ಮುಸ್ಲಿಮರ ಪ್ರದೇಶಗಳಲ್ಲಿ ರಾಮನವಮಿ ಮೆರವಣಿಗೆಯೇ ತಪ್ಪು; ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ - Vistara News

ದೇಶ

ಮುಸ್ಲಿಮರ ಪ್ರದೇಶಗಳಲ್ಲಿ ರಾಮನವಮಿ ಮೆರವಣಿಗೆಯೇ ತಪ್ಪು; ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ

ಪಶ್ಚಿಮ ಬಂಗಾಳದಲ್ಲಿ ರಾಮನವಮಿ ಮೆರವಣಿಗೆ ವೇಳೆ ನಡೆದ ಹಿಂಸಾಚಾರ ಪ್ರಕರಣಗಳು ಈಗ ರಾಜಕೀಯ ಮೇಲಾಟಕ್ಕೆ ಕಾರಣವಾಗಿವೆ. ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ, ದೀದಿ ವಿರುದ್ಧ ಬಿಜೆಪಿ ಆರೋಪ-ಪ್ರತ್ಯಾರೋಪ ಮಾಡುತ್ತಿವೆ.

VISTARANEWS.COM


on

Congress wont won even 40 seats upcoming election Says Mamata Banerjee
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕೊತಾ: ಪಶ್ಚಿಮ ಬಂಗಾಳದಲ್ಲಿ ಕೆಲವು ದಿನಗಳಿಂದ ಹಿಂಸಾಚಾರ ಭುಗಿಲೆದ್ದಿದೆ. ರಾಮನವಮಿ ಹಿನ್ನೆಲೆಯಲ್ಲಿ ಹೌರಾದಲ್ಲಿ ಮೆರವಣಿಗೆ ಸಾಗುವಾಗ ಕಲ್ಲುತೂರಾಟ ನಡೆಸಿ, ಕೋಮುಗಲಭೆ ಉಂಟಾಗಿದೆ. ವಾಹನಗಳಿಗೆ ಬೆಂಕಿ ಹಚ್ಚಿ, ಅಂಗಡಿ-ಮುಂಗಟ್ಟುಗಳನ್ನು ಧ್ವಂಸಗೊಳಿಸಿ ಗಲಾಟೆ ನಡೆಸಲಾಗಿದೆ. ಇನ್ನು ಹೂಗ್ಲಿಯಲ್ಲೂ ಬಿಜೆಪಿಯಿಂದ ನಡೆದ ರಾಮನವಮಿ ಮೆರವಣಿಗೆ ವೇಳೆ ಹಿಂಸಾಚಾರ ನಡೆದಿದೆ. ಇದೇ ವೇಳೆ ಬಿಜೆಪಿ ಶಾಸಕರೊಬ್ಬರು ಗಾಯಗೊಂಡಿದ್ದಾರೆ. ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಪರಿಸ್ಥಿತಿ ಈಗಲೂ ಬಿಗಡಾಯಿಸಿದೆ. ಇದರ ಬೆನ್ನಲ್ಲೇ, ಗಲಭೆ ಕುರಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿದ್ದು, “ಅಲ್ಪಸಂಖ್ಯಾತರ ಪ್ರದೇಶಗಳಲ್ಲಿ ಬಿಜೆಪಿಯು ಅನುಮತಿ ಇಲ್ಲದೆ ಮೆರವಣಿಗೆ ನಡೆಸಿದ್ದೇ ತಪ್ಪು” ಎಂದು ಹೇಳಿದ್ದಾರೆ.

“ರಾಮನವಮಿಯ ಮೆರವಣಿಗೆ ಐದು ದಿನಗಳವರೆಗೆ ನಡೆಸಿದ್ದು ಏಕೆ? ಇಂತಹ ಆಚರಣೆಗಳನ್ನು ಒಂದು ದಿನ ನಡೆಸಿ, ಒಂದೇ ದಿನದಲ್ಲಿ ಮೆರವಣಿಗೆ ಮುಗಿಸಬೇಕು. ಇದಕ್ಕೆ ನಮ್ಮ ವಿರೋಧವೇನೂ ಇಲ್ಲ. ಆದರೆ, ಐದು ದಿನಗಳವರೆಗೆ ಮೆರವಣಿಗೆ ನಡೆಸಬಾರದು. ಮೆರವಣಿಗೆ ವೇಳೆ ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯಬಾರದು. ಆದರೆ, ಬಿಜೆಪಿಯು ಉದ್ದೇಶಪೂರ್ವಕವಾಗಿಯೇ ಅನುಮತಿ ಇಲ್ಲದೆ ಅಲ್ಪಸಂಖ್ಯಾತರ ಪ್ರದೇಶಗಳಲ್ಲಿ ಮೆರವಣಿಗೆ ನಡೆಸಿದೆ. ರಿಶ್ರಾದಲ್ಲಿ ಮಾರ್ಚ್‌ 2ರಂದು ಹೀಗೆಯೇ ಶಸ್ತ್ರಾಸ್ತ್ರಗಳ ಸಮೇತ ಬಿಜೆಪಿ ಮೆರವಣಿಗೆ ನಡೆಸಿದೆ” ಎಂದು ಬಿಜೆಪಿ ವಿರುದ್ಧ ಆರೋಪಿಸಿದ್ದಾರೆ.

