ಛತ್ತೀಸ್‌ಗಢಗೆ ಇಂದೇ ಸಿಎಂ ಫೈನಲ್! ಯಾರಾಗ್ತಾರೆ ಮುಖ್ಯಮಂತ್ರಿ? - Vistara News

ದೇಶ

ಛತ್ತೀಸ್‌ಗಢಗೆ ಇಂದೇ ಸಿಎಂ ಫೈನಲ್! ಯಾರಾಗ್ತಾರೆ ಮುಖ್ಯಮಂತ್ರಿ?

Chhattisgarh chief minister: ಇತ್ತೀಚೆಗಷ್ಟೇ ಮುಕ್ತಾಯವಾದ ಚುನಾವಣೆಯಲ್ಲಿ 90 ಸ್ಥಾನಗಳಿರುವ ಛತ್ತೀಸ್‌ಗಢ ವಿಧಾನಸಭೆಗೆ ಬಿಜೆಪಿ 54 ಕ್ಷೇತ್ರಗಳನ್ನು ಗೆದ್ದರೆ, ಕಾಂಗ್ರೆಸ್ 35 ಸ್ಥಾನಗಳನ್ನು ಗೆದ್ದು ಸೋಲು ಅನುಭವಿಸಿತು.

VISTARANEWS.COM


on

BJP likely to choose cm for Chhattisgarh chief minister
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಛತ್ತೀಸ್‌ಗಢ (Chhattisgarh Election result) ಭಾರೀ ಜಯ ಸಾಧಿಸಿರುವ ಭಾರತೀಯ ಜನತಾ ಪಾರ್ಟಿಯು (BJP Party) ಭಾನುವಾರ ತನ್ನ ಮುಖ್ಯಮಂತ್ರಿಯನ್ನು (Chhattisgarh Chief Minister) ಆಯ್ಕೆ ಮಾಡಲಿದೆ. ಬಿಜೆಪಿ ನಾಯಕರಾದ ಸರ್ಬಾನಂದ್ ಸೋನೋವಾಲ, ಅರ್ಜುನ ಮುಂಡಾ ಅವರು ಹೊಸದಾಗಿ ಆಯ್ಕೆಯಾದ ಶಾಸಕರ ಸಭೆಯಲ್ಲಿ ಪಾಲ್ಗೊಂಡು, ಮುಖ್ಯಮಂತ್ರಿ ಆಯ್ಕೆ ಸಂಬಂಧ ಅಭಿಪ್ರಾಯಗಳನ್ನು ಪಡೆಯಲಿದ್ದಾರೆ. ಈ ಮಧ್ಯೆ ಛತ್ತೀಸ್‌ಗಢ ಮುಖ್ಯಮಂತ್ರಿ ಸ್ಥಾನಕ್ಕೆ ಮಾಜಿ ಸಿಎಂ ರಮಣ್ ಸಿಂಗ್, ಅರುಣ್ ಸಾವೋ, ಓಪಿ ಚೌಧರಿ ಮತ್ತು ರಾಮವಿಚಾರ ನೇತಮ್, ವಿಷ್ಣು ದೇವ ಸಾಯಿ ಮತ್ತು ಸರೋಜ ಪಾಂಡೆ ಅವರು ಹೆಸರು ಪ್ರಮುಖವಾಗಿ ಕೇಳಿ ಬರುತ್ತಿವೆ(assembley election 2023).

ರಾಜಸ್ಥಾನ ಮತ್ತು ಛತ್ತೀಸ್‌ಗಢದಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಯಶಸ್ವಿಯಾಗಿದೆ. ಮಧ್ಯಪ್ರದೇಶವನ್ನು ಭರ್ಜರಿ ಜಯದೊಂದಿಗೆ ಉಳಿಸಿಕೊಂಡಿದೆ. ಇದು ಕೇಸರಿ ಪಕ್ಷವು ಹಿಂದಿಯ ಹೃದಯಭಾಗದಲ್ಲಿ ತನ್ನ ಹಿಡಿತವನ್ನು ಬಿಗಿಗೊಳಿಸುವುದಕ್ಕೆ ಕಾರಣವಾಯಿತು ಮತ್ತು 2024 ರ ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ದೊಡ್ಡ ಉತ್ತೇಜನವನ್ನು ನೀಡಲಿದೆ ಎಂದು ಹೇಳಲಾಗುತ್ತಿದೆ.

ಮಾಜಿ ಸಿಎಂ ರಮಣ್ ಸಿಂಗ್

71 ವರ್ಷದ ರಮ್ ಸಿಂಗ್ ಅವರು ರಾಜಪೂತ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೂರು ಬಾರಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಅನುಭವವಿದೆ. 2003ರಲ್ಲಿ ಕಾಂಗ್ರೆಸ್‌ನ ಅಜಿತ್ ಜೋಗಿ ಅವರನ್ನು ಸೋಲಿಸಿ, ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದರು. ಛತ್ತೀಸ್‌ಗಢ ಪಡಿತರ ವ್ಯವಸ್ಥೆಯನ್ನು ಜಾರಿಗೊಳಿಸಿದ್ದಕ್ಕಾಗಿ ಜನರು ಅವರನ್ನು ಚಾವ್ಲಾ ವಾಲೇ ಬಾಬಾ ಎಂದು ಕರೆಯುತ್ತಾರೆ. ಬಳಿಕ 15 ವರ್ಷಗಳ ಕಾಲ ಅವರು ಅಧಿಕಾರ ನಡೆಸಿದ್ದಾರೆ.

