1. ಬಿಜೆಪಿಗೆ ನಾಲ್ಕನೇ ಮೂರು ಬಹುಮತ, ಕಾಂಗ್ರೆಸ್‌ಗೆ ಒಂದೇ ಗ್ಯಾರಂಟಿ!
ನವದೆಹಲಿ: 2024ರ ಲೋಕಸಭೆ ಚುನಾವಣೆಯ (Lok Sabha Election 2024) ಸೆಮಿಫೈನಲ್ ಎಂದೇ ವಿಶ್ಲೇಷಿಸಲಾಗಿದ್ದ ಪಂಚರಾಜ್ಯ ಚುನಾವಣೆಯಲ್ಲಿ (Assembly Elections 2023) ನಾಲ್ಕು ರಾಜ್ಯಗಳ ಫಲಿತಾಂಶ ಭಾನುವಾರ (ಡಿಸೆಂಬರ್ 3) ಹೊರಬಿದ್ದಿದ್ದು, ಭಾರತೀಯ ಜನತಾ ಪಕ್ಷ ಮೂರು ರಾಜ್ಯಗಳಲ್ಲಿ ನಿಚ್ಚಳ ಬಹುಮತದೊಂದಿಗೆ ಜಯಭೇರಿ ಬಾರಿಸಿದೆ. ಕಾಂಗ್ರೆಸ್ ಒಂದು ರಾಜ್ಯವನ್ನು ಗೆದ್ದುಕೊಂಡಿದೆ. ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಗದ್ದುಗೆ ಏರಿದ್ದರೆ, ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದೆ. ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಸೋಮವಾರ (ಡಿಸೆಂಬರ್ 4) ನಡೆಯಲಿದೆ. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.
ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಕುರಿತ ವಿಸ್ತೃತ ಸುದ್ದಿಗಳೀಗಾಗಿ ಕ್ಲಿಕ್ ಮಾಡಿ:
2. 3 ರಾಜ್ಯದ ಗೆಲುವು 2024ರ ಹ್ಯಾಟ್ರಿಕ್ ಜಯದ ಮುನ್ಸೂಚನೆ; ಮೋದಿ ಬಣ್ಣನೆ
ನವದೆಹಲಿ: ಹ್ಯಾಟ್ರಿಕ್ ರಾಜ್ಯಗಳ ಗೆಲವು, ಕೇಂದ್ರದಲ್ಲಿ 2024 ಬಿಜೆಪಿಯ (BJP Party) ಹ್ಯಾಟ್ರಿಕ್ ಗೆಲುವಿನ (hat-trick win)ಮುನ್ಸೂಚನೆಯಾಗಿದೆ. ಸಾಮಾನ್ಯವಾಗಿ ಚುನಾವಣಾ ಫಲಿತಾಂಶವನ್ನು ಊಹಿಸುವುದಿಲ್ಲ(Election Result 2023). ಆದರೆ, ಈ ಬಾರಿ ರಾಜಸ್ಥಾನದಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ಚುನಾವಣೆ ನಡೆಯುವುದಕ್ಕಿಂತಲೂ ಮುಂಚೆಯೇ ಊಹಿಸಿದ್ದೆ ಎಂದು ಪ್ರಧಾನಿ ನರೇಂದ್ರ ಮೋದಿ(PM Narendra Modi) ಹೇಳಿದರು. ಅಲ್ಲದೇ, ಜಾತಿಯಾಧರದ ಮೇಲೆ ದೇಶವನ್ನು ಒಡೆಯಲು ಮುಂದಾಗಿರುವವರಿಗೆ ಈ ಚುನಾವಣೆ ಫಲಿತಾಂಶವು ಪಾಠ ಕಲಿಸಿದೆ. ನಾನು ಯಾವಾಗಲೂ ಹೇಳುತ್ತೇನೆ. ದೇಶದಲ್ಲಿ ಇರೋದು ನಾಲ್ಕು ಜಾತಿಗಳು; ನಾರಿ(ಮಹಿಳೆ), ಯುವಾ(ಯುವ ಜನತೆ), ರೈತರು ಮತ್ತು ಬಡವರು ಎಂದು ಪ್ರಧಾನಿ ಮೋದಿ ಹೇಳಿದರು(Assembly Election 2023). ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.