ಗಲಭೆಯ ದೃಶ್ಯ

ಬಂಗಾಳ ಪಾಕಿಸ್ತಾನ ಆಗುತ್ತಿದೆ ಎಂದ ಬಿಜೆಪಿ

ಇನ್ನು ಪಶ್ಚಿಮ ಬಂಗಾಳದಲ್ಲಿ ರಾಮನವಮಿ ಮೆರವಣಿಗೆ ಸಾಗುವ ವೇಳೆ ಕಲ್ಲುತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಹಾಗೆಯೇ, ಮಮತಾ ಬ್ಯಾನರ್ಜಿಯವರ ದುರಾಡಳಿತದಿಂದಾಗಿ ಬಂಗಾಳವು ಪಾಕಿಸ್ತಾನವಾಗಿ ಬದಲಾಗುತ್ತಿದೆ ಎಂದು ಟೀಕಿಸಿದೆ. “ರಾಮನವಮಿ ದಿನ ಹಿಂದುಗಳ ಮೇಲೆ ದಾಳಿಯಾಗುತ್ತಿದ್ದರೆ, ಮಮತಾ ಬ್ಯಾನರ್ಜಿ ಅವರು ಧರಣಿ ಆರಂಭಿಸುವ ಮೂಲಕ ಎಲ್ಲರ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸಿದರು. ಮಮತಾ ಬ್ಯಾನರ್ಜಿ ಅವರು ಮುಸ್ಲಿಮರ ಹಬ್ಬಗಳಿಗೆ ಮಾತ್ರ ಗಮನ ಕೊಡುತ್ತಾರೆ. ಹಿಂದುಗಳ ಹಬ್ಬಗಳನ್ನು ನಿರ್ಲಕ್ಷಿಸುತ್ತಾರೆ” ಎಂದು ಬಿಜೆಪಿ ನಾಯಕಿ ಲಾಕೆಟ್‌ ಚಟರ್ಜಿ ದೂರಿದ್ದಾರೆ.

ಹಿಂಸಾಚಾರದ ವರದಿ ಕೇಳಿದ ಹೈಕೋರ್ಟ್‌

ಪಶ್ಚಿಮ ಬಂಗಾಳದಲ್ಲಿ ರಾಮನವಮಿ ಆಚರಣೆಯ ಹಿನ್ನೆಲೆಯಲ್ಲಿ ಮಾರ್ಚ್‌ 30ರಿಂದ ನಡೆಯುತ್ತಿರುವ ಹಿಂಸಾಚಾರದ ಕುರಿತು ವರದಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೋಲ್ಕತಾ ಹೈಕೋರ್ಟ್‌ ನಿರ್ದೇಶನ ನೀಡಿದೆ. ಏಪ್ರಿಲ್‌ 5ರೊಳಗೆ ಹಿಂಸಾಚಾರದ ಕುರಿತು ವಿಸ್ತೃತ ವರದಿ ಸಲ್ಲಿಸಬೇಕು ಎಂದು ಸೂಚಿಸಿದೆ. ಹೌರಾ, ಹೂಗ್ಲಿ ಸೇರಿ ಪಶ್ಚಿಮ ಬಂಗಾಳದ ಹಲವೆಡೆ ರಾಮನವಮಿ ಮೆರವಣಿಗೆ ವೇಳೆ ಭಾರಿ ಹಿಂಸಾಚಾರ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವರನ್ನು ಬಂಧಿಸಿದ್ದು, ನೂರಾರು ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಇದನ್ನೂ ಓದಿ: Ram Navami Violence: ಗುಜರಾತ್‌, ಬಂಗಾಳದಲ್ಲಿ ರಾಮನವಮಿ ಹಿಂಸಾಚಾರ; 60 ಜನರ ಬಂಧನ, ರಾಜಕೀಯ ಮೇಲಾಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Mayawati: ನೇಮಿಸಿದ 5 ತಿಂಗಳಲ್ಲೇ ಸೋದರಳಿಯನನ್ನು ಉತ್ತರಾಧಿಕಾರಿ ಹುದ್ದೆಯಿಂದ ತೆಗೆದ ಮಾಯಾವತಿ!

Mayawati: ಮಾಯಾವತಿ ಅವರು 2019ರಲ್ಲಿ ಆಕಾಶ್‌ ಆನಂದ್‌ ಅವರನ್ನು ಬಿಎಸ್‌ಪಿ ರಾಷ್ಟ್ರೀಯ ಸಂಚಾಲಕರನ್ನಾಗಿ ನೇಮಿಸಿದ್ದರು. 2023ರ ಡಿಸೆಂಬರ್‌ನಲ್ಲಿ ಅವರು ಸೋದರಳಿಯನನ್ನೇ ಉತ್ತರಾಧಿಕಾರಿ ಎಂಬುದಾಗಿ ಘೋಷಿಸಿದ್ದರು. ಆದರೆ, ಈಗ ದಿಢೀರನೆ ಅವರನ್ನು ಎರಡೂ ಹುದ್ದೆಗಳಿಂದ ತೆರವುಗೊಳಿಸಲು ಏನು ಕಾರಣ ಎಂಬುದು ಸ್ಪಷ್ಟವಾಗಿಲ್ಲ.

VISTARANEWS.COM


on

Mayawati
Koo

ಲಖನೌ: ಬಹುಜನ ಸಮಾಜ ಪಕ್ಷದ (BSP) ವರಿಷ್ಠ ನಾಯಕಿ ಮಾಯಾವತಿ (Mayawati) ಅವರು ಸೋದರಳಿಯ ಆಕಾಶ್‌ ಆನಂದ್‌ (Akash Anand) ಅವರನ್ನು ತಮ್ಮ ಉತ್ತರಾಧಿಕಾರಿ ಹುದ್ದೆಯಿಂದ ವಜಾಗೊಳಿಸಿದ್ದಾರೆ. ನೇಮಕ ಮಾಡಿದ ಐದೇ ತಿಂಗಳಲ್ಲಿ ಬಿಎಸ್‌ಪಿಯ ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದಲೂ ಮಾಯಾವತಿಯವರು ವಜಾಗೊಳಿಸಿದ್ದಾರೆ. ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಮಾಯಾವತಿಯವರು ಇಂತಹ ತೀರ್ಮಾನ ತೆಗೆದುಕೊಂಡಿರುವುದು ಭಾರಿ ಚರ್ಚೆಗೂ ಗ್ರಾಸವಾಗಿದೆ.

