ಸಮಾರಂಭವೊಂದರಲ್ಲಿ ಭಾಷಣ ಮಾಡಿ, ಪಕ್ಷದ ವರಿಷ್ಠರ ಅಸಮಾಧಾನಕ್ಕೆ ಗುರಿಯಾದ ಬಿಜೆಪಿ ಸಂಸದ ! - Vistara News

ದೇಶ

ಸಮಾರಂಭವೊಂದರಲ್ಲಿ ಭಾಷಣ ಮಾಡಿ, ಪಕ್ಷದ ವರಿಷ್ಠರ ಅಸಮಾಧಾನಕ್ಕೆ ಗುರಿಯಾದ ಬಿಜೆಪಿ ಸಂಸದ !

ಜುಲೈ ತಿಂಗಳಲ್ಲಿ ಹೈದರಾಬಾದ್​ನಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಪ್ರಧಾನಿ ನರೇಂದ್ರ ಮೋದಿ. ಪಕ್ಷದ ನಾಯಕರು, ಕಾರ್ಯಕಾರಿಗಳು ಯಾರೂ ವೃಥಾ ವಿವಾದ ಸೃಷ್ಟಿಸಿಕೊಳ್ಳಬೇಡಿ ಎಂದಿದ್ದರು.

VISTARANEWS.COM


on

BJP leadership unhappy with Parvesh Verma Speech Over Muslim
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಸ್ವಲ್ಪ ದಿನಗಳ ಹಿಂದೆ ದೆಹಲಿಯಲ್ಲಿ ವಿಶ್ವ ಹಿಂದು ಪರಿಷತ್​ (ವಿಎಚ್​​ಪಿ)ನಿಂದ ಆಯೋಜನೆಯಾಗಿದ್ದ ಸಮಾರಂಭದಲ್ಲಿ ಭಾಷಣ ಮಾಡಿದ್ದ ಪಶ್ಚಿಮ ದೆಹಲಿ ಬಿಜೆಪಿ ಸಂಸದ ಪರ್ವೇಶ್​ ಸಾಹೀಬ್​ ಸಿಂಗ್​ ವರ್ಮಾ ಈಗ ಸಂಕಷ್ಟಕ್ಕೀಡಾಗಿದ್ದಾರೆ. ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಂದು ಅವರು ಒಂದು ನಿರ್ದಿಷ್ಟ ಸಮುದಾಯ (ಮುಸ್ಲಿಮರು)ದ ವಿರುದ್ಧ ಮಾತನಾಡಿದ್ದರು. ಮುಸ್ಲಿಮರ ಹೆಸರು ಹೇಳಿರಲಿಲ್ಲ, ಆದರೆ ಪರೋಕ್ಷವಾಗಿ ಅವರಿಗೇ ಹೇಳಿದ ಮಾತು ಅದು ಎಂದು ದೊಡ್ಡ ವಿವಾದ ಸೃಷ್ಟಿಯಾಗಿತ್ತು.

ಅಂದು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದ ಪರ್ವೇಶ್​ ‘ಆ ಸಮುದಾಯದಿಂದ ಆಗುತ್ತಿರುವ ಸಮಸ್ಯೆಗಳಿಗೆಲ್ಲ ಒಂದೇ ಪರಿಹಾರ. ಅವರನ್ನು ಎಲ್ಲ ಕಡೆ, ಎಲ್ಲ ವಿಚಾರದಲ್ಲೂ ಬಹಿಷ್ಕರಿಸಬೇಕು’ ಎಂದು ಹೇಳಿದ್ದರು. ಸಂಸದರ ಈ ಮಾತಿಗೆ ಪ್ರತಿಪಕ್ಷಗಳು, ರಾಜಕೀಯ ವಿಶ್ಲೇಷಕರು ಕಟುವಾಗಿ ವಿರೋಧ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲ, ಪಕ್ಷದೊಳಗಿನ ಹಿರಿಯ ನಾಯಕರೂ ಪರ್ವೇಶ್​ ಮಾತಿಗೆ ಸಹಮತ ವ್ಯಕ್ತಪಡಿಸಿಲ್ಲ ಎಂದು ಹೇಳಲಾಗಿದೆ. ಪರ್ವೇಶ್​ರಿಂದ ಪಕ್ಷ ಸ್ಪಷ್ಟನೆ ಕೇಳಿದ್ದರ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಆದರೂ ಅವರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಜುಲೈ ತಿಂಗಳಲ್ಲಿ ಹೈದರಾಬಾದ್​ನಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪ್ರಧಾನಿ ಮೋದಿ ಈ ಬಗ್ಗೆ ಮಾತನಾಡಿದ್ದರು. ಪಕ್ಷದ ಮುಖಂಡರು, ಕಾರ್ಯಕಾರಿಗಳು ವಿವಾದಾತ್ಮಕ ಹೇಳಿಕೆಗಳಿಂದ ದೂರವೇ ಉಳಿಯಬೇಕು. ಅನವಶ್ಯಕವಾಗಿ ಮಾತನಾಡಿ, ವಿರೋಧ ಪಕ್ಷಗಳ ಬಾಯಿಗೆ ಆಹಾರ ಆಗಬೇಡಿ ಎಂದು ಕಿವಿಮಾತು ಹೇಳಿದ್ದರು. ಅದರಾಚೆಗೆ ಇತ್ತೀಚೆಗೆ ಬಿಜೆಪಿ, ಆರ್​ಎಸ್​ಎಸ್​ಗಳೆಲ್ಲ ಮುಸ್ಲಿಂ ಸಮುದಾಯವನ್ನು ತಲುಪಲು ಕಸರತ್ತು ನಡೆಸುತ್ತಿವೆ. ಅದರ ಮಧ್ಯೆ ಪಕ್ಷದವರೇ ಇಂಥ ಮಾತುಗಳನ್ನಾಡಿದರೆ ಅದು ದೊಡ್ಡ ಹೊಡೆತ ಎಂಬುದು ವರಿಷ್ಟರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: Karva Chauth | ಕರ್ವಾ ಚೌಥ್‌ಗೆ ಮುಸ್ಲಿಮರು ಹಿಂದೂ ವಿವಾಹಿತ ಮಹಿಳೆಗೆ ಮೆಹಂದಿ ಹಾಕುವಂತಿಲ್ಲ: ವಿಎಚ್‌ಪಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Bangladesh Protests: ಬಾಂಗ್ಲಾ ಹಿಂಸಾಚಾರದ ಹಿಂದೆ ಪಾಕ್‌ ಕೈವಾಡ; ಭಾರತದ ಜತೆ ಹಸೀನಾ ಸ್ನೇಹ ಕಾರಣ?

