ಅಯೋಧ್ಯೆ: ಅಯೋಧ್ಯೆಯಲ್ಲಿ (Ayodhya Ram Mandir) ನಿರ್ಮಾಣವಾಗುತ್ತಿರುವ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಯ (Pran Pratishta) ಕಾರ್ಯಕ್ರಮವು ಜನವರಿ 22ರಂದು ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಮಧ್ಯೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ (Shri Ram Janmbhoomi Teerth Kshetra) ಎಕ್ಸ್ ವೇದಿಕೆಯಲ್ಲಿ ಬೆಳಗಿನ ಜಾವದ ರಾಮ ಮಂದಿರದ ನಯನ ಮನೋಹರ ಚಿತ್ರವನ್ನು (Ram Mandir premises) ಪೋಸ್ಟ್ ಮಾಡಿದ್ದು, ಭಾರೀ ವೈರಲ್ ಆಗಿದೆ.
ಮರ್ಯಾದಾ ಪುರುಷೋತ್ತಮ ಶ್ರೀರಾಮ ದೇಗುಲ (Ayodhya Ram Mandir) ಉದ್ಘಾಟನೆಯ ಕಾರ್ಯಕ್ರಮದ ಸಿದ್ಧತೆಗಳು ಶರವೇಗದಲ್ಲಿ ನಡೆಯುತ್ತಿವೆ. ಜನವರಿ 16ರಿಂದ ಆರಂಭವಾಗಲಿರುವ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವು (Consecration Ceremony) ಏಳು ದಿನಗಳ ಕಾಲ ನಡೆಯಲಿದ್ದು, ಧಾರ್ಮಿಕ ವಿಧಿ ವಿಧಾನಗಳು ದೊಡ್ಡ ಮಟ್ಟದಲ್ಲಿ ನೆರವೇರಲಿವೆ. ಜನವರಿ 22ರಂದು, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಸಮ್ಮುಖದಲ್ಲಿ ಶ್ರೀ ರಾಮ ಲಲ್ಲಾ (Shri Ram Lalla) ದೇವರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಒಟ್ಟು ಒಂದು ವಾರಗಳ ಕಾಲ ಕಾರ್ಯಕ್ರಮ ನಡೆಯಲಿದೆ.
श्री राम जन्मभूमि मंदिर, अयोध्या का आज प्रातः काल खींचा गया चित्र।
— Shri Ram Janmbhoomi Teerth Kshetra (@ShriRamTeerth) January 2, 2024
The divine Shri Ram Janmbhoomi Mandir clicked this morning!
📍 Ayodhya pic.twitter.com/ggJpjAmjnj
ಜನವರಿ 16
ದೇವಸ್ಥಾನದ ಟ್ರಸ್ಟ್ ನೇಮಿಸಿದ ಆತಿಥೇಯರಿಂದ ಸರಯೂ ನದಿಯ ದಡದಲ್ಲಿ ದಶವಿದ್ ಸ್ನಾನ, ವಿಷ್ಣು ಪೂಜೆ ಮತ್ತು ಗೋದಾನ.
ಜನವರಿ 17
ರಾಮಲಲ್ಲಾ ಮೂರ್ತಿಯೊಂದಿಗೆ ಅಯೋಧ್ಯೆಯಲ್ಲಿ ಮೆರವಣಿಗೆ ನಡೆಯಲಿದ್ದು, ಭಕ್ತರು ಮಂಗಲ ಕಲಶದಲ್ಲಿ ಸರಯು ಜಲವನ್ನು ಹೊತ್ತು ದೇವಸ್ಥಾನಕ್ಕೆ ಬರಲಿದ್ದಾರೆ.