ಆಕಾಶ್‌ ಆನಂದ್‌ ಅವರನ್ನು ಜವಾಬ್ದಾರಿಯಿಂದ ಮುಕ್ತಿಗೊಳಿಸಿರುವ ಕುರಿತು ಮಾಯಾವತಿಯವರೇ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. “ಆಕಾಶ್‌ ಆನಂದ್‌ ಅವರಿಗೆ ಪಕ್ಷದಲ್ಲಿ ಉನ್ನತ ಸ್ಥಾನಗಳನ್ನು ನಿಯೋಜಿಸಲಾಗಿತ್ತು. ಆದರೆ, ಬದಲಾದ ಸಾಮಾಜಿಕ ವ್ಯವಸ್ಥೆ, ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಅವರನ್ನು ರಾಷ್ಟ್ರೀಯ ಸಂಚಾಲಕ ಹಾಗೂ ಉತ್ತರಾಧಿಕಾರಿ ಹುದ್ದೆಯಿಂದ ತೆರವುಗೊಳಿಸಲಾಗಿದೆ. ಈಗಲೂ ಪಕ್ಷವು ಡಾ.ಬಿ.ಆರ್.ಅಂಬೇಡ್ಕರ್‌ ಅವರ ಚಿಂತನೆಗಳನ್ನು ಪಾಲಿಸಲು ಕಟಿಬದ್ಧವಾಗಿದೆ” ಎಂದು ತಿಳಿಸಿದ್ದಾರೆ.

ಮಾಯಾವತಿ ಅವರು 2019ರಲ್ಲಿ ಆಕಾಶ್‌ ಆನಂದ್‌ ಅವರನ್ನು ಬಿಎಸ್‌ಪಿ ರಾಷ್ಟ್ರೀಯ ಸಂಚಾಲಕರನ್ನಾಗಿ ನೇಮಿಸಿದ್ದರು. 2023ರ ಡಿಸೆಂಬರ್‌ನಲ್ಲಿ ಅವರು ಸೋದರಳಿಯನನ್ನೇ ಉತ್ತರಾಧಿಕಾರಿ ಎಂಬುದಾಗಿ ಘೋಷಿಸಿದ್ದರು. ಆದರೆ, ಈಗ ದಿಢೀರನೆ ಅವರನ್ನು ಎರಡೂ ಹುದ್ದೆಗಳಿಂದ ತೆರವುಗೊಳಿಸಲು ಏನು ಕಾರಣ ಎಂಬುದು ಸ್ಪಷ್ಟವಾಗಿಲ್ಲ. ಆದಾಗ್ಯೂ, ಮೊದಲಿನಂತೆ ಸಹೋದರ, ಆಕಾಶ್‌ ಆನಂದ್‌ ಅವರ ತಂದೆ ಆನಂದ್‌ ಕುಮಾರ್‌ ಅವರು ಜವಾಬ್ದಾರಿ ನಿಭಾಯಿಸಲಿದ್ದಾರೆ ಎಂಬುದಾಗಿ ಮಾಯಾವತಿ ಹೇಳೀದ್ದಾರೆ.

ಯಾರಿವರು ಆಕಾಶ್‌ ಆನಂದ್?

ಆಕಾಶ್ ಆನಂದ್ ತಮ್ಮ 22ನೇ ವಯಸ್ಸಿನಲ್ಲಿ 2017ರಲ್ಲಿ ರಾಜಕಾರಣವನ್ನು ಪ್ರವೇಶಿಸಿದರು. ಲಂಡನ್‌ನಲ್ಲಿ ಓದಿರುವ ಆಕಾಶ್ ಎಂಬಿಎ ಪದವೀಧರರು. ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದ ರ‍್ಯಾಲಿಯಲ್ಲಿ ಮಾಯಾವತಿಯವರೊಂದಿಗೆ ಅವರ ರಾಜಕೀಯ ಚೊಚ್ಚಲ ಪ್ರವೇಶವಾಗಿತ್ತು, ಅಲ್ಲಿ ಅವರು ಅಖಿಲೇಶ್ ಯಾದವ್ ಮತ್ತು ಅಜಿತ್ ಸಿಂಗ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.

ಸಾಮಾನ್ಯವಾಗಿ ಬಹುಜನ ಸಮಾಜ ಪಾರ್ಟಿಯ ಪಾದಯಾತ್ರೆಗಳಂಥ ರಾಜಕೀಯ ಚಟುವಟಿಕೆಗಳನ್ನು ನಡೆಸುವುದಿಲ್ಲ. ಆದರೆ, ಆಕಾಶ್ ಆನಂದ್ ಅವರು ಈ ಪದ್ಧತಿಯನ್ನು ಮುರಿದು ಇದೇ ಮೊದಲ ಬಾರಿಗೆ, 14 ದಿನಗಳ ಸರ್ವಜನ ಹಿತಾಯ, ಸರ್ವಜನ ಸುಖಾಯ ಸಂಕಲ್ಪ ಯಾತ್ರೆಯನ್ನು ಕೈಗೊಂಡಿದ್ದರು. ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಬಿಎಸ್‌ಪಿಗಾಗಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: Politicians Scandals : ದೇಶದ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಲೈಂಗಿಕ ಹಗರಣಗಳಿವು!

