Bangladesh Unrest: ಬಾಂಗ್ಲಾದೇಶಕ್ಕೆ ಎಂದಿನಂತೆ ವಿಮಾನ ಹಾರಾಟ; ಢಾಕಾದಿಂದ ದಿಲ್ಲಿಗೆ ಬಂದಿಳಿದ 205 ಭಾರತೀಯರು - Vistara News

ದೇಶ

Bangladesh Unrest: ಬಾಂಗ್ಲಾದೇಶಕ್ಕೆ ಎಂದಿನಂತೆ ವಿಮಾನ ಹಾರಾಟ; ಢಾಕಾದಿಂದ ದಿಲ್ಲಿಗೆ ಬಂದಿಳಿದ 205 ಭಾರತೀಯರು

Bangladesh Unrest: ಬಾಂಗ್ಲಾದೇಶಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಏರ್ ಇಂಡಿಯಾ, ವಿಸ್ತಾರ ಮತ್ತು ಇಂಡಿಗೋ ವಿಮಾನಗಳು ಬುಧವಾರ ದಿಲ್ಲಿಯಿಂದ ಢಾಕಾಗೆ ನಿಗದಿಯಂತೆ ಹಾರಾಟ ನಡೆಸಲಿವೆ. ಜತೆಗೆ ಏರ್ ಇಂಡಿಯಾ ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಭಾರತೀಯರನ್ನು ಮರಳಿ ಕರೆತರಲು ವಿಶೇಷ ವಿಮಾನ ಸೇವೆಯನ್ನೂ ಒದಗಿಸಲಿದೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಏರ್‌ ಇಂಡಿಯಾದ ವಿಶೇಷ ವಿಮಾನದಲ್ಲಿ 205 ಭಾರತೀಯರು ಢಾಕಾದಿಂದ ದಿಲ್ಲಿಗೆ ಬಂದಿಳಿದಿದ್ದಾರೆ.

VISTARANEWS.COM


on

Bangladesh Unrest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಬದೆಹಲಿ: ನಿರಂತರ ಪ್ರತಿಭಟನೆ, ಗಲಭೆಗಳ (Bangladesh Unrest) ಬಳಿಕ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಬಾಂಗ್ಲಾದೇಶವನ್ನು (Bangladesh) ತೊರೆದು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ. ಅಲ್ಲಿರುವ ತಮ್ಮ ನಿವಾಸಿಗಳ ಸುರಕ್ಷತೆ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ. ಈ ಮಧ್ಯೆ ಏರ್ ಇಂಡಿಯಾ, ವಿಸ್ತಾರ ಮತ್ತು ಇಂಡಿಗೋ ವಿಮಾನಗಳು ಬುಧವಾರ (ಆಗಸ್ಟ್‌ 7) ದಿಲ್ಲಿಯಿಂದ ಬಾಂಗ್ಲಾದೇಶದ ರಾಜಧಾನಿ ಢಾಕಾಗೆ ನಿಗದಿಯಂತೆ ಹಾರಾಟ ನಡೆಸಲು ತೀರ್ಮಾನಿಸಿವೆ. ಜತೆಗೆ ಏರ್ ಇಂಡಿಯಾ ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಭಾರತೀಯರನ್ನು ಮರಳಿ ಕರೆತರಲು ವಿಶೇಷ ವಿಮಾನ ಸೇವೆಯನ್ನೂ ಒದಗಿಸಲಿದೆ ಎಂದು ಮೂಲಗಳು ತಿಳಿಸಿವೆ.

ಏರ್ ಇಂಡಿಯಾ ಬುಧವಾರ ದಿಲ್ಲಿಯಿಂದ ಢಾಕಾಗೆ ತನ್ನ ನಿಗದಿತ ಎರಡು ದೈನಂದಿನ ವಿಮಾನಗಳ ಹಾರಾಟ ನಡೆಸಲಿದೆ. ಜತೆಗೆ ವಿಸ್ತಾರ ಮತ್ತು ಇಂಡಿಗೋ ಬುಧವಾರದಿಂದ ಬಾಂಗ್ಲಾದೇಶದ ರಾಜಧಾನಿಗೆ ನಿಗದಿಪಡಿಸಿದ ಸೇವೆಗಳನ್ನು ನಿರ್ವಹಿಸಲಿವೆ. ವಿಸ್ತಾರ ಮತ್ತು ಇಂಡಿಗೋ ಎರಡೂ ವಿಮಾನಯಾನ ಸಂಸ್ಥೆಗಳು ಮಂಗಳವಾರ ಢಾಕಾಗೆ ತೆರಳುವ ವಿಮಾನ ಸಂಚಾರವನ್ನು ರದ್ದುಗೊಳಿಸಿದ್ದವು.

ವಿಸ್ತಾರ ವಿಮಾನ ಢಾಕಾಗೆ ಮುಂಬೈನಿಂದ ಪ್ರತಿದಿನ ಮತ್ತು ದಿಲ್ಲಿಯಿಂದ ವಾರಕ್ಕೆ ಮೂರು ಸೇವೆಗಳನ್ನು ಒದಗಿಸುತ್ತದೆ. ಇಂಡಿಗೋ ಒಂದು ವಿಮಾನ ಪ್ರತಿ ದಿನ ದಿಲ್ಲಿ, ಮುಂಬೈ ಮತ್ತು ಚೆನ್ನೈನಿಂದ ಢಾಕಾಗೆ ತೆರಳುತ್ತದೆ. ಜತೆಗೆ ಕೋಲ್ಕತ್ತಾದಿಂದ ಬಾಂಗ್ಲಾದೇಶಕ್ಕೆ ಪ್ರತಿದಿನ ಎರಡು ಸೇವೆಗಳನ್ನು ಒದಗಿಸುತ್ತದೆ.

ದಿಲ್ಲಿಗೆ ಬಂದಿಳಿದ 205 ಭಾರತೀಯರು

ಈ ಮಧ್ಯೆ ಬುಧವಾರ ಏರ್‌ ಇಂಡಿಯಾದ ವಿಶೇಷ ವಿಮಾನದಲ್ಲಿ 205 ಭಾರತೀಯರು ಢಾಕಾದಿಂದ ದಿಲ್ಲಿಗೆ ಬಂದಿಳಿದಿದ್ದಾರೆ. ಮಂಗಳವಾರ ತಡರಾತ್ರಿ ಢಾಕಾದಿಂದ ಈ ಎ 321 (A321) ವಿಮಾನ ಟೇಕ್‌ ಆಫ್‌ ಆಗಿತ್ತು. ಈ ವಿಮಾನದಲ್ಲಿ 6 ಮಕ್ಕಳೂ ಇದ್ದರು.

