Bangladesh Unrest: ಭಾರತದ ಗಡಿಯೊಳಗೆ ಪ್ರವೇಶಕ್ಕೆ ಬಾಂಗ್ಲಾದ 600 ಜನ ಯತ್ನ-BSF ಮಾಹಿತಿ - Vistara News

ದೇಶ

Bangladesh Unrest: ಭಾರತದ ಗಡಿಯೊಳಗೆ ಪ್ರವೇಶಕ್ಕೆ ಬಾಂಗ್ಲಾದ 600 ಜನ ಯತ್ನ-BSF ಮಾಹಿತಿ

Bangladesh Unrest: ಬಾಂಗ್ಲಾದಲ್ಲಿ ಪರಿಸ್ಥಿತಿ ದಿನೇ ದಿನೇ ಬಿಗಡಾಯಿಸುತ್ತಿದ್ದು, ಕ್ಷಣ ಕ್ಷಣಕ್ಕೂ ಪ್ರಾಣಭೀತಿ ಎದುರಿಸುತ್ತಿರುವುದಾಗಿ ಹೇಳಿಕೊಂಡು ಅನೇಕ ಜನರು ಭಾರತದ ಗಡಿಯೊಳಗೆ ಪ್ರವೇಶಿಸಲು ಅವಕಾಶ ನೀಡುವಂತೆ ಬಿಎಸ್‌ಎಫ್‌ ಸಿಬ್ಬಂದಿ ಮನವಿ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ದಕ್ಷಿಣ್ ಬೆರುಬರಿ ಗ್ರಾಮದಲ್ಲಿ ಈ ಗುಂಪು ಭಾರತದ ಗಡಿ ದಾಟಲು ಪ್ರಯತ್ನಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Bangladesh unrest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕತ್ತಾ: ಬಾಂಗ್ಲಾದೇಶದಲ್ಲಿ ಹಿಂಸಾಚಾರ(Bangladesh Unrest) ಮುಂದುವರೆದಿರುವ ಹಿನ್ನೆಲೆ ಅಲ್ಲಿನ ಸುಮಾರು 600 ಜನ ಅಕ್ರಮವಾಗಿ ಪಶ್ಚಿಮ ಬಂಗಾಳದ ಗಡಿಪ್ರದೇಶದೊಳಗೆ ಅಕ್ರಮವಾಗಿ ಒಳನುಸುಳಲು ಯತ್ನಿಸಿದ್ದು, ಅವರನ್ನು ತಡೆಯುವಲ್ಲಿ ಗಡಿ ಭದ್ರತಾ ಪಡೆ(BSF) ಯಶಸ್ವಿಯಾಗಿದೆ. ಬಾಂಗ್ಲಾದೇಶ ಪ್ರಧಾನಿ ಶೇಖ್‌ ಹಶೀನಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಅಲ್ಲಿಂದ ಪಲಾಯಣ ಮಾಡಿರುವ ಬೆನ್ನಲ್ಲೇ ಗಡಿ ಪ್ರದೇಶಗಳಲ್ಲಿ ಬಿಎಸ್‌ಎಫ್‌ ಹೈ ಅಲರ್ಟ್‌ ಆಗಿದೆ.

ಬಾಂಗ್ಲಾದಲ್ಲಿ ಪರಿಸ್ಥಿತಿ ದಿನೇ ದಿನೇ ಬಿಗಡಾಯಿಸುತ್ತಿದ್ದು, ಕ್ಷಣ ಕ್ಷಣಕ್ಕೂ ಪ್ರಾಣಭೀತಿ ಎದುರಿಸುತ್ತಿರುವುದಾಗಿ ಹೇಳಿಕೊಂಡು ಅನೇಕ ಜನರು ಭಾರತದ ಗಡಿಯೊಳಗೆ ಪ್ರವೇಶಿಸಲು ಅವಕಾಶ ನೀಡುವಂತೆ ಬಿಎಸ್‌ಎಫ್‌ ಸಿಬ್ಬಂದಿ ಮನವಿ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ದಕ್ಷಿಣ್ ಬೆರುಬರಿ ಗ್ರಾಮದಲ್ಲಿ ಈ ಗುಂಪು ಭಾರತದ ಗಡಿ ದಾಟಲು ಪ್ರಯತ್ನಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಅವರು ನಮ್ಮಲ್ಲಿ ಮನವಿ ಮಾಡಿದರು ಮತ್ತು ದೇಶಕ್ಕೆ ಬಿಡುವಂತೆ ಕೇಳಿಕೊಂಡರು, ಅವರು ದಾಳಿಗೆ ಹೆದರುತ್ತಿರುವುದಾಗಿ ಮತ್ತು ತಮ್ಮ ಜೀವದ ಭಯವಿದೆ ಎಂದು ಹೇಳಿದ್ದಾರೆ. ಹಾಗೆಂದ ಮಾತ್ರಕ್ಕೆ ಈ ಮಾದರಿಯಲ್ಲಿ ಅವರಿಗೆ ಗಡಿಯೊಳಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ ಎಂದು ಅವರಿಗೆ ಅರ್ಥಮಾಡಿಸಲಾಗಿದೆ ಎಂದು ಹೇಳಿದರು.

ಗುಂಪಿನಲ್ಲಿನ ಕೆಲವು ಜನರು ಚದುರಿಹೋದರೆ, ಅನೇಕರು ಬುಧವಾರ ಸಂಜೆ ತಡವಾಗಿ ಗಡಿ ಬಿಂದುವಿನಲ್ಲಿಯೇ ಇದ್ದರು, ಅಂತಿಮವಾಗಿ ಅವರು ದಾಟಲು ಅವಕಾಶ ನೀಡುತ್ತಾರೆ ಎಂಬ ಆಸೆಯಲ್ಲಿ ಕಾಯುತ್ತಿದ್ದರು. ಮುಳ್ಳುತಂತಿಯ ಮೇಲೆ ಜಮಾಯಿಸಿದ ಜನರು ಒಳಗೆ ಬಿಡುವಂತೆ ಮನವಿ ಮಾಡುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿಯೊಬ್ಬರು ತಿಳಿಸಿದರು.