Continue Reading

ದೇಶ

Amanatullah Khan: ಪೆಟ್ರೋಲ್‌ ಬಂಕ್‌ ಸಿಬ್ಬಂದಿ ಮೇಲೆ ಆಪ್‌ ಎಂಎಲ್‌ಎ ಪುತ್ರನಿಂದ ಹಲ್ಲೆ; ಬಿತ್ತು ಕೇಸ್

Amanatullah Khan: ನೊಯ್ಡಾದ ಸೆಕ್ಟರ್‌ 95 ಪ್ರದೇಶದಲ್ಲಿರುವ ಪೆಟ್ರೋಲ್‌ ಬಕ್‌ನಲ್ಲಿ ಅಲ್ಲಿನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಕಾರಿನ ಡಿಕ್ಕಿಯಿಂದ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗಿ, ಹಲ್ಲೆ ಮಾಡುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದಾದ ಬಳಿಕ ಸಿಸಿಟಿವಿ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ. ಜನ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Amanatullah Khan
Koo

ನವದೆಹಲಿ: ರಾಜಕಾರಣಿಗಳು, ರಾಜಕಾರಣಿಗಳ ಮಕ್ಕಳು, ಅವರ ಕುಟುಂಬಸ್ಥರಿಗೊಂದು ದುರಹಂಕಾರ ಇರುತ್ತದೆ. ಹಣ, ಅಧಿಕಾರದ ಮದವು ಅವರನ್ನು ಸಾರ್ವಜನಿಕರೊಂದಿಗೆ ದುರಹಂಕಾರದಿಂದ, ದರ್ಪದಿಂದ ವರ್ತಿಸುವ ಹಾಗೆ ಮಾಡುತ್ತದೆ. ಚುನಾವಣೆ ಸಂದರ್ಭ ಹೊರತುಪಡಿಸಿ ಅವರು ಉಳಿದ ಸಮಯದಲ್ಲಿ ಅಹಂಕಾರದಿಂದಲೇ ವರ್ತಿಸುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಆಮ್‌ ಆದ್ಮಿ ಪಕ್ಷದ (Aam Aadmy Party) ಶಾಸಕ ಅಮಾನತುಲ್ಲಾ ಖಾನ್‌ ಅವರ ಪುತ್ರನು ಪೆಟ್ರೋಲ್‌ ಪಂಪ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಆತನ ವಿರುದ್ಧ ಕೇಸ್‌ ದಾಖಲಾಗಿದೆ.

ನೊಯ್ಡಾದ ಸೆಕ್ಟರ್‌ 95 ಪ್ರದೇಶದಲ್ಲಿರುವ ಪೆಟ್ರೋಲ್‌ ಬಕ್‌ನಲ್ಲಿ ಅಲ್ಲಿನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಕಾರಿನ ಡಿಕ್ಕಿಯಿಂದ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗಿ, ಹಲ್ಲೆ ಮಾಡುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದಾದ ಬಳಿಕ ಸಿಸಿಟಿವಿ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ. ವೈರಲ್‌ ಆಗುತ್ತಲೇ ಜನ ಶಾಸಕನ ಪುತ್ರನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ.

ಅಮಾನತುಲ್ಲಾ ಖಾನ್‌ನ ಪುತ್ರನು ಕಾರಿನಲ್ಲಿ ಪೆಟ್ರೋಲ್‌ ಬಂಕ್‌ಗೆ ಬಂದಿದ್ದಾನೆ. ಆದರೆ, ಹಲವು ವಾಹನಗಳನ್ನು ಸಾಲಿನಲ್ಲಿ ನಿಲ್ಲಿಸಿದ ಕಾರಣ, ಕ್ಯೂ ಬಿಟ್ಟು ಹೋಗಿ, ಮೊದಲು ಪೆಟ್ರೋಲ್‌ ಹಾಕಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಆಗ ಅಲ್ಲಿದ್ದ ಸಾರ್ವಜನಿಕರು, ಪೆಟ್ರೋಲ್‌ ಬಂಕ್‌ ಸಿಬ್ಬಂದಿಯು ಆತನನ್ನು ತಡೆದಿದ್ದಾರೆ. ಇದರಿಂದ ಕುಪಿತಗೊಂಡ ಎಂಎಲ್‌ಎ ಪುತ್ರನು, ಕಾರಿನ ಡಿಕ್ಕಿಯಲ್ಲಿದ್ದ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗಿ ಅಲ್ಲಿನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಇಷ್ಟೆಲ್ಲ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ತಂದೆಯೂ ಬಂಕ್‌ಗೆ ಬಂದು ಬೆದರಿಕೆ

ಸಾರ್ವಜನಿಕರ ಜತೆ ಅಸಭ್ಯವಾಗಿ ವರ್ತಿಸಿದ, ಪೆಟ್ರೋಲ್‌ ಬಂಕ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಮಗನಿಗೆ ಬುದ್ಧಿ ಮಾತು ಹೇಳಿ, ಪ್ರಕರಣವನ್ನು ತಣ್ಣಗಾಗಿಸುವ ಬದಲು, ಅಮಾನತುಲ್ಲಾ ಖಾನ್‌ ಅವರೇ ಪೆಟ್ರೋಲ್‌ ಬಂಕ್‌ಗೆ ತೆರಳಿ, ಅಲ್ಲಿನ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ವಕ್ಫ್‌ ಬೋರ್ಡ್‌ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳಷ್ಟೇ ಅಮಾನತುಲ್ಲಾ ಖಾನ್‌ ಅವರನ್ನು ಜಾರಿ ನಿರ್ದೇಶನಾಲಯದ ವಿಚಾರಣೆ ನಡೆಸಿದ್ದಾರೆ. ಇವರು ದೆಹಲಿಯ ಓಖ್ಲಾ ವಿಧಾನಸಭೆ ಕ್ಷೇತ್ರದ ಶಾಸಕರಾಗಿದ್ದಾರೆ.