ಮೇಘಾಲಯ, ಮಣಿಪುರಗಳಲ್ಲಿ ರಾತ್ರಿ ಕರ್ಫ್ಯೂ

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಮೀಪದ ಮಣಿಪುರ ಮತ್ತು ಮೇಘಾಲಯಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಬಾಂಗ್ಲಾದೇಶದಲ್ಲಿನ ಗಲಭೆ ಕಾರಣದಿಂದ ಅಲ್ಲಿನ ಜನರು ಮಣಿಪುರಕ್ಕೆ ಒಳನುಸುಳುವ ಸಾಧ್ಯತೆ ಇದೆ ಎಂದು ಎಂದು ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ತಿಳಿಸಿದ್ದಾರೆ. ಮಣಿಪುರವು ಮ್ಯಾನ್ಮಾರ್‌ನೊಂದಿಗೆ 398 ಕಿ.ಮೀ. ಅಂತಾರಾಷ್ಟ್ರೀಯ ಗಡಿಗಳನ್ನು ಹೊಂದಿದೆ. ಅದಾಗ್ಯೂ ಬಾಂಗ್ಲಾದೇಶದೊಂದಿಗೆ ಗಡಿ ಹಂಚಿಕೊಂಡಿಲ್ಲ. ಆದರೆ ಮಣಿಪುರವು ಬಾಂಗ್ಲಾದೇಶದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ದಕ್ಷಿಣ ಅಸ್ಸಾಂನೊಂದಿಗೆ ಅಂತಾರಾಜ್ಯ ಗಡಿಗಳನ್ನು ಹೊಂದಿದೆ. ಈ ಕಾರಣಕ್ಕೆ ಇಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Bangladesh Unrest: ಭಾರತದಲ್ಲೂ ಬಾಂಗ್ಲಾ ಮಾದರಿ ಗಲಭೆಗೆ ಸಂಚು; ಪಾಕ್‌ ಮಾಜಿ ಕ್ರಿಕೆಟಿಗನ ಸ್ಫೋಟಕ ಮಾಹಿತಿ

ಇನ್ನು ಬಾಂಗ್ಲಾದೇಶದೊಂದಿಗೆ 445 ಕಿ.ಮೀ. ಗಡಿಯನ್ನು ಹಂಚಿಕೊಂಡಿರುವ ಮೇಘಾಲಯದಲ್ಲಿ ಸೋಮವಾರ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ನಿರಾಶ್ರಿತರ ಚಲನೆಯನ್ನು ತಡೆಗಟ್ಟಲು ಗಡಿಯಿಂದ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ ಎಂದು ಮೇಘಾಲಯ ಉಪಮುಖ್ಯಮಂತ್ರಿ ಪ್ರೆಸ್ಟೋನ್ ಟಿನ್ಸಾಂಗ್ ಹೇಳಿದ್ದಾರೆ. ರಾಜ್ಯದ ಭಾರತ-ಬಾಂಗ್ಲಾದೇಶ ಗಡಿಯುದ್ದಕ್ಕೂ ಬಿಎಸ್ಎಫ್ ಕಟ್ಟುನಿಟ್ಟಾದ ಜಾಗ್ರತೆ ವಹಿಸಲಿದೆ ಎಂದೂ ವಿವರಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Student Abuse: ʼಮೇಡಂ ನನಗೆ ಪಿರಿಯಡ್ಸ್‌ʼ ಎಂದರೂ ಬಿಡದೆ ವಿದ್ಯಾರ್ಥಿನಿಯನ್ನು ನಗ್ನಗೊಳಿಸಿದ ಶಿಕ್ಷಕಿ!

Student Abuse: ತರಗತಿಯಲ್ಲಿ ಮೊಬೈಲ್ ಪೋನ್ ರಿಂಗ್ ಆಗಿದ್ದಕ್ಕೆ ಅನುಮಾನಗೊಂಡ ಶಿಕ್ಷಕಿ ಜಯಾ ಪನ್ವಾರ್ 5 ವಿದ್ಯಾರ್ಥಿಗಳನ್ನು ಶೌಚಾಲಯಕ್ಕೆ ಕರೆದೊಯ್ದು ಬಟ್ಟೆ ಬಿಚ್ಚುವಂತೆ ಹೇಳಿದ್ದಾರೆ. ಅಲ್ಲದೇ ಈ ವೇಳೆ ವಿರೋಧಿಸಿದ ವಿದ್ಯಾರ್ಥಿನಿಯರನ್ನು ಥಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಅವರ ಒಳ ಉಡುಪುಗಳನ್ನು ಸಹ ತೆಗೆದು ಹಾಕಲು ಹೇಳಿದ್ದಾರೆ. ಒಬ್ಬ ವಿದ್ಯಾರ್ಥಿನಿಯೊಬ್ಬರು ಋತುಸ್ರಾವದ ಸಮಸ್ಯೆ ಇದ್ದ ಕಾರಣ ತನ್ನ ಬಟ್ಟೆಗಳನ್ನು ತೆಗೆಯಲು ನಿರಾಕರಿಸಿದಳು, ಆದರೆ ಶಿಕ್ಷಕಿ ಅವಳ ಮಾತಿಗೆ ಕಿವಿಗೊಡದೆ ಅವಳ ಪ್ಯಾಡ್ ಅನ್ನು ಸಹ ಪರಿಶೀಲಿಸಿದ್ದಾರಂತೆ.

VISTARANEWS.COM


on

Student Abuse
Koo


ಕಾಲೇಜಿನಲ್ಲಿ ಮೊಬೈಲ್ ಬಳಸುವಂತಿಲ್ಲ ಎಂಬ ನಿಯಮವಿದ್ದರೂ (Student Abuse) ಕೂಡ ಕೆಲವೊಂದು ವಿದ್ಯಾರ್ಥಿಗಳು ಮೊಬೈಲ್ ಪೋನ್ ಅನ್ನು ಶಿಕ್ಷಕರ ಕಣ್ಣು ತಪ್ಪಿಸಿ ಬಳಸುತ್ತಾರೆ. ವಿದ್ಯಾರ್ಥಿಗಳ ಈ ತಪ್ಪಿನಿಂದಾಗಿ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಇದೀಗ ಮಧ್ಯಪ್ರದೇಶದ ಇಂದೋರ್‌ನಲ್ಲಿ ಶಿಕ್ಷಕಿ(School Teacher)ಯೊಬ್ಬರು ಮೊಬೈಲ್ ಫೋನ್ ಹುಡುಕಲು ಹತ್ತನೇ ತರಗತಿಯ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿ ಟೀಕೆಗೆ ಒಳಗಾಗಿದ್ದಾರೆ. ಈ ಬಗ್ಗೆ ತನಿಖೆ ನಡೆದಿದ್ದು, ಇದು ಶಿಕ್ಷಕಿಯ ವರ್ಗಾವಣೆಗೆ ಕಾರಣವಾಗಿದೆ.

ವರದಿ ಪ್ರಕಾರ, ಈ ಘಟನೆ ಸರ್ಕಾರಿ ಶಾರದಾ ಬಾಲಕಿಯರ ಹೈಯರ್ ಸೆಕೆಂಡರಿ ಸ್ಕೂಲ್‍ನಲ್ಲಿ ಶುಕ್ರವಾರ ನಡೆದಿದ್ದು, ಅಲ್ಲಿನ ಶಿಕ್ಷಕಿ ಜಯಾ ಪನ್ವಾರ್ ತರಗತಿಯಲ್ಲಿ ಮೊಬೈಲ್ ಪೋನ್ ರಿಂಗ್ ಆಗಿದ್ದಕ್ಕೆ ಅನುಮಾನಗೊಂಡ 5 ವಿದ್ಯಾರ್ಥಿಗಳನ್ನು ಶೌಚಾಲಯಕ್ಕೆ ಕರೆದೊಯ್ದು ಬಟ್ಟೆ ಬಿಚ್ಚುವಂತೆ ಹೇಳಿದ್ದಾರೆ. ಅಲ್ಲದೇ ಈ ವೇಳೆ ವಿರೋಧಿಸಿದ ವಿದ್ಯಾರ್ಥಿನಿಯರನ್ನು ಥಳಿಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳ ಪೋಷಕರು ಮಲ್ಹಾರ್ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ವಿದ್ಯಾರ್ಥಿನಿಯರು ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ವಿದ್ಯಾರ್ಥಿಗಳಿಗೆ ತಮ್ಮ ಒಳ ಉಡುಪುಗಳನ್ನು ಸಹ ತೆಗೆದು ಹಾಕಲು ಹೇಳಿದ್ದಾರೆ. ಒಬ್ಬ ವಿದ್ಯಾರ್ಥಿನಿ ಋತುಸ್ರಾವದ ಸಮಸ್ಯೆ ಇದ್ದ ಕಾರಣ ತನ್ನ ಬಟ್ಟೆಗಳನ್ನು ತೆಗೆಯಲು ನಿರಾಕರಿಸಿದಳು. ಆದರೆ ಶಿಕ್ಷಕರು ಅವಳ ಮಾತಿಗೆ ಕಿವಿಗೊಡದೆ ಅವಳ ಪ್ಯಾಡ್ ಅನ್ನು ಸಹ ತೆಗೆದು ಪರಿಶೀಲಿಸಿದರು ಎಂದು ತಿಳಿಸಿದ್ದಾರೆ.

“ನಾನು ನನ್ನ ಋತುಚಕ್ರದ ಸಮಯದಲ್ಲಿ ನನ್ನ ಬಟ್ಟೆಗಳನ್ನು ತೆಗೆಯಲು ಸಾಧ್ಯವಿಲ್ಲ ಎಂದು ಶಿಕ್ಷಕಿ ಜಯಾ ಪನ್ವಾರ್ ಮೇಡಂಗೆ ಹಲವಾರು ಬಾರಿ ಹೇಳಿದೆ. ಆದರೆ ನಾನು ನನ್ನ ಸಲ್ವಾರ್ ತೆಗೆಯದಿದ್ದರೆ, ತಾನೇ ಅದನ್ನು ತೆಗೆಯುತ್ತೇನೆ ಎಂದು ನನಗೆ ಬೆದರಿಕೆ ಹಾಕಿದರು. ಇದನ್ನು ಹೇಳುತ್ತಿರುವಾಗ, ಮೇಡಮ್ ನನ್ನ ಸಲ್ವಾರ್ ಅನ್ನು ಕೆಳಕ್ಕೆ ಎಳೆದರು. ಜಯಾ ಮೇಡಂ ನನ್ನ ಒಳ ಉಡುಪುಗಳನ್ನು ತೆಗೆಯುವಂತೆ ಮಾಡಿದರು. ಮೇಡಂ ನಾನು ನನ್ನ ಋತುಚಕ್ರದಲ್ಲಿದ್ದೇನೆ ಎಂದು ನಾನು ಅವರಿಗೆ ಪರಿಪರಿಯಾಗಿ ಹೇಳಿದೆ. ಆದರೆ ಮೇಡಮ್ ನನ್ನನ್ನು ಪರೀಕ್ಷಿಸಲು ನನ್ನ ಪ್ಯಾಡ್ ತೆಗೆಯುವಂತೆ ಹೇಳಿದರು ಎಂದು ಸಂತ್ರಸ್ತ ವಿದ್ಯಾರ್ಥಿನಿಯೊಬ್ಬಳು ದುಃಖದಿಂದ ಹೇಳಿದ್ದಾಳೆ.

ಇದನ್ನೂ ಓದಿ: ಮಹಿಳೆಯರು ಸಿಂಧೂರ, ಮಂಗಳಸೂತ್ರ ಧರಿಸಬಾರದು ಎಂದ ಶಿಕ್ಷಕಿ ಅಮಾನತು!