Bangladesh Protests: ಭಾರತದ ವಿರೋಧಿಯಾಗಿರುವ, ಉಗ್ರರನ್ನು ಛೂಬಿಟ್ಟು ಉಪಟಳ ಮಾಡುವ ಪಾಕಿಸ್ತಾನವು ಈಗ ಬಾಂಗ್ಲಾದೇಶದಲ್ಲಿ ಅಶಾಂತಿ ಸೃಷ್ಟಿಸಲು ಕುತಂತ್ರ ಮಾಡಿದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಸರ್ಕಾರ ರಚನೆಯಾಗಲಿ ಎಂಬುದು ಪಾಕಿಸ್ತಾನದ ಕುತುಂತ್ರವಾಗಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Bangladesh Protests
Koo

ಢಾಕಾ: ಭಾರತದ ಮಿತ್ರರಾಷ್ಟ್ರ ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಹಿಂಸಾಚಾರ, ಗಲಭೆ (Bangladesh Protests) ಉಂಟಾಗಿವೆ. ಶೇಖ್‌ ಹಸೀನಾ (Sheikh Hasina) ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ಇದರ ಮಧ್ಯೆಯೇ, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಕುತಂತ್ರದಿಂದಾಗಿಯೇ ಬಾಂಗ್ಲಾದೇಶದಲ್ಲಿ ಅರಾಜಕತೆ ಉಂಟಾಗಿದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ ಪಾಕಿಸ್ತಾನದ ಕೈವಾಡ ಏನು? ಏಕೆ? ಇದಕ್ಕೂ-ಭಾರತಕ್ಕೆ ಏನು ಸಂಬಂಧ ಎಂಬುದರ ವಿವರಣೆ ಇಲ್ಲಿದೆ.

ಪಾಕಿಸ್ತಾನದ ಕೈವಾಡ ಏನು?

ಬಾಂಗ್ಲಾದೇಶದಲ್ಲಿ ಜಮಾತ್‌-ಎ-ಇಸ್ಲಾಮಿ ಎಂಬ ನಿಷೇಧಿತ ಸಂಘಟನೆಯ ವಿದ್ಯಾರ್ಥಿ ಘಟಕವಾಗಿರುವ ಛತ್ರಾ ಶಿಬಿರ್‌ ಎಂಬ ಸಂಘಟನೆಗೆ ಪಾಕಿಸ್ತಾನದ ಐಎಸ್‌ಐ ಬೆಂಬಲ ಇದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶ ವಿಮೋಚನೆ ಹೋರಾಟದ ವೇಳೆ ಭಾಗಿಯಾದವರ ಕುಟುಂಬಸ್ಥರಿಗೆ ನೀಡುವ ಮೀಸಲಾತಿಯನ್ನು ಶೇ.5ಕ್ಕೆ ಇಳಿಸಿದರೂ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯ ಹಿಂದಿರುವ ಪ್ರಮುಖ ವಿದ್ಯಾರ್ಥಿ ಸಂಘಟನೆಗಳಲ್ಲಿ ಛತ್ರಾ ಶಿಬಿರ್‌ ಎಂಬ ಸಂಘಟನೆಯ ಪಾತ್ರ ಪ್ರಮುಖವಾಗಿದೆ. ಇದಕ್ಕೆ ಪಾಕಿಸ್ತಾನವು ಹಣಕಾಸು ನೆರವು ಕೂಡ ನೀಡುತ್ತಿದೆ ಎಂದು ತಿಳಿದುಬಂದಿದೆ.

ಶೇಖ್‌ ಹಸೀನಾ ವಿರುದ್ಧ ಪಾಕ್‌ ಆಕ್ರೋಶವೇಕೆ?

ಶೇಖ್‌ ಹಸೀನಾ ಅವರು ಕಳೆದ 15 ವರ್ಷಗಳಿಂದ ಬಾಂಗ್ಲಾದೇಶದಲ್ಲಿ ಆಡಳಿತ ನಡೆಸುತ್ತಿದ್ದಾರೆ. ಅವರು ರಾಷ್ಟ್ರೀಯವಾದದಲ್ಲಿ ನಂಬಿಕೆ ಇರಿಸಿರುವುದರ ಜತೆಗೆ ಜನರ ಬೆಂಬಲ ಗಳಿಸಿದ್ದಾರೆ. ಬಡತನ ಪ್ರಮಾಣವನ್ನು ಶೇ.5ಕ್ಕೆ ಇಳಿಸಿದ್ದಾರೆ. ಇದರ ಜತೆಗೆ ಭಾರತದ ಜತೆ ಉತ್ತಮ ದ್ವಿಪಕ್ಷೀಯ ಸಂಬಂಧ ಹೊಂದಿದ್ದಾರೆ. ಮೇಲಾಗಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇದನ್ನು ಸಹಿಸದ ಪಾಕಿಸ್ತಾನವು, ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಬಾಂಗ್ಲಾದೇಶ ನ್ಯಾಷನಲಿಸ್ಟ್‌ ಪಾರ್ಟಿಯು ಅಧಿಕಾರಕ್ಕೆ ಬರಬೇಕು ಎಂಬುದು ಪಾಕಿಸ್ತಾನದ ಕುತಂತ್ರವಾಗಿದೆ. ಇದಕ್ಕಾಗಿ ಹಿಂಸೆಗೆ ಪ್ರಚೋದನೆ ನೀಡುತ್ತಿದೆ ಎಂದು ಹೇಳಲಾಗುತ್ತಿದೆ.

ಪಾಕಿಸ್ತಾನವು ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸಲು ಕುತಂತ್ರ ಮಾಡುತ್ತದೆ. ಬಾಂಗ್ಲಾದೇಶ ಭಾರತದ ಗಡಿ ಪ್ರದೇಶವಾಗಿರುವ ಕಾರಣ, ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಪಕ್ಷವು ಆಡಳಿತಕ್ಕೆ ಬಂದರೆ, ಬಾಂಗ್ಲಾ ಮೂಲಕವೂ ಭಾರತದಲ್ಲಿ ಉಗ್ರರನ್ನು ಛೂಬಿಟ್ಟು ಅಂಶಾತಿ ಸೃಷ್ಟಿಸಬಹುದು ಎಂಬುದು ಐಎಸ್‌ಐ ಲೆಕ್ಕಾಚಾರವಾಗಿದೆ. ಪಾಕಿಸ್ತಾನದ ಐಎಸ್‌ಐ ಜತೆಗೆ ವಿದೇಶಿ ಎನ್‌ಜಿಒಗಳು ಕೂಡ ಬಾಂಗ್ಲಾದೇಶದ ಗಲಭೆಯ ಹಿಂದಿವೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Bangladesh Protests: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ; ಮೃತರ ಸಂಖ್ಯೆ 98ಕ್ಕೆ ಏರಿಕೆ: ಭಾರತೀಯರಿಗೆ ಮುನ್ನೆಚ್ಚರಿಕೆ

Continue Reading

ವಿದೇಶ

Bangla Protest Explainer: ಬಾಂಗ್ಲಾದಲ್ಲಿ ಹಿಂಸೆ ಭುಗಿಲೆದ್ದಿದ್ದೇಕೆ? ಶೇಖ್ ಹಸೀನಾ ಭಾರತಕ್ಕೆ ಪರಾರಿಯಾಗಿದ್ದೇಕೆ? ಮುಂದೇನು?