ಇದನ್ನೂ ಓದಿ: Harshika Poonacha: ಹಲ್ಲೆ ಪ್ರಕರಣ; ನ್ಯಾಯ ಕೋರಿ ಪ್ರಲ್ಹಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ

Continue Reading

ಪ್ರಮುಖ ಸುದ್ದಿ

PM Modi: ರಾಮಮಂದಿರಕ್ಕೆ ಕಾಂಗ್ರೆಸ್‌ ಬೀಗ ಹಾಕಬಾರದು ಎಂದರೆ ನಮಗೆ 400 ಸೀಟು ಕೊಡಿ ಎಂದ ಮೋದಿ

PM Modi: ಮಧ್ಯಪ್ರದೇಶದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದರು. ಇದೇ ವೇಳೆ ಅವರು, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸುವ ಜತೆಗೆ ತಾವು ಏಕೆ 400 ಸೀಟು ಬೇಕು ಎಂಬುದಾಗಿ ಮನವಿ ಮಾಡುತ್ತಿದ್ದೇನೆ ಎಂಬುದಕ್ಕೆ ಸ್ಪಷ್ಟನೆ ನೀಡಿದರು. 370ನೇ ವಿಧಿ, ರಾಮಮಂದಿರ ರಕ್ಷಣೆ ಸೇರಿ ಹಲವು ವಿಷಯಗಳಿಗಾಗಿ ಬಹುಮತ ನೀಡಿ ಎಂದು ಕೂಡ ಮನವಿ ಮಾಡಿದರು.

VISTARANEWS.COM


on

PM Modi
Koo

ಭೋಪಾಲ್:‌ ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಭಾಷಣಗಳು ಚುರುಕು ಪಡೆದಿವೆ. ಹತ್ತಾರು ವಿಷಯಗಳನ್ನು ಮುಂದಿಟ್ಟುಕೊಂಡು ಅವರು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಈಗ ಮಧ್ಯಪ್ರದೇಶದ (Madhya Pradesh) ಧಾರ್‌ನಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಮೋದಿ, “ಕಾಂಗ್ರೆಸ್‌ ಮತ್ತೆ ರಾಮಮಂದಿರ ತಂಟೆಗೆ ಹೋಗಬಾರದು ಎಂದರೆ ಎನ್‌ಡಿಎಗೆ 400 ಕ್ಷೇತ್ರಗಳನ್ನು ಕೊಡಿ” ಎಂಬುದಾಗಿ ಮತದಾರರಲ್ಲಿ ಮನವಿ ಮಾಡಿದ್ದಾರೆ.

“ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 400 ಕ್ಷೇತ್ರಗಳಲ್ಲಿ ಗೆಲ್ಲಿಸಿ ಎಂಬುದಾಗಿ ನಾನು ನಿಮ್ಮಲ್ಲಿ ಮನವಿ ಮಾಡಲು ಹಲವು ಕಾರಣಗಳಿವೆ. ನೀವು ಬಹುಮತ ನೀಡಿದ ಕಾರಣಕ್ಕಾಗಿಯೇ ನಾವು 370ನೇ ವಿಧಿಯನ್ನು ರದ್ದುಗೊಳಿಸಿದೆವು. ಹಾಗಾಗಿ, ಕಾಂಗ್ರೆಸ್‌ 370ನೇ ವಿಧಿಯನ್ನು ಮತ್ತೆ ಜಾರಿಗೆ ತರಬಾರದು, ಅಯೋಧ್ಯೆಯ ರಾಮಮಂದಿರಕ್ಕೆ ಬಾಬ್ರಿ ಮಸೀದಿ ಬೀಗ ಜಡಿಯಬಾರದು, ನಮ್ಮ ದೇಶದ ದ್ವೀಪಗಳನ್ನು ಬೇರೆ ದೇಶಗಳಿಗೆ ನೀಡಬಾರದು, ಒಬಿಸಿ ಮೀಸಲಾತಿಯನ್ನು ಕಿತ್ತು ಧರ್ಮದ ಆಧಾರದ ಮೇಲೆ ಅಲ್ಪಸಂಖ್ಯಾತರಿಗೆ ನೀಡಬಾರದು ಎಂಬ ಕಾರಣಕ್ಕಾಗಿ ಬಿಜೆಪಿಗೆ ಬಹುಮತ ನೀಡಿ” ಎಂಬುದಾಗಿ ಮನವಿ ಮಾಡಿದರು.

ಸಂವಿಧಾನ, ಅಂಬೇಡ್ಕರ್‌ ವಿಷಯ ಪ್ರಸ್ತಾಪ

ಭಾರತದ ಸಂವಿಧಾನ ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಹೆಸರನ್ನು ಪ್ರಸ್ತಾಪಿಸಿಯೂ ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ ನಡೆಸಿದರು. “ಕಾಂಗ್ರೆಸ್‌ ಪರಿವಾರಕ್ಕೆ ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನ ಆಗಿಬರುವುದಿಲ್ಲ. ಅವರು ಅಂಬೇಡ್ಕರ್‌ ರಚಿಸಿದ ಸಂವಿಧಾನವನ್ನು ವಿರೋಧಿಸುತ್ತಾರೆ. ಇದೇ ಕಾರಣಕ್ಕಾಗಿಯೇ, ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್‌ ಪಾತ್ರವು ತುಂಬ ಕಡಿಮೆ ಇದೆ ಎಂಬುದಾಗಿ ಕಾಂಗ್ರೆಸ್‌ ಹೇಳುತ್ತದೆ. ಕಾಂಗ್ರೆಸ್‌ಗೆ ಸಂವಿಧಾನಕ್ಕಿಂತ ಕುಟುಂಬದ ಮೇಲೆಯೇ ಹೆಚ್ಚು ಪ್ರೀತಿ” ಎಂದು ವಾಗ್ದಾಳಿ ನಡೆಸಿದರು.