ಮೀಸಲಾತಿ ವಿರೋಧಿಸಿ ನಿರಂತರ ಪ್ರತಿಭಟನೆ, ಗಲಭೆಗಳ (Bangladesh Unrest) ಬಳಿಕ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಬಾಂಗ್ಲಾದೇಶವನ್ನು (Bangladesh) ತೊರೆದು ಪರಾರಿಯಾಗಿರುವ ನಂತರ, ದೇಶದ ಮಧ್ಯಂತರ ಸರ್ಕಾರದ (interim Budget) ಮುಖ್ಯಸ್ಥರಾಗಿ ನೊಬೆಲ್ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನಸ್ (Muhammad Yunus) ಅವರನ್ನು ನೇಮಕ ಮಾಡಲಾಗಿದೆ. ಇನ್ನು, ಮೊಹಮ್ಮದ್‌ ಯೂನಸ್‌ ಅವರು ಗುರುವಾರ (ಆಗಸ್ಟ್‌ 8) ಹಂಗಾಮಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮೊಹಮ್ಮದ್‌ ಯೂನಸ್‌ ಅವರು ಬಾಂಗ್ಲಾದೇಶದ ಪ್ರಧಾನಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರ ಜತೆಗೆ 15 ಸಲಹೆಗಾರರು ಕೂಡ ಪ್ರಮಾಣವಚನ ಸ್ವೀಕರಿಸಲಿದ್ದಾರೆ” ಎಂದು ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್‌ ವಾಕರ್‌ ಉಜ್‌ ಜಮಾನ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಗುರುವಾರ ರಾತ್ರಿ 8 ಗಂಟೆಗೆ ಮೊಹಮ್ಮದ್‌ ಯೂನಸ್‌ ಅವರು ಪ್ರಧಾನಿಯಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಮೊಹಮ್ಮದ್‌ ಯೂನಸ್‌ ಅವರು ಸದ್ಯ ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿದ್ದಾರೆ. ಎಮಿರೇಟ್ಸ್‌ ವಿಮಾನದಲ್ಲಿ ಮೊಹಮ್ಮದ್‌ ಯೂನಸ್‌ ಅವರು ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಢಾಕಾ ತಲುಪಲಿದ್ದಾರೆ. ಇದರಿಂದಾಗಿ ಢಾಕಾ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಪದಗ್ರಹಣಕ್ಕೂ ಮುನ್ನ ದೇಶದ ಜನರಿಗೆ ಕರೆ ನೀಡಿರುವ ಅವರು, “ಯಾರೂ ಕೂಡ ಹಿಂಸೆಯನ್ನು ಪ್ರಚೋದಿಸಬಾರು ಹಾಗೂ ಹಿಂಸಾಚಾರದಲ್ಲಿ ತೊಡಗಬಾರದು. ಎಲ್ಲರೂ ಶಾಂತಿ ಕಾಪಾಡೋಣ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾ ಹಂಗಾಮಿ ಪ್ರಧಾನಿಯಾಗಿ ಇಂದು ಮೊಹಮ್ಮದ್‌ ಯೂನಸ್‌ ಪದಗ್ರಹಣ; ಶಾಂತಿಗಾಗಿ ಕರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Repo Rate: ಗೃಹಸಾಲದ ಇಎಂಐ ಭಾರ ಇಳಿಕೆ ಇಲ್ಲ; ರೆಪೋ ದರ ಯಥಾಸ್ಥಿತಿ

Repo Rate: ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರಿಪೋ ದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಹಣದುಬ್ಬರ ಇನ್ನೂ ಅಧಿಕ ಮಟ್ಟದಲ್ಲಿ ಇರುವುದರಿಂದ ರಿಪೋ ದರ ಇಳಿಕೆ ಸದ್ಯಕ್ಕೆ ಬೇಡ ಎಂಬುದು ಮಾನಿಟರಿ ಪಾಲಿಸಿ ಕಮಿಟಿಯ ಹೆಚ್ಚಿನ ಸದಸ್ಯರ ಅಭಿಮತದ ಹಿನ್ನಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಇದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ಯಾವುದೇ ಬದಲಾವಣೆ ಆಗುವುದಿಲ್ಲ.

VISTARANEWS.COM


on

Repo Rate
Koo

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರೀಕ್ಷೆಯಂತೆ ರಿಪೋ ದರ (Repo Rate) ಅಥವಾ ಬಡ್ಡಿದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಹಣದುಬ್ಬರ ಇನ್ನೂ ಅಧಿಕ ಮಟ್ಟದಲ್ಲಿ ಇರುವುದರಿಂದ ರಿಪೋ ದರ ಇಳಿಕೆ ಸದ್ಯಕ್ಕೆ ಬೇಡ ಎಂಬುದು ಮಾನಿಟರಿ ಪಾಲಿಸಿ ಕಮಿಟಿ (Monetary Policy Committee)ಯ ಹೆಚ್ಚಿನ ಸದಸ್ಯರ ಅಭಿಮತದ ಹಿನ್ನಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಎಂಪಿಸಿ ಸಭೆಯಲ್ಲಿ ಕೈಗೊಂಡ ಈ ತೀರ್ಮಾನದ ಬಗ್ಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ (Shaktikanta Das) ಮಾಹಿತಿ ನೀಡಿದರು. ಇದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ಯಾವುದೇ ಬದಲಾವಣೆ ಆಗುವುದಿಲ್ಲ.

ʼʼಬಡ್ಡಿ ದರ ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಲಾಗಿದೆ. ಎಂಪಿಸಿ ಸಭೆಯಲ್ಲಿ ಆರು ಸದಸ್ಯರಲ್ಲಿ ನಾಲ್ವರು ಬಡ್ಡಿದರ ಯಥಾಸ್ಥಿತಿ ಮುಂದುವರಿಸುವ ಇಚ್ಛೆ ವ್ಯಕ್ತಪಡಿಸಿದ್ದರಿಂದ ಈ ತೀರ್ಮಾನ ಕೈಗೊಳ್ಳಲಾಗಿದೆʼʼ ಎಂದು ಶಕ್ತಿಕಾಂತ ದಾಸ್ ತಿಳಿಸಿದರು. ಆರ್‌ಬಿಐ ಕೊನೆಯ ಬಾರಿಗೆ 2023ರ ಫೆಬ್ರವರಿಯಲ್ಲಿ ರೆಪೋ ದರವನ್ನು ಶೇ. 6.25ರಿಂದ ಶೇ. 6.50ಕ್ಕೆ ಏರಿಕೆ ಮಾಡಿತ್ತು.

