Pune porsche car crash : ಕುಡಿದು ಕಾರು ಚಲಾಯಿಸಿ ಇಬ್ಬರ ಸಾವಿಗೆ ಕಾರಣನಾದ ಬಾಲಕನ ಜಾಮೀನು ವಜಾ - Vistara News

ದೇಶ

Pune porsche car crash : ಕುಡಿದು ಕಾರು ಚಲಾಯಿಸಿ ಇಬ್ಬರ ಸಾವಿಗೆ ಕಾರಣನಾದ ಬಾಲಕನ ಜಾಮೀನು ವಜಾ

Pune porsche car crash : ಪರಾಧದ ಗಂಭೀರತೆಯನ್ನು ಆಧರಿಸಿ ವಿಚಾರಣೆ ಸಮಯದಲ್ಲಿ ಅಪ್ರಾಪ್ತ ಆರೋಪಿಗಳನ್ನು ವಯಸ್ಕರಂತೆ ಪರಿಗಣಿಸಬೇಕೆಂದು ಪುಣೆ ಪೊಲೀಸರು ಒತ್ತಾಯಿಸಿದ್ದರು. ಅದರ ಹಿನ್ನೆಲೆಯಲ್ಲಿ ಬೇಲ್ ರದ್ದು ಮಾಡಲಾಗಿದೆ. ಹೆಚ್ಚಿನ ತನಿಖೆಯ ಪ್ರಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ನ್ಯಾಯ ಮಂಡಳಿ ಹೇಳಿದೆ.

VISTARANEWS.COM


on

Porsche car accident ವಿಸ್ತಾರ ಸಂಪಾದಕೀಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಪುಣೆಯ ಬಾರ್​ ಒಂದರಲ್ಲಿ ಪಾರ್ಟಿ ಮಾಡಿ ಮದ್ಯ ಸೇವಿಸಿದ ನಂತರ ತನ್ನ ಅಪ್ಪನ ಐಷಾರಾಮಿ ಪೋರ್ಷೆ ಕಾರನ್ನು (Pune porsche car crash) ಚಲಾಯಿಸಿಕೊಂಡು ಹೋಗಿ ಅಫಘಾತ ಎಸಗಿದ್ದ 17 ಬಾಲಕನಿಗೆ ನೀಡಲಾಗಿದ್ದ ಜಾಮೀನನ್ನು ಬಾಲ ನ್ಯಾಯ ಮಂಡಳಿ ವಜಾ ಮಾಡಿದೆ. ಬಾಲಕ ಬೈಕ್​ಗೆ ಗುದ್ದಿದ ಪರಿಣಾಮ ಇಬ್ಬರು ಮೃತಪಟ್ಟಿದ್ದರು. ಈ ಘಟನೆ ದೇಶದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಅಲ್ಲದೆ, ಮದ್ಯದ ಮತ್ತಿನಲ್ಲಿ ಕಾರು ಚಲಾಯಿಸಿ ಇಬ್ಬರ ಸಾವಿಗೆ ಕಾರಣನಾದವನಿಗೆ ಬೇಲ್​ ಕೊಟ್ಟ ಬಗ್ಗೆಯೂ ಚರ್ಚೆಗಳು ನಡೆದಿದ್ದವು.

ಅಪಘಾತ ಎಸಗಿ ಇಬ್ಬರನ್ನು ಬಲಿ ಪಡೆದ ಅಪ್ರಾಪ್ತ ವಯಸ್ಕನನ್ನು ಮಕ್ಕಳ ವೀಕ್ಷಣಾ ಕೇಂದ್ರಕ್ಕೆ ಕಳುಹಿಸಬೇಕಾಗುತ್ತದೆ ಎಂದು ಮಂಡಳಿ ಹೇಳಿದೆ. ಅಪರಾಧದ ಗಂಭೀರತೆಯನ್ನು ಆಧರಿಸಿ ವಿಚಾರಣೆ ಸಮಯದಲ್ಲಿ ಅಪ್ರಾಪ್ತ ಆರೋಪಿಗಳನ್ನು ವಯಸ್ಕರಂತೆ ಪರಿಗಣಿಸಬೇಕೆಂದು ಪುಣೆ ಪೊಲೀಸರು ಒತ್ತಾಯಿಸಿದ್ದರು. ಅದರ ಹಿನ್ನೆಲೆಯಲ್ಲಿ ಬೇಲ್ ರದ್ದು ಮಾಡಲಾಗಿದೆ. ಹೆಚ್ಚಿನ ತನಿಖೆಯ ಪ್ರಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ನ್ಯಾಯ ಮಂಡಳಿ ಹೇಳಿದೆ.

ಪುಣೆಯಲ್ಲಿ ಪೋರ್ಷೆ ಕಾರಿನಲ್ಲಿ ಅತಿ ವೇಗವಾಗಿ ಸಾಗಿದ ಬಾಲಕ ಇಬ್ಬರು ಐಟಿ ವೃತ್ತಿಪರರಿಬ್ಬರ ಸಾವಿಗೆ ಕಾರಣನಾಗಿದ್ದ. 17 ವರ್ಷದ ಬಾಲಕನಿಗೆ 25 ವರ್ಷ ತುಂಬುವವರೆಗೆ ಚಾಲನಾ ಪರವಾನಗಿ ನೀಡುವುದನ್ನು ನಿಷೇಧಿಸಲಾಗುವುದುಎಂದು ಮಹಾರಾಷ್ಟ್ರ ಸಾರಿಗೆ ಆಯುಕ್ತ ವಿವೇಕ್ ಭೀಮನ್ವರ್ ಬುಧವಾರ ಹೇಳಿದ್ದಾರೆ.