ಶುಕ್ರವಾರ ನಡೆದ ಘಟನೆಯ ನಂತರ, ಆಡಳಿತ ಮಂಡಳಿಯು ತನಿಖೆಯನ್ನು ಪ್ರಾರಂಭಿಸಿತು ಮತ್ತು ಆರೋಪಿ ಶಿಕ್ಷಕಿಯನ್ನು ಶಾಲೆಯಿಂದ ವರ್ಗಾಯಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ತನಿಖೆಯ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಕಿಯ ವಿರುದ್ಧದ ಪೊಲೀಸ್ ದೂರಿನ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಶರ್ಮಾ ತಿಳಿಸಿದ್ದಾರೆ.

Continue Reading

ದೇಶ

Vinesh Phogat: ನೋ! ನೋ! ನೋ!; ವಿನೇಶ್​ ಫೋಗಟ್ ಅನರ್ಹತೆ ಕೆಟ್ಟ ಕನಸಾಗಿರಲಿ: ಆನಂದ್‌ ಮಹೀಂದ್ರಾ

Vinesh Phogat: ಪ್ಯಾರಿಸ್​ ಒಲಿಂಪಿಕ್ಸ್​ನ 50 ಕೆಜಿ ಕುಸ್ತಿ ವಿಭಾಗದಲ್ಲಿ ಫೈನಲ್​ ಪ್ರವೇಶಿಸಿದ್ದ ಭಾರತದ ತಾರಾ ಮಹಿಳಾ ಕುಸ್ತಿಪಟು ವಿನೇಶ್​ ಫೋಗಟ್ ಅವರನ್ನು ಅನರ್ಹಗೊಳಿಸಲಾಗಿದ್ದು, ಪದಕದ ನಿರೀಕ್ಷೆಯಲ್ಲಿ ಭಾರತೀಯರಿಗೆ ಬಹುದೊಡ್ಡ ಆಘಾತ ಎದುರಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಖ್ಯಾತ ಉದ್ಯಮಿ ಆನಂದ್‌ ಮಹೀಂದ್ರಾ ಇದೊಂದು ಕೆಟ್ಟ ಕನಸಾಗಿರಲಿ ಎಂದು ಆಶಿಸಿದ್ದಾರೆ.

VISTARANEWS.COM


on

Vinesh Phogat
Koo

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಪ್ಯಾರಿಸ್​ ಒಲಿಂಪಿಕ್ಸ್​(Paris Olympics)ನ 50 ಕೆಜಿ ಕುಸ್ತಿ ವಿಭಾಗದಲ್ಲಿ ಫೈನಲ್​ ಪ್ರವೇಶಿಸಿದ್ದ ಭಾರತದ ತಾರಾ ಮಹಿಳಾ ಕುಸ್ತಿಪಟು ವಿನೇಶ್​ ಫೋಗಟ್ (Vinesh Phogat)​ ಅವರಿಗೆ ಆಘಾತ ಎದುರಾಗಿದೆ. ಅವರ ತೂಕ 100 ಗ್ರಾಂಗಿಂತ ಹೆಚ್ಚು ಇದ್ದ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹಗೊಳಿಸಲಾಗಿದೆ. ಈ ಮೂಲಕ ಚಿನ್ನದ ಪದಕದ ನಿರೀಕ್ಷೆಯಲ್ಲಿದ್ದ ಭಾರತೀಯರಿಗೆ ಬಹು ದೊಡ್ಡ ಶಾಕ್‌ ಎದುರಾಗಿದೆ. ಈ ಬಗ್ಗೆ ಹಲವರು ತಮ್ಮ ಆಘಾತ ವ್ಯಕ್ತಡಿಸಿದ್ದಾರೆ. ಖ್ಯಾತ ಉದ್ಯಮಿ ಆನಂದ್‌ ಮಹೀಂದ್ರಾ (Anand Mahindra) ಈ ಬಗ್ಗೆ ಪ್ರತಿಕ್ರಿಯಿಸಿ ಇದೊಂದು ಕೆಟ್ಟ ಕನಸಾಗಿರಲಿ ಎಂದು ಆಶಿಸಿದ್ದಾರೆ.

ʼʼನೋ ! ನೋ! ನೋ! ದಯವಿಟ್ಟು ಇದನ್ನು ಕೆಟ್ಟ ಕನಸನ್ನಾಗಿ ಮಾಡಿ. ನಾನು ಕನಸಿನಿಂದ ಎಚ್ಚರಗೊಳ್ಳುತ್ತೇನೆ ಮತ್ತು ಇದು ನಿಜವಲ್ಲ ಎನ್ನುವುದನ್ನು ಕಂಡುಕೊಳ್ಳುತ್ತೇನೆ” ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಈ ವಿಚಾರ ತಿಳಿದು ತಮ್ಮ ಆಘಾತ ವ್ಯಕ್ತಪಡಿಸಿದ್ದಾರೆ. “ವಿನೇಶ್, ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್! ನೀವು ಭಾರತದ ಹೆಮ್ಮೆ ಮತ್ತು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ. ಇಂದಿನ ಹಿನ್ನಡೆ ನಿಮಗೆ ಮಾತ್ರವಲ್ಲದೆ ಇಡೀ ದೇಶವಾಸಿಗಳಿಗೆ ನೋವು ತಂದಿದೆ. ಸವಾಲುಗಳನ್ನು ಎದುರಿಸುವುದು ಯಾವಾಗಲೂ ನಿಮ್ಮ ಸ್ವಭಾವವಾಗಿದೆ. ಬಲವಾಗಿ ಹಿಂತಿರುಗಿ! ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ” ಎಂದು ಮೋದಿ ಎಕ್ಸ್‌ ಮೂಲಕ ಸಾಂತ್ವನ ಹೇಳಿದ್ದಾರೆ.

ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ವಿನೇಶ್ ಅವರು 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದರು. ಆದರೆ ಅವರ ತೂಕ ನಿಗದಿತ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಕುಸ್ತಿ ಪಂದ್ಯದಿಂದ ಅನರ್ಹಗೊಳಿಸಲಾಗಿದೆ. ಇದನ್ನು ಪ್ರಶ್ನಿಸಿ ನಾವು ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಗೆ ದೂರು ದಾಖಲಿಸಿದ್ದೇವೆ ಎಂದು ಭಾರತೀಯ ಒಲಿಂಪಿಕ್​​ ಸಮಿತಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ವಿನೇಶ್ 50 ಕೆಜಿ ಫ್ರೀ ಸ್ಟೈಲ್ ಕುಸ್ತಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರು ಈ ಹಿಂದೆ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದರು. ಆದರೆ ಪ್ಯಾರಿಸ್ ಒಲಿಂಪಿಕ್ಸ್‌ಗಾಗಿ ತಮ್ಮ ತೂಕವನ್ನು ಇಳಿಸಿದ್ದರು. ಸ್ಪರ್ಧೆಯ ಮೊದಲು ತೂಕ ತುಸು ಹೆಚ್ಚಿದ್ದರಿಂದ ಅವರು ಊಟವನ್ನು ಬಿಟ್ಟು, ವ್ಯಾಯಾಮ ಮಾಡಿ ಇಡೀ ರಾತ್ರಿ ಎಚ್ಚರವಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Vinesh Phogat: ಅನರ್ಹ ವಿನೇಶ್​ ಫೋಗತ್‌ಗೆ ಪ್ರಧಾನಿ ಮೋದಿ ಸಾಂತ್ವನ; ಮತ್ತಷ್ಟು ಬಲಿಷ್ಠರಾಗಿ ಮರಳಿ ಬನ್ನಿ ಎಂಬ ಹಾರೈಕೆ

ಮಂಗಳವಾರ ನಡೆದಿದ್ದ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ವಿನೇಶ್ ಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ಜಪಾನ್‌ನ ಯುಯಿ ಸುಸಾಕಿ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದರು. ಬಳಿಕ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಮೂರು ಬಾರಿಯ ಕಾಮನ್​ವೆಲ್ತ್​ ಚಿನ್ನದ ಪದಕ ವಿಜೇತೆ ಉಕ್ರೇನ್​ನ ಒಕ್ಸಾನಾ ಲಿವಾಚ್ ವಿರುದ್ಧ 7-5 ಅಂತರದ ರೋಚಕ ಗೆಲುವು ಸಾಧಿಸಿ ಸೆಮಿ ಫೈನಲ್​ ಪ್ರವೇಶಿಸಿದ್ದರು.

Continue Reading

ಪ್ರಮುಖ ಸುದ್ದಿ

Vinesh Phogat:‌ ರಾತ್ರಿಯಿಡೀ ಪ್ರಯತ್ನಪಟ್ಟರೂ ಇಳಿಯದೆ ವಿನೇಶ್‌ ಕನಸು ನುಚ್ಚುನೂರು ಮಾಡಿದ ಆ 100 ಗ್ರಾಂ!

Vinesh Phogat:‌ ವಿನೇಶ್‌, ಮಂಗಳವಾರ ರಾತ್ರಿ ಸರಿಸುಮಾರು 2 ಕಿಲೋಗಳಷ್ಟು ಅಧಿಕ ತೂಕ ಹೊಂದಿದ್ದರು ಎನ್ನಲಾಗಿದೆ. ಇದನ್ನು ಕರಗಿಸಲು ಆಕೆ ಇಡೀ ರಾತ್ರಿ ನಿದ್ರೆ ಮಾಡದೆ ವ್ಯಾಯಾಮದಲ್ಲಿ ನಿರತರಾಗಿದ್ದರು. ಜಾಗಿಂಗ್‌ನಿಂದ ಹಿಡಿದು ಸ್ಕಿಪ್ಪಿಂಗ್ ಮತ್ತು ಸೈಕ್ಲಿಂಗ್‌ವರೆಗೆ.

VISTARANEWS.COM


on

Vinesh Phogat disqaulify
Koo

ಹೊಸದಿಲ್ಲಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (paris olympics) ಫೈನಲ್​ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸುವ ತವಕದಲ್ಲಿದ್ದ ಭಾರತದ ತಾರಾ ಮಹಿಳಾ ಕುಸ್ತಿಪಟು (Wrestler) ವಿನೇಶ್​ ಫೋಗಟ್ (Vinesh Phogat)​ ಹೆಚ್ಚಿದ 100 ಗ್ರಾಂ ತೂಕದಿಂದಾಗಿ ಅವಕಾಶ (Vinesh Phogat Disqualify) ಕಳೆದುಕೊಂಡಿದ್ದಾಳೆ. ಮಂಗಳವಾರ ರಾತ್ರಿಯಿಡೀ ಆಕೆ ತನ್ನ ಹೆಚ್ಚಿನ ತೂಕವನ್ನು ಇಳಿಸಿ 50 ಕೆಜಿ ತೂಕದ ವ್ಯಾಪ್ತಿಯೊಳಗೆ ಬರಲು ಹರಸಾಹಸಪಟ್ಟಿದ್ದಳು ಎಂಬುದು ವರದಿಯಾಗಿದೆ.

ತೂಕ ವಿಭಾಗದಲ್ಲಿ 50 ಕೆಜಿಗಿಂತ 100 ಗ್ರಾಂ ಹೆಚ್ಚು ಇದ್ದ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ ಮಾಡಲಾಗಿದೆ. ಆಕೆ ಬುಧವಾರ ರಾತ್ರಿ ನಡೆಯುವ ಫೈನಲ್​ ಪಂದ್ಯದಲ್ಲಿ ಅಮೆರಿಕದ ಸೆರಾ ಹಿಲ್ದಿಬ್ರೇಟ್‌ ಅವರ ಸವಾಲು ಎದುರಿಸಬೇಕಿತ್ತು. ವಿನೇಶ್​ ಫೋಗಟ್​ ಅವರನ್ನು ಅನರ್ಹ ಮಾಡಿದ ಕುರಿತು ಭಾರತದ ನಿಯೋಗದಿಂದ ದೂರ ದಾಖಲಿಸಲಾಗಿದೆ.