“ಕಳೆದ 10 ವರ್ಷಗಳಲ್ಲಿ ಬಿಜೆಪಿಯು ಗಣನೀಯ ಸಾಧನೆ ಮಾಡಿದೆ. ನೀವೆಲ್ಲ ನಮಗೆ ಬಹುಮತದ ಸರ್ಕಾರ ನೀಡಿದ ಕಾರಣ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಮತಬ್ಯಾಂಕ್‌ಗಾಗಿ ಬೇರೆಯವರಿಗೆ ನೀಡುವುದರಿಂದ ತಡೆಯಲಾಯಿತು. ಇದೇ ಕಾರಣಕ್ಕಾಗಿ ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರನ್ನು ರಾಷ್ಟ್ರಪತಿಯಾಗಿ ಆಯ್ಕೆ ಮಾಡಲು ಸಾಧ್ಯವಾಯಿತು” ಎಂದರು. “ಕಾಂಗ್ರೆಸ್‌ನವರು ಒಬಿಸಿ, ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ಮತಬ್ಯಾಂಕ್‌ಗೆ ನೀಡುವುದಿಲ್ಲ ಎಂಬುದಾಗಿ ಬರೆದುಕೊಂಡಿ ಎಂದು ಕೂಡ ಸವಾಲು ಹಾಕಿದ್ದೇನೆ” ಎಂಬುದಾಗಿ ತಿಳಿಸಿದರು.

ಇದನ್ನೂ ಓದಿ: ಎಲ್ಲ ಮೀಸಲಾತಿಯನ್ನು ಮುಸ್ಲಿಮರಿಗೇ ಕೊಡಬೇಕು ಎಂದ ಲಾಲು ಪ್ರಸಾದ್‌ ಯಾದವ್;‌ ಕೆಂಡವಾದ ಮೋದಿ!

Continue Reading

ಆಟೋಮೊಬೈಲ್

Air Purifier: ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ ಏಕೆ ಅಗತ್ಯ ಗೊತ್ತೆ?

ಕಾರಿನಲ್ಲಿರುವ ಏರ್ ಪ್ಯೂರಿಫೈಯರ್ ಗಾಳಿಯ ಗುಣಮಟ್ಟವನ್ನು ಸುಧಾರಿಸುವಲ್ಲಿ ಮತ್ತು ಆರೋಗ್ಯವನ್ನು ರಕ್ಷಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ಗಳು (Air Purifier) ಅಗತ್ಯವಾಗಿರುವುದಕ್ಕೆ ಕೆಲವು ಪ್ರಮುಖ ಕಾರಣಗಳೂ ಇವೆ. ಕಾರಿನಲ್ಲಿ ಓಡಾಡುವವರಿಗೆ ಏರ್‌ ಪ್ಯೂರಿಫೈಯರ್‌ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

Air Purifier
Koo

ವಾಯು ಮಾಲಿನ್ಯವು (Air pollution) ಈಗ ಜಾಗತಿಕವಾಗಿ ಒಂದು ಸಮಸ್ಯೆಯಾಗಿದೆ. ಹೊರಾಂಗಣ ಪರಿಸರವನ್ನು ಮಾತ್ರವಲ್ಲದೆ ಇದು ನಮ್ಮ ಮನೆ (home) ಮತ್ತು ವಾಹನಗಳ (vehicles) ಒಳಗಿನ ಗಾಳಿಯ ಮೇಲೂ ಪರಿಣಾಮ ಬೀರುತ್ತಿದೆ. ಒಳಾಂಗಣ ವಾಯು ಮಾಲಿನ್ಯವನ್ನು ಎದುರಿಸಲು ಅನೇಕ ಜನರು ತಮ್ಮ ಮನೆಗಳಲ್ಲಿ ಏರ್ ಪ್ಯೂರಿಫೈಯರ್‌ಗಳನ್ನು (Air Purifier) ಬಳಸಲು ಪ್ರಾರಂಭಿಸಿದ್ದಾರೆ. ಆದರೆ ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ಗಳ ಅಗತ್ಯವನ್ನು ಸಾಮಾನ್ಯವಾಗಿ ಹೆಚ್ಚಿನವರು ಕಡೆಗಣಿಸುತ್ತಾರೆ.

ಕಲುಷಿತ ಗಾಳಿಯು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ಬಗ್ಗೆ ಜಾಗೃತಿ ಹೆಚ್ಚಾಗುತ್ತಿದ್ದು, ವಾಹನಗಳಲ್ಲಿ ಏರ್ ಪ್ಯೂರಿಫೈಯರ್ ಗಳ ಪ್ರಾಮುಖ್ಯತೆಯು ಎಲ್ಲರ ಗಮನ ಸೆಳೆಯುತ್ತಿದೆ. ಸ್ವಂತ ವಾಹನ ಚಾಲನೆ ಮಾಡುವಾಗ ವಿಶೇಷವಾಗಿ ಭಾರೀ ವಾಹನ ದಟ್ಟಣೆಯ ಪ್ರದೇಶಗಳಲ್ಲಿ ಸುತ್ತಮುತ್ತ ನಿರಂತರವಾಗಿ ಹಾನಿಕಾರಕ ಅನಿಲಗಳು ಮತ್ತು ಕಣಗಳು ಹೊರಸೂಸುತ್ತಿರುತ್ತದೆ. ಈ ಮಾಲಿನ್ಯಕಾರಕಗಳು ಕಾರಿನ ಕ್ಯಾಬಿನ್ ಅನ್ನು ಪ್ರವೇಶಿಸಬಹುದು. ಇದು ಒಳಗೆ ಕಲುಷಿತ ಗಾಳಿಯ ಸಂಗ್ರಹಕ್ಕೆ ಕಾರಣವಾಗುತ್ತದೆ. ಪರಿಸರದಲ್ಲಿರುವ ಧೂಳು, ಹೊಗೆ, ಬ್ಯಾಕ್ಟೀರಿಯಾ, ವೈರಸ್‌ಗಳು ಮತ್ತು ಅಲರ್ಜಿನ್‌ಗಳಂತಹ ಅಂಶಗಳಿಂದ ಇದು ಮತ್ತಷ್ಟು ಹದಗೆಡುತ್ತದೆ.
ಕಾರಿನಲ್ಲಿರುವ ಏರ್ ಪ್ಯೂರಿಫೈಯರ್ ಗಾಳಿಯ ಗುಣಮಟ್ಟವನ್ನು ಸುಧಾರಿಸುವಲ್ಲಿ ಮತ್ತು ಆರೋಗ್ಯವನ್ನು ರಕ್ಷಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ಗಳು ಅಗತ್ಯವಾಗಿರುವುದಕ್ಕೆ ಕೆಲವು ಪ್ರಮುಖ ಕಾರಣಗಳೂ ಇವೆ.


