್ಷವು 60-62 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂಬುದಾಗಿ ಸಮೀಕ್ಷಾ ವರದಿ ತಿಳಿಸಿದೆ. ಹಾಗಾಗಿ, ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವೇ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂಬುದು ವರದಿಯ ಸಾರಾಂಶವಾಗಿದೆ.

ಇದನ್ನೂ ಓದಿ: PM Narendra Modi: ಪ್ರಧಾನಿ ಮೋದಿ ಉಳಿದುಕೊಂಡಿದ್ದ ಹೋಟೆಲ್ ಬಿಲ್ ಪಾವತಿಸಲು ರಾಜ್ಯ ಸರ್ಕಾರ ನಿರ್ಧಾರ; ಎಷ್ಟು ಖರ್ಚಾಗಿತ್ತು?

Continue Reading

ದೇಶ

Bomb Threat: ಮುಂಬೈ ತಾಜ್‌ ಹೋಟೆಲ್‌, ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ; 26/11 ರೀತಿ ದಾಳಿಗೆ ಸಂಚು?

Bomb Threat: ಕೆಲ ದಿನಗಳ ಹಿಂದಷ್ಟೇ, ದೇಶದ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸಲಾಗುವುದು ಎಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿಗೆ ಬೆದರಿಕೆಯ ಮೇಲ್‌ ಬಂದಿತ್ತು. ಬೆಂಗಳೂರು, ದೆಹಲಿ, ಅಹಮದಾಬಾದ್‌, ಚೆನ್ನೈ ಸೇರಿ ಹಲವು ನಗರಗಳ ಶಾಲೆಗಳನ್ನೂ ಸ್ಫೋಟಿಸುವ ಬೆದರಿಕೆ ಕರೆಗಳು ಬಂದಿದ್ದವು. ಈಗ ತಾಜ್‌ ಹೋಟೆಲ್‌ ಹಾಗೂ ವಿಮಾನ ನಿಲ್ದಾಣಕ್ಕೂ ಬೆದರಿಕೆ ಒಡ್ಡಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

VISTARANEWS.COM


on

Bomb Threat
Koo

ಮುಂಬೈ: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿರುವ ಶಾಲೆಗಳು, ವಿಮಾನ ನಿಲ್ದಾಣಗಳನ್ನು ಬಾಂಬಿಟ್ಟು ಸ್ಫೋಟಿಸುವ ಕುರಿತು ಕೆಲ ತಿಂಗಳಿಂದ ಬೆದರಿಕೆ ಕರೆಗಳು (Bomb Threat) ಬರುತ್ತಲೇ ಇವೆ. ಇದರ ಬೆನ್ನಲ್ಲೇ, ಮುಂಬೈನಲ್ಲಿರುವ ತಾಜ್‌ ಹೋಟೆಲ್‌ (Taj Hotel) ಹಾಗೂ ಛತ್ರಪತಿ ಶಿವಾಜಿ ಮಹಾರಾಜ ಇಂಟರ್‌ನ್ಯಾಷನಲ್‌ ವಿಮಾನ ನಿಲ್ದಾಣವನ್ನು (Chhatrapati Shivaji Maharaj International Airport) ಸ್ಫೋಟಿಸುವ ಕುರಿತು ಮುಂಬೈ ಪೊಲೀಸರಿಗೆ ಬೆದರಿಕೆ ಕರೆ ಬಂದಿದೆ. ಹಾಗಾಗಿ, ಮುಂಬೈ ತಾಜ್‌ ಹೋಟೆಲ್‌ ಹಾಗೂ ವಿಮಾನ ನಿಲ್ದಾಣದ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.