ಇದನ್ನೂ ಓದಿ:

ಕಾರಿನ ಮಾಲೀಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ವಿಶಾಲ್​ ಅಗರ್ವಾಲ್​ 1,758 ರೂ.ಗಳ ಶುಲ್ಕವನ್ನು ಪಾವತಿಸದ ಕಾರಣ ಪೋರ್ಷೆ ಟೇಕಾನ್ ನ ಶಾಶ್ವತ ನೋಂದಣಿ ಆಗಿರಲಿಲ್ಲ. ಆ ಪ್ರಕ್ರಿಯೆ ಮಾರ್ಚ್ ನಿಂದ ಬಾಕಿ ಉಳಿದಿದೆ ಎಂದು ರಾಜ್ಯ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ. ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಸೆಕ್ಷನ್ 158 ರ ಅಡಿಯಲ್ಲಿ ಹೊಸ ಪ್ರಕರಣ ದಾಖಲಾದ ನಂತರ ಬಾಲಕನನ್ನು ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ವಿಶಾಲ್ ಅಗರ್ವಾಲ್ ಅವರನ್ನು ಬುಧವಾರ ಪುಣೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಅವರನ್ನು ಮೇ 24 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ಚಾಣಾಕ್ಷತನ ಮೆರೆದ ಪೊಲೀಸರು
ವಿಶಾಲ್‌ ಅಗರ್ವಾಲ್‌ ಇಷ್ಟೆಲ್ಲ ಯೋಜನೆ ರೂಪಿಸಿದರೂ ಪುಣೆ ಕ್ರೈಂ ಬ್ರ್ಯಾಂಚ್‌ ಪೊಲೀಸರು ಸಂಭಾಜಿನಗರದಲ್ಲಿ ವಿಶಾಲ್‌ ಅಗರ್ವಾಲ್‌ ಅವರನ್ನು ಬಂಧಿಸಿದರು. ಸಿಸಿಟಿವಿ ಕ್ಯಾಮೆರಾ ಹಾಗೂ ವಿಶಾಲ್‌ ಅಗರ್ವಾಲ್‌ ಗೆಳೆಯನ ಕಾರಿನ ಜಿಪಿಎಸ್‌ ಟ್ರ್ಯಾಕ್‌ ಮಾಡಿ, ಕೊನೆಗೂ ಅವರನ್ನು ಬಂಧಿಸಿದ್ದಾರೆ. ಸಂಭಾಜಿ ನಗರದ ಲಾಡ್ಜ್‌ನಲ್ಲಿ ಇರುವ ಮಾಹಿತಿ ಪಡೆದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದರು. ರಿಯಲ್‌ ಎಸ್ಟೇಟ್‌ ಉದ್ಯಮಿಯಾಗಿರುವ ವಿಶಾಲ್‌ ಅಗರ್ವಾಲ್‌ ವಿರುದ್ಧ ಪೊಲೀಸರು ಎಫ್‌ಐಆರ್‌ ಕೂಡ ದಾಖಲಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

LeT Associate killed: ಪ್ರಚೋದನಕಾರಿ ಧರ್ಮ ಪ್ರಚಾರಕ ಖ್ವಾರಿ ಇದ್ರಿಸ್‌ ಹತ್ಯೆ; ವಿಷಪೂರಿತ ಸೂಜಿಯಿಂದ ದಾಳಿ!

LeT Associate killed: ಕೆಲವು ದಿನಗಳ ಹಿಂದೆಯಷ್ಟೇ ಅನಾಮಧೇಯ ದಾಳಿಕೋರರು ಮುಜಾಫರ್‌ಬಾದ್‌ನಲ್ಲಿ ಇದ್ರಿಸ್‌ ಮೇಲೆ ವಿಷಪೂರಿತ ಸೂಜಿಯಿಂದ ದಾಳಿ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡ ಪರಿಣಾಮವಾಗಿ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ.

