ನವ ದೆಹಲಿ : ಬೆಂಗಳೂರಿಗೆ ಹೊರಟಿದ್ದ ಇಂಡಿಗೊ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಇದರಿಂದಾಗಿ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಬೆಂಕಿ ಕಾಣಿಸಿಕೊಂಡಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಬೆಂಗಳೂರಿಗೆ ಹಾರಾಟ ಆರಂಭಿಸಿದ್ದ ಇಂಡಿಗೋ ಏರ್‌ಲೈನ್ಸ್‌ನ 6E 2131 ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ವಿಮಾನವನ್ನು ಲ್ಯಾಂಡ್ ಮಾಡಲಾಗಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿ ಮುಂದಿನ ಕಾರ್ಯಾಚರಣೆಯನ್ನು ಆರಂಭಿಸಿದೆ.
ವಿಮಾನ ಇನ್ನೇನೂ ಟೇಕ್‌ಆಫ್ ಅಗಬೇಕು ಎನ್ನುವಷ್ಟರಲ್ಲಿ ಬಲಭಾಗದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಪೈಲೆಟ್‌ಗಳು ಹಾರಾಟವನ್ನು ಕೊನೆಗೊಳಿಸಿ ತುರ್ತು ಭೂಸ್ಪರ್ಶ ಮಾಡಿದ್ದಾರೆ. ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ | ಕುಳಿತಿದ್ದ ಸೀಟ್ನಿಂದ ಮಹಿಳೆಯನ್ನು ಎಬ್ಬಿಸಿದ ಇಂಡಿಗೊ ಸಿಬ್ಬಂದಿ; ಭಾಷಾ ತಾರತಮ್ಯವೋ, ಸುರಕ್ಷತೆ ಉದ್ದೇಶವೋ?