“ಮುಂಬೈ ಪೊಲೀಸ್‌ ಕಂಟ್ರೋಲ್‌ ರೂಮ್‌ಗೆ ಅನಾಮಧೇಯ ವ್ಯಕ್ತಿಯಿಂದ ಕರೆ ಬಂದಿದೆ. ತಾಜ್‌ ಹೋಟೆಲ್‌ ಹಾಗೂ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇರಿಸಲಾಗಿದೆ. ಯಾವುದೇ ಕ್ಷಣದಲ್ಲಿ ಬೇಕಾದರೂ ಬ್ಲಾಸ್ಟ್‌ ಆಗಬಹುದು” ಎಂದಷ್ಟೇ ಹೇಳಿ ಕರೆ ಕಟ್ ಮಾಡಿದ್ದಾನೆ. ಇದಾದ ಬಳಿಕ ಪೊಲೀಸರು ಅಲರ್ಟ್‌ ಆಗಿದ್ದಾರೆ” ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ತಾಜ್‌ ಹೋಟೆಲ್‌ ಮೇಲೆ 26/11ರ ಮಾದರಿಯಲ್ಲಿ ದಾಳಿ ನಡೆಯುವ ಭೀತಿಯಿಂದ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು ಎನ್ನಲಾಗಿದೆ.

Police

ಬಾಂಬ್‌ ಬೆದರಿಕೆ ಕರೆ ಬರುತ್ತಲೇ ಪೊಲೀಸರು ಹಾಗೂ ಬಾಂಬ್‌ ನಿಷ್ಕ್ರಿಯ ದಳದ ಸಿಬ್ಬಂದಿಯು ಹೋಟೆಲ್‌ ಹಾಗೂ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಎರಡೂ ಕಡೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಉತ್ತರ ಪ್ರದೇಶದಿಂದ ಕರೆ ಬಂದಿದೆ ಎಂಬುದು ತಿಳಿದುಬಂದಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ, ದೇಶದ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸಲಾಗುವುದು ಎಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿಗೆ ಬೆದರಿಕೆಯ ಮೇಲ್‌ ಬಂದಿತ್ತು. ಬೆಂಗಳೂರು, ದೆಹಲಿ, ಅಹಮದಾಬಾದ್‌, ಚೆನ್ನೈ ಸೇರಿ ಹಲವು ನಗರಗಳ ಶಾಲೆಗಳನ್ನೂ ಸ್ಫೋಟಿಸುವ ಬೆದರಿಕೆ ಕರೆಗಳು ಬಂದಿದ್ದವು. ಬಳಿಕ ನಕಲಿ ಬಾಂಬ್‌ ಬೆದರಿಕೆ ಎಂಬುದಾಗಿ ತಿಳಿದುಬಂದಿತ್ತು.

ಮುಂಬೈ ದಾಳಿ ಕರಾಳ ಅಧ್ಯಾಯ

ಮುಂಬೈನಲ್ಲಿರುವ ತಾಜ್​ ಹೋಟೆಲ್​ಗಳ ಮೇಲೆ 2008ರಲ್ಲಿ ನಡೆದ ಉಗ್ರ ದಾಳಿ ಇಂದಿಗೂ ನಮ್ಮ ಇತಿಹಾಸದಲ್ಲಿ ಕಪ್ಪುಚುಕ್ಕೆಯಾಗಿ ಉಳಿದಿದೆ. ಅದನ್ನೊಂದು ಕರಾಳ ದಿನವೆಂದೇ ಪರಿಗಣಿಸಲಾಗುತ್ತದೆ. ಅಂದು ಲಷ್ಕರೆ ತಯ್ಬಾ ಸಂಘಟನೆಯ 10 ಉಗ್ರರು ಸಮುದ್ರ ಮಾರ್ಗದ ಮೂಲಕ ಮುಂಬಯಿಗೆ ಬಂದು ಗುಂಡಿನ ದಾಳಿ ನಡೆಸಿದ್ದರು. ನವೆಂಬರ್ 26ರಿಂದ 29ರವರೆಗೆ ಭದ್ರತಾ ಪಡೆಗಳು-ಉಗ್ರರ ನಡುವಿನ ಹೋರಾಟ ನಡೆದಿತ್ತು. ಇದರಲ್ಲಿ ಆರು ಮಂದಿ ಅಮೇರಿಕದವರು ಸೇರಿ 166 ಮಂದಿ ಮೃತಪಟ್ಟಿದ್ದರು. ಹಲವು ಯೋಧರು ಕೂಡ ಹುತಾತ್ಮರಾಗಿದ್ದರು.