3. ನಮ್ಮ ಗ್ಯಾರಂಟಿ ಯಶಸ್ಸಿನಿಂದ ತೆಲಂಗಾಣದಲ್ಲಿ ಗೆಲುವು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇರುತ್ತದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ. ಇನ್ನು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ (Assembly Elections 2023) ಕಾಂಗ್ರೆಸ್ ಗೆಲುವಿಗೆ ಕರ್ನಾಟಕದ ಗ್ಯಾರಂಟಿ ಯೋಜನೆಯ (Congress Guarantee Scheme) ಕೊಡುಗೆ ಬಹಳ ದೊಡ್ಡದಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಇದನ್ನೂ ಓದಿ : Assembly Elections 2023 : ರಾಜ್ಯದಿಂದ ಹೋದ ಹಣದ ಥೈಲಿಗಳು ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಿಸಿವೆ: ಎಚ್‌ಡಿಕೆ
4. ಮೋದಿ ಎಂಬ ಗ್ಯಾರಂಟಿ ಎದುರು ಹೀನಾಯವಾಗಿ ಸೋತ ಕಾಂಗ್ರೆಸ್ ಗ್ಯಾರಂಟಿ
ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ (Assembly Elections 2023) ಮಧ್ಯ ಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮೂರೂ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ (BJP wins three states) ಬಹುಮತದೊಂದಿಗೆ ಜಯಭೇರಿ ಬಾರಿಸಿದೆ. ಈ ಪೈಕಿ ರಾಜಸ್ಥಾನ ಮತ್ತು ಛತ್ತೀಸ್ ಗಢದಲ್ಲಿ ಬಿಜೆಪಿ ಕಾಂಗ್ರೆಸ್ ಕೈಯಿಂದ ಅಧಿಕಾರವನ್ನು ಕಿತ್ತುಕೊಂಡಿದೆ. ಕಾಂಗ್ರೆಸ್ ಕರ್ನಾಟಕದಲ್ಲಿ ಮಾಡಿದ್ದ ಗ್ಯಾರಂಟಿ ಪ್ರಯೋಗವನ್ನು ಈ ರಾಜ್ಯಗಳಲ್ಲಿ ನಡೆಸುವ ಮೂಲಕ ದೊಡ್ಡ ಸದ್ದು ಮಾಡಿತ್ತು. ಆದರೆ, ಈ ಎಲ್ಲ ಗ್ಯಾರಂಟಿಗಳ ಆಮಿಷಗಳನ್ನು ಮೀರಿ ಹಿಂದಿ ಪ್ರಾಬಲ್ಯದ ಮೂರು ರಾಜ್ಯಗಳಲ್ಲಿ ಬಿಜೆಪಿ ಪ್ರಾಬಲ್ಯವನ್ನು ಸಾಧಿಸಿದ್ದು ಹೇಗೆ ಎಂಬ ಪ್ರಶ್ನೆಗೆ ಅಲ್ಲಿನ ನಾಯಕರು ನೀಡುವುದು ಒಂದೇ ಉತ್ತರ: ಮೋದಿ ಕಿ ಗ್ಯಾರಂಟಿ (Modi ki guarantee). ಅಂದರೆ ಕಾಂಗ್ರೆಸ್‌ನ ಎಲ್ಲ ಗ್ಯಾರಂಟಿಗಳನ್ನು ಮೀರಿದ್ದು ನರೇಂದ್ರ ಮೋದಿ (PM Narendra Modi) ಎಂಬ ಗ್ಯಾರಂಟಿ ಎನ್ನುವುದು ಅವರ ನಿಲುವು. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.
5.ಸೈದ್ಧಾಂತಿಕ ಹೋರಾಟ ಮುಂದುವರಿಯಲಿದೆ ಎಂದ ರಾಹುಲ್; ಖರ್ಗೆ ಹೇಳಿದ್ದೇನು?
