Site icon Vistara News

Ram Mandir: ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಯ 7 ದಿನ ಯಾವೆಲ್ಲ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ?

Why is Ram Mandir Prana Pratshapan on January 22 And check details

ಅಯೋಧ್ಯೆ: ಮರ್ಯಾದಾ ಪುರುಷೋತ್ತಮ ಶ್ರೀರಾಮ ದೇಗುಲ (Ayodhya Ram Mandir) ಉದ್ಘಾಟನೆಯ ಕಾರ್ಯಕ್ರಮದ ಸಿದ್ಧತೆಗಳು ಶರವೇಗದಲ್ಲಿ ನಡೆಯುತ್ತಿವೆ. ಜನವರಿ 16ರಿಂದ ಆರಂಭವಾಗಲಿರುವ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವು (Consecration Ceremony) ಏಳು ದಿನಗಳ ಕಾಲ ನಡೆಯಲಿದ್ದು, ಧಾರ್ಮಿಕ ವಿಧಿ ವಿಧಾನಗಳು ದೊಡ್ಡ ಮಟ್ಟದಲ್ಲಿ ನೆರವೇರಲಿವೆ. ಜನವರಿ 22ರಂದು, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಸಮ್ಮುಖದಲ್ಲಿ ಶ್ರೀ ರಾಮ ಲಲ್ಲಾ (Shri Ram Lalla) ದೇವರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಒಟ್ಟು ಒಂದು ವಾರಗಳ ಕಾಲ ಕಾರ್ಯಕ್ರಮ ನಡೆಯಲಿದೆ.

ಜನವರಿ 16
ದೇವಸ್ಥಾನದ ಟ್ರಸ್ಟ್ ನೇಮಿಸಿದ ಆತಿಥೇಯರಿಂದ ಸರಯೂ ನದಿಯ ದಡದಲ್ಲಿ ದಶವಿದ್ ಸ್ನಾನ, ವಿಷ್ಣು ಪೂಜೆ ಮತ್ತು ಗೋದಾನ.

ಜನವರಿ 17
ರಾಮಲಲ್ಲಾ ಮೂರ್ತಿಯೊಂದಿಗೆ ಅಯೋಧ್ಯೆಯಲ್ಲಿ ಮೆರವಣಿಗೆ ನಡೆಯಲಿದ್ದು, ಭಕ್ತರು ಮಂಗಲ ಕಲಶದಲ್ಲಿ ಸರಯು ಜಲವನ್ನು ಹೊತ್ತು ದೇವಸ್ಥಾನಕ್ಕೆ ಬರಲಿದ್ದಾರೆ.

ಜನವರಿ 18
ಗಣೇಶ ಅಂಬಿಕಾ ಪೂಜೆಗಳೊಂದಿಗೆ ಔಪಚಾರಿಕ ಪೂಜಾ ವಿಧಿ ವಿಧಾನಗಳು ಶುರುವಾಗಲಿವೆ. ವರುಣ ಪೂಜೆ, ಮತ್ರಿಕಾ ಪೂಜೆ, ಬ್ರಾಹ್ಮಿಣ್ ವರನ್, ವಾಸ್ತು ಪೂಜೆ ಸೇರಿದಂತೆ ವಿವಿಧ ಪೂಜೆ ಕಾರ್ಯಕ್ರಮಗಳು ನಡೆಯಲಿವೆ.

ಜನವರಿ 19
ಅಗ್ನಿ ಸ್ಥಾಪನೆ, ನವಗ್ರಹ ಸ್ಥಾಪನೆ ಮತ್ತು ಹವನ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.

ಜನವರಿ 20
ದೇವಾಲಯದ ಗರ್ಭಗುಡಿಯನ್ನು ಸರಯುವಿನ ಪವಿತ್ರ ನೀರಿನಿಂದ ತೊಳೆದ ನಂತರ ವಾಸ್ತು ಶಾಂತಿ ಪೂಜಾ ವಿಧಿವಿಧಾನಗಳು ನಡೆಯಲಿವೆ.

ಜನವರಿ 21
125 ಕಲಶಗಳಿರುವ ದೈವ ಸ್ನಾನದ ನಂತರ ಶಯಾಧಿವಾಸ ನಡೆಯಲಿದೆ.

ಜನವರಿ 22
ಬೆಳಗಿನ ಪೂಜೆಯ ನಂತರ ಮಧ್ಯಾಹ್ನ ಮೃಗಶಿರ ನಕ್ಷತ್ರದಲ್ಲಿ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ನಡೆಯಲಿದೆ.

ಪ್ರಾಣ ಪ್ರತಿಷ್ಠಾಪನೆಯ ಮುಹೂರ್ತ ಯಾವಾಗ?

ಜನವರಿ 22ರಂದು ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ರಾಮ ಮಂದಿರದ ಗರ್ಭಗುಡಿಯಲ್ಲಿ ಶ್ರೀ ರಾಮಲಲ್ಲಾ ಪ್ರತಿಷ್ಠಾಪನೆಯು ಸರಿಯಾಗಿ ಮಧ್ಯಾಹ್ನ 12:29:8 ಶುರುವಾಗಿ, 12:30:32ಕ್ಕೆ ಅಂದರೆ 1 ನಿಮಿಷ 24 ಸೆಕೆಂಡ್‌ಗಳಲ್ಲಿ ಪೂರ್ಣಗೊಳ್ಳಲಿದೆ. ಬಳಿಕ ಆರತಿ ನಡೆಯುತ್ತದೆ. ದೇಗುಲದಲ್ಲಿ ಪ್ರಸಾದ ಹಂಚಿಕೆ ನಡೆಯುತ್ತದೆ. ಸಂಜೆಯ ವೇಳೆಗೆ ಅಯೋಧ್ಯೆಯಲ್ಲಿ ದೀಪಗಳನ್ನು ಬೆಳಗಲಾಗುತ್ತದೆ.