ಗೃಹ ಸಾಲದ ಮೇಲೆ ಪರಿಣಾಮ ಬೀರುವುದಿಲ್ಲ

ರೆಪೋ ದರ ಯಥಾಸ್ಥಿಯಲ್ಲಿರುವುದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ರೆಪೋ ದರವು ಬದಲಾಗದೆ ಉಳಿದಿರುವುದರಿಂದ ಬ್ಯಾಂಕ್‌ಗಳು ಶೀಘ್ರದಲ್ಲೇ ತಮ್ಮ ಸಾಲದ ದರಗಳನ್ನು ಬದಲಾಯಿಸುವ ಸಾಧ್ಯತೆಯಿಲ್ಲ. ಅಂದರೆ ನಿಮ್ಮ ಇಎಂಐ ಸದ್ಯ ಏರಿಕೆ ಅಥವಾ ಇಳಿಕೆಯಾಗುವುದಿಲ್ಲ.

ಹಣದುಬ್ಬರ ನಿಯಂತ್ರಣದ ಗುರಿ

ಹಣದುಬ್ಬರವನ್ನು ನಿಯಂತ್ರಿಸುವುದೇ ಆರ್‌ಬಿಐಯ ಹಣಕಾಸು ನೀತಿಯ ಪ್ರಮುಖ ಗುರಿ. ಪ್ರಸ್ತುತ ಹಣದುಬ್ಬರ ದರ ಆರ್‌ಬಿಐಯ ಗುರಿಯಾದ ಶೇ. 4ಕ್ಕಿಂತ ಹೆಚ್ಚಾಗಿದೆ. ರೆಪೋ ದರವನ್ನು ಕಡಿಮೆ ಮಾಡುವುದು ಆರ್ಥಿಕತೆಯಲ್ಲಿ ಹಣದುಬ್ಬರದ ಒತ್ತಡದ ಹೆಚ್ಚಳಕ್ಕೆ ಕಾರಣವಾಗಬಹುದು. ಪ್ರಸ್ತುತ ದರವನ್ನು ಕಾಯ್ದುಕೊಳ್ಳುವುದು ಹಣದುಬ್ಬರವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ ಮತ್ತು ಸ್ವಲ್ಪ ಆರ್ಥಿಕ ಬೆಳವಣಿಗೆಗೆ ಅನುವು ಮಾಡಿಕೊಡುತ್ತದೆ ಎನ್ನುವುದು ಆರ್‌ಬಿಐಯ ಅಭಿಮತ. ʼʼರೆಪೋ ದರ ಕಡಿತವು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಬಹುದಾದರೂ ಆರ್‌ಬಿಐ ಈ ಹಂತದಲ್ಲಿ ಹಣದುಬ್ಬರವನ್ನು ನಿಯಂತ್ರಿಸಲು ಆದ್ಯತೆ ನೀಡುತ್ತಿದೆʼʼ ಎಂದು ಮೂಲಗಳು ತಿಳಿಸಿವೆ.

ರೆಪೋ ದರ ಎಂದರೇನು?

ದೇಶದ ವಾಣಿಜ್ಯ ಬ್ಯಾಂಕ್‌ಗಳಿಗೆ ಆರ್‌ಬಿಐ ನೀಡುವ ಸಾಲಕ್ಕೆ ವಿಧಿಸುವ ಬಡ್ಡಿದರವೇ ರೆಪೋದರ ಆಗಿದೆ. ಹಣದ ಕೊರತೆ ಸೇರಿ ಯಾವುದೇ ತುರ್ತು ಸಂದರ್ಭಗಳಲ್ಲಿ ವಾಣಿಜ್ಯ ಬ್ಯಾಂಕ್‌ಗಳು ಆರ್‌ಬಿಐನಿಂದ ಸಾಲ ಪಡೆಯುತ್ತವೆ. ಈ ಸಾಲಕ್ಕೆ ಆರ್‌ಬಿಐ ಬಡ್ಡಿ ವಿಧಿಸುತ್ತದೆ. ಇದನ್ನೇ ರೆಪೋ ರೇಟ್‌ ಎನ್ನುತ್ತಾರೆ. ಕೆಲವೊಮ್ಮೆ, ವಾಣಿಜ್ಯ ಬ್ಯಾಂಕ್‌ಗಳಿಂದ ಆರ್‌ಬಿಐ ಸಾಲ ಪಡೆಯತ್ತದೆ. ಆ ಸಾಲದ ಮೇಲಿನ ಬಡ್ಡಿಗೆ ರಿವರ್ಸ್‌ ರೆಪೋ ದರ ಎನ್ನುತ್ತಾರೆ. ರೆಪೋ ದರ ಏರಿಕೆಯಾದರೆ, ಬ್ಯಾಂಕುಗಳು ಕೂಡ ಗ್ರಾಹಕರಿಗೆ ನೀಡುವ ಸಾಲದ ಮೇಲಿನ ಬಡ್ಡಿಯನ್ನು ಏರಿಕೆ ಮಾಡುತ್ತವೆ. ಹಾಗಾಗಿ, ರೆಪೋ ದರವು ಸಾಲಗಾರರಿಗೆ ಪ್ರಮುಖ ಎನಿಸುತ್ತದೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾ ಹಿಂಸಾಚಾರ; ಬಹುರಾಷ್ಟ್ರೀಯ ಕಂಪನಿಗಳು ತತ್ತರ; ಭಾರತದ ಉದ್ಯಮಗಳ ಮೇಲೇನು ಪರಿಣಾಮ?

Continue Reading

ದೇಶ

Henna Jihad: ಹಿಂದೂ ಮಹಿಳೆಯರಿಗೆ ಮುಸ್ಲಿಮರು ಮೆಹಂದಿ ಹಚ್ಚಿದರೆ ಹುಷಾರ್‌! ಭುಗಿಲೆದ್ದ ಹೆನ್ನಾ ಜಿಹಾದ್‌ ವಿವಾದ

Henna Jihad: ಕ್ರಾಂತಿ ಸೇನಾ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಪೂನಂ ಚೌಧರಿ ಮಾತನಾಡಿ, ಹರಿಯಲಿ ತೀಜ್ ಹಿಂದೂಗಳಿಗೆ ಮಹತ್ವದ ಹಬ್ಬವಾಗಿದೆ. ಈ ಸಂದರ್ಭದಲ್ಲಿ ಯಾವುದೇ ಹಿಂದೂ ಮಹಿಳೆ ಮುಸ್ಲಿಂ ಯುವಕರಿಂದ ಮೆಹಂದಿ ಹಚ್ಚಿಸಿಕೊಳ್ಳಬಾರದು. ಇದು ಅವರ ಹಬ್ಬಕ್ಕೆ ಅಗೌರವ ಎಂದು ಪರಿಗಣಿಸಲಾಗಿದೆ.