ನವದೆಹಲಿ: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶವು(Election Result 2023) ಕಾಂಗ್ರೆಸ್ ಪಕ್ಷದ (Congress Party) ಪಾಲಿಗೆ ಅಷ್ಟೇನೂ ಖುಷಿ ನೀಡಿಲ್ಲ. ತೆಲಂಗಾಣ (Telangana) ಹೊರತುಪಡಿಸಿದರೆ ರಾಜಸ್ಥಾನ(Rajasthan), ಛತ್ತೀಸ್‌ಗಢ (Chhattisgarh) ಮತ್ತು ಮಧ್ಯ ಪ್ರದೇಶದಲ್ಲಿ (Madhya Pradesh) ಸೋತಿದೆ. ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದ ಸೋಲು ಒಪ್ಪಿಕೊಳ್ಳುವುದಾಗಿ ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Congress Leader Rahul Gandhi) ಅವರು, ಸೈದ್ಧಾಂತಿಕ ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಅಲ್ಲದೇ, ಕಾಂಗ್ರೆಸ್ ಅಧಿಕಾರ ನೀಡಿರುವ ತೆಲಂಗಾಣದ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸೋಲು ತಾತ್ಕಾಲಿಕ ಎಂದು ಹೇಳಿದ್ದಾರೆ. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.
6. ಭಾರತ ತಂಡಕ್ಕೆ ಕೊನೇ ಪಂದ್ಯದಲ್ಲೂ ಜಯ, 4-1 ಅಂತರದಿಂದ ಸರಣಿ ಕೈವಶ
ಬೆಂಗಳೂರು: ಐದು ಪಂದ್ಯಗಳ ಟಿ20 ಸರಣಿಯ ಕೊನೇ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ (ind vs aus) ವಿರುದ್ಧ 6 ರನ್ ಗೆಲುವು ಸಾಧಿಸಿದೆ. ಇದರೊಂದಿಗೆ ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಕೈವಶ ಮಾಡಿಕೊಂಡಿದೆ. ರಾಯ್ಪುರದಲ್ಲಿ ನಡೆದಿದ್ದ ನಾಲ್ಕನೇ ಪಂದ್ಯದಲ್ಲಿ ಗೆಲುವು ಸಾಧಿಸುವುದರೊಂದಿಗೆ ಭಾರತ ತಂಡ ಸರಣಿಯನ್ನು ಗೆದ್ದುಕೊಂಡಿತ್ತು. ಹೀಗಾಗಿ ಐದನೇ ಪಂದ್ಯಕ್ಕೆ ಹೆಚ್ಚಿನ ಮೌಲ್ಯ ಇರಲಿಲ್ಲ. ಆದಾಗ್ಯೂ ಭಾರತ ತಂಡ ಸರ್ವತೋಮುಖ ಪ್ರದರ್ಶನ ನೀಡುವ ಮೂಲಕ ವಿಜಯ ತನ್ನದಾಗಿಸಿಕೊಂಡಿತು. ವಿಶ್ವ ಕಪ್ ಫೈನಲ್ ಸೋಲಿನ ಬಳಿಕ ಆಸ್ಟ್ರೇಲಿಯಾ ತಂಡದ ವಿರುದ್ಧವೇ ಸರಣಿ ಗೆಲ್ಲುವ ಮೂಲಕ ಭಾರತ ತಂಡ ಸಮಾಧಾನ ಮಾಡಿಕೊಂಡಿತು. ಇದೇ ವೇಳೆ ಒಟ್ಟು 136 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆದ್ದಿರುವ ಏಕೈಕ ತಂಡ ಎಂಬ ಹೆಗ್ಗಳಿಕೆಯನ್ನೂ ಗಳಿಸಿತು. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.
7. ಚಿಕ್ಕಮಗಳೂರು ಪೊಲೀಸ್-ವಕೀಲರ ಸಂಘರ್ಷ; ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಪೊಲೀಸ್-ವಕೀಲರ ಸಂಘರ್ಷ ಪ್ರಕರಣವನ್ನು (Atrocity on Lawyer) ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿದೆ. ಚಿಕ್ಕಮಗಳೂರಿನ ಪಶ್ಚಿಮ ವಲಯ ಐಜಿಪಿ ಚಂದ್ರಗುಪ್ತ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಿನ್ನೆ ಅಹೋರಾತ್ರಿ ಪೊಲೀಸರ ಹಾಗೂ ಕುಟುಂಬಸ್ಥರ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರಠಾಣೆಗೆ ಐಜಿಪಿ ಚಂದ್ರಗುಪ್ತ ಭೇಟಿ ನೀಡಿದರು. ನಿನ್ನೆಯ ಪ್ರತಿಭಟನೆಗೆ ಕಾರಣವಾದ ಲೋಪದೋಷಗಳ ಬಗ್ಗೆ, ಸಮಸ್ಯೆಗಳ ಕುರಿತು ಇಂಚಿಂಚೂ ಮಾಹಿತಿ ಪಡೆದರು. ಬಳಿಕ ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಆಗಿರುವುದಾಗಿ ಸ್ಪಷ್ಟ ಪಡಿಸಿದರು. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.