ಇದನ್ನೂ ಓದಿ: Bomb Threat : ಶಾಲೆಗೆ ಬಾಂಬ್​ ಬೆದರಿಕೆ ಮೇಲ್ ಕಳುಹಿಸಿದ ವಿದ್ಯಾರ್ಥಿಗಳು!

Continue Reading

ವಾಣಿಜ್ಯ

New Financial Rules: ಜೂನ್ 1ರಿಂದ ಏನೆಲ್ಲಾ ಬದಲಾವಣೆಗಳಾಗಲಿವೆ ಗೊತ್ತಿದೆಯೆ?

ಹಣಕಾಸು ನಿಯಮ, ಎಲ್ ಪಿಜಿ ದರ, ಸಂಚಾರ ನಿಯಮ, ಆಧಾರ್ ಕಾರ್ಡ್ ನವೀಕರಣ ಸೇರಿದಂತೆ ಜೂನ್ 1ರಿಂದ ಹಲವು ಪ್ರಮುಖ ಆರ್ಥಿಕ ನಿಯಮಗಳಲ್ಲಿ ಬದಲಾವಣೆಗಳು (New Financial Rules) ಆಗಲಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

New Financial Rules
Koo

ಮೇ ತಿಂಗಳಾಂತ್ಯದಲ್ಲಿ ಈಗ ನಾವಿದ್ದೇವೆ. ಹೀಗಾಗಿ ಮುಂದಿನ ತಿಂಗಳ ಆರಂಭದಿಂದಲೇ ವಿವಿಧ ಹಣಕಾಸು ನಿಯಮಗಳು (New Financial Rules) ಬದಲಾಗಲಿದೆ. ಜೂನ್ 1ರಿಂದ (june) ಯಾವೆಲ್ಲ ಹೊಸ ನಿಯಮಗಳು ಬರಲಿದೆ, ಹಣಕಾಸು ಕಾನೂನಿನಲ್ಲಿ ಏನೆಲ್ಲಾ ಬದಲಾವಣೆಗಳು ಆಗಲಿದೆ ಎಂಬ ಕುರಿತು ಮಾಹಿತಿ ಇಲ್ಲಿದೆ.

2024ರ ಜೂನ್ 1ರಿಂದ ಐದು ಪ್ರಮುಖ ಆರ್ಥಿಕ ಬೆಳವಣಿಗೆಗಳು ಸಂಭವಿಸುತ್ತಿವೆ. ಇದರಲ್ಲಿ ಮುಖ್ಯವಾಗಿ ಹೊಸ ಹಣಕಾಸು ನಿಯಮಗಳು ಜಾರಿಗೆ ಬರಲಿದೆ. ಅವುಗಳಲ್ಲಿ ಹಣಕಾಸು ನಿಯಮ (Financial Changes), ಎಲ್ ಪಿಜಿ ದರ (LPG Cylinder Prices), ಸಂಚಾರ ನಿಯಮ (New Traffic Rules), ಆಧಾರ್ ಕಾರ್ಡ್ (Aadhaar card update) ನವೀಕರಣ ಸೇರಿವೆ.