VISTARANEWS.COM


on

LeT Associate killed
Koo

ಹೊಸದಿಲ್ಲಿ: ಕುಖ್ಯಾತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT Associate killed) ಯೊಂದಿಗೆ ನಿಕಟ ಸಂಪರ್ಕ ಮೂಲಭೂತವಾದ ಬೋಧಕ ಖ್ವಾರಿ ಇದ್ರಿಸ್‌(Qari Idris) ಅನುಮಾನಾಸ್ಪದ ಸಂದರ್ಭಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಖ್ವಾರಿ ಇದ್ರಿಸ್‌ ಅಲಿಯಾಸ್ ಘಾಜಿ ಇದ್ರಿಸ್ ಎಂದೂ ಕರೆಯಲ್ಪಡುವ ಇದ್ರಿಸ್, ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ (PoJK) ಕೋಟ್ಲಿ-ಮಿರ್‌ಪುರ್ ವಿಭಾಗದಲ್ಲಿ ಭಯೋತ್ಪಾದನಾ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆಯಷ್ಟೇ ಅನಾಮಧೇಯ ದಾಳಿಕೋರರು ಮುಜಾಫರ್‌ಬಾದ್‌ನಲ್ಲಿ ಇದ್ರಿಸ್‌ ಮೇಲೆ ವಿಷಪೂರಿತ ಸೂಜಿಯಿಂದ ದಾಳಿ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡ ಪರಿಣಾಮವಾಗಿ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಖ್ವಾರಿ ಇದ್ರಿಸ್‌ ಪ್ರದೇಶದಾದ್ಯಂತ ಹಲವಾರು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕೆ ಹೆಸರುವಾಸಿಯಾದ ಲಷ್ಕರ್-ಎ-ತೈಬಾದೊಂದಿಗೆ ದೀರ್ಘಕಾಲದ ಒಡನಾಟವನ್ನು ಹೊಂದಿರುವ ತೀವ್ರಗಾಮಿ ಬೋಧಕರಾಗಿದ್ದ. ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಭಯೋತ್ಪಾದಕ ಬಣಗಳ ನಡುವೆ ನಡೆಯುತ್ತಿರುವ ಸಂಘರ್ಷದ ಕಾರಣಗಳಿಂದಾಗಿದೆ ಇದ್ರಿಸ್‌ ಹತ್ಯೆ ಯಾಗಿದೆ ಎಂದು ಹಲವರು ಶಂಕಿಸಿದ್ದಾರೆ.ಕೆಲವು ದಿನಗಳ ಹಿಂದೆಯಷ್ಟೇ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಮಾಜಿ ಸದಸ್ಯ, ಜಮಾತ್-ಇ-ಇಸ್ಲಾಮಿ J&K ನಾಯಕ ಮತ್ತು ಹುರಿಯತ್ ಚಳವಳಿಯ ಪ್ರಮುಖ ವ್ಯಕ್ತಿ ಮೌಲಾನಾ ಗುಲಾಂ ನಬಿ ನೌಶ್ರಿ ಕೂಡ ನಿಗೂಢವಾಗಿ ಸಾವನ್ನಪ್ಪಿದ್ದ.

ಕಳೆದ ವಾರ, ಪಾಕಿಸ್ತಾನ ಪಂಜಾಬ್‌ನ ಝೀಲಂ ಪ್ರದೇಶದ ಲಿಲ್ಲಾ ಇಂಟರ್‌ಚೇಂಜ್‌ನಲ್ಲಿ ಪಾಕಿಸ್ತಾನದ ನಿವೃತ್ತ ಸೇನಾ ಬ್ರಿಗೇಡಿಯರ್ ಅಮೀರ್ ಹಮ್ಜಾನನ್ನು ಅಪರಿಚಿತ ಬಂದೂಕುಧಾರಿಗಳು ಮಾರಣಾಂತಿಕವಾಗಿ ಹೊಡೆದುರುಳಿಸಿದ್ದರು. ಬ್ರಿಗೇಡಿಯರ್ ಹಮ್ಜಾ ತನ್ನ ಪತ್ನಿ ಮತ್ತು ಮಗಳೊಂದಿಗೆ ಪ್ರಯಾಣಿಸುತ್ತಿದ್ದಾಗ ನಡೆದ ದಾಳಿಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:Mamata Banerjee: ಬಾಂಗ್ಲಾದೇಶದೊಂದಿಗೆ ಜಲ ಹಂಚಿಕೆಯ ಮಾತುಕತೆ: ಮಮತಾ ಬ್ಯಾನರ್ಜಿ ವಿರೋಧ; ಪ್ರಧಾನಿಗೆ ಪತ್ರ

Continue Reading

ಕರ್ನಾಟಕ

Udhayanidhi Stalin: ಸನಾತನ ಧರ್ಮದ ವಿರುದ್ಧ ಹೇಳಿಕೆ; ಇಂದು ಬೆಂಗಳೂರು ಕೋರ್ಟ್‌ನಲ್ಲಿ ಉದಯನಿಧಿ ಸ್ಟಾಲಿನ್‌ ವಿಚಾರಣೆ

Udhayanidhi Stalin: ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ವಿಚಾರಕ್ಕೆ ಸಂಬಂಧಿಸಿ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ (Udhayanidhi Stalin) ಇಂದು (ಜೂನ್‌ 25) ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಉದಯನಿಧಿ ಸ್ಟಾಲಿನ್ ಕಳೆದ ವರ್ಷ ನೀಡಿದ್ದ ಹೇಳಿಕೆ ಸಂಬಂಧ ಪರಮೇಶ್ ಎಂಬವರು ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

VISTARANEWS.COM


on

Udhayanidhi Stalin
Koo

ಬೆಂಗಳೂರು: ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ವಿಚಾರಕ್ಕೆ ಸಂಬಂಧಿಸಿ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ (Udhayanidhi Stalin) ಇಂದು (ಜೂನ್‌ 25) ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಉದಯನಿಧಿ ಸ್ಟಾಲಿನ್ ಕಳೆದ ವರ್ಷ ನೀಡಿದ್ದ ಹೇಳಿಕೆ ಸಂಬಂಧ ಪರಮೇಶ್ ಎಂಬವರು ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಕೋರ್ಟ್‌ ಸಮನ್ಸ್ ಜಾರಿ ಮಾಡಿತ್ತು. ಹೀಗಾಗಿ ಉದಯನಿಧಿ ಸ್ಟಾಲಿನ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಉದಯನಿಧಿ ಸ್ಟಾಲಿನ್ ಆಗಮನದ ಹಿನ್ನೆಲೆಯಲ್ಲಿ ಕೋರ್ಟ್‌ ಆವರಣದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೂವರು ಇನ್ಸ್‌ಪೆಕ್ಟರ್‌ ಸೇರಿದಂತೆ 70ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ಏನಿದು ವಿವಾದ?

