Ayodhya Rama Mandir: ರಾಮಮಂದಿರ ಪ್ರಾಣ ಪ್ರತಿಷ್ಠೆ ದಿನ ಬ್ಯಾಂಕ್‌ಗಳಿಗೂ ರಜೆ ಇದೆಯಾ? - Vistara News

ದೇಶ

Ayodhya Rama Mandir: ರಾಮಮಂದಿರ ಪ್ರಾಣ ಪ್ರತಿಷ್ಠೆ ದಿನ ಬ್ಯಾಂಕ್‌ಗಳಿಗೂ ರಜೆ ಇದೆಯಾ?

Ayodhya Rama Mandir: ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22ರಂದು ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬ್ಯಾಂಕ್‌ಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ.

VISTARANEWS.COM


on

ram mandir
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಅಯೋಧ್ಯೆಯ ರಾಮ ಮಂದಿರ (Ayodhya Rama Mandir) ಉದ್ಘಾಟನೆಗೆ ದಿನ ಗಣನೆ ಆರಂಭವಾಗಿದೆ. ಜನವರಿ 22ರಂದು ರಾಮ ಮಂದಿರದಲ್ಲಿ ರಾಮ ಲಲ್ಲಾ (Ram lalla) ವಿಗ್ರಹದ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ಸಂಬಂಧ ಈಗಾಗಲೇ ಧಾರ್ಮಿಕ ವಿಧಿ ವಿಧಾನಗಳು ಆರಂಭಗೊಂಡಿವೆ. ಜನವರಿ 22ರಂದು ಎಲ್ಲ ಕೇಂದ್ರ ಸರ್ಕಾರಿ ಕಚೇರಿಗಳನ್ನು (Central govt offices) ಅರ್ಧ ದಿನ ಮುಚ್ಚಲಾಗುವುದು (Half day leave) ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಗುರುವಾರ ತಿಳಿಸಿದ್ದಾರೆ. ಜತೆಗೆ ಎಲ್ಲ ಸಾರ್ವಜನಿಕ ವಲಯದ ಬ್ಯಾಂಕ್‌ಗಳು (PSBs), ವಿಮಾ ಕಂಪೆನಿಗಳು, ಹಣಕಾಸು ಸಂಸ್ಥೆಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಿಗೂ ಅರ್ಧ ದಿನ ರಜೆ ಘೋಷಿಸಲಾಗಿದೆ.

ಪ್ರಾಣ ಪ್ರತಿಷ್ಠೆಯ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ, ಜನವರಿ 22ರಂದು ಅಪರಾಹ್ನ 2.30ರ ವರೆಗೆ ಬ್ಯಾಂಕ್‌ ಮುಚ್ಚಿರುತ್ತವೆ ಎಂದು ಹಣಕಾಸು ಸಚಿವಾಲಯ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇತ್ತ ಖಾಸಗಿ ವಲಯದ ಬ್ಯಾಂಕ್‌ಗಳು ಎಂದಿನಂತೆ ಪೂರ್ತಿ ದಿನ ತೆರೆದಿರುತ್ತವೆ. ಆನ್‌ಲೈನ್‌ ಬ್ಯಾಂಕಿಂಗ್ ಸೇವೆಗಳು ಮುಂದುವರಿಯಲಿದೆ.

ಹಣಕಾಸು ಸಚಿವಾಲಯದ ಅಧಿಸೂಚನೆ ಪ್ರಕಾರ ʼಇದು ಕೇಂದ್ರೀಯ ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಡಿಒಪಿಟಿ (ಸಿಬ್ಬಂದಿ ಮತ್ತು ತರಬೇತಿ ಇಲಾಖೆ)ಯ ಆದೇಶವು ಎಲ್ಲ ಸಾರ್ವಜನಿಕ ವಲಯದ ಬ್ಯಾಂಕ್‌ಗಳು / ಸಾರ್ವಜನಿಕ ವಲಯದ ವಿಮಾ ಕಂಪೆನಿಗಳು / ಸಾರ್ವಜನಿಕ ವಲಯದ ಹಣಕಾಸು ಸಂಸ್ಥೆಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಿಗೆ ಅರ್ಧ ದಿನದ ರಜೆಯ ಆದೇಶ ಅನ್ವಯವಾಗುತ್ತದೆʼ ಎಂದು ತಿಳಿಸಿದೆ.

ಈ ಹಿಂದೆ ಹೊರಡಿಸಿದ್ದ ಪ್ರಕಟಣೆಯಲ್ಲಿ ರಾಷ್ಟ್ರವ್ಯಾಪಿಯ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳು ಅರ್ಧ ದಿನ ಮುಚ್ಚಿರುತ್ತವೆ ಎಂದು ಘೋಷಿಸಲಾಗಿತ್ತು. ದೇಶದ ಜನತೆಯ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಅರ್ಧ ದಿನ ಕಚೇರಿ ಮುಚ್ಚುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. “ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣ್ ಪ್ರತಿಷ್ಠೆಯನ್ನು ಭಾರತದಾದ್ಯಂತ 22ನೇ ಜನವರಿ 2024ರಂದು ಆಚರಿಸಲಾಗುತ್ತದೆ. ಆಚರಣೆಯಲ್ಲಿ ಭಾಗವಹಿಸಲು ನೌಕರರನ್ನು ಸಕ್ರಿಯಗೊಳಿಸಲು, ಭಾರತದಾದ್ಯಂತ ಎಲ್ಲ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳನ್ನು ಮಧ್ಯಾಹ್ನದವರೆಗೆ ಅರ್ಧ ದಿನ ಮುಚ್ಚಲು ನಿರ್ಧರಿಸಲಾಗಿದೆ” ಎಂದು ಎಲ್ಲ ಕೇಂದ್ರ ಸರ್ಕಾರದ ಸಚಿವಾಲಯಗಳು/ ಇಲಾಖೆಗಳಿಗೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ. ಬಾರ್ ಕೌನ್ಸಿಲ್ ಆಫ್ ಇಂಡಿಯಾ ಬುಧವಾರ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿಗೆ ಪತ್ರ ಬರೆದು ಜನವರಿ 22ರಂದು ರಜೆ ನೀಡುವಂತೆ ಮನವಿ ಮಾಡಿದೆ. 