ಜನವರಿ 18
ಗಣೇಶ ಅಂಬಿಕಾ ಪೂಜೆಗಳೊಂದಿಗೆ ಔಪಚಾರಿಕ ಪೂಜಾ ವಿಧಿ ವಿಧಾನಗಳು ಶುರುವಾಗಲಿವೆ. ವರುಣ ಪೂಜೆ, ಮತ್ರಿಕಾ ಪೂಜೆ, ಬ್ರಾಹ್ಮಿಣ್ ವರನ್, ವಾಸ್ತು ಪೂಜೆ ಸೇರಿದಂತೆ ವಿವಿಧ ಪೂಜೆ ಕಾರ್ಯಕ್ರಮಗಳು ನಡೆಯಲಿವೆ.
ಜನವರಿ 19
ಅಗ್ನಿ ಸ್ಥಾಪನೆ, ನವಗ್ರಹ ಸ್ಥಾಪನೆ ಮತ್ತು ಹವನ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.
ಜನವರಿ 20
ದೇವಾಲಯದ ಗರ್ಭಗುಡಿಯನ್ನು ಸರಯುವಿನ ಪವಿತ್ರ ನೀರಿನಿಂದ ತೊಳೆದ ನಂತರ ವಾಸ್ತು ಶಾಂತಿ ಪೂಜಾ ವಿಧಿವಿಧಾನಗಳು ನಡೆಯಲಿವೆ.
ಜನವರಿ 21
125 ಕಲಶಗಳಿರುವ ದೈವ ಸ್ನಾನದ ನಂತರ ಶಯಾಧಿವಾಸ ನಡೆಯಲಿದೆ.
ಜನವರಿ 22
ಬೆಳಗಿನ ಪೂಜೆಯ ನಂತರ ಮಧ್ಯಾಹ್ನ ಮೃಗಶಿರ ನಕ್ಷತ್ರದಲ್ಲಿ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ನಡೆಯಲಿದೆ.
आज दिनांक 1 जनवरी 2024 पर सहस्त्रों की संख्या में रामभक्तों ने अयोध्या स्थित श्री रामजन्मभूमि मंदिर में भगवान श्री रामलला सरकार के दर्शन किए।
— Shri Ram Janmbhoomi Teerth Kshetra (@ShriRamTeerth) January 1, 2024
Today, on 1st January 2024, thousands of devotees had darshans of Bhagwan Shri Ramlala Sarkar at Shri Ram Janmbhoomi Mandir, Ayodhya. pic.twitter.com/GKqeT0Pc59
ಪ್ರಾಣ ಪ್ರತಿಷ್ಠಾಪನೆಯ ಮುಹೂರ್ತ ಯಾವಾಗ?
ಜನವರಿ 22ರಂದು ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ರಾಮ ಮಂದಿರದ ಗರ್ಭಗುಡಿಯಲ್ಲಿ ಶ್ರೀ ರಾಮಲಲ್ಲಾ ಪ್ರತಿಷ್ಠಾಪನೆಯು ಸರಿಯಾಗಿ ಮಧ್ಯಾಹ್ನ 12:29:8 ಶುರುವಾಗಿ, 12:30:32ಕ್ಕೆ ಅಂದರೆ 1 ನಿಮಿಷ 24 ಸೆಕೆಂಡ್‌ಗಳಲ್ಲಿ ಪೂರ್ಣಗೊಳ್ಳಲಿದೆ. ಬಳಿಕ ಆರತಿ ನಡೆಯುತ್ತದೆ. ದೇಗುಲದಲ್ಲಿ ಪ್ರಸಾದ ಹಂಚಿಕೆ ನಡೆಯುತ್ತದೆ. ಸಂಜೆಯ ವೇಳೆಗೆ ಅಯೋಧ್ಯೆಯಲ್ಲಿ ದೀಪಗಳನ್ನು ಬೆಳಗಲಾಗುತ್ತದೆ.
ಈ ಸುದ್ದಿಯನ್ನೂ ಓದಿ: Ram Mandir: ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಯ 7 ದಿನ ಯಾವೆಲ್ಲ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ?