Site icon Vistara News

ರಾಮ ಮಂದಿರ ಉದ್ಘಾಟನೆಗೆ ಹೋಗಲ್ಲ ಎಂದ ಕೈ ನಾಯಕರನ್ನು ಟಾರ್ಗೆಟ್ ಮಾಡಿದ ಬಿಜೆಪಿ ಐಟಿ ಸೆಲ್!

BJP IT cell targeted congress leaders for rejecting invitation of Ram Mandir inauguration

BJP IT cell targeted congress leaders for rejecting invitation of Ram Mandir inauguration

ನವದೆಹಲಿ: ರಾಮ ಮಂದಿರ (Ram Mandir) ಪ್ರಾಣ ಪ್ರತಿಷ್ಠಾಪನೆ (Pran Pratishta Event) ಕಾರ್ಯಕ್ರಮದ ಆಹ್ವಾನವನ್ನು ತಿರಸ್ಕರಿಸಿದೆ ಬೆನ್ನಲ್ಲೇ ಕಾಂಗ್ರೆಸ್ (Congress Party) ಮತ್ತು ಬಿಜೆಪಿ (BJP Party) ಮಧ್ಯೆ ವಾಕ್ಸಮರ ಶುರುವಾಗಿದೆ. ಭಾರತೀಯ ಜನತಾ ಪಾರ್ಟಿಯು ಪ್ರತಿಪಕ್ಷಗಳ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಪ್ರತಿಪಕ್ಷಗಳನ್ನು ಸನಾತನ ವಿರೋಧಿ ಎಂದು ಬಿಂಬಿಸುತ್ತಿದೆ ಮತ್ತು ಈ ಸಂಬಂಧ ಪೋಸ್ಟರ್‌ಗಳನ್ನು (Posters) ಬಿಡುಗಡೆ ಮಾಡಿದೆ. ಕಾಂಗ್ರೆಸ್‌ನ ಸೋನಿಯಾ ಗಾಂಧಿ (Sonia Gandhi) ಮತ್ತು ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ಎಂದು ಘೋಷಣೆ ಮಾಡುತ್ತಿದ್ದಂತೆ, ಬಿಜೆಪಿ ಐಟಿ ಸೆಲ್, ಈ ಪೋಸ್ಟರ್‌ ಲಾಂಚ್ ಮಾಡಿದೆ.

ಬಿಜೆಪಿ ಐಟಿ ಸೆಲ್ ಎಕ್ಸ್ ವೇದಿಕೆಯಲ್ಲಿ”ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ ಸನಾತನ ವಿರೋಧಿಗಳ ಮುಖಗಳನ್ನು ಗಮನಿಸಿ…” ಎಂದು ಟ್ವೀಟ್ ಮಾಡಿದೆ. ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಅಧೀರ್ ರಂಜನ್ ಚೌಧರಿ ಅವರಿಗೆ ಜನವರಿ 22ರಂದು ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಲಾಗಿತ್ತು. ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮವು, ಬಿಜೆಪಿ ಮತ್ತು ಆರೆಸ್ಸೆಸ್ ರಾಜಕೀಯ ಕಾರ್ಯಕ್ರಮವಾಗಿ ಮಾರ್ಪಟ್ಟಿದೆ. ಹಾಗಾಗಿ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಎಂದು ಕಾಂಗ್ರೆಸ್ ಹೇಳಿತ್ತು.

ಅಯೋಧ್ಯೆ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ, ಖರ್ಗೆ ಹೋಗದಿರುವುದೇ ಸರಿ: ಸಿಎಂ