1. ಮಾಲಿನ್ಯಕಾರಕಗಳನ್ನು ಕಡಿಮೆ ಮಾಡುತ್ತದೆ

ಗಾಳಿಯ ಶುದ್ಧೀಕರಣವು ಕಾರಿನೊಳಗಿನ ಗಾಳಿಯಿಂದ ಧೂಳು, ಹೊಗೆ, ಪರಾಗ, ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳಂತಹ ಮಾಲಿನ್ಯಕಾರಕಗಳನ್ನು ಪರಿಣಾಮಕಾರಿಯಾಗಿ ಫಿಲ್ಟರ್ ಮಾಡುತ್ತದೆ. ಚಾಲನೆ ಮಾಡುವಾಗ ನೀವು ಉಸಿರಾಡುವ ಹಾನಿಕಾರಕ ಕಣಗಳ ಸಾಂದ್ರತೆಯನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ.

2. ಅಲರ್ಜಿಕಾರಕಗಳನ್ನು ತೆಗೆದು ಹಾಕುತ್ತದೆ

ಅಲರ್ಜಿ ಅಥವಾ ಆಸ್ತಮಾದಂತಹ ಉಸಿರಾಟದ ತೊಂದರೆ ಹೊಂದಿರುವ ವ್ಯಕ್ತಿಗಳಿಗೆ ಕಲುಷಿತ ಗಾಳಿಯು ಅಸ್ವಸ್ಥತೆ ಮತ್ತು ಆರೋಗ್ಯ ಸಮಸ್ಯೆಗಳನ್ನು ಪ್ರಚೋದಿಸುತ್ತದೆ. ಏರ್ ಪ್ಯೂರಿಫೈಯರ್ ಗಾಳಿಯಿಂದ ಅಲರ್ಜಿಯನ್ನು ತೆಗೆದುಹಾಕುತ್ತದೆ. ಸೂಕ್ಷ್ಮ ವ್ಯಕ್ತಿಗಳಿಗೆ ಸ್ವಚ್ಛ ಮತ್ತು ಸುರಕ್ಷಿತ ವಾತಾವರಣವನ್ನು ಸೃಷ್ಟಿಸುತ್ತದೆ.

3. ವಾಸನೆ ತೊಡೆದು ಹಾಕುವುದು

ಮಾಲಿನ್ಯಕಾರಕಗಳ ಜೊತೆಗೆ ಏರ್ ಪ್ಯೂರಿಫೈಯರ್‌ಗಳು ಕಾರಿನೊಳಗಿನ ಅಹಿತಕರ ವಾಸನೆಯನ್ನು ತೆಗೆದು ಹಾಕುತ್ತದೆ. ಅದು ಹೊಗೆ, ಆಹಾರ ಅಥವಾ ಇತರ ವಾಸನೆಯ ಪದಾರ್ಥಗಳು ತೊಡೆದು ಹಾಕಿ ಗಾಳಿ ಶುದ್ಧೀಕರಣ ಮಾಡಿ ಸುವಾಸನೆಯನ್ನು ಬೀರುತ್ತದೆ. ವಾಹನ ಚಾಲನೆಯ ಅನುಭವವನ್ನು ಹೆಚ್ಚಿಸುತ್ತದೆ.

4. ಆರೋಗ್ಯದ ಅಪಾಯಗಳ ವಿರುದ್ಧ ರಕ್ಷಣೆ

ಕಲುಷಿತ ಗಾಳಿಗೆ ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದರಿಂದ ಉಸಿರಾಟದ ಸಮಸ್ಯೆಗಳು, ಅಲರ್ಜಿಗಳು, ಆಸ್ತಮಾ ಮತ್ತು ಹೃದಯರಕ್ತನಾಳದ ಕಾಯಿಲೆಗಳು ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಕಾರಿನೊಳಗಿನ ಗಾಳಿಯನ್ನು ಶುದ್ಧೀಕರಿಸುವ ಮೂಲಕ ಈ ಆರೋಗ್ಯದ ಅಪಾಯಗಳನ್ನು ಕಡಿಮೆ ಮಾಡಲು ಮತ್ತು ಆರೋಗ್ಯಕರ ಚಾಲನಾ ವಾತಾವರಣವನ್ನು ಉತ್ತೇಜಿಸಲು ಏರ್ ಪ್ಯೂರಿಫೈಯರ್ ಸಹಾಯ ಮಾಡುತ್ತದೆ.

5. ಚಾಲನಾ ಸೌಕರ್ಯವನ್ನು ಹೆಚ್ಚಿಸುವುದು

ಕಾರಿನೊಳಗೆ ಶುದ್ಧ ಮತ್ತು ತಾಜಾ ಗಾಳಿಯು ಹೆಚ್ಚು ಆರಾಮದಾಯಕ ಮತ್ತು ಆನಂದದಾಯಕ ಚಾಲನಾ ಅನುಭವಕ್ಕೆ ಕೊಡುಗೆ ನೀಡುತ್ತದೆ. ವಿಶೇಷವಾಗಿ ದೀರ್ಘ ಪ್ರಯಾಣದ ಸಮಯದಲ್ಲಿ ಅಥವಾ ಸವಾಲಿನ ಚಾಲನಾ ಪರಿಸ್ಥಿತಿಗಳಲ್ಲಿ ಇದು ಗಮನ ಮತ್ತು ಜಾಗರೂಕತೆಯನ್ನು ಸುಧಾರಿಸುತ್ತದೆ.