ಇದನ್ನೂ ಓದಿ: Ram Mandir: ಕನ್ನಡಿಗ ಕೆತ್ತಿದ ರಾಮಲಲ್ಲಾ ಹೇಗಿದ್ದಾನೆ? ಮೂರ್ತಿಯ ಮೊದಲ ಫೋಟೊ ಇಲ್ಲಿದೆ

ಜನವರಿ 22ರಂದು ಮಧ್ಯಾಹ್ನ 12.30ಕ್ಕೆ ರಾಮ ಮಂದಿರದ ಪ್ರಾಣ-ಪ್ರತಿಷ್ಠಾ ಸಮಾರಂಭ ಪ್ರಧಾನಿ ನರೇಂದ್ರ ಮೋದಿ ಮತ್ತು ಸಮಾಜದ ಎಲ್ಲ ವರ್ಗಗಳ ಹಲವಾರು ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ. ಭಾರತ ಮತ್ತು ವಿದೇಶಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ದೊಡ್ಡ ಪರದೆ ಅಳವಡಿಸಿ ಈ ಸಮಾರಂಭದ ನೇರ ಪ್ರದರ್ಶನಕ್ಕೆ ಈಗಾಗಲೇ ಸೂಕ್ತ ವ್ಯವಸ್ಥೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

School Principal: ಶಾಲೆಯಲ್ಲೇ ಮಹಿಳಾ ಟೀಚರ್‌ ಜತೆ ಪ್ರಿನ್ಸಿಪಾಲ್‌ ರೊಮ್ಯಾನ್ಸ್;‌ ವೈರಲ್‌ ಫೋಟೊ ಇಲ್ಲಿದೆ

School Principal: ಜೌನ್‌ಪುರದಲ್ಲಿರುವ ಶಾಲೆಯೊಂದರಲ್ಲಿ ಪ್ರಾಂಶುಪಾಲ ಹಾಗೂ ಮಹಿಳಾ ಟೀಚರ್‌ ತಬ್ಬಿಕೊಂಡು, ಮುದ್ದಾಡಿರುವ ಫೋಟೊ ವೈರಲ್‌ ಆಗಿದೆ. ಶಾಲೆಯ ಗೋಡೆಯ ಮೇಲೆ ಭಗತ್‌ ಸಿಂಗ್‌, ಅಟಲ್‌ ಬಿಹಾರಿ ವಾಜಪೇಯಿ ಹಾಗೂ ಅಭಿನಂದನ್‌ ವರ್ಧಮಾನ್‌ ಅವರ ಫೋಟೊಗಳನ್ನು ನೇತುಹಾಕಲಾಗಿದೆ. ಆ ಗೋಡೆಯ ಕೆಳಗೆ ಇವರಿಬ್ಬರೂ ರೊಮ್ಯಾನ್ಸ್‌ ಮಾಡಿದ್ದಾರೆ.

VISTARANEWS.COM


on

School Principal
Koo

ಲಖನೌ: “ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ” ಎಂದು ಶಾಲೆಯ ಗೋಡೆ ಮೇಲೆ ಬರೆದಿರಲಾಗುತ್ತದೆ. ಜ್ಞಾನದೇಗುಲದಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪುಗೊಳ್ಳುವ ಜತೆಗೆ ಶಿಕ್ಷಕರ ಜೀವನವೂ ಸುಂದರವಾಗುತ್ತದೆ. ಇಂತಹ ಜ್ಞಾನ ದೇಗುಲದಲ್ಲಿ ಶಿಕ್ಷಕರಾದವರು (Teachers) ಮಕ್ಕಳಿಗೆ ಬೋಧನೆ ಮಾಡುವ ಜತೆಗೆ ಮೌಲ್ಯಗಳನ್ನು ತುಂಬಬೇಕು. ಆದರೆ, ಇತ್ತೀಚೆಗೆ ಜ್ಞಾನ ದೇಗುಲಗಳಲ್ಲಿಯೇ ಶಿಕ್ಷಕರು ಅಪದ್ಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ಪ್ರಾಂಶುಪಾಲ (School Principal) ಹಾಗೂ ಮಹಿಳಾ ಟೀಚರ್‌ ರೊಮ್ಯಾನ್ಸ್‌ ಮಾಡಿದ ಫೋಟೊ ಈಗ ವೈರಲ್‌ ಆಗಿದೆ.