ತಮಿಳುನಾಡಿನ ಸಿಎಂ ಎಂ.ಕೆ.‌ ಸ್ಟಾಲಿನ್ ಪುತ್ರ ಹಾಗೂ ಕ್ರೀಡಾ ಸಚಿವರಾಗಿರುವ ಉದಯನಿಧಿ ಸ್ಟಾಲಿನ್‌ 2023ರ ಸೆ. 4ರಂದು ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ “ಸನಾತನ ನಿರ್ಮೂಲನಾ ಸಮಾವೇಶ”ದಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್‌ ಸನಾತನ ಧರ್ಮದ ಉಲ್ಲೇಖ ಮಾಡಿದ್ದರು. “ ಸನಾತನ ಧರ್ಮ ಕೊರೊನಾ, ಡೆಂಗ್ಯೂ, ಮಲೇರಿಯಾ ಇದ್ದಂತೆ. ಇಂತಹ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು. ನೀವು “ಸನಾತನ ವಿರೋಧಿ ಸಮ್ಮೇಳನ” ಎಂಬುದಾಗಿ ಆಯೋಜಿಸುವ ಬದಲು “ಸನಾತನ ನಿರ್ಮೂಲನಾ ಸಮ್ಮೇಳನ” ಎಂಬುದಾಗಿ ಕಾರ್ಯಕ್ರಮ ಆಯೋಜಿಸಿದ್ದು ನನಗೆ ಇಷ್ಟವಾಯಿತು” ಎಂದು ಹೇಳಿದ್ದರು.

ಉದಯನಿಧಿ ಸ್ಟಾಲಿನ್‌ ಅವರು ಈ ಹೇಳಿಕೆ ನೀಡಿದ ಬಳಿಕ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಪರ-ವಿರೋಧ ಚರ್ಚೆಗಳು ಆರಂಭವಾಗಿದ್ದವು. ಬಿಜೆಪಿ ನಾಯಕರಂತೂ ಉದಯನಿಧಿ ಸ್ಟಾಲಿನ್‌ ಅವರ ಮೇಲೆ ಮುಗಿಬಿದ್ದಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರೇ, “ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲೆಂದೇ ಪ್ರತಿಪಕ್ಷಗಳು ಒಗ್ಗೂಡಿ ಇಂಡಿಯಾ ಎಂಬ ಒಕ್ಕೂಟ ರಚಿಸಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದ ಉದಯನಿಧಿ ಸ್ಟಾಲಿನ್‌, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ಕಾನೂನು ಹೋರಾಟಕ್ಕೂ ಸಿದ್ಧನಾಗಿದ್ದೇನೆ ಎಂದು ಹೇಳಿದ್ದರು.

ಈ ವಿವಾದ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಉದಯನಿಧಿ ಸ್ಟಾಲಿನ್‌ ಹಾಗೂ ತಮಿಳುನಾಡು ಸರ್ಕಾರ ಸೇರಿ 16 ಜನರಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿಗೊಳಿಸಿತ್ತು. ತಮಿಳುನಾಡು ಸರ್ಕಾರ, ಉದಯನಿಧಿ ಸ್ಟಾಲಿನ್‌, ಮತ್ತೊಬ್ಬ ಸಚಿವ ಎ. ರಾಜಾ ಸೇರಿ 16 ಜನರಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿಗೊಳಿಸಿತ್ತು. ಇವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಪ್ರತಿಕ್ರಿಯೆ ನೀಡುವಂತೆ ತಮಿಳುನಾಡು ಸರ್ಕಾರ ಹಾಗೂ 15 ಜನರಿಗೆ ನೋಟಿಸ್‌ ಜಾರಿಗೊಳಿಸಿತ್ತು. ಎ.ರಾಜಾ ಕೂಡ ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇವರ ವಿರುದ್ಧ ಚೆನ್ನೈ ಮೂಲದ ಬಿ. ಜಗನ್ನಾಥ್‌ ಕೋರ್ಟ್‌ ಮೊರೆ ಹೋಗಿದ್ದರು.