VISTARANEWS.COM


on

Henna Jihad
Koo

ಲಖನೌ: ಲವ್‌ ಜಿಹಾದ್‌(Love Jihad), ಭೂಮಿ ಜಿಹಾದ್‌ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ಇದೀಗ ಹೆನ್ನಾ ಜಿಹಾದ್‌(Henna Jihad) ವಿಚಾರ ಭಾರೀ ಸದ್ದು ಮಾಡುತ್ತಿದೆ. ಮುಜಾಫರ್‌ನಗರದಲ್ಲಿ ಹರಿಯಲಿ ತೀಜ್ ಹಬ್ಬದ ಸಂದರ್ಭದಲ್ಲಿ ಮೆಹಂದಿ ಹಚ್ಚುವ ಕುರಿತು ಹೊಸ ವಿವಾದ ಹುಟ್ಟಿಕೊಂಡಿದೆ. ಈ ಹಬ್ಬದ ಸಂದರ್ಭದಲ್ಲಿ ಯಾವುದೇ ಮುಸ್ಲಿಂ ಯುವಕರು ಹಿಂದೂ ಮಹಿಳೆಯರಿಗೆ ಮೆಹಂದಿ ಹಚ್ಚುವುದು ಕಂಡುಬಂದರೆ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕ್ರಾಂತಿ ಸೇನೆಯ ಮಹಿಳಾ ಮೋರ್ಚಾ ಘೋಷಿಸಿದೆ.

ಕ್ರಾಂತಿ ಸೇನಾ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಪೂನಂ ಚೌಧರಿ ಮಾತನಾಡಿ, ಹರಿಯಲಿ ತೀಜ್ ಹಿಂದೂಗಳಿಗೆ ಮಹತ್ವದ ಹಬ್ಬವಾಗಿದೆ. ಈ ಸಂದರ್ಭದಲ್ಲಿ ಯಾವುದೇ ಹಿಂದೂ ಮಹಿಳೆ ಮುಸ್ಲಿಂ ಯುವಕರಿಂದ ಮೆಹಂದಿ ಹಚ್ಚಿಸಿಕೊಳ್ಳಬಾರದು. ಇದು ಅವರ ಹಬ್ಬಕ್ಕೆ ಅಗೌರವ ಎಂದು ಪರಿಗಣಿಸಲಾಗಿದೆ. ಈ ಹಬ್ಬದ ಸಂದರ್ಭದಲ್ಲಿ ಯಾವುದೇ ಮುಸ್ಲಿಂ ಯುವಕರು ಹಿಂದೂ ಮಹಿಳೆಯರಿಗೆ ಮೆಹಂದಿ ಹಚ್ಚುವುದು ಕಂಡುಬಂದರೆ ಕ್ರಾಂತಿ ಸೇನೆಯು ತಮ್ಮ ಕೈಗೆತ್ತಿಕೊಳ್ಳುತ್ತದೆ ಎಂದು ಪೂನಂ ಚೌಧರಿ ಎಚ್ಚರಿಸಿದ್ದಾರೆ.

ಕ್ರಾಂತಿ ಸೇನಾ ವಾಡಿಕೆಯಂತೆ ಇಂತಹ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುತ್ತದೆ ಮತ್ತು ಯಾವುದೇ ಮುಸ್ಲಿಂ ಯುವಕರು ಹಿಂದೂ ಮಹಿಳೆಯರಿಗೆ ಮೆಹಂದಿ ಹಚ್ಚುವುದು ಕಂಡುಬಂದರೆ ಕ್ರಮ ತೆಗೆದುಕೊಳ್ಳುತ್ತದೆ, ಏಕೆಂದರೆ ಅದು ಅವರ ಧರ್ಮಕ್ಕೆ ಅವಮಾನ ಎಂದು ಅವರು ನಂಬುತ್ತಾರೆ. ಕನ್ವರ್ ಯಾತ್ರೆಯ ಸಂದರ್ಭದಲ್ಲಿ ಅಂಗಡಿಗಳ ಲೇಬಲ್‌ಗೆ ಸಂಬಂಧಿಸಿದಂತೆ ಮುಜಫರ್‌ನಗರದಲ್ಲಿ ಈ ಹಿಂದೆ ವಿವಾದ ಉಂಟಾಗಿತ್ತು. ಇದೀಗ ಹಿಂದೂ ಹಬ್ಬಗಳ ಸಂದರ್ಭದಲ್ಲಿ ಮೆಹಂದಿ ಹಚ್ಚುವ ವಿಚಾರ ಬಹಳ ಸದ್ದು ಮಾಡುತ್ತಿದೆ.

ಏನಿದು ಹರಿಯಲಿ ತೀಜ್ ಹಬ್ಬ?

ಹರಿಯಲಿ ತೀಜ್ ಉತ್ತರ ಭಾರತದ ರಾಜ್ಯಗಳಲ್ಲಿ ಜನಪ್ರಿಯವಾಗಿರುವ ಪ್ರಮುಖ ಹಬ್ಬವಾಗಿದೆ. ಇದನ್ನು ಶ್ರಾವಣ ಮಾಸದ ಶುಕ್ಲ ಪಕ್ಷ ತೃತೀಯದಂದು ಆಚರಿಸಲಾಗುತ್ತದೆ. ಈ ಸಮಯದಲ್ಲಿ, ವಿವಾಹಿತ ಮಹಿಳೆಯರು ತಮ್ಮ ಗಂಡನ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ಈ ಉಪವಾಸವನ್ನು ಆಚರಿಸುತ್ತಾರೆ. ಹಿಂದೂ ಧರ್ಮದಲ್ಲಿ, ಶ್ರಾವಣ ಮಾಸದಲ್ಲಿ ಬೀಳುವ ತೀಜ್ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ತೀಜ್ ಹಬ್ಬವನ್ನು ಪಾರ್ವತಿ ದೇವಿಗೆ ಸಮರ್ಪಿಸಲಾಗಿದೆ.