ಅರುಣ್ ಸಾವೋ

54 ವರ್ಷದ ಅರುಣ್ ಸಾವೋ ಅವರು ರಾಜಕೀಯ ಜೀವನವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮೂಲಕ ಆರಂಭಿಸಿದರು. 2019ರಲ್ಲಿ ಲೋಕಸಭೆಗೆ ಆಯ್ಕೆಯಾದರು. 2022ರಲ್ಲಿ ಛತ್ತೀಸ್‌ಗಢ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. ವೃತ್ತಿಯಿಂದ ಲಾಯರ್ ಆಗಿರುವ ಅರುಣ್ ಅವರು, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಪರವಾಗಿದ್ದ ಜಯವನ್ನು ತಮ್ಮತ್ತ ಸೆಳೆಯುವಲ್ಲಿ ಯಶಸ್ವಿಯಾದರು. ಈ ರಾಜ್ಯದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿರು ಹಿಂದುಳಿದ ವರ್ಗ ಸಾವೊ ಕಮ್ಯುನಿಟಿಗೆ ಸೇರಿದವರಾಗಿದ್ದಾರೆ.

ಒ ಪಿ ಚೌಧರಿ

ಮಾಜಿ ಐಎಎಸ್ ಅಧಿಕಾರಿ ಒಪಿ ಚೌಧರಿ ಹೆಸರು ಕೂಡ ಸಿಎಂ ಪೋಸ್ಟ್‌ಗೆ ಕೇಳಿ ಬರುತ್ತಿದೆ. ಇವರು 2018ರಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಸೇರಿದರು. “ಮಣ್ಣಿನ ಮಗ” ಎನಿಸಿರುವ ಚೌಧರಿ ಛತ್ತೀಸ್‌ಗಢದ ಗ್ರಾಮೀಣ ಪ್ರದೇಶದ ಪ್ರಭಾವಿ ಒಬಿಸಿ ಗುಂಪಿನ ಅಘಾರಿಯಾ ಜಾತಿಯಿಂದ ಬಂದವರು ಮತ್ತು ಬಿಜೆಪಿಯ ಭವಿಷ್ಯದ ನಾಯಕರಾಗಿ ಕಾಣುತ್ತಿದ್ದಾರೆ. ಪ್ರಚಾರದ ವೇಳೆ, ತಮ್ಮ ಕ್ಷೇತ್ರವಾದ ರಾಯಗಢದಲ್ಲಿ ರೋಡ್‌ಶೋ ನಡೆಸಿದ ಅಮಿತ್ ಶಾ, ಜನರು ಅವರನ್ನು ಗೆಲ್ಲಿಸಬೇಕು ಮತ್ತು ಅವರನ್ನು “ದೊಡ್ಡ ವ್ಯಕ್ತಿ” ಮಾಡುವ ಜವಾಬ್ದಾರಿ ಗೃಹ ಸಚಿವರ ಮೇಲಿದೆ ಎಂದು ಹೇಳಿದ್ದರು.

ವಿಷ್ಣು ದೇವ ಸಾಯಿ

ಬಿಜೆಪಿಯು ತನ್ನ ಮುಖ್ಯಮಂತ್ರಿಯಾಗಿ ಬುಡಕಟ್ಟು ಮುಖವನ್ನು ಆಯ್ಕೆ ಮಾಡಲು ಬಯಸಿದರೆ ಆಗ 52 ವರ್ಷದ ವಿಷ್ಣು ದೇವ ಸಾಯಿ ಅವರು ಆಯ್ಕೆಯಾಗಬಹುದು. ಮಾಜಿ ಕೇಂದ್ರ ರಾಜ್ಯ ಸಚಿವ ಮತ್ತು ಛತ್ತೀಸ್‌ಗಢ ಬಿಜೆಪಿ ಅಧ್ಯಕ್ಷರಾಗಿದ್ದ 59 ವರ್ಷದ ವಿಷ್ಣು ದೇವ್ ಸಾಯಿ ಚಿರಪರಿಚಿತ ಮುಖವಾಗಿದೆ. ಸಾಯಿ ಅವರು 2018 ಮತ್ತು 2022 ರ ನಡುವೆ ನಾಲ್ಕು ವರ್ಷಗಳ ಕಾಲ ಅಧ್ಯಕ್ಷರಾಗಿದ್ದರು ಮತ್ತು ಉತ್ತರ ಛತ್ತೀಸ್‌ಗಢದ ಕುಂಕೂರಿಯಿಂದ ಚುನಾವಣೆಯಲ್ಲಿ ಗೆದ್ದಿದ್ದಾರೆ.

ಸರೋಜ ಪಾಂಡೆ

ಸರೋಜ್ ಪಾಂಡೆ ಅವರು 2008 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವೈಶಾಲಿ ನಗರದಿಂದ ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರು. ಅದಕ್ಕೂ ಮೊದಲು ಅವರು ಛತ್ತೀಸ್‌ಗಢದ ದುರ್ಗ್‌ನ ಮೇಯರ್ ಆಗಿ ಸೇವೆ ಸಲ್ಲಿಸಿದ್ದರು. 2009 ರಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದ ಅವರು, 2018ರಲ್ಲಿ ಬಿಜೆಪಿಯು ಅವರನ್ನು ರಾಜ್ಯಸಭೆಗೆ ಕಳುಹಿಸಿತು.

ಈ ಸುದ್ದಿಯನ್ನೂ ಓದಿ: Revanth Reddy: ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್‌ ರೆಡ್ಡಿ ಪ್ರಮಾಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Google Pay: ಇಲ್ಲಿದೆ ಬ್ಯಾಡ್‌ನ್ಯೂಸ್; ಈ ದಿನದಿಂದ ಗೂಗಲ್‌ ಪೇ ಆ್ಯಪ್ ಸ್ಥಗಿತ!