ಇದನ್ನೂ ಓದಿ: Udhayanidhi Stalin: ಸಂಸತ್‌ಗೆ ಮುರ್ಮುರನ್ನು ಆಹ್ವಾನಿಸದಿರುವುದೇ ಸನಾತನ ಧರ್ಮ ಎಂದ ಉದಯನಿಧಿ

Continue Reading

ದೇಶ

Mamata Banerjee: ಬಾಂಗ್ಲಾದೇಶದೊಂದಿಗೆ ಜಲ ಹಂಚಿಕೆಯ ಮಾತುಕತೆ: ಮಮತಾ ಬ್ಯಾನರ್ಜಿ ವಿರೋಧ; ಪ್ರಧಾನಿಗೆ ಪತ್ರ

Mamata Banerjee: ಕೇಂದ್ರ ಸರ್ಕಾರ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವೆ ಮತ್ತೊಂದು ಸುತ್ತಿನ ಜಿದ್ದಾಜಿದ್ದಿ ಆರಂಭವಾಗಿದೆ. ನೀರು ಹಂಚಿಕೆ ಕುರಿತು ಬಾಂಗ್ಲಾದೇಶದೊಂದಿಗೆ ಕೇಂದ್ರ ನಡೆಸಿದ ಮಾತುಕತೆಗೆ ಆಕ್ಷೇಪ ವ್ಯಕ್ತಪಡಿಸಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

VISTARANEWS.COM


on

Mamata Banerjee
Koo

ಕೋಲ್ಕತ್ತಾ: ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್‌ ನಾಯಕಿ ಮಮತಾ ಬ್ಯಾನರ್ಜಿ (Mamata Banerjee) ನಡುವೆ ಮತ್ತೊಂದು ಸುತ್ತಿನ ಜಿದ್ದಾಜಿದ್ದಿ ಆರಂಭವಾಗಿದೆ. ನೀರು ಹಂಚಿಕೆ ಕುರಿತು ಬಾಂಗ್ಲಾದೇಶದೊಂದಿಗೆ ಕೇಂದ್ರ ನಡೆಸಿದ ಮಾತುಕತೆಗೆ ಆಕ್ಷೇಪ ವ್ಯಕ್ತಪಡಿಸಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪತ್ರ ಬರೆದಿದ್ದಾರೆ.

ತೀಸ್ತಾ ನೀರು ಹಂಚಿಕೆ ಮತ್ತು 1996ರ ಗಂಗಾ ಜಲ ಒಪ್ಪಂದವನ್ನು ನವೀಕರಿಸುವ ಕೇಂದ್ರದ ಪ್ರಸ್ತಾಪವನ್ನು ತಿರಸ್ಕರಿಸಿದ ಅವರು, “ಸಮಾಲೋಚನೆ ಮತ್ತು ರಾಜ್ಯ ಸರ್ಕಾರದ ಅಭಿಪ್ರಾಯವಿಲ್ಲದೆ ಇಂತಹ ಏಕಪಕ್ಷೀಯ ಚರ್ಚೆಗಳು ಮತ್ತು ಚರ್ಚೆಗಳು ಸ್ವೀಕಾರಾರ್ಹವಲ್ಲ” ಎಂದು ಎಂದು ಹೇಳಿದ್ದಾರೆ. ಬಾಂಗ್ಲಾದೇಶದ ಜತೆ ನಡೆದ ಮಾತುಕತೆಗೆ ಪಶ್ಚಿಮ ಬಂಗಾಳ ಸರ್ಕಾರವನ್ನು ಆಹ್ವಾನಿಸಿಲ್ಲ ಎಂದೂ ಅವರು ಆರೋಪಿಸಿದ್ದಾರೆ.

ಇತ್ತ ಕೇಂದ್ರ ಸರ್ಕಾರ ಈ ಆರೋಪವನ್ನು ತಳ್ಳಿ ಹಾಕಿದ್ದು, 1996ರ ಜಲ ಒಪ್ಪಂದದ ಆಂತರಿಕ ಪರಿಶೀಲನೆ ನಡೆಸಲು ಉದ್ದೇಶಿಸಿರುವ ಸಮಿತಿಗೆ ನಾಮನಿರ್ದೇಶಿತರನ್ನು ಕಳುಹಿಸುವಂತೆ ಕಳೆದ ವರ್ಷ ಜುಲೈಯಲ್ಲಿ ಬಂಗಾಳ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು ಎಂದು ತಿರುಗೇಟು ನೀಡಿದೆ. ಆಗಸ್ಟ್‌ನಲ್ಲಿ ರಾಜ್ಯವು ನೀರಾವರಿ ಮತ್ತು ಜಲಮಾರ್ಗಗಳ ನಿರ್ದೇಶನಾಲಯದ ಮುಖ್ಯ ಎಂಜಿನಿಯರ್ ಅವರನ್ನು ನಾಮನಿರ್ದೇಶನ ಮಾಡಿತು. ಈ ವರ್ಷದ ಏಪ್ರಿಲ್ 5ರಂದು ನೀರಾವರಿ ಮತ್ತು ಜಲಮಾರ್ಗಗಳ ಇಲಾಖೆಯ ಬಂಗಾಳದ ಜಂಟಿ ಕಾರ್ಯದರ್ಶಿ ಮುಂದಿನ 30 ವರ್ಷಗಳವರೆಗೆ ರಾಜ್ಯದ ಒಟ್ಟು ಬೇಡಿಕೆಯನ್ನು ತಿಳಿಸಿದ್ದರು ಎಂದು ಮೂಲಗಳು ಹೇಳಿವೆ.