Bangla Protest Explainer: ಬಾಂಗ್ಲಾದೇಶದಲ್ಲಿ ಕಳೆದ 3 ತಿಂಗಳಿಂದ ವಿದ್ಯಾರ್ಥಿಗಳು, ನಾಗರಿಕರು, ಪ್ರತಿಪಕ್ಷಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ನೂರಾರು ಜನ ಹಿಂಸಾತ್ಮಕ ಪ್ರತಿಭಟನೆ ವೇಳೆ ಮೃತಪಟ್ಟಿದ್ದಾರೆ. ರಾಜೀನಾಮೆ ನೀಡಿರುವ ಶೇಖ್‌ ಹಸೀನಾ, ದೇಶದಿಂದಲೇ ಪಲಾಯನಗೈದಿದ್ದಾರೆ. ಅಷ್ಟಕ್ಕೂ, ಬಾಂಗ್ಲಾದೇಶದಲ್ಲಿ ಇಷ್ಟೊಂದು ಅರಾಜಕತೆ ಸೃಷ್ಟಿಯಾಗಲು ಕಾರಣವೇನು? ಇದರ ಹಿನ್ನೆಲೆ? ಭವಿಷ್ಯದ ಬೆಳವಣಿಗೆಗಳು ಏನು? ಸಂಕ್ಷಿಪ್ತ ವಿವರ ಹೀಗಿದೆ…

VISTARANEWS.COM


on

Bangla Protest Explainer
Koo

ನವದೆಹಲಿ/ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ನಡೆಯುತ್ತಿರುವ ಮೀಸಲಾತಿ ಹೋರಾಟವು (Bangladesh Protests) ನಾಗರಿಕ ದಂಗೆಯಾಗಿ ಬದಲಾಗಿದೆ. ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಶೇಖರ್‌ ಹಸೀನಾ ಅವರು ಭಾರತದ ಅಗರ್ತಲಾಗೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ. ಇಷ್ಟಾದರೂ, ಬಾಂಗ್ಲಾದಲ್ಲಿ ಹಿಂಸಾಚಾರ ಮುಂದುವರಿದಿದೆ. ಹಾಗಾದರೆ, ಬಾಂಗ್ಲಾದೇಶದಲ್ಲಿ ಹಿಂಸಾಚಾರ (Bangla Protest Explainer) ನಡೆಯುತ್ತಿರುವುದೇಕೆ? ಜನರ ಆಕ್ರೋಶಕ್ಕೆ ಕಾರಣವೇನು? ಶೇಖ್‌ ಹಸೀನಾ ಅವರು ಭಾರತಕ್ಕೆ ಆಗಮಿಸಿದ್ದೇಕೆ? ಮುಂದೇನಾಗಲಿದೆ ಎಂಬುದರ ಮಾಹಿತಿ ಇಲ್ಲಿದೆ.

ಹಿಂಸಾತ್ಮಕ ಪ್ರತಿಭಟನೆ ಏಕೆ?

ಬಾಂಗ್ಲಾದೇಶದಲ್ಲಿ ಮೀಸಲಾತಿ ಕಾರಣಕ್ಕಾಗಿ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿದೆ. 1971ರಲ್ಲಿ ನಡೆದ ಬಾಂಗ್ಲಾದೇಶ ಹೋರಾಟದಲ್ಲಿ ಭಾಗಿಯಾದವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.30ರಷ್ಟು ಮೀಸಲಾತಿ ಕಲ್ಪಿಸಲಾಗಿತ್ತು. ಮೀಸಲಾತಿ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದ್ದು, ಕೆಲ ದಿನಗಳ ಹಿಂದೆಯೂ ನಡೆದ ಹಿಂಸಾತ್ಮಕ ಹೋರಾಟದಲ್ಲಿ ನೂರಾರು ಜನ ಮೃತಪಟ್ಟಿದ್ದರು.

ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆ ಭುಗಿಲೇಳುತ್ತಲೇ ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್‌, ಶೇ.30ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿತ್ತು. ಆದರೆ, ಸಂಪೂರ್ಣವಾಗಿ ಮೀಸಲಾತಿಯನ್ನು ರದ್ದುಗೊಳಿಸುವ ಬದಲು ಶೇ.5ರಷ್ಟು ಮೀಸಲಾತಿ ಮುಂದುವರಿಸಿದೆ. ಸಂಪೂರ್ಣವಾಗಿ ಮೀಸಲಾತಿ ರದ್ದುಗೊಳಿಸಬೇಕು ಎಂದು ಜನರ ಆಗ್ರಹವಾಗಿದ್ದು, ಇದಕ್ಕಾಗಿ ಪ್ರತಿಭಟನೆ ಆರಂಭವಾಗಿದೆ. ಪ್ರತಿಭಟನೆಗೆ ಪ್ರತಿಪಕ್ಷಗಳೂ ಬೆಂಬಲ ನೀಡಿದ್ದು, ಶೇಖ್‌ ಹಸೀನಾ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಅದರಂತೆ, ಶೇಖ್‌ ಹಸೀನಾ ಅವರು ರಾಜೀನಾಮೆ ನೀಡಿದ್ದಾರೆ.

ಭಾರತದ ಅಗರ್ತಲಾಕ್ಕೆ ಬಂದಿದ್ದೇಕೆ?

ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಸೇನೆಯ ಹೆಲಿಕಾಪ್ಟರ್‌ನಲ್ಲಿ ಶೇಖ್‌ ಹಸೀನಾ ಭಾರತದ ಅಗರ್ತಲಾಗೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ. ಸೇನೆಯ ಹೆಲಿಕಾಪ್ಟರ್‌ನಲ್ಲಿ ಶೇಖ್‌ ಹಸೀನಾ ಪಲಾಯನ ಮಾಡಿದ ವಿಡಿಯೊ ಈಗ ವೈರಲ್‌ ಆಗಿದೆ. ಭಾರತವು ಬಾಂಗ್ಲಾದೇಶಕ್ಕೆ ಮಿತ್ರರಾಷ್ಟ್ರವಾಗಿದ್ದು, ನರೇಂದ್ರ ಮೋದಿ ಅವರಿಗೆ ಶೇಖ್‌ ಹಸೀನಾ ಆಪ್ತರಾಗಿದ್ದಾರೆ. ಪ್ರಾಣಭಯದ ಹಿನ್ನೆಲೆಯಲ್ಲಿ ಅವರು ಭಾರತಕ್ಕೆ ಬಂದು ಆಶ್ರಯ ಪಡೆದಿರಬಹುದು ಎಂದು ತಿಳಿದುಬಂದಿದೆ. ಇದೇ ಕಾರಣಕ್ಕಾಗಿ ಭಾರತದ ಗಡಿಯಲ್ಲಿ ಬಿಎಸ್‌ಎಫ್‌ ಯೋಧರ ಸಂಖ್ಯೆಯನ್ನು ಜಾಸ್ತಿಗೊಳಿಸಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿದು ಬಂದಿದೆ.

ಭಾರತದ ಮೇಲೆ ಉಂಟಾಗುವ ಪರಿಣಾಮವೇನು?

