Site icon Vistara News

Ram Mandir: ಅಯೋಧ್ಯೆಗೆ ಆಗಮಿಸಲಿರುವ ಮೋದಿ; ಅವರ ಕಾರ್ಯಕ್ರಮಗಳ ಡಿಟೇಲ್ಸ್‌ ಇಲ್ಲಿದೆ

Narendra Modi

PM Narendra Modi Roadshow In Ayodhya; Watch Live Here

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ಇಂದು (ಜನವರಿ 22) ಪ್ರಾಣಪ್ರತಿಷ್ಠೆ ನೆರವೇರಿಸಲಾಗುತ್ತದೆ. ರಾಮಮಂದಿರದ (Ram Mandir) 500 ವರ್ಷಗಳ ಕನಸು ಈಗ ನನಸಾಗುತ್ತಿರುವ ಕಾರಣ ಕೋಟ್ಯಂತರ ಭಾರತೀಯರು ಉದ್ಘಾಟನೆಗಾಗಿ ಕಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra ಅವರು ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಿದ್ದು, ಸೋಮವಾರ ಸುಮಾರು 5 ಗಂಟೆ ಮೋದಿ ಅವರು ಅಯೋಧ್ಯೆಯಲ್ಲಿಯೇ ಕಾಲ ಕಳೆಯಲಿದ್ದಾರೆ. ನರೇಂದ್ರ ಮೋದಿ ಅವರು ಯಾವೆಲ್ಲ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ.

ಮೋದಿ ಅಯೋಧ್ಯೆ ಭೇಟಿಯ ವೇಳಾಪಟ್ಟಿ

ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿದೆ. ಪ್ರಾಣಪ್ರತಿಷ್ಠೆ ಬಳಿಕ ಮಧ್ಯಾಹ್ನ 2 ಗಂಟೆಯಿಂದ ಸಂಜೆ 7 ಗಂಟೆವರೆಗೆ ಮತ್ತೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 7.30ಕ್ಕೆ ಸಂಧ್ಯಾರತಿಯೊಂದಿಗೆ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮವು ಸಮಾರೋಪವಾಗಲಿದೆ.

ಇದನ್ನೂ ಓದಿ: ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ ಆಹ್ವಾನ ಪಡೆದ ಕ್ರಿಕೆಟಿಗರ ಪಟ್ಟಿ ಹೀಗಿದೆ

ಪ್ರಾಣ ಪ್ರತಿಷ್ಠಾ ಎಂದರೇನು?

ಪ್ರಾಣ ಪ್ರತಿಷ್ಠಾ ಎನ್ನುವುದು ಹಿಂದೂ ಮತ್ತು ಜೈನ ಧರ್ಮದಲ್ಲಿನ ಜನಪ್ರಿಯ ಆಚರಣೆಯಾಗಿದ್ದು, ದೇವರ ವಿಗ್ರಹವನ್ನು ಪವಿತ್ರಗೊಳಿಸಿದ ನಂತರ ದೇವಾಲಯದ ಗರ್ಭಗುಡಿಯಲ್ಲಿ ಸ್ಥಾಪಿಸಲಾಗುತ್ತದೆ. ವಿಗ್ರಹಗಳನ್ನು ಹೀಗೆ ಪ್ರತಿಷ್ಠಾಪಿಸುವ ಸಮಯದಲ್ಲಿ ಪುರೋಹಿತರು ವೈದಿಕ ಸ್ತೋತ್ರಗಳ ಪಠಣ ನಡೆಸುವುದು ವಾಡಿಕೆ. ಪ್ರಾಣ್ ಎಂಬ ಪದದ ಅರ್ಥ ಜೀವಶಕ್ತಿ ಮತ್ತು ಪ್ರತಿಷ್ಠಾ ಎಂದರೆ ಸ್ಥಾಪನೆ. ಪ್ರಾಣ ಪ್ರತಿಷ್ಠಾ ಅಥವಾ ಪ್ರತಿಷ್ಠಾಪನಾ ಸಮಾರಂಭ ಎಂದರೆ ವಿಗ್ರಹಕ್ಕೆ ಜೀವಶಕ್ತಿಯನ್ನು ತುಂಬುವ ಆಚರಣೆ ಎಂದು ಹಿರಿಯರು ಹೇಳುತ್ತಾರೆ.

ಪ್ರಾಣ ಪ್ರತಿಷ್ಠಾ ಪ್ರಕ್ರಿಯೆಯ ಮೊದಲು ವಿಗ್ರಹಕ್ಕೆ ಯಾವುದೇ ವಿಶೇಷ ಶಕ್ತಿ ಇರುವುದಿಲ್ಲ ಎನ್ನಲಾಗಿದೆ. ಪ್ರಾಣ ಪ್ರತಿಷ್ಠಾನದ ಮೂಲಕ ವಿಗ್ರಹಕ್ಕೆ ವಿಶೇಷ ಶಕ್ತಿಗಳನ್ನು ತುಂಬಲಾಗುತ್ತದೆ. ಬಳಿಕವೇ ವಿಗ್ರಹ ದೈವಿಕ ಶಕ್ತಿಯಾಗಿ ರೂಪಾಂತರಗೊಳ್ಳುತ್ತದೆ. ಈ ಪ್ರಕ್ರಿಯೆಯ ನಂತರ ಭಕ್ತರು ಈ ವಿಗ್ರಹಗಳನ್ನು ಪೂಜಿಸಬಹುದು ಎಂದು ನಂಬಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version