Site icon Vistara News

Supreme Court: ಒಬ್ಬರು ಒಂದೇ ಕ್ಷೇತ್ರದಲ್ಲಿ ಸ್ಪರ್ಧೆಯ ಬಗ್ಗೆ ಸಂಸತ್ ನಿರ್ಧರಿಸಲಿ ಎಂದ ಸುಪ್ರೀಂ ಕೋರ್ಟ್

Same Sex Marriage is urban elitist views, Says Central government to Supreme Court

ನವದೆಹಲಿ: ಚುನಾವಣೆಗಳಲ್ಲಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದನ್ನು ಪ್ರಶ್ನಿಸಿ ದಾಖಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL)ಯನ್ನು ಸುಪ್ರೀಂ ಕೋರ್ಟ್ (Supreme Court) ತಳ್ಳಿ ಹಾಕಿದೆ. ಅಲ್ಲದೇ, ಈ ಬಗ್ಗೆ ಸಂಸತ್ತು ನಿರ್ಧರಿಸಬೇಕು ಎಂದು ಹೇಳಿದೆ. 1951ರ ಜನಪ್ರತಿನಿಧಿಗಳ ಕಾಯ್ದೆಯ 33(7) ಸೆಕ್ಷನ್ ಪ್ರಕಾರ, ಅಭ್ಯರ್ಥಿಗಳು ಚುನಾವಣೆಗಳಲ್ಲಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸಬಹುದಾಗಿದೆ.

ಈ ಸಂಬಂಧ ದಾಖಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸಿಜೆಐ ಡಿ ವೈ ಚಂದ್ರಚೂಡ್ ಅವರಿದ್ದ ನೇೃತ್ವದ ಪೀಠ, ಚುನಾವಣೆಯಲ್ಲಿ ಏಕಕಾಲಕ್ಕೆ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ಕೊಡಬೇಕೆ, ಬೇಡವೇ ಎಂಬುದರ ಬಗ್ಗೆ ಸಂಸತ್ ನಿರ್ಧರಿಸಬೇಕು ಎಂದು ಹೇಳಿತು. ಜಸ್ಟೀಸ್ ಪಿ ಎಸ್ ನರಸಿಂಹ, ಜಸ್ಟೀಸ್ ಜೆ ಬಿ ಪರ್ದಿವಾಲಾ ಅವರೂ ಈ ಪೀಠದ ಭಾಗವಾಗಿದ್ದರು.

ಸಂಸತ್ ಮಾಡಬೇಕಾದ ಕಾರ್ಯದಲ್ಲಿ ನ್ಯಾಯಾಲಯವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಏನೇ ಬದಲಾವಣೆ ಮಾಡುವುದಿದ್ದರೂ ಅದು ಸಂಸತ್ ವಿವೇಚನೆಗೆ ಬಿಟ್ಟಿದ್ದು ಎಂದ ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂ ಓದಿ: Mekedatu Project: ಮೇಕೆದಾಟು ಯೋಜನೆಗೆ ಮತ್ತೆ ತಮಿಳುನಾಡು ಕ್ಯಾತೆ!, ಸುಪ್ರೀಂ ಕೋರ್ಟ್‌ಗೆ ಮತ್ತೊಂದು ಅರ್ಜಿ

ಈ ಬಗ್ಗೆ ಬಿಜೆಪಿಯ ನಾಯಕ ಅಶ್ವಿನಿ ಉಪಾಧ್ಯಾಯ ಅವರು ಪಿಐಎಲ್ ದಾಖಲಿಸಿ, ಒಬ್ಬ ಅಭ್ಯರ್ಥಿ ಒಂದಕ್ಕಿಂತ ಹೆಚ್ಚು ಕ್ಷೇತ್ರದಲ್ಲಿ ಸ್ಪರ್ಧಿಸುವುದರಿಂದ ಖಜಾನೆಗೆ ಸಾಕಷ್ಟು ನಷ್ಟ ಉಂಟಾಗುತ್ತಿದೆ. ಹಾಗಾಗಿ, ಇದನ್ನು ನಿಷೇಧಿಸಬೇಕು ಎಂದು ಕೋರಿದ್ದರು. ಅಲ್ಲದೇ, ತಮ್ಮ ಅರ್ಜಿಯಲ್ಲಿ ಈ ಅವಕಾಶವನ್ನು ರದ್ದು ಮಾಡಬೇಕೆಂಬ ರಾಷ್ಟ್ರೀಯ ಕಾನೂನು ಆಯೋಗದ ಶಿಫಾರಸನ್ನು ಕೋರ್ಟ್ ಗಮನಕ್ಕೆ ತಂದಿದ್ದರು.

Exit mobile version