Google Pay: ಇದೇ ವರ್ಷದ ಜೂನ್‌ 4ರಿಂದ ಅಮೆರಿಕದಲ್ಲಿ ಗೂಗಲ್‌ ಪೇ ಆ್ಯಪ್ ಕಾರ್ಯಾಚರಣೆ ಸ್ಥಗಿತವಾಗಲಿದೆ ಎಂದು ಕಂಪನಿಯೇ ಮಾಹಿತಿ ನೀಡಿದೆ. ಹಾಗಾದರೆ, ಭಾರತದಲ್ಲಿ ಏನಾಗಲಿದೆ?

VISTARANEWS.COM


on

Google Pay
Koo

ನವದೆಹಲಿ: ದೇಶಾದ್ಯಂತ ಕೆಲವೇ ದಿನಗಳಲ್ಲಿ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ (Paytm Payments Bank) ಸ್ಥಗಿತವಾಗಲಿದೆ. ಫಾಸ್ಟ್‌ಟ್ಯಾಗ್‌ ಹೊಂದಿರುವವರು ಈಗ ಪೇಟಿಎಂ ಬದಲು ಬೇರೆ ಆ್ಯಪ್ ಮೊರೆ ಹೋಗಬೇಕಾಗಿದೆ. ಇದರ ಬೆನ್ನಲ್ಲೇ, ಗೂಗಲ್‌ ಪೇ ಆ್ಯಪ್ ಕೂಡ (Google Pay) ಸ್ಥಗಿತವಾಗಲಿದೆ. ಆದರೆ, ಗೂಗಲ್‌ ಪೇ ಅಮೆರಿಕದಲ್ಲಿ (USA) ಮಾತ್ರ ಸ್ಥಗಿತವಾಗುವ ಹಿನ್ನಲೆಯಲ್ಲಿ ಭಾರತೀಯರಿಗೆ (Indians) ಯಾವುದೇ ತೊಂದರೆ ಎಂದು ತಿಳಿದುಬಂದಿದೆ.

ಹೌದು, 2024ರ ಜೂನ್‌ 4ರಿಂದಲೇ ಅಮೆರಿಕದಲ್ಲಿ ಗೂಗಲ್‌ ಪೇ ಆ್ಯಪ್ ಕಾರ್ಯಾಚರಣೆಯು ಸ್ಥಗಿತಗೊಳ್ಳಲಿದೆ ಎಂದು ಕಂಪನಿಯೇ ಮಾಹಿತಿ ನೀಡಿದೆ. ಆದರೆ, ಅಮೆರಿಕದಲ್ಲಿ ಗೂಗಲ್‌ ವ್ಯಾಲೆಟ್‌ ಪ್ಲಾಟ್‌ಫಾರ್ಮ್‌ ಲಭ್ಯವಾಗಲಿದ್ದು, ಜನರು ಅದರ ಮೂಲಕವೇ ವಹಿವಾಟು ನಡೆಸಬಹುದಾಗಿದೆ ಎಂದು ಕಂಪನಿ ಪ್ರಕಟಣೆ ತಿಳಿಸಿದೆ. ಆದರೆ, ಭಾರತದಲ್ಲಿ ಗೂಗಲ್‌ ಪೇ ಆ್ಯಪ್ ಕಾರ್ಯಾಚರಣೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗುವುದಿಲ್ಲ ಎಂದು ಕಂಪನಿಯೇ ಸ್ಪಷ್ಟನೆ ನೀಡಿದೆ.

ಗೂಗಲ್‌ ಪೇ ಏಕೆ ಸ್ಥಗಿತ?

ಗೂಗಲ್‌ ಪೇ ಆ್ಯಪ್ ಕಾರ್ಯಾಚರಣೆಯಲ್ಲಿ ಇನ್ನಷ್ಟು ಸರಳ ಫೀಚರ್‌ಗಳನ್ನು ಅಳವಡಿಸುವ ದಿಸೆಯಲ್ಲಿ ಗೂಗಲ್‌ ಪೇ ಆ್ಯಪ್ ಸ್ಥಗಿತಗೊಳಿಸಲಾಗುತ್ತಿದೆ ಎಂದು ಕಂಪನಿ ಮಾಹಿತಿ ನೀಡಿದೆ. ಗೂಗಲ್‌ ಪೇ ಆ್ಯಪ್ ಸ್ಥಗಿತವಾದರೂ, ಈಗ ಗ್ರಾಹಕರು ಗೂಗಲ್‌ ವ್ಯಾಲೆಟ್‌ ಮೂಲಕ ವಹಿವಾಟು ನಡೆಸಬಹುದಾಗಿದೆ ಎಂದು ತಿಳಿಸಿದೆ. ಗೂಗಲ್‌ ವ್ಯಾಲೆಟ್‌ಗೆ ಗೂಗಲ್‌ ಪೇ ಫೀಚರ್‌ಗಳನ್ನು ಮೈಗ್ರೇಟ್‌ (ವರ್ಗಾವಣೆ) ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇಲ್ಲವೇ ಹೊಸ ಆ್ಯಪ್ ಬಿಡುಗಡೆ ಮಾಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಇದನ್ನೂ ಓದಿ: Paytm FASTag: ನೀವು ಪೇಟಿಎಂ ಫಾಸ್ಟ್ಯಾಗ್‌ ಮೂಲಕ ಟೋಲ್ ಪಾವತಿ ಮಾಡ್ತಿದೀರಾ? ಹಾಗಿದ್ರೆ ಇಲ್ಲಿ ಗಮನಿಸಿ