ಹೌದು, ಜೌನ್‌ಪುರದಲ್ಲಿರುವ ಶಾಲೆಯೊಂದರಲ್ಲಿ ಪ್ರಾಂಶುಪಾಲ ಹಾಗೂ ಮಹಿಳಾ ಟೀಚರ್‌ ತಬ್ಬಿಕೊಂಡು, ಮುದ್ದಾಡಿರುವ ಫೋಟೊ ವೈರಲ್‌ ಆಗಿದೆ. ಶಾಲೆಯ ಗೋಡೆಯ ಮೇಲೆ ಭಗತ್‌ ಸಿಂಗ್‌, ಮಹಾರಾಣಾ ಪ್ರತಾಪ್‌, ಅಟಲ್‌ ಬಿಹಾರಿ ವಾಜಪೇಯಿ ಹಾಗೂ ಅಭಿನಂದನ್‌ ವರ್ಧಮಾನ್‌ ಅವರ ಫೋಟೊಗಳನ್ನು ನೇತುಹಾಕಲಾಗಿದೆ. ಆ ಗೋಡೆಯ ಕೆಳಗೆ ಇವರಿಬ್ಬರೂ ರೊಮ್ಯಾನ್ಸ್‌ ಮಾಡಿದ್ದಾರೆ. ಖಾಸಗಿ ಶಾಲೆಯಲ್ಲಿ ಇಂತಹದ್ದೊಂದು ಅನಾಚಾರದ ಕೃತ್ಯ ನಡೆದಿದೆ. ಫೋಟೊಗಳನ್ನು ನೋಡಿದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ (ಜುಲೈ 7) ವಿಡಿಯೊ ವೈರಲ್‌ ಆಗಿದೆ. ಶಿಕ್ಷಕರ ಕುಲಕ್ಕೆ ಇವರು ಅವಮಾನ ಇದ್ದಹಾಗೆ. ಇಂತಹ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಇವರನ್ನು ಅಮಾನತುಗೊಳಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ಪ್ರಾಂಶುಪಾಲ ಹಾಗೂ ಮಹಿಳಾ ಟೀಚರ್‌ ತುಂಬ ದಿನಗಳಿಂದ ಸಂಬಂಧ ಹೊಂದಿದ್ದಾರೆ. ಆದರೆ, ಇವರು ಶಾಲೆಯಲ್ಲಿಯೇ ರೊಮ್ಯಾನ್ಸ್‌ ಮಾಡಿರುವುದು ಭಾರಿ ಆಕ್ರೋಶಕ್ಕೆ ಗುರಿಯಾಗಿದೆ. ಇದು ಕಾನ್ವೆಂಟ್‌ ಶಾಲೆ ಎಂದು ತಿಳಿದುಬಂದಿದೆ.

ಕೋಲಾರ ಜಿಲ್ಲೆಯ ಕೆಜಿಎಫ್‌ನ ರಾಮಸಾಗರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಯೊಬ್ಬರ ಜತೆ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿಕೊಂಡು, ಅದನ್ನು ಹಂಚಿ ಬ್ಲ್ಯಾಕ್‌ಮೇಲ್‌ ಎಸಗಿದ ಆರೋಪ ಎದುರಿಸುತ್ತಿರುವ ಬಿಲ್‌ ಕಲೆಕ್ಟರ್‌ ಅರ್ಜುನ್‌ ಹರಿಕೃಷ್ಣ ಎಂಬಾತನನ್ನು ಕೆಲ ದಿನಗಳ ಹಿಂದೆ ಬೇತಮಂಗಲ ಪೊಲೀಸರು ಬಂಧಿಸಿದ್ದರು.

ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ವಿರುದ್ಧ ಲೈಂಗಿಕ ಕಿರುಕುಳ (Physical Abuse), ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಗೆ ಮುಜುಗರ, ಖಾಸಗಿ ಕ್ಷಣಗಳ ಫೋಟೋ ಹಂಚಿಕೆ ಹಾಗೂ ಬೆದರಿಕೆ (threat) ಒಡ್ಡಿದ ಕುರಿತು ಕೋಲಾರ ಜಿಲ್ಲೆ ಬೇತಮಂಗಲ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದಾರೆ. ಗ್ರಾಮ ಪಂಚಾಯಿತಿಯ ಕಚೇರಿಯ ಮೊದಲ ಮಹಡಿಯ ಕೊಠಡಿಯಲ್ಲಿ ಸಿಸಿಟಿವಿ ಸಂಪರ್ಕ ಕಡಿತಗೊಳಿಸಿದ ಆರೋಪಿಯು ತಮ್ಮ ಖಾಸಗಿ ಕ್ಷಣಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದ. ಸಂತ್ರಸ್ತೆ ನೀಡಿದ ದೂರಿನ ಮೇಲೆ ಅರ್ಜುನ್ ವಿಚಾರಣೆ ನಡೆಸಿದ ಬೇತಮಂಗಲ ಪೊಲೀಸರು ನಂತರ ಆತನನ್ನು ಬಂಧಿದ್ದರು.

ಇದನ್ನೂ ಓದಿ: ಪಿಎಂ ಆವಾಸ್‌ ಯೋಜನೆಯ 40 ಸಾವಿರ ರೂ. ಪಡೆದು 11 ಸ್ತ್ರೀಯರು ಗೆಳೆಯರೊಂದಿಗೆ ಪರಾರಿ; ಕಂಗಾಲಾದ ಪತಿಯರು!