ಗಂಗಾ ಜಲ ಒಪ್ಪಂದವನ್ನು ನವೀಕರಿಸುವ ಮತ್ತು ತೀಸ್ತಾ ನೀರು ಹಂಚಿಕೆಯ ಬಗ್ಗೆ ಭಾರತ-ಬಾಂಗ್ಲಾದೇಶದ ನಡುವೆ ಶನಿವಾರ ಚರ್ಚೆ ನಡೆಯಿತು. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ದೆಹಲಿಗೆ ಆಗಮಿಸಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

“ಕೇಂದ್ರ ಸರ್ಕಾರವು ಭಾರತ-ಬಾಂಗ್ಲಾದೇಶದ 1996 ಫರಕ್ಕಾ ಒಪ್ಪಂದ (Farakka Treaty)ವನ್ನು ನವೀಕರಿಸಲು ಮುಂದಾಗಿದೆ ಎನ್ನುವುದನ್ನು ಅರ್ಥ ಮಾಡಿಕೊಂಡಿದ್ದೇನೆ. ಈಗಿನ ಒಪ್ಪಂದ 2026ರಲ್ಲಿ ಮುಕ್ತಾಯಗೊಳ್ಳಲಿದೆ. ಈ ಒಪ್ಪಂದವನ್ನು ನವೀಕರಿಸಿದರೆ ಪಶ್ಚಿಮ ಬಂಗಾಳದ ಜನರ ಮೇಲೆ ಭಾರಿ ಪರಿಣಾಮಗಳನ್ನು ಬೀರುತ್ತದೆ” ಎಂದು ಮಮತಾ ಬ್ಯಾನರ್ಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಂತಹ ಒಪ್ಪಂದದಿಂದ ಬಂಗಾಳದ ಜನರು ತೊಂದರೆ ಅನುಭವಿಸಲಿದ್ದಾರೆ ಎಂದೂ ಹೇಳಿದ್ದಾರೆ.

“ಪಶ್ಚಿಮ ಬಂಗಾಳವು ಈ ಹಿಂದೆ ಹಲವು ವಿಷಯಗಳಲ್ಲಿ ಬಾಂಗ್ಲಾದೇಶಕ್ಕೆ ಸಹಕಾರ ನೀಡಿದೆ. ಎರಡೂ ಸರ್ಕಾರಗಳು ಜತೆಯಾಗಿ ಕೆಲಸ ಮಾಡಿವೆ. ಆದರೆ ನೀರಿನ ವಿಷಯದಲ್ಲಿ ಯಾವುದೇ ರಾಜಿಮಾಡಿಕೊಳ್ಳಲು ಸಾಧ್ಯವಿಲ್ಲ. ನೀರು ಜನರ ಜೀವನಾಡಿ. ಜನರ ಮೇಲೆ ತೀವ್ರ ಮತ್ತು ಪ್ರತಿಕೂಲ ಪರಿಣಾಮ ಬೀರುವ ಇಂತಹ ಸೂಕ್ಷ್ಮ ವಿಷಯದ ಬಗ್ಗೆ ನಾವು ರಾಜಿ ಮಾಡಿಕೊಳ್ಳಲು ತಯಾರಿಲ್ಲ” ಎಂದು ಅವರು ಪಟ್ಟು ಹಿಡಿದಿದ್ದಾರೆ.

ಉತ್ತರ ಬಂಗಾಳದ ತೀಸ್ತಾ ನದಿಯ ನೀರನ್ನು ಹಂಚಿಕೊಳ್ಳುವ ಪ್ರಸ್ತಾಪವನ್ನು ಉಲ್ಲೇಖಿಸಿದ ಅವರು, ʼʼಸಿಕ್ಕಿಂನ ಜಲವಿದ್ಯುತ್ ಯೋಜನೆಗಳ ಮತ್ತು ನದಿಯ ಜಲಾನಯನ ಪ್ರದೇಶದಲ್ಲಿನ ಅರಣ್ಯನಾಶದಿಂದಾಗಿ ತೀಸ್ತಾ ನದಿಯಲ್ಲಿ ಈಗ ಹಂಚಿಕೊಳ್ಳಲು ಸಾಕಷ್ಟು ನೀರು ಇಲ್ಲ. ತೀಸ್ತಾ ನೀರನ್ನು ಬಾಂಗ್ಲಾದೇಶದೊಂದಿಗೆ ಹಂಚಿಕೊಳ್ಳಲು ಸಾಧ್ಯವಿಲ್ಲʼʼ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: Bangladesh election: ಬಾಂಗ್ಲಾದೇಶದಲ್ಲಿ 5ನೇ ಅವಧಿಗೆ ಚುನಾವಣೆ ಗೆದ್ದ ಶೇಖ್ ಹಸೀನಾ!

Continue Reading

ದೇಶ

Hunger Strike: ಉಪವಾಸ ಸತ್ಯಾಗ್ರಹ ಮಾಡ್ತಿದ್ದ ದಿಲ್ಲಿ ಸಚಿವೆ ಆಸ್ಪತ್ರೆಗೆ ದಾಖಲು

Hunger Strike:ಸೋಮವಾರದ ಅನಿರ್ದಿಷ್ಟಾವಧಿ ಉಪವಾಸದ ನಾಲ್ಕನೇ ದಿನಕ್ಕೆ ಆಕೆಯ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದ್ದರು. ಹರ್ಯಾಣವು “ದೆಹಲಿಯ ನೀರಿನ ಸರಿಯಾದ ಪಾಲನ್ನು” ಬಿಡುಗಡೆ ಮಾಡುವವರೆಗೂ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳ ಹೊರತಾಗಿಯೂ, ಅತಿಶಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ನಿರಾಕರಿಸಿದ್ದರು.