ಈ ಮಂಗಳಕರ ಹಬ್ಬದಂದು, ಪಾರ್ವತಿ ದೇವಿಗೆ ಪೂಜೆ, ಉಪವಾಸ ಇತ್ಯಾದಿಗಳನ್ನು ಮಾಡುವ ವಿಧಿ ಇದೆ ಮತ್ತು ಜನರು ಈ ದಿನ ಹಲವಾರು ಮೇಕಪ್ ವಸ್ತುಗಳನ್ನು ದಾನ ಮಾಡುತ್ತಾರೆ. ಈ ಉಪವಾಸದ ಸಮಯದಲ್ಲಿ, ವಿವಾಹಿತ ಮಹಿಳೆಯರು ಹಸಿರು ಬಟ್ಟೆಗಳನ್ನು ಧರಿಸುತ್ತಾರೆ ಮತ್ತು ಮೆಹೆಂದಿಯನ್ನು ಹಚ್ಚುತ್ತಾರೆ. ಪಂಚಾಂಗದ ಪ್ರಕಾರ, ಹರಿಯಲಿ ತೀಜ್ ಹಬ್ಬವನ್ನು ಪ್ರತಿ ವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ತೃತೀಯಾ ತಿಥಿಯಂದು ಆಚರಿಸಲಾಗುತ್ತದೆ. 2024 ರಲ್ಲಿ, ಹರಿಯಲಿ ತೀಜ್ ಹಬ್ಬವನ್ನು ಆಗಸ್ಟ್ 7 ರಂದು ಬುಧವಾರ ಆಚರಿಸಲಾಗುತ್ತದೆ.

ಕೆಲವು ದಿನಗಳ ಹಿಂದೆ ಲವ್‌ ಜಿಹಾದ್‌ ವಿರುದ್ಧ ಕ್ರಮ ತೆಗೆದುಕೊಳ್ಳುವ ದಿಸೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ. ಲವ್‌ ಜಿಹಾದ್‌ನಲ್ಲಿ ತೊಡಗುವವರಿಗೆ ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸುವ ಉತ್ತರ ಪ್ರದೇಶ ಕಾನೂನು ಬಾಹಿರ ಧಾರ್ಮಿಕ ಮತಾಂತರ (ತಿದ್ದುಪಡಿ) ವಿಧೇಯಕಕ್ಕೆ ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ರಾಜ್ಯಪಾಲರ ಅಂಕಿತ ಸಿಕ್ಕರೆ ವಿಧೇಯಕವು ಕಾಯ್ದೆಯಾಗಿ ಜಾರಿಗೆ ಬರಲಿದೆ. ಕಾಯ್ದೆ ಜಾರಿಯಾದರೆ, ಲವ್‌ ಜಿಹಾದ್‌ನಲ್ಲಿ ತೊಡಗಿಸಿಕೊಂಡವರಿಗೆ ಗರಿಷ್ಠ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ:Love Jihad: ಲವ್‌ ಜಿಹಾದ್‌ ವಿರುದ್ಧ ಯೋಗಿ ದಿಟ್ಟ ಕ್ರಮ; ಇನ್ನು ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ಗ್ಯಾರಂಟಿ!

Continue Reading

ರಾಜಕೀಯ

Parliament Session: ಇಂದು ವಕ್ಫ್ ಮಸೂದೆ ಮಂಡನೆ: ಸಂಸತ್ತಿನಲ್ಲಿ ಕೋಲಾಹಲ ಸಾಧ್ಯತೆ; ಅಧಿವೇಶನವನ್ನು Live ಆಗಿ ನೋಡಿ

Parliament Session: ಸಂಸತ್‌ನಲ್ಲಿ ನಡೆಯುತ್ತಿರುವ ಮಳೆಗಾಲದ ಅಧಿವೇಶನ ಕಾವೇರಿದ ಚರ್ಚೆಗೆ ಸಾಕ್ಷಿಯಾಗುತ್ತಿದ್ದು, ಇಂದು ವಕ್ಫ್‌ ಮಸೂದೆ ಮಂಡನೆಯಾಗಲಿದೆ. ಈ ವೇಳೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಇದೆ. ವಕ್ಫ್ ಕಾಯ್ದೆ 1995ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ವಕ್ಫ್ (ತಿದ್ದುಪಡಿ) ಮಸೂದೆ 2024 ಅನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಪರಿಚಯಿಸಲು ಸಜ್ಜಾಗಿರುವುದರಿಂದ ಸಂಸತ್ತಿನ ಕಲಾಪಗಳು ಗುರುವಾರ ಕೋಲಾಹಲದಿಂದ ಕೂಡಿರಲಿದೆ ಎಂದು ಅಂದಾಜಿಸಲಾಗಿದೆ. ಅಧಿವೇಶನವನ್ನು ಲೈವ್‌ ಆಗಿ ಇಲ್ಲಿ ನೋಡಿ.

VISTARANEWS.COM


on

Parliament Session
Koo

ನವದೆಹಲಿ: ಸಂಸತ್‌ನಲ್ಲಿ ನಡೆಯುತ್ತಿರುವ ಅಧಿವೇಶನ (Parliament Session)ದಲ್ಲಿ ಇಂದು ವಕ್ಫ್‌ ಮಸೂದೆ (Waqf Act) ಮಂಡನೆಯಾಗಲಿದ್ದು, ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಇದೆ. ವಕ್ಫ್ ಕಾಯ್ದೆ 1995ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ವಕ್ಫ್ (ತಿದ್ದುಪಡಿ) ಮಸೂದೆ 2024 ಅನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಪರಿಚಯಿಸಲು ಸಜ್ಜಾಗಿರುವುದರಿಂದ ಸಂಸತ್ತಿನ ಕಲಾಪಗಳು ಗುರುವಾರ ಕೋಲಾಹಲದಿಂದ ಕೂಡಿರಲಿದೆ.

ಮಸೂದೆಯನ್ನು ಪರಿಚಯಿಸಿದ ನಂತರ ಪರಿಶೀಲನೆಗಾಗಿ ಸಂಸತ್ತಿನ ಸ್ಥಾಯಿ ಸಮಿತಿಗೆ ಕಳುಹಿಸಬೇಕೆಂದು ಪ್ರತಿಪಕ್ಷಗಳು ಬುಧವಾರ ಆಗ್ರಹಿಸಿವೆ. ಈ ಬಗ್ಗೆ ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಸರ್ಕಾರವು ವ್ಯವಹಾರ ಸಲಹಾ ಸಮಿತಿಗೆ ಈಗಾಗಲೇ ತಿಳಿಸಿದೆ.

ಮಸೂದೆ ಬಗ್ಗೆ ಮಾತನಾಡಿದ ಕಾಂಗ್ರೆಸ್‌ ಸಂಸದ ಗೌರವ್‌ ಗೊಗೊಯ್‌ ಮತ್ತು ತೃಣಮೂಲ ಕಾಂಗ್ರೆಸ್‌ ಸಂಸದ ಸುದೀಪ್‌ ಬಂಡೋಪಾಧ್ಯಾಯ ಅವರು ಮಸೂದೆ ಮಂಡಿಸಿದ ನಂತರ ಪರಿಶೀಲನೆಗಾಗಿ ಸಂಸತ್ತಿನ ಸಮಿತಿಗೆ ಕಳುಹಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮಾತ್ರವಲ್ಲ ಇಂದು ಸಂಸತ್ತಿನಲ್ಲಿ ಈ ಬಗ್ಗೆ ಗಟ್ಟಿಯಾಗಿ ಧ್ವನಿ ಎತ್ತಲು ಪ್ರತಿಪಕ್ಷಗಳು ಸಜ್ಜಾಗಿವೆ.