8. ಅಧಿವೇಶನಕ್ಕೆ ಬೇಗ ಬಂದವರಿಗೆ ಟೀ ಕಪ್; ತಡವಾಗಿ ಬಂದವರಿಗೂ ಪ್ರಶಸ್ತಿ: ಯು.ಟಿ. ಖಾದರ್
ಬೆಂಗಳೂರು: ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ (Belagavi Assembly Session) ಈ ಬಾರಿ ಶಾಸಕರು, ಸಚಿವರ ಹಾಜರಾತಿಗಾಗಿ ಸ್ಪೀಕರ್ ಯು.ಟಿ. ಖಾದರ್ (Speaker UT Khader) ವಿಶೇಷ ಕಾರ್ಯಯೋಜನೆಯೊಂದನ್ನು ರೂಪಿಸಿದ್ದಾರೆ. ಪ್ರತಿ ದಿನ ಸದನಕ್ಕೆ ಬೇಗ ಬರುವ ಸದಸ್ಯರಿಗೆ ಬಹುಮಾನ ಕೊಡುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಅತಿ ಹೆಚ್ಚು ಗೈರು ಹಾಜರಾಗುವ ಸದಸ್ಯರಿಗೂ ಪ್ರಶಸ್ತಿ ನೀಡಲಾಗುತ್ತಿದೆ. ಮುಂದೆ ಅವರು ಗೈರಾಗದಂತೆ ಮಾಡಲು ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.
9. ಸೈಕ್ಲೋನ್ ಎಫೆಕ್ಟ್; ನಾಳೆ ಮಳೆ ಜತೆಗೆ ಥಂಡಿ ಗಾಳಿ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಮೋಡ ಕವಿದ ವಾತಾವರಣ (karnataka weather Forecast) ಇರಲಿದೆ. ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದ್ದು ಮಳೆಯಾಗುವ (Rain News) ನಿರೀಕ್ಷೆ ಇದೆ. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.
10. ಮೈಕಲ್ ಉಳಿಸಲು ಎಲಿಮಿನೇಶನ್ ಕ್ಯಾನ್ಸಲ್ ಮಾಡಿದ್ರಾ ಕಿಚ್ಚ?
ಬೆಂಗಳೂರು: ಈ ವಾರ ಒಟ್ಟು ಎಂಟು ಮಂದಿ (BBK SEASON 10) ನಾಮಿನೇಟ್ ಆಗಿದ್ದರು. ವರ್ತೂರು ಸಂತೋಷ್, ಸಂಗೀತಾ ಶೃಂಗೇರಿ, ಡ್ರೋನ್ ಪ್ರತಾಪ್, ಮೈಕಲ್ ಅಜಯ್, ವಿನಯ್ ಗೌಡ, ನಮ್ರತಾ ಗೌಡ, ತನಿಷಾ ಕುಪ್ಪಂಡ, ಸ್ನೇಹಿತ್ ಗೌಡ ನಾಮಿನೇಟ್ ಆಗಿದ್ದರು. ಮೊದಲೇ ವರ್ತೂರ್ ಸೇವ್ ಎಂದು ಗೊತ್ತಾದ ಕೂಡಲೇ ಸ್ನೇಹಿತ್ ಮನೆಯಿಂದ ಹೊರಗೆ ಹೋಗುವುದು ಗ್ಯಾರಂಟಿ ಎನ್ನಲಾಗುತ್ತಿದೆ. ಆದರೆ ಈಗ ಮೂಲಗಳ ಪ್ರಕಾರ ಸುದೀಪ್ ಅವರು ಇದೇ ಮೊದಲ ಬಾರಿಗೆ ತಮ್ಮ ವಿಶೇಷ ಅಧಿಕಾರವನ್ನು ಬಳಸಿಕೊಂಡು ಮೈಕಲ್ ಅರನ್ನು ಬಚಾವ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.