“ಮಹಿಳಾ ಕುಸ್ತಿ 50 ಕೆಜಿ ವಿಭಾಗದಿಂದ ವಿನೇಶ್ ಫೋಗಟ್ ಅನರ್ಹತೆಯ ಸುದ್ದಿಯನ್ನು ಭಾರತೀಯ ತಂಡವು ವಿಷಾದದಿಂದ ಹಂಚಿಕೊಳ್ಳುತ್ತದೆ. ರಾತ್ರಿಯುದ್ದಕ್ಕೂ ವಿನೇಶ್‌ ಸೇರಿದಂತೆ ಇಡೀ ತಂಡ ಮಾಡಿದ ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ ಅವರು ಇಂದು ಬೆಳಿಗ್ಗೆ 50 ಕೆಜಿಗಿಂತ ಕೆಲವು ಗ್ರಾಂಗಳಷ್ಟು ತೂಕವನ್ನು ಹೆಚ್ಚಿಗೆ ಹೊಂದಿದ್ದರು” ಎಂದು ಭಾರತೀಯ ಒಲಿಂಪಿಕ್ಸ್‌ ಸಮಿತಿ ಹೇಳಿದೆ. “ಈ ಸಮಯದಲ್ಲಿ ಈ ಬಗ್ಗೆ ನಾವು ಹೆಚ್ಚಿನ ಕಾಮೆಂಟ್‌ ಮಾಡುವುದಿಲ್ಲ. ಭಾರತ ತಂಡವು ವಿನೇಶ್ ಅವರ ಖಾಸಗಿತನವನ್ನು ಗೌರವಿಸುವಂತೆ ವಿನಂತಿಸುತ್ತದೆ. ಮುಂದಿನ ಸ್ಪರ್ಧೆಗಳ ಮೇಲೆ ಅವರ ಗಮನ ಕೇಂದ್ರೀಕರಿಸಲು ಉದ್ದೇಶಿಸಲಾಗಿದೆʼʼ ಎಂದಿದೆ.

ಇಂದು ಮುಂಜಾನೆ ನಡೆದ ತೂಕ ಪರಿಶೀಲನೆಯ ವೇಳೆ ವಿನೇಶ್‌ 50 ಕಿಲೋಗಿಂತ 100 ಗ್ರಾಂ ಅಧಿಕ ತೂಕ ಹೊಂದಿದ್ದರು. ಸ್ಪರ್ಧೆಯ ನಿಯಮಗಳ ಪ್ರಕಾರ ಫೋಗಟ್ ಇಂದು ಫೈನಲ್‌ನಲ್ಲಿ ಸ್ಪರ್ಧೀಸುವಂತಿಲ್ಲ. 50 ಕೆಜಿ ವಿಭಾಗದಲ್ಲಿ ಕೇವಲ ಚಿನ್ನ ಮತ್ತು ಕಂಚಿನ ಪದಕ ವಿಜೇತರಿರುತ್ತಾರೆ. ಮಂಗಳವಾರವೂ ಪಂದ್ಯಕ್ಕೆ ಮೊದಲು ವಿನೇಶ್‌ ತೂಕ ಅಳೆಯಲಾಗಿತ್ತು. ಆದರೆ ನಿಯಮದ ಪ್ರಕಾರ ಕುಸ್ತಿಪಟುಗಳು ಸ್ಪರ್ಧೆಯ ಎರಡೂ ದಿನಗಳಲ್ಲಿ ತಮ್ಮ ತೂಕದ ವಿಭಾಗದಲ್ಲಿ ಉಳಿಯಬೇಕು.

ಎಲ್ಲಾ ಅಡೆತಡೆಗಳನ್ನು ಧಿಕ್ಕರಿಸಿ ಫೈನಲ್ ತಲುಪಿದ ಕುಸ್ತಿಪಟು ವಿನೇಶ್‌, ಮಂಗಳವಾರ ರಾತ್ರಿ ಸರಿಸುಮಾರು 2 ಕಿಲೋಗಳಷ್ಟು ಅಧಿಕ ತೂಕ ಹೊಂದಿದ್ದರು ಎನ್ನಲಾಗಿದೆ. ಇದನ್ನು ಕರಗಿಸಲು ಆಕೆ ಇಡೀ ರಾತ್ರಿ ನಿದ್ರೆ ಮಾಡದೆ ವ್ಯಾಯಾಮದಲ್ಲಿ ನಿರತರಾಗಿದ್ದರು. ಜಾಗಿಂಗ್‌ನಿಂದ ಹಿಡಿದು ಸ್ಕಿಪ್ಪಿಂಗ್ ಮತ್ತು ಸೈಕ್ಲಿಂಗ್‌ವರೆಗೆ. ಆದರೆ ಇದು ಸಾಕಾಗಲಿಲ್ಲ. ಕೊನೆಯ 100 ಗ್ರಾಂಗಳನ್ನು ಕರಗಿಸಲು ಇನ್ನು ಸ್ವಲ್ಪ ಕಾಲಾವಕಾಶವನ್ನು ನೀಡುವಂತೆ ಭಾರತೀಯ ನಿಯೋಗ ಮನವಿ ಮಾಡಿತು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ರಾತ್ರಿ ಪೂರ್ತಿ ವ್ಯಾಮಾಯ ಹಾಗೂ ತೂಕವಿಳಿಸುವ ಕಸರತ್ತು ಮಾಡಿದ ವಿನೇಶ್‌ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ಫೋಗಟ್ 50 ಕೆಜಿ ವಿಭಾಗದಲ್ಲಿ ಭಾಗವಹಿಸಲು ಕಷ್ಟವಾಗಿರುವುದು ಇದೇ ಮೊದಲಲ್ಲ. ಅವಳು ಸಾಮಾನ್ಯವಾಗಿ ಸ್ಪರ್ಧಿಸುವ ವಿಭಾಗ 53 ಕೆಜಿ. ಒಲಿಂಪಿಕ್ ಅರ್ಹತಾ ಪಂದ್ಯಗಳಲ್ಲಿಯೂ ಸಹ ಅವರು ಇದೇ ರೀತಿಯ ಅಗ್ನಿಪರೀಕ್ಷೆಯನ್ನು ಎದುರಿಸಿದ್ದರು.