ಬಾಂಗ್ಲಾದೇಶದಲ್ಲಿ ಹಿಂಸಾಚಾರವು ಭುಗಿಲೆದ್ದಿರುವುದರ ಪರಿಣಾಮವು ಭಾರತದ ಮೇಲೂ ಬೀರುವ ಸಾಧ್ಯತೆ ಹೆಚ್ಚಿದೆ. ಬಾಂಗ್ಲಾದಲ್ಲಿ ಶಾಂತಿ ನೆಲೆಸಿದ್ದಾಗಲೇ ನುಸುಳುಕೋರರು ಭಾರತವನ್ನು ಪ್ರವೇಶಿಸುತ್ತಿದ್ದರು. ಈಗ ಸುಮಾರು 4 ಲಕ್ಷ ಜನ ದಂಗೆಯೆದ್ದಿರುವ ಕಾರಣ ಇನ್ನಷ್ಟು ಜನ ಭಾರತವನ್ನು ಅಕ್ರಮವಾಗಿ ಪ್ರವೇಶಿಸಿ, ಅವರು ದೇಶಕ್ಕೆ ತಲೆನೋವಾಗಬಹುದು. ಸೇನೆಯಲ್ಲಿ ಆಡಳಿತ ಯಂತ್ರ ಕುಸಿದುಬಿದ್ದಿದ್ದು, ಮಿಲಿಟರಿ ಆಡಳಿತ ಜಾರಿಗೆ ಬಂದಿರುವ ಕಾರಣ ಭಾರತ ಹಾಗೂ ಬಾಂಗ್ಲಾದೇಶದ ವ್ಯಾಪಾರ, ಒಪ್ಪಂದಗಳ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆ ಇದೆ. ಮಿಲಿಟರಿ ಆಡಳಿತ ಕೊನೆಯಾಗಿ, ಹೊಸ ಸರ್ಕಾರ ರಚನೆಯಾಗಿ, ಪ್ರತಿಭಟನೆ ಶಾಂತವಾಗುವವರೆಗೂ ಭಾರತಕ್ಕೆ ಸಂಕಷ್ಟ ತಪ್ಪಿದ್ದಲ್ಲ ಎಂದೇ ವಿಶ್ಲೇಷಿಸಲಾಗುತ್ತಿದೆ. ಶೇಖ್‌ ಹಸೀನಾ ಭಾರತ ಪರ ನಿಲುವು ಹೊಂದಿದ್ದಾರೆ. ಹಾಗಾಗಿ ಪ್ರತಿಭಟನೆಕಾರರ ಕೋಪ ಭಾರತದ ಮೇಲೆ ತಿರುಗಬಹುದು. ಬಾಂಗ್ಲಾದಲ್ಲಿರುವ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆಯುವ ಅಪಾಯವೂ ಇದೆ.

ಮಧ್ಯಂತರ ಮಿಲಿಟರಿ ಆಡಳಿತ; ಮುಂದೇನಾಗುತ್ತದೆ?

ಶೇಖ್‌ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ, ಪಲಾಯನಗೈದ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಮಧ್ಯಂತರ ಮಿಲಿಟರಿ ಆಡಳಿತ ಜಾರಿಗೆ ಬಂದಿದೆ. ದೇಶದ ಆಡಳಿತ ಈಗ ಸೇನೆಯ ವ್ಯಾಪ್ತಿಗೆ ಬಂದಿದೆ. ಸೇನೆಯೇ ಆಡಳಿತ ನಡೆಸುವುದರಿಂದ ಬಾಂಗ್ಲಾದೇಶದಲ್ಲಿ ಕಠಿಣ ನಿಯಮಗಳು ಜಾರಿಯಾಗಿ, ಜನ ಇನ್ನಷ್ಟು ದಂಗೆಯೇಳಬಹುದು. ಮೀಸಲಾತಿ ರದ್ದಾಗುವವರೆಗೂ ಬಾಂಗ್ಲಾದೇಶದಲ್ಲಿ ಅರಾಜಕತೆ ಮುಂದುವರಿಯಬಹುದು. ಇಲ್ಲವೇ, ಪ್ರತಿಪಕ್ಷಗಳು ಒಗ್ಗೂಡಿ ಸರ್ಕಾರ ರಚನೆಗೆ ಮುಂದಾಗಬಹುದು.

ಬಾಂಗ್ಲಾದೇಶದಲ್ಲಿ ಹಿಂಸಾಚಾರ

ಶೇಖ್‌ ಹಸೀನಾ ಅವರು ಬಾಂಗ್ಲಾದೇಶದ ಪ್ರಧಾನಿಯಾದ ಬಳಿಕ ಪ್ರತಿಪಕ್ಷಗಳ ʼರಾಜಕೀಯ ತಂತ್ರʼದಿಂದಾಗಿ ಪದೇಪದೆ ಹಿಂಸಾಚಾರ ನಡೆಯುತ್ತಿವೆ. ಬಾಂಗ್ಲಾದೇಶದಲ್ಲಿ 2010ರಲ್ಲಿ ಇದ್ದ ಶೇ.11.8 ಬಡತನ ಪ್ರಮಾಣವು 2022ರ ವೇಳೆಗೆ ಶೇ.5ಕ್ಕೆ ಇಳಿಕೆಯಾಗಿದೆ. ಹಾಗಾಗಿ, ಆಡಳಿತಾತ್ಮಕ ವಿಚಾರದಲ್ಲಿ ಶೇಖ್‌ ಹಸೀನಾ ಒಳ್ಳೆಯ ಹೆಸರು ಗಳಿಸಿದ್ದಾರೆ. ಚುನಾವಣೆಗಳಲ್ಲಿ ಸತತವಾಗಿ ನಾಲ್ಕು ಬಾರಿ ಗೆದ್ದಿದ್ದಾರೆ. ಕಳೆದ ಜನವರಿಯಲ್ಲೇ ಅವರು ಗೆಲುವು ಸಾಧಿಸಿ, ಪ್ರಧಾನಿ ಹುದ್ದೆಗೆ ಏರಿದ್ದಾರೆ.

ಆದರೆ, ಪ್ರತಿಪಕ್ಷಗಳು ಬಾಂಗ್ಲಾದೇಶದಲ್ಲಿ ರಾಜಕೀಯ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿವೆ. ಇದರಿಂದಾಗಿ ಬಾಂಗ್ಲಾದೇಶದಲ್ಲಿ ಗಲಭೆಗಳು ಜಾಸ್ತಿಯಾಗುತ್ತಿವೆ. ವರದಿಗಳ ಪ್ರಕಾರ, 2009ರಿಂದ 2022ರ ಅವಧಿಯಲ್ಲಿ ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ 2,500 ಜನ ಬಲಿಯಾಗಿದ್ದಾರೆ. ಪ್ರತಿಪಕ್ಷಗಳು ಹಾಗೂ ಆಡಳಿತ ಪಕ್ಷದ ಕಾರ್ಯಕರ್ತರು ಸೇರಿ ಸಾವಿರಾರು ಜನ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ.