ಎಲ್ ಪಿ ಜಿ ಸಿಲಿಂಡರ್ ಬೆಲೆಗಳು

ತೈಲ ಮಾರುಕಟ್ಟೆ ಕಂಪೆನಿಗಳು ಪ್ರತಿ ತಿಂಗಳ ಮೊದಲನೇ ದಿನ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ನಿಗದಿ ಪಡಿಸುತ್ತದೆ ಎಂಬುದನ್ನು ಗಮನಿಸುವುದು ಅತ್ಯಗತ್ಯ. ಮೇ ತಿಂಗಳಲ್ಲಿ ಸಂಸ್ಥೆಗಳು ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಿದವು. ಆದರೂ ತೈಲ ಸಂಸ್ಥೆಗಳು ಜೂನ್ 1 ರಂದು ಮತ್ತೆ ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸಲಿವೆ.

ತೈಲ ಮಾರುಕಟ್ಟೆ ಕಂಪೆನಿಗಳು ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ನಿರ್ಧರಿಸುತ್ತವೆ. 14 ಕೆ.ಜಿ. ದೇಶೀಯ ಮತ್ತು 19 ಕೆ.ಜಿ. ವಾಣಿಜ್ಯ ಸಿಲಿಂಡರ್‌ಗಳ ಬೆಲೆ, ಸಿಎನ್‌ಜಿ ಮತ್ತು ಪಿಎನ್‌ಜಿ ಬೆಲೆಗಳಲ್ಲಿ ಜೂನ್ ಮೊದಲನೇ ತಾರೀಖಿನಂದು ಬದಲಾವಣೆ ಆಗುತ್ತವೆ.

ಬ್ಯಾಂಕುಗಳಿಗೆ ರಜೆ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಬಿಡುಗಡೆ ಮಾಡಿದ ಬ್ಯಾಂಕ್ ಹಾಲಿಡೇ ಪಟ್ಟಿಯ ಪ್ರಕಾರ ಜೂನ್‌ನಲ್ಲಿ 10 ದಿನಗಳವರೆಗೆ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ಇದು ಭಾನುವಾರ, ಎರಡನೇ ಮತ್ತು ನಾಲ್ಕನೇ ಶನಿವಾರದ ರಜಾದಿನಗಳನ್ನು ಒಳಗೊಂಡಿದೆ. ಆದರೆ ಈ ರಜೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತವೆ.


ಡ್ರೈವಿಂಗ್ ಲೈಸೆನ್ಸ್ ನಿಯಮ

ಹೊಸ ಡ್ರೈವಿಂಗ್ ಲೈಸೆನ್ಸ್ ನಿಯಮಗಳು ಜೂನ್ ತಿಂಗಳಿನಿಂದ ಅನ್ವಯವಾಗಲಿದೆ. ಹೊಸ ನಿಯಮದ ಪ್ರಕಾರ ಅತೀ ವೇಗದಲ್ಲಿ ವಾಹನ ಚಲಾಯಿಸಿದರೆ 1000ರಿಂದ 2000 ರೂ.ವರೆಗೆ ದಂಡ ತೆರಬೇಕಾಗಬಹುದು. ಅದೇ ಸಮಯದಲ್ಲಿ, ಪರವಾನಗಿ ಇಲ್ಲದೆ ವಾಹನ ಚಲಾಯಿಸಿದರೆ 500 ರೂ ದಂಡವನ್ನು ಪಾವತಿಸಬೇಕಾಗುತ್ತದೆ.
ಇದಲ್ಲದೇ ಚಾಲಕ ಹೆಲ್ಮೆಟ್, ಸೀಟ್ ಬೆಲ್ಟ್ ಧರಿಸದೇ ವಾಹನ ಚಲಾಯಿಸಿದರೆ ದಂಡದ ಮೊತ್ತ ಈಗ ಇರುವುದಕ್ಕಿಂತ ಹೆಚ್ಚಾಗುತ್ತದೆ.