ಸರ್ಕಾರ V/S ಪ್ರತಿಪಕ್ಷಗಳ ವಾಗ್ವಾದ

ಮಸೂದೆ ವಿಚಾರದಲ್ಲಿ ಈಗಾಗಲೇ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದ ಆರಂಭವಾಗಿದೆ. ದೇಶಾದ್ಯಂತ ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ತರಲು ಇಂತಹ ಮಸೂದೆ ಅಗತ್ಯ ಎಂದು ಬಿಜೆಪಿ ಪ್ರತಿಪಾದಿಸಿದೆ. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಯು ಅವರು, ʼʼವಕ್ಫ್ ಆಸ್ತಿಗಳ ನಿಯಂತ್ರಣವನ್ನು ಹೆಚ್ಚು ಪಾರದರ್ಶಕ ಮತ್ತು ಪರಿಣಾಮಕಾರಿಯಾಗಿಸಲು ಮುಸ್ಲಿಮರು ಈ ಬಗ್ಗೆ ನಿರಂತರ ಬೇಡಿಕೆ ಸಲ್ಲಿಸಿದ್ದಾರೆʼʼ ಎಂದು ಸಮರ್ಥಿಸಿಕೊಂಡಿದ್ದಾರೆ.

ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ ಹಲವು ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಕಿಡಿಕಾರಿ ಕೆಲವು ಮುಸ್ಲಿಂ ಸಂಘಟನೆಗಳು ವಿರೋಧಿಸುತ್ತಿರುವ ಮಸೂದೆಯನ್ನು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದೊಂದಿಗೆ ವ್ಯವಹರಿಸುವ ಸ್ಥಾಯಿ ಸಮಿತಿಗೆ ಕಳುಹಿಸಬೇಕು ಎಂದು ಹೇಳಿವೆ. ಇನ್ನೂ ಸಮಿತಿಯನ್ನು ರಚಿಸಲಾಗಿಲ್ಲ ಎಂದು ಹೇಳಿವೆ.

ಏನೆಲ್ಲ ತಿದ್ದುಪಡಿ?

ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಮಂಡಳಿಗೆ ಸೇರಿಸಲು ಪಾರದರ್ಶಕ ನಿಯಮಗಳ ಪಾಲನೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅದರಲ್ಲೂ, ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಘೋಷಿಸುವ ಪರಮಾಧಿಕಾರ ತೆಗೆಯಲಿದೆ. ಇನ್ನು, ವಕ್ಫ್‌ ಆಸ್ತಿಗಳ ಮೇಲೆ ನಿಗಾ ಇರಿಸುವ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಇದುವರೆಗೆ ವಕ್ಫ್‌ ಮಂಡಳಿಯಲ್ಲಿ ಹೆಣ್ಣುಮಕ್ಕಳ ಸಹಭಾಗಿತ್ವವೇ ಇರಲಿಲ್ಲ. ಹಾಗಾಗಿ, ಪ್ರತಿಯೊಂದು ರಾಜ್ಯಗಳ ವಕ್ಫ್‌ ಮಂಡಳಿಗಳಲ್ಲಿ ಹೆಣ್ಣುಮಕ್ಕಳಿಗೂ ಸ್ಥಾನ ನೀಡುವುದು. ರಾಜ್ಯಗಳ ಮಂಡಳಿಗಳಲ್ಲಿ ಕನಿಷ್ಠ ಇಬ್ಬರು ಮಹಿಳೆಯರಿಗೆ ಸ್ಥಾನ ನೀಡುವುದು. ಕೇಂದ್ರ ಸಮಿತಿಗಳಲ್ಲೂ ಇಬ್ಬರೂ ಹೆಣ್ಣುಮಕ್ಕಳು ಇರಬೇಕು ಎಂಬ ನಿಯಮ ಜಾರಿಗೆ ತರುವುದು. ಮುಸ್ಲಿಮರು ಕೂಡ ವಕ್ಫ್‌ ಆಸ್ತಿಯನ್ನು ಸೃಷ್ಟಿಸಬಹುದು ಎಂಬ ನಿಯಮ ಜಾರಿಗೊಳಿಸುವುದು ಸೇರಿ ಹಲವು ತಿದ್ದುಪಡಿಗಳಿಗೆ ಪ್ರಸ್ತಾವನೆ ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Pralhad Joshi: ಪಿಎಂ ಕುಸುಮ್ ಯೋಜನೆಗೆ ಕರ್ನಾಟಕದಿಂದಲೇ 1.79 ಲಕ್ಷ ರೈತರ ಬೇಡಿಕೆ

ಹಣಕಾಸು ಮಸೂದೆ ಅಂಗೀಕಾರ

ಲೋಕಸಭೆಯಲ್ಲಿ ಬುಧವಾರ ಹನಕಾಸು ಮಸೂದೆ 2024 ಅನ್ನು ಅಂಗೀಕರಿಸಲಾಯಿರು. ರಿಯಲ್‌ ಎಸ್ಟೇಟ್‌ ಮೇಲೆ ಇತ್ತೀಚೆಗೆ ಪರಿಚಯಿಸಲಾದ ಹೊಸ ಬಂಡವಾಳ ಲಾಭ ತೆರಿಗೆಯನ್ನು ಸರ್ಕಾರ ಸಡಿಲಿಸಿದ ನಂತರ ಮಂಡಿಸಿದ ಈ ಮಸೂದೆಯನ್ನು ಲೋಕಸಭೆ ಅಂಗೀಕರಿಸಿತು. ಲೋಕಸಭೆ 45 ಅಧಿಕೃತ ತಿದ್ದುಪಡಿಗಳೊಂದಿಗೆ ಮಸೂದೆಯನ್ನು ಧ್ವನಿ ಮತದ ಮೂಲಕ ಅಂಗೀಕರಿಸಿದೆ ಎಂದು ಮೂಲಗಳು ತಿಳಿಸಿವೆ. ಇದರ ಜತೆಗೆ ಒಲಿಂಪಿಕ್ಸ್‌ನ 50 ಕೆಜಿ ವಿಭಾಗದ ಕುಸ್ತಿ ಫೈನಲ್‌ ಪಂದ್ಯದಿಂದ ಭಾರತದ ಕುಸ್ತಿಪಟು ವಿನೇಶ್‌ ಫೋಗಟ್‌ ಅನರ್ಹಗೊಂಡಿರುವ ಬಗ್ಗೆಯೂ ಸರ್ಕಾರ ಮಾಹಿತಿ ನೀಡಿದೆ.

Continue Reading

ಕ್ರೀಡೆ

Manu Bhaker: ಮೋದಿಗಿಂತ ಮೊದಲು ಸೋನಿಯಾ ಗಾಂಧಿ ಭೇಟಿಯಾದ ಅವಳಿ ಒಲಿಂಪಿಕ್ಸ್​ ಪದಕ ವಿಜೇತೆ ಮನು ಭಾಕರ್

Manu Bhaker: ಒಲಿಂಪಿಕ್ಸ್‌ನಲ್ಲಿ ದೇಶದ ಗೌರವವನ್ನು ಎತ್ತಿಹಿಡಿದ ಶೂಟರ್‌ ಮನು ಭಾಕರ್‌ ಅವರಿಗೆ ಒಲಿಂಪಿಕ್ಸ್‌ ಸಮಾರೋಪ ಸಮಾರಂಭದಲ್ಲಿ ಭಾರತದ ಮಹಿಳಾ ಧ್ವಜಧಾರಿಯ ಗೌರವ ಲಭಿಸಿದೆ. ಸಮಾರೋಪ ಸಮಾರಂಭ ಭಾನುವಾರ ರಾತ್ರಿ ನಡೆಯಲಿದೆ. ತವರಿಗೆ ಮರಳಿರುವ ಭಾಕರ್ ಶನಿವಾರ​ ಮತ್ತೆ ಪ್ಯಾರಿಸ್​ಗೆ ತೆರಳಲಿದ್ದಾರೆ.

VISTARANEWS.COM


on

Manu Bhaker
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್(paris olympics)​ ಅವಳಿ ಕಂಚಿನ ಪದಕ ವಿಜೇತೆ, ಶೂಟರ್​ ಮನು ಭಾಕರ್(Manu Bhaker)​ ಬುಧವಾರ ತವರಿಗೆ ಮರಳಿದ್ದರು. ನವದೆಹಲಿಗೆ ಬಂದಿಳಿದಿದ್ದ ಮನುಗೆ ಹಾರ ಮತ್ತು ಗುಲಾಬಿ ದಳಗಳ ಅಭಿಷೇಕದೊಂದಿಗೆ ಕ್ರೀಡಾಪ್ರೇಮಿಗಳು ಭರ್ಜರಿಯಾಗಿ ಸ್ವಾಗತ ಕೋರಿದ್ದರು. ಬಳಿಕ ತೆರೆದ ಜೀಪ್​ನಲ್ಲಿ ಮೆರವಣಿಗೆ ಮಾಡಿ ಸಂಭ್ರಮಿಸಲಾಗಿತ್ತು. ಈ ಎಲ್ಲ ಕಾರ್ಯಕ್ರಮ ಮುಗಿದ ಬಳಿಕ ಮನು ಭಾಕರ್​ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಅವರನ್ನು ಭೇಟಿ ಮಾಡಿದ್ದಾರೆ. ಈ ಫೋಟೊ ವೈರಲ್​ ಆಗಿದೆ. ಜತೆಗೆ ಚರ್ಚೆಗೂ ಕಾರಣವಾಗಿದೆ.

ಮನು ಭಾಕರ್ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಫೋಟೊ ಕಂಡ ಕೆಲ ನೆಟ್ಟಿಗರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಮುನ್ನ ಸೋನಿಯಾ ಗಾಂಧಿಯನ್ನು ಭೇಟಿಯಾದದ್ದು ಏಕೆ? ಎಂದು ಪ್ರಶ್ನಿಸಿದರೆ. ಇನ್ನು ಕೆಲವರು ಪ್ರಧಾನಿಯನ್ನೇ ಮೊದಲು ಭೇಟಿ ಮಾಡಬೇಕು ಎಂದು ಈ ದೇಶದ ಸಂವಿಧಾನದ ನಿಯಮವೇ? ಎಂದು ತಿರುಗೇಟು ಕೊಟ್ಟಿದ್ದಾರೆ. ಒಟ್ಟಾರೆ ಇಬರಿಬ್ಬರ ಭೇಟಿಯ ಫೋಟೊ ಎಡ ಪಂಥಿಯರ ಮತ್ತು ಬಲ ಪಂಥಿಯರ ಅನಗತ್ಯ ಚರ್ಚೆಗೆ ಆಹಾರವಾದಂತಿದೆ.

ಇದನ್ನೂ ಓದಿ John Abraham: ಮನು ಭಾಕರ್‌ ಗೆದ್ದ ಒಲಿಂಪಿಕ್ಸ್‌ ಪದಕ ಮುಟ್ಟಿದ ಜಾನ್‌ ಅಬ್ರಾಹಂ; ನೆಟ್ಟಿಗರಿಂದ ನಟನಿಗೆ ಕ್ಲಾಸ್‌ ಏಕೆ?

22 ವರ್ಷದ ಮನು ಭಾಕರ್ ಮಹಿಳೆಯರ ವೈಯಕ್ತಿಕ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮತ್ತು ಸರಬ್ಜೋತ್ ಸಿಂಗ್ ಜತೆಗೂಡಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲೂ ಕಂಚಿನ ಪದಕ ಜಯಿಸುವ ಮೂಲಕ ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲೇ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎನ್ನುವ ಐತಿಹಾಸಿಕ ದಾಖಲೆ ನಿರ್ಮಿಸಿದ್ದರು. 25 ಮೀ. ಪಿಸ್ತೂಲ್​ ಶೂಟಿಂಗ್​ ಫೈನಲ್​ ಪಂದ್ಯದಲ್ಲಿ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಹ್ಯಾಟ್ರಿಕ್​ ಪದಕ ಗೆಲ್ಲುವ ಅವಕಾಶದಿಂದ ವಂಚಿತರಾಗಿದ್ದರು.

ಮನು ಭಾಕರ್‌ ಗೆದ್ದ ಪದಕ ಮುಟ್ಟಿದ ಜಾನ್‌ ಅಬ್ರಾಹಂ; ನೆಟ್ಟಿಗರಿಂದ ನಟನಿಗೆ ಕ್ಲಾಸ್‌


ಬಾಲಿವುಡ್‌ ನಟ ಜಾನ್‌ ಅಬ್ರಾಹಂ ಅವರು ಮನು ಭಾಕರ್‌ ಅವರನ್ನು ಭೇಟಿಯಾಗಿದ್ದು, ಅವರ ಪದಕಗಳನ್ನು ನಟ ಮುಟ್ಟಿದ್ದು ಈಗ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಮನು ಭಾಕರ್‌ ಜತೆಗಿನ ಫೋಟೊವನ್ನು ಜಾನ್‌ ಅಬ್ರಾಹಂ ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅವರು ಮನು ಭಾಕರ್‌ ಅವರ ಒಂದು ಪದಕವನ್ನು ಕೈಯಲ್ಲಿ ಹಿಡಿದಿರುವುದು ಈಗ ಜನರ ಆಕ್ರೋಶಕ್ಕೆ ಕಾರಣವಾಗಿದೆ. “ಒಲಿಂಪಿಕ್ಸ್‌ನಲ್ಲಿ ಮನು ಭಾಕರ್‌ ಅವರು ಪದಕಗಳನ್ನು ಗೆದ್ದು ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ಅವರು ಗೆದ್ದಿರುವ ಪದಕಗಳನ್ನು ನೀವೇ ಗೆದ್ದಿರುವಂತೆ ಹಿಡಿದುಕೊಂಡು ಪೋಸ್‌ ನೀಡುವುದು ಸಮಂಜಸವಲ್ಲ” ಎಂದು ಜನ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ದೇಶದ ಗೌರವವನ್ನು ಎತ್ತಿಹಿಡಿದ ಶೂಟರ್‌ ಮನು ಭಾಕರ್‌ ಅವರಿಗೆ ಒಲಿಂಪಿಕ್ಸ್‌ ಸಮಾರೋಪ ಸಮಾರಂಭದಲ್ಲಿ ಭಾರತದ ಮಹಿಳಾ ಧ್ವಜಧಾರಿಯ ಗೌರವ ಲಭಿಸಿದೆ. ಸಮಾರೋಪ ಸಮಾರಂಭ ಭಾನುವಾರ ರಾತ್ರಿ ನಡೆಯಲಿದೆ. ತವರಿಗೆ ಮರಳಿರುವ ಭಾಕರ್ ಶನಿವಾರ​ ಮತ್ತೆ ಪ್ಯಾರಿಸ್​ಗೆ ತೆರಳಲಿದ್ದಾರೆ.

Continue Reading
Advertisement
Vinay Rajkumar pepe preset Vinay Rajkumar Shreelesh S Nair
ಸ್ಯಾಂಡಲ್ ವುಡ್6 mins ago

Vinay Rajkumar: ʻಪೆಪೆ’ ಸಿನಿಮಾದಲ್ಲಿ ಜೇನು ಕುರುಬ ಸಾಂಗ್: ಚಿತ್ರತಂಡದ ವಿಭಿನ್ನ ಪ್ರಯತ್ನಕ್ಕೆ ಪ್ರೇಕ್ಷಕರ ಜೈಕಾರ!

Mary Kom
ಕ್ರೀಡೆ10 mins ago

Mary Kom: ಒಂದೇ ತಾಸಿನಲ್ಲಿ 2 ಕೆಜಿ ತೂಕ ಇಳಿಸಿ ಚಿನ್ನ ಗೆದ್ದಿದ್ದ ಬಾಕ್ಸರ್​ ಮೇರಿ ಕೋಮ್

Repo Rate
ವಾಣಿಜ್ಯ13 mins ago

Repo Rate: ಗೃಹಸಾಲದ ಇಎಂಐ ಭಾರ ಇಳಿಕೆ ಇಲ್ಲ; ರೆಪೋ ದರ ಯಥಾಸ್ಥಿತಿ

Naga Chaitanya Nagarjuna Called Sobhita Dhulipala Hot
ಟಾಲಿವುಡ್20 mins ago

Naga Chaitanya: ನಾನು ಹೀಗೆ ಹೇಳಬಾರದು..ಆದರೂ ಶೋಭಿತಾ ತುಂಬಾ ಹಾಟ್‌ ಎಂದಿದ್ದ ನಾಗಾರ್ಜುನ; ವಿಡಿಯೊ ವೈರಲ್‌!

Henna Jihad
ದೇಶ32 mins ago

Henna Jihad: ಹಿಂದೂ ಮಹಿಳೆಯರಿಗೆ ಮುಸ್ಲಿಮರು ಮೆಹಂದಿ ಹಚ್ಚಿದರೆ ಹುಷಾರ್‌! ಭುಗಿಲೆದ್ದ ಹೆನ್ನಾ ಜಿಹಾದ್‌ ವಿವಾದ

lalbagh flower show 2024
ಪ್ರಮುಖ ಸುದ್ದಿ36 mins ago

Lalbagh Flower Show: ಸಸ್ಯಕಾಶಿಯಲ್ಲಿ ಇಂದಿನಿಂದ ಫಲಪುಷ್ಪ ಪ್ರದರ್ಶನ; ಏನೇನಿದೆ, ಪಾರ್ಕಿಂಗ್‌ ಎಲ್ಲಿ, ಟಿಕೆಟ್‌ ದರ ಎಷ್ಟು?

Gold Rate Today
ಚಿನ್ನದ ದರ41 mins ago

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಬಂಗಾರ ಇಂದು ಇಷ್ಟು ಅಗ್ಗ

ಉದ್ಯೋಗ47 mins ago

Banking Recruitment 2024: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 896 ಸ್ಪೆಷಲಿಸ್ಟ್ ಆಫೀಸರ್ ಹುದ್ದೆ; ಆಯ್ಕೆ ಪ್ರಕ್ರಿಯೆ ಹೇಗೆ? Complete Details

Actor Yash journey begins Yash Gave Update On Toxic Movie
ಸ್ಯಾಂಡಲ್ ವುಡ್49 mins ago

Actor Yash:  ʻಟಾಕ್ಸಿಕ್‌ʼ ಪಯಣ ಶುರುವಾಗಿದೆ ಎಂದು ಗುಡ್‌ ನ್ಯೂಸ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌!

head master self harming
ಕ್ರೈಂ58 mins ago

Self Harming: ಇಬ್ಬರು ಇನ್‌ಸ್ಪೆಕ್ಟರ್‌ಗಳ ಬಳಿಕ ಹೆಡ್‌ಮಾಸ್ಟರ್‌ ಶಾಲೆಯಲ್ಲೇ ಆತ್ಮಹತ್ಯೆ; ಏನಾಗ್ತಿದೆ ರಾಜ್ಯದಲ್ಲಿ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ7 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ7 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ7 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