Ram Mandir: ಜನವರಿಯಲ್ಲಿ ಅಯೋಧ್ಯೆಗೆ ನಿತ್ಯ 3ರಿಂದ 5 ಲಕ್ಷ ಜನರ ಭೇಟಿ ನಿರೀಕ್ಷೆ!

ಜನವರಿ 22ರಂದು ರಾಮ ಮಂದಿರ (Ram Mandir) ಉದ್ಘಾಟನೆಯಾಗಲಿದ್ದು, ಅಯೋಧ್ಯೆಯಲ್ಲಿ (Ayodhya) ಈಗ ಪ್ರವಾಸೋದ್ಯಮ (Tourism) ಚಟುವಟಿಕೆಗಳ ಗರಿಗೆದರಿವೆ. ಶನಿವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಹೊಸದಾಗಿ ಅಭಿವೃದ್ಧಿ ಮಾಡಲಾಗಿರುವ ವಿಮಾನ ನಿಲ್ದಾಣ (Ayodhya Airport) ಮತ್ತು ರೈಲು ನಿಲ್ದಾಣಗಳನ್ನು (Ayodhya Rail Station) ಉದ್ಘಾಟಿಸಿದರು. ಇದರೊಂದಿಗೆ ಅಯೋಧ್ಯೆಗೆ ಸಂಪರ್ಕಿಸುವ ಮಾರ್ಗಗಳು ಸುಲಭಗೊಂಡಿವೆ. ಹಾಗಾಗಿ, ಅಯೋಧ್ಯೆಯಲ್ಲಿ ಈಗ ಪ್ರವಾಸೋದ್ಯಮ ಚಟುವಟಿಕೆಗಳು ಹೆಚ್ಚಾಗಿದ್ದು, ಜನವರಿಯಲ್ಲಿ ಪ್ರತಿ ದಿನ ಅಯೋಧ್ಯೆಗೆ ಸುಮಾರು 3ರಿಂದ 5 ಲಕ್ಷ ಜನರು ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದೆ.

ಜನವರಿ 22ರಂದು ರಾಮಮಂದಿರ ಉದ್ಘಾಟನೆಯ ನಂತರ ಅಯೋಧ್ಯೆ ಪ್ರವಾಸಿಗರಿಂದ ತುಂಬು ತುಳಕುವ ನಿರೀಕ್ಷೆ ಇದೆ. ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ಉದ್ಘಾಟನೆಗೆ 7,000 ಜನರು ಮತ್ತು ದೇವಾಲಯವನ್ನು ತೆರೆದ ನಂತರ ಕನಿಷ್ಠ ಒಂದು ತಿಂಗಳವರೆಗೆ ಪ್ರತಿದಿನ 3-5 ಲಕ್ಷ ಸಂದರ್ಶಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, “2024ರಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣ ಮತ್ತು ಅಭಿವೃದ್ಧಿ ಕಾರ್ಯಗಳು ಪೂರ್ಣಗೊಂಡಾಗ, ನಗರಕ್ಕೆ ಪ್ರವಾಸೋದ್ಯಮವು 10 ಪಟ್ಟು ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶ ಪ್ರವಾಸೋದ್ಯಮ ಇಲಾಖೆಯು 2022ರಲ್ಲಿ 8,342.7% ವಾರ್ಷಿಕ ಪ್ರವಾಸೋದ್ಯಮ ಬೆಳವಣಿಗೆಯೊಂದಿಗೆ ನಂಬಲಾಗದ ರೀತಿಯಲ್ಲಿ ಏರಿಕೆಯನ್ನು ದಾಖಲಿಸಿತ್ತು. ಈ ಪೈಕಿ ಅಯೋಧ್ಯೆ ಜಿಲ್ಲೆಯಲ್ಲಿ 2.36 ಕೋಟಿ ದೇಶೀಯ ಮತ್ತು 1,465 ವಿದೇಶಿ ಪ್ರವಾಸಿಗರನ್ನು ಆಗಮಿಸಿದ್ದಾರೆ. 2021 ರಲ್ಲಿ 1.73 ಲಕ್ಷ ದೇಶಿ ಜನರು ಆಗಮಿಸಿದ್ದರು. ವಿದೇಶಿಗರ ಸಂಖ್ಯೆ ಶೂನ್ಯವಾಗಿತ್ತು. 2022ರ ಹೊಸ ವರ್ಷದಂದು ಸುಮಾರು 30 ಲಕ್ಷ ಭಕ್ತರು ಅಯೋಧ್ಯೆಗೆ ಭೇಟಿ ನೀಡಿದರು. 2023ರ ಮೊದಲ ದಿನದಲ್ಲಿಅಯೋಧ್ಯೆ ಪೊಲೀಸರು ಸಮಾರು 50 ಲಕ್ಷ ಜನರ ನಿರ್ವಹಣೆಗೆ ಸಜ್ಜಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನೂ ಓದಿ: Ram Janmabhoomi: ರಾಮ ಮಂದಿರಕ್ಕೆ ನನ್ನ ದುಡ್ಡು ಬೇಕು, ಆಮಂತ್ರಣ ಮಾತ್ರ ಇಲ್ಲವೆಂದ ಲಕ್ಷ್ಮಣ ಸವದಿ

Exit mobile version