ಇದನ್ನೂ ಓದಿ: Sheikh Hasina: ರಾಜೀನಾಮೆ ನೀಡಿ ಶೇಖ್‌ ಹಸೀನಾ ವಿದೇಶಕ್ಕೆ ಪಲಾಯನ; ಸುರಕ್ಷತೆಗಾಗಿ ಭಾರತಕ್ಕೆ ಆಗಮನ?

Continue Reading

ವೈರಲ್ ನ್ಯೂಸ್

Viral Video: ಕಾಲೇಜು ಕ್ಯಾಂಪಸ್‌ನಲ್ಲೇ ಲಿಪ್‌ ಕಿಸ್‌; ಯುವ ಜೋಡಿಯ ಖುಲ್ಲಂ ಖುಲ್ಲಾ ರೊಮ್ಯಾನ್ಸ್‌ಗೆ ನೆಟ್ಟಿಗರು ಗರಂ

Viral Video: ಯುವಕ ಮತ್ತು ಯುವತಿ ಕಾಲೇಜು ಕ್ಯಾಂಪಸ್‌ನಲ್ಲಿ ಮೈ ಮರೆತು ಲಿಪ್‌ ಕಿಸ್‌ ಮಾಡುವುದರಲ್ಲಿ ಮಗ್ನವಾಗಿರುವ ವಿಡಿಯೊ ವೈರಲ್‌ ಆಗಿದೆ. ಜತೆಗೆ ಯುವಕ ಆಕೆಯ ಬಟ್ಟೆಯನ್ನು ಮೇಲೆ ಸರಿಸಿ ಎಲ್ಲೆಲ್ಲೋ ಸ್ಪರ್ಶಿಸುತ್ತಿರುವುದು ಕಂಡು ಬಂದಿದೆ. ಒಂದು ಹಂತದಲ್ಲಿ ಯುವತಿಯೇ ಮುಂದೆ ಹೋಗಿ ಯುವಕನ ತುಟಿಯನ್ನು ಚುಂಚಿಸುತ್ತಾ ಮೈಮರೆಯುತ್ತಾಳೆ. ಈ ದೃಶ್ಯವನ್ನು ಮರೆಯಲ್ಲಿ ನಿಂತು ನೋಡುತ್ತಿದ್ದ ಕೆಲವು ವಿದ್ಯಾರ್ಥಿಗಳು ಸೆರೆ ಹಿಡಿದ್ದಾರೆ. ಸದ್ಯ ವಿಡಿಯೊ ನೋಡಿದ ನೆಟ್ಟಿಗರು ವಿದ್ಯಾರ್ಥಿಗಳ ಉದ್ಧಟತನಕ್ಕೆ ಕಿಡಿ ಕಾರಿದ್ದಾರೆ.

VISTARANEWS.COM


on

Koo

ಲಕ್ನೋ: ಕೋಟ್ಯಂತರ ವಿದ್ಯಾರ್ಥಿಗಳ ಜೀವನವನ್ನು ಬೆಳಗುವ, ಭವಿಷ್ಯ ರೂಪಿಸುವ ಶಿಕ್ಷಣ ಸಂಸ್ಥೆಗಳನ್ನು ದೇಗುಲಕ್ಕೆ ಹೋಲಿಸಲಾಗುತ್ತದೆ. ಇದೇ ಕಾರಣಕ್ಕೆ ಶಾಲೆ, ಕಾಲೇಜುಗಳನ್ನು ಈಗಲೂ ಅನೇಕರು ಗೌರವಿಸುತ್ತಾರೆ. ಆದರೆ ಕೆಲವರು ತಾವು ಶಿಕ್ಷಣ ಪಡೆಯಲು ಬಂದಿದ್ದೇವೆ ಎನ್ನುವುದನ್ನೂ ಮರೆತು ಕಾಲೇಜಿನಲ್ಲೇ ರೊಮ್ಯಾನ್ಸ್‌ ಮಾಡಲು ಮುಂದಾಗುತ್ತಾರೆ. ಸದ್ಯ ಅಂತಹದ್ದೊಂದು ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವೈರಲ್‌ ಆಗಿದೆ. ಯುವ ಜೋಡಿಯ ವರ್ತನೆಗೆ ನೆಟ್ಟಿಗರು ಕಿಡಿ ಕಾರಿದ್ದಾರೆ (Viral Video).

ಯುವಕ ಮತ್ತು ಯುವತಿ ಕಾಲೇಜು ಕ್ಯಾಂಪಸ್‌ನಲ್ಲಿ ಮೈ ಮರೆತು ಲಿಪ್‌ ಕಿಸ್‌ ಮಾಡುವುದರಲ್ಲಿ ಮಗ್ನವಾಗಿದೆ. ಜತೆಗೆ ಯುವಕ ಆಕೆಯ ಬಟ್ಟೆಯನ್ನು ಮೇಲೆ ಸರಿಸಿ ಎಲ್ಲೆಲ್ಲೋ ಸ್ಪರ್ಶಿಸುತ್ತಿರುವುದು ಕಂಡು ಬಂದಿದೆ. ಒಂದು ಹಂತದಲ್ಲಿ ಯುವತಿಯೇ ಮುಂದೆ ಹೋಗಿ ಯುವಕನ ತುಟಿಯನ್ನು ಚುಂಚಿಸುತ್ತಾ ಮೈಮರೆಯುತ್ತಾಳೆ. ಈ ದೃಶ್ಯವನ್ನು ಮರೆಯಲ್ಲಿ ನಿಂತು ನೋಡುತ್ತಿದ್ದ ಕೆಲವು ವಿದ್ಯಾರ್ಥಿಗಳು ಸೆರೆ ಹಿಡಿದ್ದಾರೆ.

ಹಾಡಹಗಲೇ ಈ ಜೋಡಿ ರೊಮ್ಯಾನ್ಸ್‌ ಮಾಡುತ್ತ ಮೈಮರೆತಿರುವ ಘಟನೆ ನಡೆದಿದ್ದು ಉತ್ತರ ಪ್ರದೇಶದ ನೋಯ್ಡಾದ ಪ್ರತಿಷ್ಠಿತ ವಿಶ್ವವಿದ್ಯಾಲಯವೊಂದರಲ್ಲಿ. ಕಳೆದ ವರ್ಷ ನಡೆದಿದೆ ಎನ್ನಲಾದ ಈ ವಿಡಿಯೊ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಮತ್ತೊಮ್ಮೆ ಸದ್ದು ಮಾಡುತ್ತಿದೆ. ಜನಬ್‌ ಖಾನ್‌ ಎನ್ನುವವರು ಈ ವಿಡಿಯೊವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು ಈಗಾಗಲೇ 1.5 ಲಕ್ಕಕ್ಕಿಂತ ಅದಿಕ ಮಂದಿ ವೀಕ್ಷಿಸಿದ್ದಾರೆ. ʼʼವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ವರ್ತನೆ ಗಮನಿಸಿ. ವಿದ್ಯಾರ್ಥಿಗಳು ಕಲಿಕೆಯ ಬದಲು ಅಶ್ಲೀಲತೆಯಲ್ಲಿ ತೊಡಗಿಸಿಕೊಂಡಿರುವುದನ್ನು ನೋಡಿ. ಇದು ನೋಯ್ಡಾದ ಪ್ರತಿಷ್ಠಿತ ವಿಶ್ವವಿದ್ಯಾನಿಯಲವೊಂದರಲ್ಲಿ ಕಂಡು ಬಂದ ದೃಶ್ಯʼʼ ಎಂದು ಅವರು ಬರೆದುಕೊಂಡಿದ್ದಾರೆ.