ಮಂಗಳವಾರ ಫೋಗಟ್ ಒಲಿಂಪಿಕ್ಸ್‌ನ ಫೈನಲ್ ತಲುಪಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಚಿನ್ನದ ಪದಕದ ಪಂದ್ಯದ ಹಾದಿಯಲ್ಲಿ ಅವರು ವಿಶ್ವದ ನಂಬರ್ 1 ಆಗಿದ್ದ ಜಪಾನ್‌ನ ಕುಸ್ತಿಪಟು ಯುಯಿ ಸುಸಾಕಿಯನ್ನು ಸೋಲಿಸಿದರು. ಉಕ್ರೇನ್ ಮತ್ತು ಕ್ಯೂಬಾದ ಕುಸ್ತಿಪಟುಗಳ ವಿರುದ್ಧ ಇನ್ನೂ ಎರಡು ಅದ್ಭುತ ಗೆಲುವುಗಳನ್ನು ಸಾಧಿಸಿದ್ದರು. ಸಾರಾ ಹಿಲ್ಡೆಬ್ರಾಂಡ್ ವಿರುದ್ಧ ಫೈನಲ್‌ನಲ್ಲಿ ಸ್ಪರ್ಧಿಸಬೇಕಿತ್ತು. ಅವರ ವಿರುದ್ಧ ಫೋಗಟ್ ಈ ಹಿಂದೆ ಸೆಣಸಿ ಗೆದ್ದ ಉತ್ತಮ ದಾಖಲೆ ಇತ್ತು. ಆದರೆ ಅಮೆರಿಕದ ಆಟಗಾರ್ತಿ ಈಗ ಚಿನ್ನದ ಪದಕ ಗೆಲ್ಲುತ್ತಾಳೆ. ಫೋಗಟ್ ಬರಿಗೈಯಲ್ಲಿ ಹಿಂತಿರುಗಬೇಕಿದೆ.

ಇದನ್ನೂ ಓದಿ: Vinesh Phogat: ಅನರ್ಹ ವಿನೇಶ್​ ಫೋಗತ್‌ಗೆ ಪ್ರಧಾನಿ ಮೋದಿ ಸಾಂತ್ವನ; ಮತ್ತಷ್ಟು ಬಲಿಷ್ಠರಾಗಿ ಮರಳಿ ಬನ್ನಿ ಎಂಬ ಹಾರೈಕೆ

Continue Reading

ಕ್ರೀಡೆ

Vinesh Phogat: ಅನರ್ಹ ವಿನೇಶ್​ ಫೋಗತ್‌ಗೆ ಪ್ರಧಾನಿ ಮೋದಿ ಸಾಂತ್ವನ; ಮತ್ತಷ್ಟು ಬಲಿಷ್ಠರಾಗಿ ಮರಳಿ ಬನ್ನಿ ಎಂಬ ಹಾರೈಕೆ

Vinesh Phogat: ವಿನೇಶ್​ ಫೋಗಟ್​ ಅವರನ್ನು ಅನರ್ಹ ಮಾಡಿದ ಕುರಿತು ಭಾರತದ ನಿಯೋಗದಿಂದ ದೂರ ದಾಖಲಿಸಲಾಗಿದೆ. ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ.

VISTARANEWS.COM


on

Vinesh Phogat
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಫೈನಲ್​ ಪ್ರವೇಶಿಸುವ ಮೂಲಕ ದೇಶಕ್ಕೆ ಐತಿಹಾಸಿಕ ಪದಕವೊಂದನ್ನು ಖಾತ್ರಿಪಡಿಸಿದ್ದ, ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಫೈನಲ್​ ಪಂದ್ಯ ಆಡಲು ಕೆವಲೇ ಗಂಟೆಗಳು ಬಾಕಿ ಇರುವಾಗಲೇ ಅವರನ್ನು ಒಲಿಂಪಿಕ್ಸ್​ ಸಮಿತಿ ಅನರ್ಹ ಮಾಡಿದೆ. 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಅವರು ಇದೀಗ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ ಮಾಡಲಾಗಿದೆ. ಈ ಆಘಾತದಲ್ಲಿರುವ ವಿನೇಶ್​ಗೆ ಪ್ರಧಾನಿ ಮೋದಿ ಟ್ವೀಟ್​ ಮೂಲಕ ಸಾಂತ್ವನ ಹೇಳಿದ್ದಾರೆ.

“ವಿನೇಶ್, ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್! ನೀವು ಭಾರತದ ಹೆಮ್ಮೆ ಮತ್ತು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ. ಇಂದಿನ ಹಿನ್ನಡೆ ನಿಮಗೆ ಮಾತ್ರವಲ್ಲದೆ ಇಡೀ ದೇಶವಾಸಿಗಳಿಗೆ ನೋವು ತಂದಿದೆ. ಸವಾಲುಗಳನ್ನು ಎದುರಿಸುವುದು ಯಾವಾಗಲೂ ನಿಮ್ಮ ಸ್ವಭಾವವಾಗಿದೆ. ಬಲವಾಗಿ ಹಿಂತಿರುಗಿ! ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ” ಎಂದು ಮೋದಿ ಟ್ವೀಟ್​ ಮಾಡಿದ್ದಾರೆ.

ವಿನೇಶ್​ ಫೋಗಟ್​ ಅವರನ್ನು ಅನರ್ಹ ಮಾಡಿದ ಕುರಿತು ಭಾರತದ ನಿಯೋಗದಿಂದ ದೂರ ದಾಖಲಿಸಲಾಗಿದೆ. ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ವಿನೇಶ್ ಅವರು 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದರು, ಆದರೆ ಅವರ ತೂಕ ನಿಗದಿತ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಕುಸ್ತಿ ಪಂದ್ಯದಿಂದ ಅನರ್ಹಗೊಳಿಸಲಾಗಿದೆ. ಇದನ್ನು ಪ್ರಶ್ನಿಸಿ ನಾವು ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಗೆ ದೂರು ದಾಖಲಿಸಿದ್ದೇವೆ ಎಂದು ಭಾರತೀಯ ಒಲಿಂಪಿಕ್​​ ಸಮಿತಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಮಂಗಳವಾರ ನಡೆದಿದ್ದ ಪ್ರೀ ಕ್ವಾರ್ಟರ್​, ಕ್ವಾರ್ಟರ್​ ಫೈನಲ್​ ಮತ್ತು ಸೆಮಿಫೈನಲ್​ ಪಂದ್ಯದಲ್ಲಿ ವಿನೇಶ್ ಅವರು ತನಗಿಂತ ಮೇಲಿನ ಶ್ರೇಯಾಂಕದ, ಅದರಲ್ಲೂ ಪ್ರೀ ಕ್ವಾರ್ಟರ್​ನಲ್ಲಿ 4 ಬಾರಿಯ ವಿಶ್ವ ಚಾಂಪಿಯನ್​ ಹಾಗೂ ಸೋಲನ್ನೇ ಕಾಣದ ಕುಸ್ತಿಪಟುವಿಗೆ ಸೋಲುಣಿಸಿದ್ದು ನಿಜಕ್ಕೂ ಸಣ್ಣ ಸಾಧನೆಯಲ್ಲ. 8 ಗಂಟೆಯ ಅಂತರದಲ್ಲಿ ಮೂರು ಗೆಲುವು ಸಾಧಿಸಿ ಅವರು ಫೈನಲ್​ ಪ್ರವೇಶಿಸಿದ್ದರು. ಇಡೀ ದಿನದಲ್ಲಿ ಆಡಿದ ಮೂರು ಬೌಟ್‌ಗಳಲ್ಲಿಯೂ ವಿನೇಶ್​ ಪಾರಮ್ಯ ಮೆರೆದಿದ್ದರು.