VISTARANEWS.COM


on

Hunger Strike
Koo

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯ ಕೆಲವು ಭಾಗಗಳಲ್ಲಿ ನೀರಿನ ಕೊರತೆ ವಿರುದ್ಧ ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ(Hunger Strike) ನಡೆಸುತ್ತಿರುವ ಜಲ ಸಚಿವೆ ಅತಿಶಿ(Delhi Water Minister Atishi) ಆರೋಗ್ಯ ಸ್ಥಿತಿ ತೀರ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ತೂಕ 65.8 ಕೆಜಿಯಿಂದ 63.6 ಕೆಜಿಗೆ ಇಳಿದಿದೆ. 4 ದಿನಗಳಲ್ಲಿ 2.2 ಕೆಜಿಯಷ್ಟು ತೂಕ ಕಡಿಮೆಯಾಗಿದೆ ಎಂದು ಪಕ್ಷ ಹೇಳಿದೆ.

ಸೋಮವಾರದ ಅನಿರ್ದಿಷ್ಟಾವಧಿ ಉಪವಾಸದ ನಾಲ್ಕನೇ ದಿನಕ್ಕೆ ಆಕೆಯ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದ್ದರು. ಹರ್ಯಾಣವು “ದೆಹಲಿಯ ನೀರಿನ ಸರಿಯಾದ ಪಾಲನ್ನು” ಬಿಡುಗಡೆ ಮಾಡುವವರೆಗೂ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳ ಹೊರತಾಗಿಯೂ, ಅತಿಶಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ನಿರಾಕರಿಸಿದ್ದರು.

“ನನ್ನ ರಕ್ತದೊತ್ತಡ ಮತ್ತು ಸಕ್ಕರೆ ಮಟ್ಟವು ಕುಸಿಯುತ್ತಿದೆ ಮತ್ತು ನನ್ನ ತೂಕವು ಕಡಿಮೆಯಾಗಿದೆ. ಕೀಟೋನ್ ಮಟ್ಟವು ತುಂಬಾ ಹೆಚ್ಚಾಗಿರುತ್ತದೆ, ಇದು ದೀರ್ಘಾವಧಿಯಲ್ಲಿ ಹಾನಿಕಾರಕ ಪರಿಣಾಮಗಳನ್ನು ಉಂಟುಮಾಡುತ್ತದೆ. ನನ್ನ ದೇಹವು ಎಷ್ಟೇ ನರಳಿದರೂ ಹರಿಯಾಣ ನೀರು ಬಿಡುವವರೆಗೆ ನಾನು ಉಪವಾಸವನ್ನು ಮುಂದುವರಿಸುತ್ತೇನೆ” ಎಂದು ಅವರು ಜಂಗ್‌ಪುರದ ಭೋಗಲ್‌ನಲ್ಲಿ ಉಪವಾಸ ಸತ್ಯಾಗ್ರಹದ ಸ್ಥಳದಲ್ಲಿ ಹೇಳಿದರು.

ಮತ್ತೊಂದು ಹೇಳಿಕೆಯಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ಅತಿಶಿ ಅವರ ತೂಕ ಮತ್ತು ರಕ್ತದೊತ್ತಡವು ವೇಗವಾಗಿ ಕಡಿಮೆಯಾಗುತ್ತಿದೆ ಎಂದು ಹೇಳಿದೆ, ಇದು “ಅಪಾಯಕಾರಿ” ಎಂದು ಎಲ್‌ಎನ್‌ಜೆಪಿ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಜಲ ಸಚಿವೆ ಅತಿಶಿ ಅವರ ತೂಕ ಕೂಡ ಅನಿರೀಕ್ಷಿತವಾಗಿ ಕಡಿಮೆಯಾಗುತ್ತಿದೆ. ಜೂನ್ 21ರಂದು ಉಪವಾಸ ಸತ್ಯಾಗ್ರಹಕ್ಕೆ ಕುಳಿತುಕೊಳ್ಳುವ ಮುನ್ನ ಅವರ ತೂಕ 65. 8 ಕೆಜಿಯಷ್ಟಿತ್ತು, ಉಪವಾಸ ಸತ್ಯಾಗ್ರಹದ ನಾಲ್ಕನೇ ದಿನಕ್ಕೆ 63.6 ಕೆಜಿಗೆ ಇಳಿದಿದೆ. ಅಂದರೆ, ಅವರ ತೂಕವು ಕೇವಲ 4 ದಿನಗಳಲ್ಲಿ 2.2 ಕೆ.ಜಿ. ಕಡಿಮೆಯಾಗಿದೆ. ಉಪವಾಸ ಸತ್ಯಾಗ್ರಹದ ಮೊದಲ ದಿನಕ್ಕೆ ಹೋಲಿಸಿದರೆ ನಾಲ್ಕನೇ ದಿನದಲ್ಲಿ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ 28 ಯೂನಿಟ್‌ಗಳಷ್ಟು ಕಡಿಮೆಯಾಗಿದೆ ಎಂದು ಅದು ಹೇಳಿದೆ.