“ಭಾರತ ಹಾಗೂ ಸಿಂಗಾಪುರದಲ್ಲಿ ಕೋಟ್ಯಂತರ ಜನ ಗೂಗಲ್‌ ಪೇ ಆ್ಯಪ್ ಬಳಸುತ್ತಿದ್ದಾರೆ. ಹಾಗಾಗಿ, ಎರಡೂ ದೇಶಗಳಲ್ಲಿ ಆ್ಯಪ್ ಕಾರ್ಯಾಚರಣೆ ಮುಂದುವರಿಯಲಿದೆ. ಜನರು ಎಂದಿನಂತೆ ಗೂಗಲ್‌ ಪೇ ಮೂಲಕ ಹಣ ಪಾವತಿ, ವರ್ಗಾವಣೆ ಮಾಡಬಹುದಾಗಿದೆ. ಈ ಸೇವೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗುವುದಿಲ್ಲ” ಎಂದು ಕಂಪನಿ ತಿಳಿಸಿದೆ. ಗೂಗಲ್‌ ವ್ಯಾಲೆಟ್‌ ಮೂಲಕವೂ ಅಮೆರಿಕದಲ್ಲಿ ಗ್ರಾಹಕರು ಹಣ ವರ್ಗಾವಣೆ, ಕ್ರೆಡಿಟ್‌ ಕಾರ್ಡ್‌ ಅಟ್ಯಾಚ್‌ ಸೇರಿ ಹಲವು ಸೌಲಭ್ಯಗಳಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

New Laws: ಐಪಿಸಿ ಮೂಲೆಗೆ; ಜುಲೈ 1ರಿಂದಲೇ ಹೊಸ ಕಾನೂನು ಜಾರಿ, ಏನೆಲ್ಲ ಬದಲು?

New Laws: ಈಗಿನ ದಿನಗಳಿಗೆ ಸಂಪೂರ್ಣವಾಗಿ ಸೂಕ್ತವಲ್ಲದ ವಸಾಹತುಶಾಹಿ ಯುಗದ ನಿಯಮಗಳನ್ನು ಹೊಸ ಕಾನೂನುಗಳು ಬದಲಿಸುತ್ತವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇದಕ್ಕೂ ಮೊದಲು ಹೇಳಿದ್ದರು. ಈಗ ಹೊಸ ಕಾನೂನುಗಳು ಜಾರಿಗೆ ಬರುತ್ತಿವೆ.

VISTARANEWS.COM


on

indian penal code
Koo

ನವದೆಹಲಿ: ದೇಶದಲ್ಲಿ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳ (Criminal Laws) ಸಂಪೂರ್ಣ ತಿದ್ದುಪಡಿ ದಿಸೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದ್ದು, ಭಾರತೀಯ ದಂಡ ಸಂಹಿತೆ (IPC-1860), ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ (CrPC-1973) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು (Indian Evidence Act-1872) ತಿದ್ದುಪಡಿಗೊಳಿಸಲಾಗಿದೆ. ಇವುಗಳ ಬದಲಾಗಿ ಮೂರು ಹೊಸ ಕಾನೂನುಗಳು (New Laws) ಜುಲೈ 1ರಿಂದಲೇ ದೇಶಾದ್ಯಂತ ಜಾರಿಗೆ ಬರಲಿವೆ.

ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗಿದೆ. ಹೊಸ ಕಾನೂನುಗಳು ಜುಲೈ 1ರಿಂದ ಜಾರಿಗೆ ಬರಲಿವೆ.

ಏನೆಲ್ಲ ಮಾರ್ಪಾಡು?

ಈಗಿರುವ ಭಾರತೀಯ ದಂಡ ಸಂಹಿತೆಯಲ್ಲಿ 420 ಸೆಕ್ಷನ್ ಅನ್ನು ವಂಚನೆ ಅಪರಾಧಕ್ಕೆ ಅನ್ವಯಿಸಲಾಗುತ್ತದೆ. ಆದರೆ, ಭಾರತೀಯ ನ್ಯಾಯ ಸಂಹಿತೆಯ ಈ ಅಪರಾಧಕ್ಕೆ 316(2), (3) ಮತ್ತು (4) ಸೆಕ್ಷನ್‌ಗಳು ಇರಲಿವೆ. ವಂಚನೆ ಅಪರಾಧಕ್ಕಾಗಿ ಈ ಸೆಕ್ಷನ್‌ಗಳಡಿ ಅಪರಾಧಿಗೆ ಮೂರು ವರ್ಷ, ಐದು ವರ್ಷ ಅಥವಾ ಏಳು ವರ್ಷಗಳವರೆಗೆ ದಂಡ ಸಹಿತ ಜೈಲು ಶಿಕ್ಷೆಯನ್ನು ವಿಸ್ತರಿಸಬಹುದಾಗಿದೆ.

ಸೆಕ್ಷನ್ 302 ಕೊಲೆಗಲ್ಲ, ಸ್ನ್ಯಾಚಿಂಗ್‌ಗೆ ಅಪ್ಲೈ

ಈಗ ಚಾಲ್ತಿಯಲ್ಲಿರುವ ಐಪಿಸಿ ಸೆಕ್ಷನ್ 302 ಕೊಲೆ ಅಪರಾಧವನ್ನು ಸೂಚಿಸುತ್ತದೆ. ಯಾರು ಕೊಲೆ ಅಪರಾಧವನ್ನು ಮಾಡುತ್ತಾರೋ ಅವರಿಗೆ ಗರಿಷ್ಠ ಗಲ್ಲು ಶಿಕ್ಷೆ ಅಥವಾ ಜೀವಾವಧಿ ಅಥವಾ ದಂಡ ಸಹಿತ ಶಿಕ್ಷೆಯನ್ನು ವಿಧಿಸಬಹುದಾಗಿದೆ.