Continue Reading

ದೇಶ

KRS Inflow: ಕೆಆರ್‌ಎಸ್‌ಗೆ ದಾಖಲೆಯ 11 ಸಾವಿರ ಕ್ಯುಸೆಕ್‌ ನೀರು ಒಳಹರಿವು; ಸೋಮವಾರದಿಂದ ನಾಲೆಗಳಿಗೆ ನೀರು

KRS Inflow: ಕರ್ನಾಟಕದ ಹಲವು ಅಣೆಕಟ್ಟೆಗಳಲ್ಲಿಯೂ ಉತ್ತಮ ಒಳಹರಿವು ಇದೆ. ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಡ್ಯಾಮ್‌ಗೆ 59,306 ಕ್ಯುಸೆಕ್‌, ವಿಜಯನಗರ ಜಿಲ್ಲೆಯ ತುಂಗಭದ್ರಾ ಅಣೆಕಟ್ಟೆಗೆ 50,715 ಕ್ಯುಸೆಕ್‌ ನೀರು ಒಳಹರಿವು ಇದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಗರಿಷ್ಠ ಪ್ರಮಾಣದ ನೀರು ಹರಿದುಬರುತ್ತಿದೆ. ಕಬಿನಿ, ಹಾರಂಗಿ ಹಾಗೂ ಹೇಮಾವತಿ ಅಣೆಕಟ್ಟೆಗಳಲ್ಲಿ ಕೂಡ ಉತ್ತಮವಾಗಿ ನೀರು ಸಂಗ್ರಹವಾಗಿದೆ.

VISTARANEWS.COM


on

KRS Inflow
Koo

ಬೆಂಗಳೂರು: ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾದ, ಬೆಂಗಳೂರಿಗೂ ಕುಡಿಯುವ ನೀರು ಪೂರೈಸುವ, ತಮಿಳುನಾಡಿನ ರೈತರಿಗೂ ಆಶ್ರಯದಾತವಾಗಿರುವ ಕೃಷ್ಣರಾಜಸಾಗರ ಅಣೆಕಟ್ಟೆಗೆ (KRS Dam) ದಾಖಲೆ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು (KRS Inflow), ರಾಜ್ಯದಲ್ಲಿ ಹಳದಿ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ ಸೇರಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಕಾವೇರಿ ಉಕ್ಕಿ ಹರಿಯುತ್ತಿದ್ದಾಳೆ. ಇದರಿಂದಾಗಿ ಕೆಆರ್‌ಎಸ್‌ಗೆ ಭಾನುವಾರ (ಜುಲೈ 7) ದಾಖಲೆಯ 11,027 ಕ್ಯುಸೆಕ್‌ ನೀರು ಹರಿದುಬರುತ್ತಿದೆ.

ಮಳೆಯ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಡ್ಯಾಮ್‌ನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಭಾರಿ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಜುಲೈ 7ರ ಬೆಳಗ್ಗೆಯ ವರದಿ ಪ್ರಕಾರ 31.09 ಟಿಎಂಸಿ ನೀರು ಸಂಗ್ರಹವಾಗಿತ್ತು. 2023ರ ಜುಲೈ 7ರಂದು 24.23 ಟಿಎಂಸಿ ನೀರು ಸಂಗ್ರಹವಾಗಿತ್ತು. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಇನ್ನಷ್ಟು ಮಳೆಯಾಗುವ ಸಾಧ್ಯತೆ ಇರುವುದರಿಂದ ಕೆಆರ್‌ಎಸ್‌ಗೆ ಇನ್ನಷ್ಟು ನೀರು ಹರಿದುಬರಲಿದೆ ಎಂದು ಹೇಳಲಾಗುತ್ತಿದೆ.

Cauvery Dispute

ಕರ್ನಾಟಕದ ಹಲವು ಅಣೆಕಟ್ಟೆಗಳಲ್ಲಿಯೂ ಉತ್ತಮ ಒಳಹರಿವು ಇದೆ. ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಡ್ಯಾಮ್‌ಗೆ 59,306 ಕ್ಯುಸೆಕ್‌, ವಿಜಯನಗರ ಜಿಲ್ಲೆಯ ತುಂಗಭದ್ರಾ ಅಣೆಕಟ್ಟೆಗೆ 50,715 ಕ್ಯುಸೆಕ್‌ ನೀರು ಒಳಹರಿವು ಇದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಗರಿಷ್ಠ ಪ್ರಮಾಣದ ನೀರು ಹರಿದುಬರುತ್ತಿದೆ. ಕಬಿನಿ, ಹಾರಂಗಿ ಹಾಗೂ ಹೇಮಾವತಿ ಅಣೆಕಟ್ಟೆಗಳಲ್ಲಿ ಕೂಡ ಉತ್ತಮವಾಗಿ ನೀರು ಸಂಗ್ರಹವಾಗಿದೆ. ಕೃಷಿ ಸಚಿವರೂ ಆಗಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಬೆಂಗಳೂರಿನಲ್ಲಿ ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿದ್ದು, ಜುಲೈ 8ರಿಂದ ನಾಲೆಗಳಿಗೆ ನೀರು ಬಿಡಲು ತೀರ್ಮಾನಿಸಿದ್ದಾರೆ.

ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಶಾಲೆ-ಕಾಲೇಜುಗಳಿಗೆ ಸೋಮವಾರ (ಜುಲೈ 8) ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಅವರು ರಜೆ ಆದೇಶ ಹೊರಡಿಸಿದ್ದಾರೆ. ಮಕ್ಕಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಘಟ್ಟದ ಮೇಲಿನ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ.