ಉಪವಾಸ ಸತ್ಯಾಗ್ರಹದ ಮೊದಲ ದಿನಕ್ಕೆ ಹೋಲಿಸಿದರೆ ಅತಿಶಿ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣವು 4ನೇ ದಿನ 28 ಯೂನಿಟ್‌ಗಳಷ್ಟು ಕಡಿಮೆಯಾಗಿದೆ. ಇದರೊಂದಿಗೆ ಆಕೆಯ ರಕ್ತದೊತ್ತಡದ ಮಟ್ಟವೂ ಕಡಿಮೆಯಾಗಿದೆ. ಅತಿಶಿಯ ರಕ್ತದಲ್ಲಿನ ಸಕ್ಕರೆಯ ಮಟ್ಟ, ರಕ್ತದೊತ್ತಡ ಮತ್ತು ತೂಕ ಕಡಿಮೆಯಾಗುತ್ತಿರುವ ವೇಗವನ್ನು ವೈದ್ಯರು ಅಪಾಯಕಾರಿ ಎಂದು ವಿವರಿಸಿದ್ದಾರೆ. ಅವರ ಕೀಟೋನ್ ಮಟ್ಟವು ತುಂಬಾ ಹೆಚ್ಚಾಗಿದೆ. ಇದು ದೇಹವನ್ನು ಹಾನಿಗೊಳಿಸುತ್ತದೆ ಎಎಪಿ ಹೇಳಿದೆ.

ಇದನ್ನೂ ಓದಿ: Nita Ambani: ಕಾಶಿ ವಿಶ್ವನಾಥ ದೇಗುಲಕ್ಕೆ ತೆರಳಿ ಮಗನ ಮದುವೆಗೆ ದೇವರನ್ನು ಆಮಂತ್ರಿಸಿದ ನೀತಾ ಅಂಬಾನಿ!

Continue Reading
Advertisement
Viral Video
Latest1 min ago

Viral Video: ವೃದ್ಧ ರೋಗಿಯ ಮೇಲೆ ದರ್ಪ ತೋರಿದ ಆಸ್ಪತ್ರೆ ಸಿಬ್ಬಂದಿ; ಆಘಾತಕಾರಿ ವಿಡಿಯೊ

LeT Associate killed
ದೇಶ8 mins ago

LeT Associate killed: ಪ್ರಚೋದನಕಾರಿ ಧರ್ಮ ಪ್ರಚಾರಕ ಖ್ವಾರಿ ಇದ್ರಿಸ್‌ ಹತ್ಯೆ; ವಿಷಪೂರಿತ ಸೂಜಿಯಿಂದ ದಾಳಿ!

Udhayanidhi Stalin
ಕರ್ನಾಟಕ35 mins ago

Udhayanidhi Stalin: ಸನಾತನ ಧರ್ಮದ ವಿರುದ್ಧ ಹೇಳಿಕೆ; ಇಂದು ಬೆಂಗಳೂರು ಕೋರ್ಟ್‌ನಲ್ಲಿ ಉದಯನಿಧಿ ಸ್ಟಾಲಿನ್‌ ವಿಚಾರಣೆ

AFG vs BAN
ಕ್ರೀಡೆ39 mins ago

AFG vs BAN: ರೋಚಕ ಗೆಲುವು ಸಾಧಿಸಿ ಸೆಮಿಫೈನಲ್​ಗೆ ಲಗ್ಗೆಯಿಟ್ಟ ಆಫ್ಘನ್​; ಟೂರ್ನಿಯಿಂದ ಹೊರಬಿದ್ದ ಆಸೀಸ್​

Mamata Banerjee
ದೇಶ1 hour ago

Mamata Banerjee: ಬಾಂಗ್ಲಾದೇಶದೊಂದಿಗೆ ಜಲ ಹಂಚಿಕೆಯ ಮಾತುಕತೆ: ಮಮತಾ ಬ್ಯಾನರ್ಜಿ ವಿರೋಧ; ಪ್ರಧಾನಿಗೆ ಪತ್ರ

physical abuse mandya
ಕ್ರೈಂ1 hour ago

Physical Abuse: ಅಪ್ರಾಪ್ತ ಮಗಳನ್ನು ಗರ್ಭಿಣಿ ಮಾಡಿದ ಕಾಮಪಿಶಾಚಿ ಅಪ್ಪನಿಗೆ ಗೂಸಾ

Paris Olympics 2024
ಕ್ರೀಡೆ2 hours ago

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಕರ್ನಾಟಕದ ಅದಿತಿ ಅಶೋಕ್

Hunger Strike
ದೇಶ2 hours ago

Hunger Strike: ಉಪವಾಸ ಸತ್ಯಾಗ್ರಹ ಮಾಡ್ತಿದ್ದ ದಿಲ್ಲಿ ಸಚಿವೆ ಆಸ್ಪತ್ರೆಗೆ ದಾಖಲು

Suraj Revanna Case
ಪ್ರಮುಖ ಸುದ್ದಿ2 hours ago

Suraj Revanna Case: ತಮ್ಮನಿಗೆ ಮೂರು ಸಲ; ಈಗ ಅಣ್ಣನಿಗೂ ಪುರುಷತ್ವ ಪರೀಕ್ಷೆ! ಇದೇ ಬೇರೆ ಥರ!

Job Alert
ಉದ್ಯೋಗ2 hours ago

Job Alert: ಈಶಾನ್ಯ ರೈಲ್ವೆ ವಿಭಾಗದಿಂದ 1,104 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ಅಪ್ಲೈ ಮಾಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ4 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ4 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ5 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