ಉದ್ದೇಶಿತ ಭಾರತೀಯ ನ್ಯಾಯ ಸಂಹಿತೆಯಲ್ಲಿ ಕೊಲೆ ಅಪರಾಧದ ಶಿಕ್ಷೆಯನ್ನು ವಿವರಿಸಲು ಸೆಕ್ಷನ್ 101 ಬಳಸಲಾಗಿದೆ. ಇದಕ್ಕೆ ಎರಡು ಉಪ ಸೆಕ್ಷನ್‌ಗಳು ಕೂಡ ಇವೆ. ಐಪಿಸಿಯಲ್ಲಿದ್ದ ಸೆಕ್ಷನ್ 302 ಈಗ ಉದ್ದೇಶಿತ ಭಾರತೀಯ ನ್ಯಾಯ ಸಂಹಿತೆಯಲ್ಲಿ ಕಸಿದುಕೊಳ್ಳುವ(ಸ್ನ್ಯಾಚಿಂಗ್) ಅಪರಾಧವನ್ನು ಸೂಚಿಸುತ್ತದೆ. ಸೆಕ್ಷನ್ 302(1) ಪ್ರಕಾರ, ಕಳ್ಳತನ ಮಾಡುವ ಸಲುವಾಗಿ, ಅಪರಾಧಿಯು ಹಠಾತ್ತನೆ ಅಥವಾ ತ್ವರಿತವಾಗಿ ಅಥವಾ ಬಲವಂತವಾಗಿ ವಶಪಡಿಸಿಕೊಂಡರೆ ಅಥವಾ ಯಾವುದೇ ವ್ಯಕ್ತಿಯಿಂದ ಅಥವಾ ಅವನ ಸ್ವಾಧೀನದಿಂದ ಯಾವುದೇ ಚಲಿಸಬಹುದಾದ ಆಸ್ತಿಯನ್ನು ಕಸಿದುಕೊಂಡರೆ ಅಥವಾ ಕಸಿದುಕೊಂಡರೆ ಎಂದು ವ್ಯಾಖ್ಯಾನಿಸುತ್ತದೆ.

ದೇಶದ್ರೋಹ ಕಾನೂನು ಬದಲು

ಬ್ರಿಟಿಷರ ಕಾಲದಲ್ಲಿ ಜಾರಿಗೆ ತಂದ ದೇಶದ್ರೋಹದ ಕಾನೂನು ನೂತನ ಕ್ರಿಮಿನಲ್‌ ಕಾನೂನಿನಲ್ಲಿ ಇರುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾಹಿತಿ ನೀಡಿದ್ದಾರೆ. ದೇಶದ್ರೋಹ ಕಾನೂನಿನಲ್ಲಿ ಬಂಧಿತರಾದವರಿಗೆ ಮೂರು ವರ್ಷದಿಂದ ಜೀವಾವಧಿ ಶಿಕ್ಷೆ ನೀಡಬಹುದಾಗಿದ್ದು, ಈ ಕಾನೂನು ರದ್ದುಗೊಳಿಸಲಾಗುತ್ತದೆ ಎಂದು ಹೇಳಿದರು. ಇದರ ಬದಲಾಗಿ ಹೊಸ ನಿಯಮಗಳು ಜಾರಿಗೆ ಬರಲಿವೆ ಎಂದು ಕೂಡ ತಿಳಿಸಿದರು.

ಇದನ್ನೂ ಓದಿ: Parliament Session: ಅಪರಾಧ ಎಸಗಿ ದೇಶ ಬಿಟ್ಟು ಹೋದವರಿಗೆ ಇನ್ನಿಲ್ಲ ನೆಮ್ಮದಿ; ಬರ್ತಿದೆ ಹೊಸ ಕಾನೂನು!

ಅತ್ಯಾಚಾರಿಗಳಿಗೆ 20 ವರ್ಷ ಜೈಲು

ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವುದು ನೂತನ ಕಾನೂನುಗಳನ್ನು ಜಾರಿಗೊಳಿಸಲಾಗುತ್ತಿದೆ. “ಹೊಸ ಕಾನೂನುಗಳ ಅಡಿಯಲ್ಲಿ ಅತ್ಯಾಚಾರಿಗಳಿಗೆ ಗರಿಷ್ಠ 20 ವರ್ಷ ಅಥವಾ ಅವರು ಜೀವಿತಾವಧಿವರೆಗೆ ಜೈಲಿನಲ್ಲಿ ಕಾಲ ಕಳೆಯುವ ರೀತಿ ಶಿಕ್ಷೆ ವಿಧಿಸಲಾಗುತ್ತದೆ. ಹಾಗೆಯೇ, ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದವರಿಗೆ ಗಲ್ಲು ಶಿಕ್ಷೆ ವಿಧಿಸುವ, ಅತ್ಯಾಚಾರ ಸಂತ್ರಸ್ತೆಯರ ಮಾಹಿತಿ ಬಹಿರಂಗಪಡಿಸಿದವರಿಗೂ ಶಿಕ್ಷೆ ವಿಧಿಸುವ ಕಾನೂನು ಇರಲಿದೆ” ಎಂದು ಅಮಿತ್‌ ಶಾ ಮಾಹಿತಿ ನೀಡಿದ್ದಾರೆ.