ಭಾರತದಲ್ಲಿ ಡ್ರೈವಿಂಗ್ ಲೈಸೆನ್ಸ್ ಪಡೆಯಲು 18 ವರ್ಷ ಪೂರ್ಣಗೊಂಡಿರಬೇಕು ಎಂಬುದು ಹಳೆಯ ನಿಯಮ. ಹೊಸ ನಿಯಮಗಳ ಅಡಿಯಲ್ಲಿ ಅಪ್ರಾಪ್ತರು ವಾಹನ ಚಲಾಯಿಸಿದರೆ 25,000 ರೂ.ವರೆಗೆ ದಂಡ ವಿಧಿಸಲಾಗುತ್ತದೆ.

ಜೂನ್ 1ರಿಂದ ಆರ್ ಟಿಒ ಗಳಿಗಿಂತ ಖಾಸಗಿ ಡ್ರೈವಿಂಗ್ ತರಬೇತಿ ಕೇಂದ್ರಗಳಲ್ಲಿ ಡ್ರೈವಿಂಗ್ ಪರೀಕ್ಷೆಯನ್ನು ನಡೆಸಬಹುದು. ಅಲ್ಲದೇ ಅಪ್ರಾಪ್ತ ವಯಸ್ಕರು ಚಾಲನೆ ಮಾಡುವಾಗ ಅಪಘಾತ ಉಂಟು ಮಾಡಿದರೆ ಅವರು 25 ವರ್ಷ ವಯಸ್ಸಿನವರೆಗೆ ಚಾಲನಾ ಪರವಾನಗಿಯನ್ನು ಪಡೆಯಲು ಅರ್ಹರಾಗಿರುವುದಿಲ್ಲ. ಹೆಚ್ಚುವರಿಯಾಗಿ, ಅವರ ವಿರುದ್ಧ ಕಾನೂನು ಕ್ರಮವನ್ನು ತೆಗೆದುಕೊಳ್ಳಬಹುದು. ಅವರ ಪೋಷಕರನ್ನು ಜೈಲಿಗೆ ಕಳುಹಿಸಲಾಗುತ್ತದೆ.

ಇದನ್ನೂ ಓದಿ: Money Guide: 1 ಕೋಟಿ ರೂ. ದುಡಿಯಬೇಕೆ? ಈ ಅಪಾಯ ರಹಿತ ಯೋಜನೆಯಲ್ಲಿ ಹೂಡಿಕೆ ಮಾಡಿ


ಆಧಾರ್ ಕಾರ್ಡ್ ನಿಯಮ

ಜೂನ್ 14 ರ ಮೊದಲು ಆಧಾರ್ ಕಾರ್ಡ್ ಅನ್ನು ನವೀಕರಿಸದಿದ್ದರೆ ಮುಂದೆ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಸರಳವಾಗಿ ಹೇಳುವುದಾದರೆ ಜೂನ್ 14 ರ ಅನಂತರ ಆಧಾರ್ ಕಾರ್ಡ್ ನವೀಕರಿಸಲು ಶುಲ್ಕ ವಿಧಿಸಲಾಗುತ್ತದೆ.

ಯುಐಡಿಎಐ ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸುವ ದಿನಾಂಕವನ್ನು ಜೂನ್ 14 ರವರೆಗೆ ವಿಸ್ತರಿಸಿದೆ. ಇಂತಹ ಪರಿಸ್ಥಿತಿಯಲ್ಲಿ, ಆಧಾರ್ ಹೊಂದಿರುವವರು ಆನ್‌ಲೈನ್‌ನಲ್ಲಿ ಆಧಾರ್ ಕಾರ್ಡ್ ಅನ್ನು ಸುಲಭವಾಗಿ ನವೀಕರಿಸಬಹುದು. ಆದರೂ ಆಫ್‌ಲೈನ್ ಅಪ್‌ಡೇಟ್‌ಗಾಗಿ ಜೂನ್ 14 ರ ಬಳಿಕ ಆಧಾರ್ ಕೇಂದ್ರಕ್ಕೆ ಹೋಗುವಾಗ ಪ್ರತಿ ಅಪ್‌ಡೇಟ್‌ಗೆ 50 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