1.33 ನಿಮಿಷಗಳ ಈ ವಿಡಿಯೊ ನೋಡಿ ಹಲವರು ಈ ವಿದ್ಯಾರ್ಥಿಗಳ ವರ್ತನೆಗೆ ಅಸಹ್ಯ ಪಟ್ಟುಕೊಂಡಿದ್ದಾರೆ. ಕೆಲವರಂತೂ ಛೀಮಾರಿ ಹಾಕಿದ್ದಾರೆ. ಬಹುತೇಕರು ಕಿಡಿ ಕಾರಿದ್ದಾರೆ. ತಮ್ಮಂತೆ ಮಕ್ಕಳು ಕಷ್ಟಪಡಬಾರದು ಎನ್ನುವ ಉದ್ದೇಶದಿಂದ ಬಹುತೇಕ ಪಾಲಕರು ತಮ್ಮ ಹೊಟ್ಟೆ ಬಟ್ಟೆ ಕಟ್ಟಿ ಅವರಿಗೆ ಉನ್ನತ ಶಿಕ್ಷಣ ನೀಡಲು ಮುಂದಾಗುತ್ತಾರೆ. ಕಾಲೇಜಿಗೆ ಕಳುಹಿಸುತ್ತಾರೆ. ಆದರೆ ಮಕ್ಕಳು ಕಾಲೇಜಿಗೆ ಬಂದು ಹೀಗೆ ವರ್ತಿಸುತ್ತಾರೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹ ವಿದ್ಯಾರ್ಥಿಗಳಿಗೆ ಕಠಿಣ ಸಜೆ ನೀಡಬೇಕು ಎಂದು ಇನ್ನು ಕೆಲವರು ಆಗ್ರಹಿಸಿದ್ದಾರೆ. ಅಷ್ಟು ತೀಟೆ ಇದ್ದರೆ ಲಾಡ್ಜ್‌ಗೆ ಹೋಗಲಿ ಎಂದು ಒಂದಷ್ಟು ಮಂದಿ ಬೈದಿದ್ದಾರೆ. ಒಟ್ಟಿನಲ್ಲಿ ಈ ವಿಡಿಯೊ ಇಂಟರ್‌ನೆಟ್‌ನಲ್ಲಿ ಮತ್ತೊಮ್ಮೆ ಕಿಚ್ಚು ಹಚ್ಚಿದೆ.

ಇದನ್ನೂ ಓದಿ: Viral Video: ಯುವತಿ ಜತೆ ಡ್ಯಾನ್ಸ್ ಮಾಡ್ತಾ ಮಾಡ್ತಾ ಪ್ರಾಣಬಿಟ್ಟ ಯುವಕ; ಆಘಾತಕಾರಿ ವಿಡಿಯೊ

ವಾಕಿಂಗ್‌ ಮಾಡುತ್ತಿದ್ದ ಮಹಿಳೆಗೆ ಕಿಸ್‌ ಕೊಟ್ಟ ಕಾಮುಕ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಮನೆ ಎದುರು ತಿರುಗಾಡುತ್ತಿರುವಾಗ ಚಿನ್ನದ ಸರ ಕಿತ್ತುಕೊಂಡು ಹೋಗುವುದು, ಅವರ ಮೇಲೆ ಹಲ್ಲೆ ನಡೆಸುವುದು, ಮೊಬೈಲ್‌, ಪರ್ಸ್‌ ಎಗರಿಸುವುದು ಸೇರಿ ಹಲವು ರೀತಿಯ ಪ್ರಕರಣಗಳು ಸುದ್ದಿಯಾಗುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಕೋಣನಕುಂಟೆಯ ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್‌ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಹೌದು, ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಬಳಿ ಬಂದಿದ್ದಾನೆ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್‌ ಕೊಟ್ಟಿದ್ದಾನೆ. ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದಾರೆ. ಅವರ ಹಿಂದೆಯೇ ಓಡಿ ಬಂದ ದುರುಳನು, ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದಾನೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. 

Continue Reading

ಪ್ರಮುಖ ಸುದ್ದಿ

Bangladesh Protests: ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ, ದೇಶದಿಂದ ಪಲಾಯನ; ಪ್ರಧಾನಿ ಅರಮನೆಗೇ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

Bangladesh Protests: ಪ್ರಧಾನಿ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ಲಕ್ಷಾಂತರ ಪ್ರತಿಭಟನಾಕಾರರು ಕರ್ಫ್ಯೂ ಧಿಕ್ಕರಿಸಿ, ರಾಜಧಾನಿಯ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು ಮತ್ತು ಪ್ರಧಾನಿಯವರ ಅರಮನೆಗೆ ನುಗ್ಗಿ ಬೆಂಕಿ ಹಚ್ಚಿದರು. ಶೇಖ್‌ ಹಸೀನಾ ಮತ್ತು ಅವರ ಸಹೋದರಿ ಪ್ರಧಾನಿಗಳ ಅಧಿಕೃತ ನಿವಾಸವನ್ನು ತೊರೆದು ಸುರಕ್ಷಿತ ಸ್ಥಳದತ್ತ ತೆರಳಿದ್ದಾರೆ. ಅವರು ಅಧಿಕೃತ ಭಾಷಣವನ್ನು ರೆಕಾರ್ಡ್ ಮಾಡಲು ಬಯಸಿದ್ದರು. ಆದರೆ ಅದನ್ನು ಮಾಡಲು ಆಕೆಗೆ ಅವಕಾಶ ಸಿಗಲಿಲ್ಲ ಎಂದು ಹೇಳಲಾಗಿದೆ. ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಶೇಖ್‌ ಹಸೀನಾ ರಾಜೀನಾಮೆ ನೀಡಿದ್ದಾರೆ.