ಗುಂಪು ಹತ್ಯೆ ಅಪರಾಧಿಗಳಿಗೆ ಜೀವಾವಧಿ

ದೇಶದಲ್ಲಿ ನರೇಂದ್ರ ಮೋದಿ ಆಡಳಿತದಲ್ಲಿ ಗುಂಪು ಹತ್ಯೆಗಳ (Mob Lynching) ಸಂಖ್ಯೆ ಜಾಸ್ತಿಯಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಗುಂಪು ಹತ್ಯೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಮುಂದಾಗಿದೆ. ಗುಂಪು ಹತ್ಯೆಯಲ್ಲಿ ಭಾಗಿಯಾದವರಿಗೆ ಕನಿಷ್ಠ ಏಳು ವರ್ಷ ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಹಾಗೆಯೇ, ಹೆಚ್ಚಿನ ಮೊತ್ತದ ದಂಡವನ್ನೂ ವಿಧಿಸಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Major Accident: ಭೀಕರ ಅಪಘಾತ; ಟ್ರ್ಯಾಕ್ಟರ್-ಟ್ರಾಲಿ ಕೊಳಕ್ಕೆ ಬಿದ್ದು 15 ಮಂದಿ ಸಾವು

Major Accident: ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್-ಟ್ರಾಲಿ ಕೊಳಕ್ಕೆ ಬಿದ್ದು ಈ ದುರಂತ ಸಂಭವಿಸಿದೆ.

VISTARANEWS.COM


on

accident in up
Koo

ಲಕ್ನೋ: ಉತ್ತರ ಪ್ರದೇಶದ ಕಾಸ್ಗಂಜ್ (Kasganj) ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ (Major Accident) ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗ್ರಾಮಸ್ಥರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್-ಟ್ರಾಲಿ ಕೊಳಕ್ಕೆ ಬಿದ್ದು ಈ ದುರಂತ ಸಂಭವಿಸಿದೆ. ಮಾಘ ಪೂರ್ಣಿಮೆ (Magh Purnima)ಯ ಪ್ರಯುಕ್ತ ಗಂಗಾ ನದಿಯಲ್ಲಿನ ಪವಿತ್ರ ಸ್ನಾನಕ್ಕಾಗಿ ಗ್ರಾಮಸ್ಥರು ತೆರಳುತ್ತಿದ್ದಾಗ ಈ ಅವಘಢ ಸಂಭವಿಸಿದೆ.

ಪಟಿಯಾಲಿ ಕೊಟ್ವಾಲಿ ಪ್ರದೇಶದ ದರಿಯಾವ್ಗಂಜ್ ನಿಲ್ದಾಣದ ಬಳಿ ಸಂಭವಿಸಿದ ಅಪಘಾತದಲ್ಲಿ ಎಂಟು ಮಕ್ಕಳು ಮತ್ತು ಏಳು ಮಹಿಳೆಯರು ಸೇರಿದಂತೆ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಲಿಗಢ ವಲಯದ ಐಜಿ ಶಲಭ್ ಮಾಥುರ್ ಮಾಹಿತಿ ನೀಡಿದ್ದಾರೆ. ರಸ್ತೆಯಲ್ಲಿ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ಟ್ರ್ಯಾಕ್ಟರ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದ ಎಂದು ಅವರು ತಿಳಿಸಿದ್ದಾರೆ.

ಗ್ರಾಮಸ್ಥರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ಕೆಸರು ತುಂಬಿದ ಕೊಳಕ್ಕೆ ಪಲ್ಟಿಯಾಗಿದ್ದರಿಂದ ಹೆಚ್ಚಿನ ಸಾವು ನೋವು ಸಂಭವಿಸಿದೆ. ಗಾಯಗೊಂಡವರನ್ನು ಕಾಸ್ಗಂಜ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಆಘಾತ ವ್ಯಕ್ತಪಡಿಸಿದ ಯೋಗಿ

ಅಪಘಾತದ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆಘಾತ ವ್ಯಕ್ತಪಡಿಸಿದ್ದಾರೆ. ತೀವ್ರ ದುಃಖ ವ್ಯಕ್ತಪಡಿಸಿದ ಅವರು, ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವರಿಗೆ ತ್ವರಿತ ಮತ್ತು ಸಮರ್ಪಕ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕಾಸ್ಗಂಜ್ ಜಿಲ್ಲೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ತ್ವರಿತ ರಕ್ಷಣಾ ಕಾರ್ಯಾಚರಣೆಗೆ ಆದೇಶಿಸಿದ್ದಾರೆ.

ಇದನ್ನೂ ಓದಿ: Road Accident: ರಾಯಬಾಗದಲ್ಲಿ ಕಾರು-ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಐವರ ಸಾವು

Continue Reading

ಪ್ರಮುಖ ಸುದ್ದಿ

Lok Sabha Election 2024: 4 ರಾಜ್ಯಗಳಲ್ಲಿ ಬಿಜೆಪಿ ವಿರುದ್ಧ ಎಎಪಿ- ಕಾಂಗ್ರೆಸ್ ಮೈತ್ರಿ ಹೋರಾಟ; ಯಾವ ರಾಜ್ಯ, ಎಷ್ಟು ಸೀಟು?

Lok Sabha Election 2024: ಕಾಂಗ್ರೆಸ್‌ ಹಾಗೂ ಆಪ್ ನಾಲ್ಕು ರಾಜ್ಯಗಳಲ್ಲಿ ಸೀಟು ಹಂಚಿಕೆ ಮಾಡಿಕೊಂಡಿದ್ದರೂ‌, ಪಂಜಾಬ್‌ನಲ್ಲಿ ಮಾತ್ರ ಯಾವುದೇ ಮೈತ್ರಿಗೆ ಸಿದ್ಧವಾಗಿಲ್ಲ.