ಇದನ್ನೂ ಓದಿ: Xiaomi EV: ತಿಂಗಳಲ್ಲಿ 75 ಸಾವಿರ ಆರ್ಡರ್ ಸ್ವೀಕರಿಸಿದ ಕ್ಸಿಯೋಮಿ ಎಸ್‌ಯು 7 ಎಲೆಕ್ಟ್ರಿಕ್‌ ಕಾರು; ಟೆಸ್ಲಾಗಿಂತ ಅಗ್ಗ!

6. ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌

ಕಾರು ತಯಾರಕರು ಈಗ ತಮ್ಮ ವಾಹನದ ವೈಶಿಷ್ಟ್ಯಗಳ ಭಾಗವಾಗಿ ಇನ್‌ಬಿಲ್ಟ್‌ ಆಗಿ ಏರ್ ಪ್ಯೂರಿಫೈಯರ್‌ಗಳನ್ನು ನೀಡುತ್ತಿದ್ದಾರೆ. ಹೆಚ್ಚುವರಿಯಾಗಿ ಕಾರುಗಳಲ್ಲಿ ಬಳಸಲು ನಿರ್ದಿಷ್ಟವಾಗಿ ವಿನ್ಯಾಸಗೊಳಿಸಲಾದ ಪೋರ್ಟಬಲ್ ಮತ್ತು ಕಾಂಪ್ಯಾಕ್ಟ್ ಏರ್ ಪ್ಯೂರಿಫೈಯರ್‌ಗಳು ಇವೆ. ಚಾಲಕರು ತಮ್ಮ ವಾಹನದ ಮಾದರಿಯನ್ನು ಲೆಕ್ಕಿಸದೆಯೇ ಶುದ್ಧ ಗಾಳಿಯನ್ನು ಆನಂದಿಸಲು ಇದು ಅನುವು ಮಾಡಿಕೊಡುತ್ತದೆ.

Continue Reading
Advertisement
70.94 percent voting in Koppal Lok Sabha constituency says Koppal DC Nalin Atul
ಕೊಪ್ಪಳ10 mins ago

Lok Sabha Election 2024: ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಶೇ 70.94ರಷ್ಟು ಮತದಾನ

Rampura PSI Mahesh Hosapete admitted to the hospital Hanagal village road accident injured persons
ಕರ್ನಾಟಕ13 mins ago

Road Accident: ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದ ಯುವಕರನ್ನು ಆಸ್ಪತ್ರೆಗೆ ಸೇರಿಸಿದ ಪಿಎಸ್‌ಐ

Lok Sabha Election 2024
ಕರ್ನಾಟಕ22 mins ago

Lok Sabha Election 2024: 2ನೇ ಹಂತದಲ್ಲಿ ಶೇ.70.41 ಮತದಾನ; ಕಳೆದ ಬಾರಿಗಿಂತ ಹೆಚ್ಚು, ಚಿಕ್ಕೋಡಿಯಲ್ಲಿ ಗರಿಷ್ಠ

Mayawati
ಪ್ರಮುಖ ಸುದ್ದಿ39 mins ago

Mayawati: ನೇಮಿಸಿದ 5 ತಿಂಗಳಲ್ಲೇ ಸೋದರಳಿಯನನ್ನು ಉತ್ತರಾಧಿಕಾರಿ ಹುದ್ದೆಯಿಂದ ತೆಗೆದ ಮಾಯಾವತಿ!

IPL 2024
ಪ್ರಮುಖ ಸುದ್ದಿ47 mins ago

IPL 2024 : ರಾಜಸ್ಥಾನ್​ ವಿರುದ್ಧ ಡೆಲ್ಲಿಗೆ 20 ರನ್​ ಗೆಲುವು, ಪ್ಲೇಆಫ್ ಕನಸು ಜೀವಂತ

Music Festival
ಬೆಂಗಳೂರು1 hour ago

Music Festival: ಬೆಂಗಳೂರಿನಲ್ಲಿ ಮೇ 12ರಂದು ಸಪ್ತಕ ʼಸಂಗೀತ ಸಂಭ್ರಮʼ

Amanatullah Khan
ದೇಶ2 hours ago

Amanatullah Khan: ಪೆಟ್ರೋಲ್‌ ಬಂಕ್‌ ಸಿಬ್ಬಂದಿ ಮೇಲೆ ಆಪ್‌ ಎಂಎಲ್‌ಎ ಪುತ್ರನಿಂದ ಹಲ್ಲೆ; ಬಿತ್ತು ಕೇಸ್

Yuzvendra Chahal
ಕ್ರಿಕೆಟ್2 hours ago

Yuzvendra Chahal : ಟಿ20 ವಿಕೆಟ್​​ಗಳ ಗಳಿಕೆಯಲ್ಲಿ ನೂತನ ದಾಖಲೆ ಬರೆದ ಸ್ಪಿನ್ನರ್ ಯಜ್ವೇಂದ್ರ ಚಹಲ್​

Bescom Helpline
ಕರ್ನಾಟಕ2 hours ago

BESCOM Helpline: ಮಳೆ ಹಾನಿ; ದೂರು ಸಲ್ಲಿಸಲು ಬೆಸ್ಕಾಂ ಗ್ರಾಹಕರಿಗೆ ಪರ್ಯಾಯ ವಾಟ್ಸ್‌ಆ್ಯಪ್‌, ದೂರವಾಣಿ ಸಂಖ್ಯೆ

Nissan India
ಆಟೋಮೊಬೈಲ್2 hours ago

Nissan India : ಉಚಿತ ಏಸಿ ರಿಪೇರಿ ಮಾಡಿಸಿಕೊಳ್ಳಲು ನಿಸ್ಸಾನ್ ಕಾರು ಮಾಲೀಕರಿಗೆ ಇಲ್ಲಿದೆ ಅವಕಾಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna has severe chest pain Admission in Victoria
ರಾಜಕೀಯ4 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ6 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ8 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 day ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ1 day ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