VISTARANEWS.COM


on

Bangladesh Protests
Koo

ಹೊಸದಿಲ್ಲಿ/ಢಾಕಾ: ದೇಶಾದ್ಯಂತ ಹಿಂಸಾಚಾರ, ಘರ್ಷಣೆಗಳು (Bangladesh Protests) ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ (Bangladesh Prime Minister Sheikh Hasina) ಅವರು ರಾಜೀನಾಮೆ ನೀಡಿ ರಾಜಧಾನಿ ಢಾಕಾವನ್ನು (Dhaka) ತೊರೆದಿದ್ದಾರೆ. ಪ್ರತಿಭಟನಾಕಾರರು ಪಿಎಂ ನಿವಾಸದತ್ತ ನುಗ್ಗುತ್ತಿದ್ದಾರೆ ಹಾಗೂ ಬೀದಿಗಳಲ್ಲಿ ಬೆಂಕಿ ಹಚ್ಚುತ್ತಿದ್ದಾರೆ. ಪ್ರಧಾನಿಯ ಅರಮನೆಗೇ ಬೆಂಕಿ ಹಚ್ಚಿದ್ದಾರೆ. ಹೀಗಾಗಿ ಹೆಚ್ಚು ಸುರಕ್ಷಿತ ಪ್ರದೇಶದತ್ತ ಹಸೀನಾ ತೆರಳಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ. ಅವರು ದೇಶದಿಂದ ಪಲಾಯನ ಮಾಡಿದ್ದಾರೆ ಎಂದು ಮತ್ತೊಂದು ಮೂಲ ತಿಳಿಸಿದೆ.

ಶೇಖ್‌ ಹಸೀನಾ ಮತ್ತು ಅವರ ಸಹೋದರಿ ಪ್ರಧಾನಿಗಳ ಅಧಿಕೃತ ನಿವಾಸವನ್ನು ತೊರೆದು ಸುರಕ್ಷಿತ ಸ್ಥಳದತ್ತ ತೆರಳಿದ್ದಾರೆ. ಅವರು ಅಧಿಕೃತ ಭಾಷಣವನ್ನು ರೆಕಾರ್ಡ್ ಮಾಡಲು ಬಯಸಿದ್ದರು. ಆದರೆ ಅದನ್ನು ಮಾಡಲು ಆಕೆಗೆ ಅವಕಾಶ ಸಿಗಲಿಲ್ಲ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ, ಶೇಖ್‌ ಹಸೀನಾ ರಾಜೀನಾಮೆ ನೀಡಿದರು ಎಂದು ಹೇಳಲಾಗಿದೆ.

ಪ್ರಧಾನಿ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ಲಕ್ಷಾಂತರ ಪ್ರತಿಭಟನಾಕಾರರು ಕರ್ಫ್ಯೂ ಧಿಕ್ಕರಿಸಿ, ರಾಜಧಾನಿಯ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು ಮತ್ತು ಪ್ರಧಾನಿಯವರ ಅರಮನೆಯನ್ನು ನುಗ್ಗಲು ಯತ್ನಿಸಿದರು. ಢಾಕಾದಲ್ಲಿ ಶಸ್ತ್ರಸಜ್ಜಿತ ವಾಹನಗಳೊಂದಿಗೆ ಸೈನಿಕರು ಮತ್ತು ಪೊಲೀಸರು ಪ್ರಧಾನಿ ಕಚೇರಿ ಹಾಗೂ ನಿವಾಸಕ್ಕೆ ಮುಳ್ಳುತಂತಿಯ ಬೇಲಿಗಳ ಮೂಲಕ ಬಂದೋಬಸ್ತ್‌ ಮಾಡಿದರಾದರೂ, ಅಪಾರ ಜನಸಮೂಹದ ಮುಂದೆ ಅವರು ನಿಸ್ಸಹಾಯಕರಾದರು. ಬೀದಿಗಳಲ್ಲಿ ಹರಿದುಬಂದ ಪ್ರತಿಭಟನಾಕಾರರ ಪ್ರವಾಹ ಅಡೆತಡೆಗಳನ್ನು ಕಿತ್ತುಹಾಕಿತು. ಸ್ಥಳೀಯ ಮಾಧ್ಯಮಗಳ ಪ್ರಕಾರ ಅಂದಾಜು 400,000 ಪ್ರತಿಭಟನಾಕಾರರು ಬೀದಿಗಳಲ್ಲಿದ್ದಾರೆ.

ನಿನ್ನೆ ನಡೆದ ಭೀಕರ ಘರ್ಷಣೆಗಳಲ್ಲಿ 98 ಜನರು ಸಾವನ್ನಪ್ಪಿದ್ದರು. ನಂತರ ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ವಾಕರ್-ಉಜ್-ಜಮಾನ್ ಅವರು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲು ಸಜ್ಜಾಗಿದ್ದಾರೆ. ಕಳೆದ ತಿಂಗಳು ಪ್ರತಿಭಟನೆಗಳು ಭುಗಿಲೆದ್ದಿದ್ದವು. ಇದುವರೆಗೆ ಸಾವಿನ ಸಂಖ್ಯೆ 300ನ್ನೂ ದಾಟಿ ಏರುತ್ತಿದೆ.

ರಾಜೀನಾಮೆಗೆ ಒತ್ತಾಯಿಸಿ ಹಿಂಸೆ

ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ (Bangladesh Protests) ಹಲವು ದಿನಗಳ ಹಿಂದೆ ನಡೆದ ಹಿಂಸಾಚಾರದಲ್ಲಿ ನೂರಾರು ಜನ ಮೃತಪಟ್ಟ ಬೆನ್ನಲ್ಲೇ ಮತ್ತೊಂದು ಹಿಂಸಾಚಾರ ಭುಗಿಲೆದ್ದಿದೆ. ಪ್ರಧಾನಿ ಶೇಖ್‌ ಹಸೀನಾ (Sheikh Hasina) ಅವರ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಹಿಂಸಾರೂಪ ತಾಳಿದ್ದು, ಮೃತರ ಸಂಖ್ಯೆ 98ಕ್ಕೆ ತಲುಪಿದೆ. ಈ ಪೈಕಿ 14 ಮಂದಿ ಪೊಲೀಸರು ಅಸುನೀಗಿದ್ದು, ಬಾಂಗ್ಲಾದೇಶಕ್ಕೆ ತೆರಳದಂತೆ ಭಾರತೀಯರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಭಾನುವಾರ (ಆಗಸ್ಟ್‌ 4) ನಡೆದ ಭೀಕರ ಘರ್ಷಣೆಗಳಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಜುಲೈಯಲ್ಲಿ ಪ್ರತಿಭಟನೆಗಳು ಪ್ರಾರಂಭವಾದಾಗಿನಿಂದ ಮೃತರ ಸಂಖ್ಯೆ ಒಟ್ಟು 300ಕ್ಕೆ ಏರಿದೆ. ಬಾಂಗ್ಲಾದಲ್ಲಿ ಕೆಲ ದಿನಗಳ ಹಿಂದೆ ತೀವ್ರ ಕೋಲಾಹಲಕ್ಕೆ ಕಾರಣವಾದ ಬಾಂಗ್ಲಾ ವಿಮೋಚನೆ ಹೋರಾಟದಲ್ಲಿ ಭಾಗಿಯಾಗಿದ್ದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 30ರಷ್ಟು ಮೀಸಲಾತಿ ನೀಡುವ ನಿಯಮವನ್ನು ಕೋರ್ಟ್‌ ಹಿಂತೆಗೆದುಕೊಂಡಿದೆ. ಆದರೆ ಸಂಪೂರ್ಣ ರದ್ದುಗೊಳಿಸಲಿಲ್ಲ. ಶೇ. 30ರಷ್ಟಿದ್ದ ಮೀಸಲಾತಿಯನ್ನು ಶೇ. 5ಕ್ಕೆ ಇಳಿಸಲಾಗಿದೆ. ಇದರಿಂದಾಗಿ ಪ್ರತಿಪಕ್ಷಗಳ ಮುಖಂಡರು, ಸಾರ್ವಜನಿಕರು ಸೇರಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಇಲ್ಲವೇ ಶೇಖ್‌ ಹಸೀನಾ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಭಾನುವಾರ ಸಾವಿರಾರು ಪ್ರತಿಭಟನಾಕಾರರು ದೇಶದ ಹಲವಾರು ಭಾಗಗಳಲ್ಲಿ ಜಮಾಯಿಸಿ ಪ್ರಧಾನಿ ಶೇಖ್‌ ಹಸೀನಾ ರಾಜೀನಾಮೆ ನೀಡುವಂತೆ ಆಗ್ರಹಿಸಿದರು. ಪ್ರತಿಭಟನಾಕಾರರು ಈಶಾನ್ಯ ಪಟ್ಟಣ ಎನಾಯೆತ್ಪುರದ ಠಾಣೆಗೂ ಮುತ್ತಿಗೆ ಹಾಕಿದರು. ದೇಶಾದ್ಯಂತ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ಮಧ್ಯೆ ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸೋಮವಾರ, ಮಂಗಳವಾರ ಮತ್ತು ಬುಧವಾರ ಮೂರು ದಿನಗಳ ಸಾರ್ವತ್ರಿಕ ರಜಾದಿನವನ್ನು ಘೋಷಿಸಲಾಗಿದೆ.