ಇದನ್ನೂ ಓದಿ Paris Olympics: ಐತಿಹಾಸಿಕ ಪದಕ ಗೆಲ್ಲಲಿ ಮೀರಾಬಾಯಿ; ಇಂದು ಬಲಾಢ್ಯರ ಜತೆ ಸ್ಪರ್ಧೆ

ಒಂದೊಮ್ಮೆ ಅವರು ಫೈನಲ್​ನಲ್ಲಿ ಸ್ಪರ್ಧಿಸಿ ಪದಕ ಗೆಲ್ಲುತ್ತಿದ್ದರೆ ಇದು ಮಹಿಳಾ ಕುಸ್ತಿ ವಿಭಾಗದಲ್ಲಿ ಭಾರತಕ್ಕೆ ಒಲಿದ 2ನೇ ಪದವಾಗಿರುತ್ತಿತ್ತು. ಇದಕ್ಕೂ ಮುನ್ನ ರಿಯೊ ಒಲಿಂಪಿಕ್ಸ್‌ನಲ್ಲಿ ಸಾಕ್ಷಿ ಮಲಿಕ್ ಅವರು ಕಂಚು ಗೆದ್ದಿದ್ದರು. 2016ರ ರಿಯೊ ಒಲಿಂಪಿಕ್ಸ್​ನಲ್ಲಿ ಮಂಡಿನೋವಿನಿಂದ ಸಮಸ್ಯೆಯಾಗಿತ್ತು. 2021ರ ಟೋಕಿಯೊದಲ್ಲಿ ಅನಿರೀಕ್ಷಿತ ಸೋಲು ಕಂಡು ಹೊರಬಿದಿದ್ದರು. ಇದೀಗ ತೂಕ ಹೆಚ್ಚಳ ಅವರ ಚೊಚ್ಚಲ ಒಲಿಂಪಿಕ್​ ಪದಕ್ಕೆ ಹಿನ್ನಡೆಯಾಗಿ ಪರಿಣಮಿಸಿತು.

Continue Reading
Advertisement
bjp-jds padayatra Sumalatha ambareesh
ಪ್ರಮುಖ ಸುದ್ದಿ9 mins ago

BJP-JDS Padayatra: ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ‌ ; ಬ್ಯಾನರ್‌ಗಳಲ್ಲೂ ಕಾಣಿಸಿಕೊಳ್ಳದ ಸುಮಲತಾ ಅಂಬರೀಷ್‌!

Actor Darshan
ಕರ್ನಾಟಕ13 mins ago

Actor Darshan: ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ; ಎಫ್‌ಎಸ್‌ಎಲ್ ವರದಿಯಲ್ಲಿ ದೃಢ

Actor Dhanush Raayan set for OTT release
ಕಾಲಿವುಡ್14 mins ago

Actor Dhanush: ಧನುಷ್ ನಟನೆಯ ʻ50ʼನೇ ಸಿನಿಮಾ ಒಟಿಟಿ ಬಿಡುಗಡೆ ಯಾವಾಗ, ಎಲ್ಲಿ?

Crop Over Festival
Latest36 mins ago

Rihanna Crop Over: ʼಊರ ಹಬ್ಬʼದಲ್ಲಿ ʼನಗ್ನ ಉಡುಗೆʼ ಧರಿಸಿ ಸಂಚಲನ ಮೂಡಿಸಿದ ರಿಹಾನ್ನಾ!

Viral Video
Latest47 mins ago

Viral Video: ರಸ್ತೆಯಲ್ಲಿ ಚುಡಾಯಿಸಿದ ಪುಂಡನಿಗೆ ಬುದ್ಧಿ ಕಲಿಸಿದ ವಿದ್ಯಾರ್ಥಿನಿ; ವಿಡಿಯೊ ನೋಡಿ

Bangladesh Unrest
ವಿದೇಶ58 mins ago

Bangladesh Unrest: ಶೇಖ್‌ ಹಸೀನಾ ಅವರ ಪಕ್ಷದ ಮುಖಂಡರು, ಕಾರ್ಯಕರ್ತರೇ ಟಾರ್ಗೆಟ್‌; ಒಂದೇ ದಿನ 29 ಜನ ಬಲಿ

Student Abuse
Latest60 mins ago

Student Abuse: ʼಮೇಡಂ ನನಗೆ ಪಿರಿಯಡ್ಸ್‌ʼ ಎಂದರೂ ಬಿಡದೆ ವಿದ್ಯಾರ್ಥಿನಿಯನ್ನು ನಗ್ನಗೊಳಿಸಿದ ಶಿಕ್ಷಕಿ!

Vinesh Phogat Disqualified
ಕ್ರೀಡೆ1 hour ago

Vinesh Phogat Disqualified: ತೂಕ ವಿಭಾಗ ಬದಲಿಸಿದ್ದೇ ವಿನೇಶ್​ ಹಿನ್ನಡೆಗೆ ಕಾರಣವಾಯಿತೇ?

Namma Metro
ಕರ್ನಾಟಕ1 hour ago

Namma Metro: ಆ.6ರಂದು ನಮ್ಮ ಮೆಟ್ರೋದಲ್ಲಿ ದಾಖಲೆ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ

Vinesh Phogat
ದೇಶ1 hour ago

Vinesh Phogat: ನೋ! ನೋ! ನೋ!; ವಿನೇಶ್​ ಫೋಗಟ್ ಅನರ್ಹತೆ ಕೆಟ್ಟ ಕನಸಾಗಿರಲಿ: ಆನಂದ್‌ ಮಹೀಂದ್ರಾ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು21 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ22 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