Site icon Vistara News

ಜೈಪುರದಲ್ಲಿಂದು ಮೋದಿ, ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ ಭರ್ಜರಿ ರೋಡ್‌ ಶೋ; ಶೆಡ್ಯೂಲ್‌ ಇಲ್ಲಿದೆ

Narendra Modi And Emmanuel Macron

Before Republic Day, Modi-Macron To Hold roadshow in Jaipur Today

ಜೈಪುರ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವ (Republic Day 2024) ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಈ ಬಾರಿಯ ಕಾರ್ಯಕ್ರಮದಲ್ಲಿ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್‌ ಮ್ಯಾಕ್ರನ್‌ (Emmanuel Macron) ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಗುರುವಾರವೇ (ಜನವರಿ 25) ಜೈಪುರಕ್ಕೆ ಇಮ್ಯಾನುಯೆಲ್‌ ಮ್ಯಾಕ್ರನ್‌ ಆಗಮಿಸಲಿದ್ದು, ನರೇಂದ್ರ ಮೋದಿ (Narendra Modi) ಅವರು ಸ್ವಾಗತಿಸಲಿದ್ದಾರೆ. ಅಷ್ಟೇ ಅಲ್ಲ, ಸಂಜೆ ಮೋದಿ ಹಾಗೂ ಮ್ಯಾಕ್ರನ್‌ ಅವರು ಜೈಪುರದಲ್ಲಿ ಭರ್ಜರಿ ರೋಡ್‌ ಶೋ ಕೂಡ ನಡೆಸಲಿದ್ದಾರೆ. ಮೋದಿ ಹಾಗೂ ಮ್ಯಾಕ್ರನ್‌ ಅವರ ಕಾರ್ಯಕ್ರಮದ ಸಮಯ, ಸ್ಥಳ ಸೇರಿ ಹಲವು ಮಾಹಿತಿ ಇಲ್ಲಿದೆ.

ಕಾರ್ಯಕ್ರಮಗಳ ವೇಳಾಪಟ್ಟಿ

ಗಣರಾಜ್ಯೋತ್ಸವದಲ್ಲಿ ಭಾಗಿ

ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಇಮ್ಯಾನುಯೆಲ್‌ ಮ್ಯಾಕ್ರನ್‌ ಪಾಲ್ಗೊಳ್ಳಲಿದ್ದಾರೆ. ಗಣರಾಜ್ಯೋತ್ಸವದ ಬಳಿಕ ಅವರು ಫ್ರಾನ್ಸ್‌ ರಾಯಭಾರ ಕಚೇರಿಗೆ ಭೇಟಿ ನೀಡಲಿರುವ ಅವರು, ಅಲ್ಲಿನ ಸಿಬ್ಬಂದಿ ಜತೆ ಮಾತುಕತೆ ನಡೆಸಿದ್ದಾರೆ. ಸಂಜೆ 7.10ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಫ್ರಾನ್ಸ್‌ ಅಧ್ಯಕ್ಷ ಭೇಟಿಯಾಗಲಿದ್ದಾರೆ. ಇದಾದ ಬಳಿಕ ರಾಷ್ಟ್ರಪತಿ ಭವನದಲ್ಲಿ ರಾತ್ರಿ ನಡೆಯುವ ಭೋಜನ ಕೂಟದಲ್ಲಿ ಫ್ರಾನ್ಸ್‌ ಅಧ್ಯಕ್ಷ ಊಟ ಮಾಡಲಿದ್ದಾರೆ.

ಇದನ್ನೂ ಓದಿ: Republic Day : ಜ. 26ರ ಗಣರಾಜ್ಯೋತ್ಸವಕ್ಕೆ ಬಿಗಿ ಭದ್ರತೆ; ಹೋಟೆಲ್‌, ಲಾಡ್ಜ್‌ಗಳ ಮೇಲೂ ನಿಗಾ

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವ ಮೂಲಕ ಇಂತಹ ಆತಿಥ್ಯ ಸ್ವೀಕರಿಸಿದ ಫ್ರಾನ್ಸ್‌ನ ಆರನೇ ನಾಯಕ ಎಂಬ ಖ್ಯಾತಿಗೆ ಇಮ್ಯಾನುಯೆಲ್‌ ಮ್ಯಾಕ್ರನ್‌ ಅವರು ಭಾಜನರಾಗಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು 2023ರ ಜುಲೈನಲ್ಲಿ ಫ್ರಾನ್ಸ್‌ನಲ್ಲಿ ನಡೆದ ರಾಷ್ಟ್ರೀಯ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಗೌರವ ಸ್ವೀಕರಿಸಿದ್ದರು. ಈಗ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಇಮ್ಯಾನುಯೆಲ್‌ ಮ್ಯಾಕ್ರನ್‌ ಅವರು ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಗಣರಾಜ್ಯೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version