VISTARANEWS.COM


on

rahul gandhi mallikarjun kharge arvind kejriwal
Koo

ಹೊಸದಿಲ್ಲಿ: ಮುಂಬರುವ ಲೋಕಸಭೆ ಚುನಾವಣೆಗೆ (Lok Sabha Election 2024) ಆಮ್ ಆದ್ಮಿ ಪಕ್ಷ (Aam Admi Party) ಮತ್ತು ಕಾಂಗ್ರೆಸ್ (Congress) ಮೈತ್ರಿಯನ್ನು ಶನಿವಾರ ಖಚಿತಪಡಿಸಿವೆ. ಎರಡೂ ಪಕ್ಷಗಳು ದಿಲ್ಲಿ, ಗೋವಾ, ಗುಜರಾತ್ ಮತ್ತು ಹರಿಯಾಣ ರಾಜ್ಯಗಳಲ್ಲಿ ತಮ್ಮ ಸೀಟು ಹಂಚಿಕೆ (Seat sharing) ಒಪ್ಪಂದವನ್ನು ಮಾಡಿಕೊಂಡಿವೆ.

ಗುಜರಾತ್‌ನಲ್ಲಿ ಕಾಂಗ್ರೆಸ್ 24 ಸ್ಥಾನಗಳಲ್ಲಿ, ಎಎಪಿ 2 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಹರಿಯಾಣದಲ್ಲಿ ಕಾಂಗ್ರೆಸ್ 9 ಸ್ಥಾನಗಳಲ್ಲಿ, ಎಎಪಿ ಒಂದು ಸ್ಥಾನದಲ್ಲಿ ಸ್ಪರ್ಧಿಸಲಿದೆ. ದೆಹಲಿಯಲ್ಲಿ ಎಎಪಿ ನಾಲ್ಕು, ಕಾಂಗ್ರೆಸ್ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಲಿದೆ. ಗೋವಾದಲ್ಲಿ ಎರಡು ಲೋಕಸಭಾ ಕ್ಷೇತ್ರಗಳಿದ್ದು, ಇಲ್ಲಿ ಆಪ್‌ ಪ್ರಾಬಲ್ಯ ಇಲ್ಲದಿರುವುದರಿಂದ ಎರಡರಲ್ಲೂ ಕಾಂಗ್ರೆಸ್ ಸ್ಪರ್ಧಿಸಲಿದೆ. ಎರಡೂ ಪಕ್ಷಗಳೂ ಅಸ್ಸಾಂನಲ್ಲಿ ಸ್ಪರ್ಧೆಯ ಕುರಿತು ಚರ್ಚೆ ನಡೆಸುತ್ತಿವೆ.

“ಗುಜರಾತ್ 26 ಲೋಕಸಭಾ ಸ್ಥಾನಗಳನ್ನು ಹೊಂದಿದ್ದು, ಕಾಂಗ್ರೆಸ್ 24ರಲ್ಲಿ ಸ್ಪರ್ಧಿಸಲಿದೆ. ಎಎಪಿ ತನ್ನ ಅಭ್ಯರ್ಥಿಗಳನ್ನು ಭರೂಚ್ ಮತ್ತು ಭಾವನಗರದಲ್ಲಿ ಹಾಕಲಿದೆ. ಹರಿಯಾಣ 10 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 9ರಲ್ಲಿ ಸ್ಪರ್ಧಿಸಲಿದ್ದು, ಆಪ್‌ ತನ್ನ ಅಭ್ಯರ್ಥಿಯನ್ನು ಕುರುಕ್ಷೇತ್ರ ಲೋಕಸಭಾ ಕ್ಷೇತ್ರದಲ್ಲಿ ಹಾಕಲಿದೆ. ದೆಹಲಿಯಲ್ಲಿ ಆಪ್‌ ಹೊಸ ದೆಹಲಿ, ಪಶ್ಚಿಮ ದೆಹಲಿ, ದಕ್ಷಿಣ ದೆಹಲಿ ಮತ್ತು ಪೂರ್ವ ದೆಹಲಿಯಲ್ಲಿ ಸ್ಪರ್ಧಿಸಲಿದೆ. ಚಾಂದಿನಿ ಚೌಕ್, ಈಶಾನ್ಯ ಮತ್ತು ವಾಯುವ್ಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ” ಎಂದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಮುಕುಲ್ ವಾಸ್ನಿಕ್ ಹೇಳಿದ್ದಾರೆ.

ಉಭಯ ಪಕ್ಷಗಳ ನಾಯಕರ ಸುದೀರ್ಘ ಚರ್ಚೆಯ ನಂತರ, ಚಂಡೀಗಢ ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಪರ್ಧಿಸಲು ನಿರ್ಧರಿಸಿದೆ ಎಂದು ವಾಸ್ನಿಕ್ ಹೇಳಿದರು. ಎರಡೂ ಪಕ್ಷಗಳು ಪಂಜಾಬ್‌ನಲ್ಲಿ ಸ್ಪರ್ಧೆಯ ಬಗ್ಗೆ ಯಾವುದೇ ಮಾತನಾಡಿಲ್ಲ. ಇಲ್ಲಿ 2022ರಲ್ಲಿ ಕಾಂಗ್ರೆಸ್ ಅನ್ನು ಪದಚ್ಯುತಗೊಳಿಸಿದ ಆಪ್‌ ನಂತರ ಸರ್ಕಾರವನ್ನು ರಚಿಸಿತ್ತು. ಈ ತಿಂಗಳ ಆರಂಭದಲ್ಲಿ ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ (Arvind Kejriwal), ತಮ್ಮ ಪಕ್ಷವು ಪಂಜಾಬ್‌ನ ಎಲ್ಲಾ 13 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದರು.