ಇದನ್ನೂ ಓದಿ: Student Death : ಕೇರಳದಿಂದ ಪ್ರವಾಸ ಬಂದಿದ್ದ ವಿದ್ಯಾರ್ಥಿನಿ ಕೆಆರ್‌ಎಸ್‌ನಲ್ಲಿ ಮೃತ್ಯು

Continue Reading

Latest

Accident: ಟೆರೇಸ್ ಮೇಲೆ ನಿಂತು ಜಗಳ ನೋಡುತ್ತಿದ್ದ ಮಹಿಳೆಗೇ ಬಿತ್ತು ಗುಂಡೇಟು!

ಉತ್ತರ ದೆಹಲಿಯಲ್ಲಿ 17 ಲಕ್ಷ ರೂಪಾಯಿಗಾಗಿ ಇಬ್ಬರ ನಡುವೆ ನಡೆದ ವಾದವು ಜಗಳಕ್ಕೆ ತಿರುಗಿತ್ತು. ಈ ನಡುವೆ ಒಬ್ಬ ವ್ಯಕ್ತಿ ಪಿಸ್ತೂಲ್ ಎಳೆದು ಮತ್ತೊಬ್ಬ ವ್ಯಕ್ತಿಯತ್ತ ಗುಂಡು ಹಾರಿಸಿದ್ದಾನೆ. ಆದರೆ, ಬುಲೆಟ್ ಗುರಿ ತಪ್ಪಿ (Accident) ಟೆರೇಸ್‌ನಿಂದ ಜಗಳವನ್ನು ಗಮನಿಸುತ್ತಿದ್ದ 48 ವರ್ಷದ ಮಹಿಳೆಗೆ ತಗುಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

By

Accident
Koo

ನವದೆಹಲಿ: ಟೆರೇಸ್‌ನಲ್ಲಿ ನಿಂತು ಹೊಡೆದಾಟವನ್ನು ನೋಡುತ್ತಿದ್ದ ಮಹಿಳೆಗೆ ಆಕಸ್ಮಿಕವಾಗಿ (Accident) ಗುಂಡು (shot) ತಾಗಿರುವ ಘಟನೆ ಉತ್ತರ ದೆಹಲಿಯ (north delhi) ದಯಾಲ್‌ಪುರದಲ್ಲಿ ನಡೆದಿದೆ. ಒಬ್ಬ ವ್ಯಕ್ತಿ ಮತ್ತೊಬ್ಬ ವ್ಯಕ್ತಿಗೆ ಗುಂಡು ಹಾರಿಸಿದಾಗ ಅದು ತಪ್ಪಿ ಟೆರೇಸ್ ಮೇಲೆ ನಿಂತು ಇವರ ಜಗಳ ನೋಡುತ್ತಿದ್ದ ಮಹಿಳೆಗೆ ತಗುಲಿದೆ ಎನ್ನಲಾಗಿದೆ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಈಶಾನ್ಯ ದೆಹಲಿಯ ದಯಾಲ್‌ಪುರ್‌ನಲ್ಲಿ ಜುಲೈ 2ರಂದು ಶನಿವಾರ ಇಬ್ಬರ ನಡುವೆ ಜಗಳವಾಗಿದೆ. ಪೊಲೀಸ್ ಅಧಿಕಾರಿಗಳ ಪ್ರಕಾರ, 17 ಲಕ್ಷ ರೂಪಾಯಿಗಾಗಿ ಇವರ ನಡುವೆ ನಡೆದ ವಾದವು ಜಗಳಕ್ಕೆ ತಿರುಗಿತ್ತು. ಈ ನಡುವೆ ಒಬ್ಬ ವ್ಯಕ್ತಿ ಪಿಸ್ತೂಲ್ ಎಳೆದು ಮತ್ತೊಬ್ಬ ವ್ಯಕ್ತಿಯತ್ತ ಗುಂಡು ಹಾರಿಸಿದ್ದಾನೆ. ಆದರೆ, ಬುಲೆಟ್ ತಪ್ಪಿ ಟೆರೇಸ್‌ನಿಂದ ಜಗಳವನ್ನು ಗಮನಿಸುತ್ತಿದ್ದ 48 ವರ್ಷದ ಮಹಿಳೆಗೆ ಹೊಡೆದಿದೆ.

ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ ಗುಂಡೇಟಿನಿಂದ ಗಾಯಗೊಂಡಿದ್ದ ಮಹಿಳೆಯನ್ನು ಆಕೆಯ ಕುಟುಂಬದವರು ಜಿಟಿಬಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆರೋಪಿಗಳ ಪೈಕಿ ಬಬ್ಲು ಎಂಬಾತನಿಗೆ 17 ಲಕ್ಷ ರೂ.ಗಳನ್ನು ಸಾಲವಾಗಿ ನೀಡಿದ್ದಾಗಿ ದೂರುದಾರ ಹಾಶಿಮ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಆತ ಬಬ್ಲುವನ್ನು ವಿಚಾರಿಸಲು ಹೋದಾಗ ವಾದವು ವಿಕೋಪಕ್ಕೆ ತಿರುಗಿದೆ. ಬಬ್ಲು ತನ್ನ ಸಹಚರರಾದ ಕಮರುಲ್, ಸುಹಾಲೆ ಮತ್ತು ಸಮ್ರುನ್‌ನೊಂದಿಗೆ ಬಂದಿದ್ದು, ಹಾಶಿಮ್ ಮೇಲೆ ಹಲ್ಲೆಗೆ ಮುಂದಾಗಿದ್ದರು. ಈ ನಡುವೆ ಕಮರುಲ್ ಎಂಬಾತ ಹಾಶಿಮ್‌ ಮೇಲೆ ಗುಂಡು ಹಾರಿಸಿದ ಎನ್ನಲಾಗಿದೆ. ಆದರೆ ಇದು ಗುರಿ ತಪ್ಪಿ ಮಹಿಳೆಗೆ ಹೊಡೆದಿದೆ. ಗುಂಡಿನ ದಾಳಿಯ ಅನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ: Self Harming : ನಿದ್ದೆ ಇಲ್ಲದೇ ಒದ್ದಾಟ; ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