ಈ ಮಧ್ಯೆ ಭಾರತ ಬಾಂಗ್ಲಾದೇಶದಲ್ಲಿರುವ ತನ್ನ ಎಲ್ಲ ಪ್ರಜೆಗಳಿಗೆ ತೀವ್ರ ಎಚ್ಚರಿಕೆ ವಹಿಸಲು ಸೂಚನೆ ನೀಡಿದೆ. ಅನಗತ್ಯವಾಗಿ ಹೊರಗಡೆ ಓಡಾಡದಂತೆ ತಿಳಿಸಿದೆ. ʼʼಸಿಲ್ಹೆಟ್‌ನ ಸಹಾಯಕ ಹೈಕಮಿಷನ್ ವ್ಯಾಪ್ತಿಯಲ್ಲಿ ವಾಸಿಸುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಭಾರತೀಯ ಪ್ರಜೆಗಳು ಈ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಕೋರಲಾಗಿದೆ. ತುರ್ತು ಸಂದರ್ಭಗಳಲ್ಲಿ ಸಹಾಯವಾಣಿ ಸಂಖ್ಯೆ +88-01313076402 ಅನ್ನು ಸಂಪರ್ಕಿಸಿ” ಎಂದು ಸಹಾಯಕ ಹೈಕಮಿಷನ್ ಕಚೇರಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಇದನ್ನೂ ಓದಿ: Bangladesh: ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ಹಿಂಸಾಚಾರ; 91 ಜನ ಸಾವು

Continue Reading
Advertisement
Bangladesh Protest
ವಿದೇಶ2 mins ago

‘ಭೂತಯ್ಯ’ನ ಮನೆಯಂತಾದ ಶೇಖ್‌ ಹಸೀನಾ ನಿವಾಸ; ಬಿರಿಯಾನಿ ತಿಂದು, ವಸ್ತುಗಳನ್ನು ಕದ್ದ ಪ್ರತಿಭಟನಾಕಾರರು, Videoಗಳು ಇವೆ

Paris Olympics 2024
ಪ್ರಮುಖ ಸುದ್ದಿ21 mins ago

Paris Olympics 2024 : ಪದಕದ ಸ್ಪರ್ಧೆಗೆ ಅರ್ಹತೆ ಗಿಟ್ಟಿಸಿದ ಭಾರತದ ಶೂಟಿಂಗ್​ ಸ್ಕೀಟ್ ಮಿಶ್ರ ತಂಡ

Congress Protest
ಕರ್ನಾಟಕ39 mins ago

Congress Protest: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ ಸಿದ್ದರಾಮಯ್ಯ ಅಭಿಮಾನಿ

Paris Olympics 2024
ಕ್ರಿಕೆಟ್41 mins ago

Manu Bhaker : ಪ್ಯಾರಿಸ್​ ಒಲಿಂಪಿಕ್ಸ್​​ ಸಮಾರೋಪದಲ್ಲಿ ಮನು ಭಾಕರ್​​ ತ್ರಿವರ್ಣ ಧ್ವಜಧಾರಿ

Bangladesh Protests
ವಿದೇಶ48 mins ago

Bangladesh Protests: ಬಾಂಗ್ಲಾ ಹಿಂಸಾಚಾರದ ಹಿಂದೆ ಪಾಕ್‌ ಕೈವಾಡ; ಭಾರತದ ಜತೆ ಹಸೀನಾ ಸ್ನೇಹ ಕಾರಣ?

Bangla Protest Explainer
ವಿದೇಶ55 mins ago

Bangla Protest Explainer: ಬಾಂಗ್ಲಾದಲ್ಲಿ ಹಿಂಸೆ ಭುಗಿಲೆದ್ದಿದ್ದೇಕೆ? ಶೇಖ್ ಹಸೀನಾ ಭಾರತಕ್ಕೆ ಪರಾರಿಯಾಗಿದ್ದೇಕೆ? ಮುಂದೇನು?

Paris Olympics 2024
ಕ್ರೀಡೆ1 hour ago

Paris Olympics 2024 : ಒಲಿಂಪಿಕ್ಸ್​ನ ಕ್ವಾರ್ಟರ್​ ಫೈನಲ್​ಗೇರಿದ ಭಾರತ ಮಹಿಳೆಯರ ಟೇಬಲ್ ಟೆನಿಸ್​ ತಂಡ

Road Accident
ವಿಜಯನಗರ1 hour ago

Road Accident : ಶಾಲಾ ಶಿಕ್ಷಕನ ಬಲಿ ಪಡೆದ ಸ್ಕೂಲ್‌ ವ್ಯಾನ್‌; ಒಂಟಿ ಸಲಗ ದಾಳಿಗೆ ವೃದ್ಧೆ ಸಾವು

Chiyaan Vikram danie caltagirone kissed hand on stage
ಕಾಲಿವುಡ್1 hour ago

Chiyaan Vikram: ವೇದಿಕೆಯಲ್ಲೇ ನಿರೂಪಕಿ ಸುಮಾಗೆ ಕಿಸ್ ಕೊಟ್ಟ ಖ್ಯಾತ ನಟ!

Viral Video
Latest1 hour ago

Viral Video: ಮಳೆಯಲಿ ಜೊತೆಯಲಿ… ಆನೆ-ಮಾವುತ ನಡುವಿನ ಮಾಂತ್ರಿಕ ಕ್ಷಣ! ಹೃದಯ ತಟ್ಟುವ ವಿಡಿಯೊ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ1 day ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ7 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