ಅಯೋಧ್ಯೆ ರಾಮಜನ್ಮಭೂಮಿಯ (Ram Janmabhoomi) ರಾಮ ಮಂದಿರದಲ್ಲಿ (Ram Mandir) ಜನವರಿ 22ರಂದು ಶ್ರೀರಾಮನ ಮೂರ್ತಿ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ನಾಯಕರು (Congress leaders) ಭಾಗವಹಿಸದೇ ಇರುವ ನಿರ್ಧಾರಕ್ಕೆ ಬಂದಿರುವುದನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ “ರಾಮ”ನ ಯುದ್ಧ ಮುಂದುವರಿದಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC president Mallikarjun Kharge), ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ (Sonia Gandhi) ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ಅಧೀರ್ ಚೌದರಿ ತೀರ್ಮಾನ ಸರಿಯಾಗಿದೆ. ಇದನ್ನು ನಾನು ಬೆಂಬಲಿಸುತ್ತೇನೆ‌ ಎಂದು ಸಿಎಂ ಸಿದ್ದರಾಮಯ್ಯ ಅವರು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕುವ ಮೂಲಕ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಪೋಸ್ಟ್‌ನಲ್ಲೇನಿದೆ?

“ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ಚೌದರಿ ಅವರ ತೀರ್ಮಾನ ಸರಿಯಾಗಿದೆ. ಇದನ್ನು ನಾನು ಬೆಂಬಲಿಸುತ್ತೇನೆ.

ಜಾತಿ, ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ. ಶ್ರದ್ದಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿದ್ದು ಸಮಸ್ತ ಹಿಂದು ಬಾಂಧವರಿಗೆ ಮಾಡಿರುವ ದ್ರೋಹವಾಗಿದೆ.

ಹಿಂದು ಧರ್ಮದ ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಪ್ರತಿನಿತ್ಯ ಉಪದೇಶ ನೀಡುವ ಬಿಜೆಪಿ ಮತ್ತು ಆರ್.ಎಸ್‌.ಎಸ್ ನಾಯಕರು ಅಪೂರ್ಣಗೊಂಡಿರುವ ಶ್ರೀರಾಮನ ದೇವಸ್ಥಾನವನ್ನು ಉದ್ಘಾಟಿಸಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಡೆಯ ಬಗ್ಗೆ ಮೌನವಾಗಿರುವುದು ಇವರೆಲ್ಲರ ಪೊಳ್ಳು ಹಿಂದುತ್ವದ ಮುಖವಾಡವನ್ನು ಬಯಲುಗೊಳಿಸಿದೆ.

ರಾಮಜನ್ಮಭೂಮಿ ವಿವಾದ ಶುರುವಾದ ದಿನದಿಂದ ಕಾಂಗ್ರೆಸ್ ಪಕ್ಷ ತನ್ನ ನಿಲುವಿಗೆ ಬದ್ಧವಾಗಿ ಉಳಿದಿದೆ. ನ್ಯಾಯಾಲಯದ ತೀರ್ಪಿಗೆ ನಾವು ತಲೆಬಾಗುತ್ತೇವೆ ಎಂಬ ನಮ್ಮ ನಿಲುವಿನಂತೆ ರಾಮಮಂದಿರ ನಿರ್ಮಾಣಕ್ಕೆ ನಮ್ಮ ಸಂಪೂರ್ಣ ಬೆಂಬಲ ನೀಡಿದ್ದೆವು. ಇದರ ಬಗ್ಗೆ ನಮ್ಮಲ್ಲಿ ಯಾವುದೇ ತಕರಾರಿಲ್ಲ. ಮುಸ್ಲಿಂ ಬಾಂಧವರು ಕೂಡಾ ನ್ಯಾಯಾಲಯದ ತೀರ್ಪನ್ನು ಒಪ್ಪಿಕೊಂಡು ನ್ಯಾಯಾಂಗದ ಮೇಲಿನ ತಮ್ಮ ನಿಷ್ಠೆಯನ್ನು ಸಾಬೀತುಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Ayodhya Ram Mandir: ಕಾಂಗ್ರೆಸ್‌ನ ಬಹಿಷ್ಕಾರ ಮನಸ್ಥಿತಿಯಿಂದಾಗಿಯೇ ಜನ ಆ ಪಕ್ಷವನ್ನು ಬಹಿಷ್ಕರಿಸಿದ್ದಾರೆ ಎಂದ ಬಿಜೆಪಿ

Exit mobile version