ಪೊಲೀಸರು ದೆಹಲಿಯ ಬ್ರಿಜ್‌ಪುರಿ ನಿವಾಸಿಗಳಾದ ಬಬ್ಲು (38) ಮತ್ತು ಕಮರುಲ್ (26) ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಪಿಸ್ತೂಲ್, ಸ್ಕೂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಉಳಿದ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುದ್ಧಿ ಹೇಳಿದ್ದಕ್ಕೆ ಶಿಕ್ಷಕನನ್ನೇ ಕೊಂದ ವಿದ್ಯಾರ್ಥಿ

ವಿದ್ಯೆ ಕಲಿಸಿದ ಗುರುವನ್ನೇ ವಿದ್ಯಾರ್ಥಿಯೊಬ್ಬ ಇರಿದು ಕೊಂದಿ ಘಟನೆ ಅಸ್ಸಾಂನ ಶಿವಸಾಗರ್ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ. 11 ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನನ್ನು ತರಗತಿಯಲ್ಲಿ ಇರಿದು ಕೊಂದಿದ್ದಾನೆ. ಕಳಪೆ ಸಾಧನೆಗಾಗಿ ಬೈದಿದ್ದಕ್ಕಾಗಿ ರಸಾಯನಶಾಸ್ತ್ರ ಶಿಕ್ಷಕ ರಾಜೇಶ್ ಬರುವಾ ಬೆಜವಾಡ (55) ಮೇಲೆ ಹಲ್ಲೆ ನಡೆಸಿ ಕೊಂದ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಜವಾಡ ಅವರು ರಸಾಯನಶಾಸ್ತ್ರವನ್ನು ಕಲಿಸುತ್ತಿದ್ದರು. ಜೊತೆಗೆ ಖಾಸಗಿ ಒಡೆತನದ ಶಾಲೆಯಲ್ಲಿ ನಿರ್ವಹಣಾ ಜವಾಬ್ದಾರಿಗಳನ್ನು ಸಹ ಹೊಂದಿದ್ದರು. ರಸಾಯನಶಾಸ್ತ್ರದಲ್ಲಿನ ಕಲಿಕೆಯ ಬಗ್ಗೆ ಶಿಕ್ಷಕರು ವಿದ್ಯಾರ್ಥಿಯನ್ನು ಗದರಿಸಿದ್ದರು. ಅಲ್ಲದೇ ಪೋಷಕರ ಸಭೆಗಾಗಿ ಪೋಷಕರನ್ನು ಶಾಲೆಗೆ ಕರೆದುಕೊಂಡು ಬಾ ಎಂದು ಹೇಳಿದ್ದರು ಎನ್ನಲಾಗಿದೆ.

ದಿನದ ನಂತರ ವಿದ್ಯಾರ್ಥಿ ಕ್ಯಾಶುಯಲ್ ಬಟ್ಟೆಗಳಲ್ಲಿ ತರಗತಿಗೆ ಬಂದಿದ್ದ. ಶಿಕ್ಷಕರು ಅವನನ್ನು ಹೊರಹೋಗುವಂತೆ ಕೇಳಿದರು. ಇದ್ದಕ್ಕಿದ್ದಂತೆ ವಿದ್ಯಾರ್ಥಿ ಬೆಜವಾಡ ಅವರ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಪದೇ ಪದೇ ಇರಿದಿದ್ದಾನೆ.
ಇನ್ನು ಘಟನೆ ಬಗ್ಗೆ ಪೊಲೀಸರು ಪ್ರತಿಕ್ರಿಯಿಸಿದ್ದು, ಕೋಚಿಂಗ್‌ ಸೆಂಟರ್‌ನಲ್ಲಿ ಕೊಲೆಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ಬಂದು ನೋಡಿದಾಗ ತರಗತಿಯಲ್ಲಿ ರಕ್ತದ ಮಡುವಿನಲ್ಲಿ ಶಿಕ್ಷಕ ಬಿದ್ದಿದ್ದರು. ಅಲ್ಲೇ ಚಾಕು ಕೂಡ ಇತ್ತು.

ಶಿಕ್ಷಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಿಲಾಯಿತಾದರೂ ಆತ ಸಾವನ್ನಪ್ಪಿರುವುದನ್ನು ವೈದ್ಯರು ಖಚಿತಪಡಿಸಿದರು. ಇನ್ನು ವಿದ್ಯಾರ್ಥಿಯನ್ನು ಈಗಾಗಲೇ ವಶಕ್ಕೆ ಪಡೆದಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳನ್ನು ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಇತರ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದಾಗ ಶಿಕ್ಷಕ ವಿದ್ಯಾರ್ಥಿಗೆ ಈ ಹಿಂದೆ ಬೈದಿದ್ದರು ಎಂಬುದು ಬಯಲಾಗಿದೆ ಎಂದು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Puri Jagannath Rath Yatra: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಒಬ್ಬನ ಸಾವು, 400 ಭಕ್ತರಿಗೆ ಗಾಯ!

