ಪಟನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ಪಡೆಯ ಮೇಲೆ ಕಲ್ಲುತೂರಾಟ ನಡೆಸಲಾಗಿದೆ. ಇದರಿಂದ ವಾಹನಗಳ ಗಾಜುಗಳು ಪುಡಿಪುಡಿಯಾಗಿವೆ. ಆದರೆ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಈ ವಾಹನಗಳೊಂದಿಗೆ ಪ್ರಯಾಣಿಸುತ್ತಿರಲಿಲ್ಲ ಎಂದು ಹೇಳಲಾಗಿದೆ.
ಪಟನಾ ಜಿಲ್ಲೆಯ ಸೋಗಿ ಎಂಬಲ್ಲಿ ಈ ಘಟನೆ ನಡೆದಿದ್ದು, ಅಪರಿಚಿತರು ಬೆಂಗಾಲುಪಡೆಯವ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ಗ್ರಾಮದಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು, ಇದರಿಂದ ರೊಚ್ಚಿಗೆದ್ದಿದ್ದ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದರು. ಇದೇ ಸಂದರ್ಭದಲ್ಲಿ ಬೆಂಗಾವಲು ಪಡೆಯ ವಾಹನ ಇದೇ ಮಾರ್ಗದಲ್ಲಿ ಹೋಗುತ್ತಿತ್ತು. ಆಗ ಈ ಕಲ್ಲುತೂರಾಟ ನಡೆದಿದೆ.
ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದಾರೆ. ಬೆಂಗಾವಲು ಪಡೆಯ ವಾಹನದಲ್ಲಿದ್ದ ಯಾರಿಗೂ ಗಾಯಗಳಾದ ಬಗ್ಗೆ ಮಾಹಿತಿ ಲಭಿಸಿಲ್ಲ.
೨೦೨೪ರ ಲೋಕಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಪ್ರಧಾನಿ ಹುದ್ದೆಗೆ ಪ್ರಬಲ ಅಭ್ಯರ್ಥಿಯಾಗಲಿದ್ದಾರೆ ಎಂದು ಉಪಮುಖ್ಯಮಂತ್ರಿ ಮತ್ತು ಆರ್‌ಜೆಡಿಯ ನಾಯಕ ನಿತೀಶ್ ಕುಮಾರ್ ಹೇಳಿಕೆ ನೀಡದ ಬೆನ್ನಲ್ಲೇ ಈ ಘಟನೆ ನಡೆದಿದೆ.