Continue Reading
Advertisement
Prajwal Revanna Case
ಕರ್ನಾಟಕ24 mins ago

Prajwal Revanna Case: ಪ್ರಜ್ವಲ್‌ ಬಂದ್ರೆ ಎಸ್‌ಐಟಿ ಮುಂದೆ ನಾನೂ ಹಾಜರಾಗುವೆ: ಆರೋಪಿ ನವೀನ್‌ ಗೌಡ

Narendra Modi
ದೇಶ48 mins ago

Narendra Modi: ರಾಹುಲ್‌ ಗಾಂಧಿ, ಕೇಜ್ರಿವಾಲ್‌ಗೆ ಪಾಕ್‌ ಬೆಂಬಲ; ತನಿಖೆಯಾಗಲಿ ಎಂದ ಮೋದಿ

INDIA Bloc
ದೇಶ1 hour ago

INDIA Bloc: ಜೂನ್‌ 1ರಂದು ‘ಇಂಡಿಯಾ’ ಸಭೆಗೆ ಮಮತಾ ಬ್ಯಾನರ್ಜಿ ಗೈರು; ಆದ್ಯತೆ ಬೇರೆ ಎಂದ ದೀದಿ

Bomb Threat
ದೇಶ1 hour ago

Bomb Threat: ಮುಂಬೈ ತಾಜ್‌ ಹೋಟೆಲ್‌, ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ; 26/11 ರೀತಿ ದಾಳಿಗೆ ಸಂಚು?

Suspicious Death
ಕರ್ನಾಟಕ1 hour ago

Suspicious Death: ಕಾಂಗ್ರೆಸ್ ಮುಖಂಡನ ಸಾವಿಗೆ ಕೊನೆಗೂ ಸಿಕ್ತು ಟ್ವಿಸ್ಟ್; ನಿಗೂಢ ಸಾವನ್ನು ಭೇದಿಸಿದ ಖಾಕಿ

MLC North East Graduate Constituency Non Party Candidate Nara Pratap Reddy election campaign in Vijayanagara District
ರಾಜಕೀಯ2 hours ago

MLC Election: ಕ್ಷೇತ್ರದೆಲ್ಲೆಡೆ ಪದವೀಧರ ಮತದಾರರಿಂದ ಉತ್ತಮ ಸ್ಪಂದನೆ: ನಾರಾ ಪ್ರತಾಪ್‌ ರೆಡ್ಡಿ

Python spotted in Chikkasandra village of Shira taluk
ಕರ್ನಾಟಕ2 hours ago

Snake Rescue: ಶಿರಾದಲ್ಲಿ ಹೆಬ್ಬಾವು ರಕ್ಷಿಸಿದ ಮಾಜಿ ಸೈನಿಕ

Fortis Hospital doctors team performed complex surgery for three different diseases simultaneously
ಕರ್ನಾಟಕ2 hours ago

Fortis Hospital: ವಿಶ್ವದಲ್ಲೇ ಮೊದಲ ಬಾರಿಗೆ 3 ವಿಭಿನ್ನ ಕಾಯಿಲೆಗೆ ಏಕಕಾಲದಲ್ಲೇ ಯಶಸ್ವಿ ಶಸ್ತ್ರಚಿಕಿತ್ಸೆ

New Financial Rules
ವಾಣಿಜ್ಯ2 hours ago

New Financial Rules: ಜೂನ್ 1ರಿಂದ ಏನೆಲ್ಲಾ ಬದಲಾವಣೆಗಳಾಗಲಿವೆ ಗೊತ್ತಿದೆಯೆ?

Balkar Singh
ದೇಶ2 hours ago

Balkar Singh: ಕೆಲಸ ಕೇಳಿಕೊಂಡು ಬಂದ ಯುವತಿ ಎದುರು ಹಸ್ತಮೈಥುನ ಮಾಡಿಕೊಂಡ ಆಪ್‌ ಸಚಿವ; ವಿಡಿಯೊ ವೈರಲ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ5 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