Puri Jagannath Rath Yatra: ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿದೆ. ಒಬ್ಬ ಭಕ್ತ ಉಸಿರಾಡಲು ಆಗದೆ ಮೃತಪಟ್ಟಿದ್ದಾನೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ರಥ ಎಳೆಯುವಾಗ ಒಬ್ಬರಿಗೊಬ್ಬರು ನೂಕುನುಗ್ಗಲು ಮಾಡಿದ್ದಾರೆ. ಇದರಿಂದಾಗಿ ಕಾಲ್ತುಳಿತ ಉಂಟಾಗಿದೆ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Puri Jagannath Rath Yatra
Koo

ಪುರಿ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿ 121 ಮಂದಿ ಮೃತಪಟ್ಟಿರುವ ಬೆನ್ನಲ್ಲೇ ಒಡಿಶಾದಲ್ಲಿರುವ (Odisha) ಐತಿಹಾಸಿಕ ಪುರಿ ಜಗನ್ನಾಥ ರಥಯಾತ್ರೆಯ (Puri Jagannath Rath Yatra) ವೇಳೆಯೂ ಕಾಲ್ತುಳಿತ ಸಂಭವಿಸಿದ್ದು, ಒಬ್ಬ ವ್ಯಕ್ತಿ ಮೃತಪಟ್ಟರೆ, 400ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಭಾನುವಾರ ರಥ ಎಳೆಯುವಾಗ ನೂಕುನುಗ್ಗಲು ಉಂಟಾಗಿದ್ದು, ಉಸಿರಾಡಲು ಆಗದೆ ಒಬ್ಬ ಭಕ್ತ ಮೃತಪಟ್ಟಿದ್ದಾರೆ. ನೂಕುನುಗ್ಗಲು ಬಳಿಕ ಕಾಲ್ತುಳಿತ (Stampede) ಉಂಟಾಗಿದ್ದು, 400ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

“ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿದೆ. ಒಬ್ಬ ಭಕ್ತ ಉಸಿರಾಡಲು ಆಗದೆ ಮೃತಪಟ್ಟಿದ್ದಾನೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ರಥ ಎಳೆಯುವಾಗ ಒಬ್ಬರಿಗೊಬ್ಬರು ನೂಕುನುಗ್ಗಲು ಮಾಡಿದ್ದಾರೆ. ಇದರಿಂದಾಗಿ ಕಾಲ್ತುಳಿತ ಉಂಟಾಗಿದೆ” ಎಂದು ಅಧಿಕಾರಿಗಳು ತಿಳಿಸಿದರು. “ಒಬ್ಬ ವ್ಯಕ್ತಿ ಮೃತಪಟ್ಟಿರುವುದು ಹೃದಯಾಘಾತದಿಂದ ಅಲ್ಲ. ನೂಕುನುಗ್ಗಲು ಉಂಟಾದ ಕಾರಣ ಉಸಿರಾಡಲು ಆಗದೆ, ಉಸಿರುಗಟ್ಟಿ ಆತ ಮೃತಪಟ್ಟಿದ್ದಾನೆ” ಎಂದು ಸೇಂಟ್‌ ಜಾನ್‌ ಆಂಬುಲೆನ್ಸ್‌ ಸೇವೆಗಳ ವಿಭಾಗದ ಅಸಿಸ್ಟಂಟ್‌ ಕಮಾಂಡಂಟ್‌ ಸುಶಾಂತ್‌ ಕುಮಾರ್‌ ಪಟ್ನಾಯಕ್‌ ತಿಳಿಸಿದ್ದಾರೆ.

ಕಾಲ್ತುಳಿತದ ಬಳಿಕ 300 ಜನರನ್ನು ಪುರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 50 ಮಂದಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಡಿಸ್‌ಚಾರ್ಜ್‌ ಮಾಡಲಾಗಿದೆ. ಯಾರಿಗೂ ಗಂಭೀರವಾಗಿ ಗಾಯಗಳಾಗಿಲ್ಲ. ಕಾಲ್ತುಳಿತದ ಬಳಿಕವೂ ರಥಯಾತ್ರೆಯು ಸುಗಮವಾಗಿ ಸಾಗಿದೆ ಎಂಬುದಾಗಿ ಒಡಿಶಾ ಆರೋಗ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

ರಥಯಾತ್ರೆ ವೀಕ್ಷಿಸಿದ ದ್ರೌಪದಿ ಮುರ್ಮು

ಪ್ರಸಿದ್ಧ ಜಗನ್ನಾಥ ದೇಗುಲದ ವಾರ್ಷಿಕ ರಥಯಾತ್ರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿದ್ದು,, ಅವರು ಲಕ್ಷಾಂತರ ಭಕ್ತರೊಂದಿಗೆ ಈ ರಥಯಾತ್ರೆಯನ್ನು ವೀಕ್ಷಿಸಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರ ವಿಶೇಷ ವ್ಯವಸ್ಥೆ ಮಾಡಿದ್ದು, ಸಾಮಾನ್ಯವಾಗಿ ಒಂದೇ ದಿನದಲ್ಲಿ ನಡೆಯುವ ಯಾತ್ರೆಯನ್ನು ಸುಗಮವಾಗಿ ನಡೆಸಲು ಒಡಿಶಾ ಸರ್ಕಾರ ವಿಸ್ತೃತ ವ್ಯವಸ್ಥೆಗಳನ್ನು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಗನ್ನಾಥ ದೇವಾಲಯದ ಮೂರು ದೇವರುಗಳಾದ ಜಗನ್ನಾಥ, ಬಲರಾಮ್ ಮತ್ತು ಸುಭದ್ರಾ ಮೂರು ವಿಭಿನ್ನ ರಥಗಳಲ್ಲಿ ಸವಾರಿ ಮಾಡುತ್ತಾರೆ. ಈ ಕಾರಣಕ್ಕಾಗಿ ರಥಯಾತ್ರೆಯನ್ನು ರಥೋತ್ಸವ ಎಂದು ಕರೆಯುತ್ತಾರೆ. ಅವರ ವಿಭಿನ್ನ ರಥಗಳನ್ನು ನಂದಿಘೋಷ, ತಾಳಧ್ವಜ ಮತ್ತು ದೇವದಳನ ಎಂದು ಕರೆಯಲಾಗುತ್ತದೆ. ಭಗವಾನ್ ಜಗನ್ನಾಥನ ನಂದಿಘೋಷ ರಥವು ಹದಿನೆಂಟು ಚಕ್ರಗಳನ್ನು ಹೊಂದಿದೆ. ಭಗವಾನ್ ಬಲರಾಮನ ತಾಳಧ್ವಜ ರಥವು ಹದಿನಾರು ಚಕ್ರಗಳನ್ನು ಹೊಂದಿದೆ ಮತ್ತು ಸುಭದ್ರೆಯ ಪದ್ಮಧ್ವಜ ರಥವು ಹದಿನಾಲ್ಕು ಚಕ್ರಗಳನ್ನು ಹೊಂದಿದೆ.

ಇದನ್ನೂ ಓದಿ: Puri Jagannath Yatra: ಪ್ರತಿ ವರ್ಷ ಹೊಸ ರಥ, ಜಗನ್ನಾಥನಿಗೆ ಜ್ವರ! ಪುರಿ ರಥ ಯಾತ್ರೆ ವಿಶೇಷ ಹಲವು!

Continue Reading
Advertisement
School Principal
ದೇಶ1 hour ago

School Principal: ಶಾಲೆಯಲ್ಲೇ ಮಹಿಳಾ ಟೀಚರ್‌ ಜತೆ ಪ್ರಿನ್ಸಿಪಾಲ್‌ ರೊಮ್ಯಾನ್ಸ್;‌ ವೈರಲ್‌ ಫೋಟೊ ಇಲ್ಲಿದೆ

WCPL 2024
ಪ್ರಮುಖ ಸುದ್ದಿ2 hours ago

WCPL 2024 : ಸಿಪಿಎಲ್​​ನ ಟ್ರಿನ್​ಬ್ಯಾಗೊ ರೈಡರ್ಸ್​ ತಂಡಕ್ಕೆ ಜೆಮಿಮಾ, ಶಿಖಾ ಸೇರ್ಪಡೆ

KRS Inflow
ದೇಶ2 hours ago

KRS Inflow: ಕೆಆರ್‌ಎಸ್‌ಗೆ ದಾಖಲೆಯ 11 ಸಾವಿರ ಕ್ಯುಸೆಕ್‌ ನೀರು ಒಳಹರಿವು; ಸೋಮವಾರದಿಂದ ನಾಲೆಗಳಿಗೆ ನೀರು

Abhishek Sharma
ಕ್ರೀಡೆ2 hours ago

Abhishek Sharma : 47 ಎಸೆತಕ್ಕೆ ಶತಕ ಬಾರಿಸಿ ಹಲವಾರು ದಾಖಲೆ ಮುರಿದಿ ಅಭಿಷೇಕ್​ ಶರ್ಮಾ

Dengue Scare
ಕರ್ನಾಟಕ2 hours ago

Dengue Scare: ಸರ್ಕಾರದಿಂದಲೇ ಉಚಿತವಾಗಿ ಡೆಂಗ್ಯೂ ಪರೀಕ್ಷೆ ಮಾಡಿಸಲಿ; ಆರ್.‌ ಅಶೋಕ್‌ ಆಗ್ರಹ

World Biryani Day:
ಪ್ರಮುಖ ಸುದ್ದಿ3 hours ago

World Biryani Day : ಕೋಲ್ಕತಾ, ಹೈದರಾಬಾದ್ ಬಿರಿಯಾನಿ ತಿಂದಿರಬಹುದು; ಇವುಗಳ ಹಿನ್ನೆಲೆ ಗೊತ್ತಾ?

Accident
Latest3 hours ago

Accident: ಟೆರೇಸ್ ಮೇಲೆ ನಿಂತು ಜಗಳ ನೋಡುತ್ತಿದ್ದ ಮಹಿಳೆಗೇ ಬಿತ್ತು ಗುಂಡೇಟು!

Puri Jagannath Rath Yatra
ಪ್ರಮುಖ ಸುದ್ದಿ4 hours ago

Puri Jagannath Rath Yatra: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಒಬ್ಬನ ಸಾವು, 400 ಭಕ್ತರಿಗೆ ಗಾಯ!

NIA Arrest
ದೇಶ4 hours ago

NIA Arrest: ಹಿಜ್ಬುಲ್‌, LeT ಉಗ್ರ ಸಂಘಟನೆಗಳ ಜೊತೆ ನಂಟು; ಪ್ರಮುಖ ಆರೋಪಿ ಅರೆಸ್ಟ್‌

Elephant attack car in Kodagu‌ four people escape
ಕೊಡಗು4 hours ago

Elephant attack :ಕಾರಿನ ಮೇಲೆ ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ5 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ8 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ9 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ19 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