ಪಂಜಾಬ್ ಮತ್ತು ದೆಹಲಿಯಲ್ಲಿ ಹಳೆಯ ಪ್ರತಿಸ್ಪರ್ಧಿಗಳಾದ ಎಎಪಿ ಮತ್ತು ಕಾಂಗ್ರೆಸ್ ಕಳೆದ ತಿಂಗಳು ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದವು. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರ ಈ ಮೈತ್ರಿ ಅಭ್ಯರ್ಥಿ ಗೆದ್ದ ಘೋಷಣೆ ಮಾಡಲಾಗಿದೆ.

“ಇಂದು ದೇಶ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದೆ. ಬಿಜೆಪಿ ಸರಕಾರ ಒಂದೊಂದಾಗಿ ಎಲ್ಲಾ ಸಂಸ್ಥೆಗಳನ್ನು ಮುಗಿಸುತ್ತಿದೆ. ಚುನಾವಣೆಗಳಲ್ಲಿ ಅಕ್ರನ ನಡೆಸಲಾಗುತ್ತಿದೆ. ಚುನಾವಣೆಯಲ್ಲಿ ಗೆಲ್ಲಲು ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಹಾಕಲಾಗುತ್ತಿದೆ. ರೈತರಿಗೆ ಅನ್ಯಾಯವಾಗುತ್ತಿದೆ. ದೇಶದ ಜನರು ನಿರುದ್ಯೋಗ ಮತ್ತು ಹಣದುಬ್ಬರದಿಂದ ನರಳುತ್ತಿದ್ದಾರೆ. ದೇಶಕ್ಕೆ ಪ್ರಾಮಾಣಿಕ ಮತ್ತು ಬಲಿಷ್ಠ ಪರ್ಯಾಯದ ಅಗತ್ಯವಿದೆ” ಎಂದು ಎಎಪಿ ಸಂಸದ ಸಂದೀಪ್ ಪಾಠಕ್ ಮೈತ್ರಿಯನ್ನು ಘೋಷಿಸಿದ ನಂತರ ಹೇಳಿದರು.

“ಇದನ್ನು ಗಮನದಲ್ಲಿಟ್ಟುಕೊಂಡು, ನಮ್ಮದೇ ಆದ ರಾಜಕೀಯ ಹಿತಾಸಕ್ತಿಗಳನ್ನು ಬದಿಗಿಟ್ಟು ಮತ್ತು ರಾಷ್ಟ್ರದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನಾವು ಈ ಮೈತ್ರಿಕೂಟದಲ್ಲಿ ಒಂದಾಗಿದ್ದೇವೆ. ಇಂದು ದೇಶ ಮುಖ್ಯ, ಪಕ್ಷ ಗೌಣ. ಕಾಂಗ್ರೆಸ್ ಇಲ್ಲಿಂದ, ಎಎಪಿ ಅಲ್ಲಿಂದ ಸ್ಪರ್ಧಿಸಿದರೂ ಒಟ್ಟಾರೆಯಾಗಿ ಇಂಡಿಯಾ ಮೈತ್ರಿಕೂಟ ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ಗೆ 7ನೇ ಸಮನ್ಸ್‌ ನೀಡಿದ ಇ.ಡಿ; ಅರೆಸ್ಟ್‌ ಮಾಡ್ತಾರಾ?

Continue Reading
Advertisement
CM Siddaramaiah slams HD Deve Gowda
ರಾಜಕೀಯ3 mins ago

CM Siddaramaiah: ಜೆಡಿಎಸ್‌ ಕೋಟೆಯಲ್ಲಿ ದೇವೇಗೌಡರ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ

Google Pay
ದೇಶ11 mins ago

Google Pay: ಇಲ್ಲಿದೆ ಬ್ಯಾಡ್‌ನ್ಯೂಸ್; ಈ ದಿನದಿಂದ ಗೂಗಲ್‌ ಪೇ ಆ್ಯಪ್ ಸ್ಥಗಿತ!

icc test batting rankings
ಕ್ರೀಡೆ15 mins ago

Yashasvi Jaiswal : ವೀರೇಂದ್ರ ಸೆಹ್ವಾಗ್ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್​

Star travel Fashion mokshith pai
ಫ್ಯಾಷನ್19 mins ago

Star travel Fashion: ಪಾರು ಖ್ಯಾತಿಯ ಮೋಕ್ಷಿತಾ ಪೈ ದುಬೈ ಟ್ರಾವೆಲ್‌ ಫ್ಯಾಷನ್‌ ವಿಶೇಷ ಇದು!

Girish Kasaravalli first film Ghatashraddha is another feather
ಸ್ಯಾಂಡಲ್ ವುಡ್20 mins ago

Ghatashraddha Movie: ಗಿರೀಶ್ ಕಾಸರವಳ್ಳಿಯವರ ಮೊದಲ ಚಿತ್ರ ‘ಘಟಶ್ರಾದ್ಧ ಚಿತ್ರಕ್ಕೆ ಇನ್ನೊಂದು ಪ್ರಶಸ್ತಿ!

Boy dies after being hit by a roll while playing jokali in Davangere
ಕರ್ನಾಟಕ26 mins ago

Davanagere News : ಕುತ್ತಿಗೆಗೆ ಬಿಗಿದ ಜೋಕಾಲಿ ಹಗ್ಗ; 4ನೇ ಕ್ಲಾಸ್‌ ಹುಡುಗ ದುರ್ಮರಣ

Drunk husband assaults wife
ಬೆಂಗಳೂರು1 hour ago

Assault Case :‌ ಹೊಡಿತಾನೆ ಬಡಿತಾನೆ ನನ್ನ ಗಂಡ; ಅನುಮಾನ ಪಿಶಾಚಿ ಕಾಟಕ್ಕೆ ಬೇಸತ್ತಳು ಹೆಂಡತಿ

indian penal code
ದೇಶ1 hour ago

New Laws: ಐಪಿಸಿ ಮೂಲೆಗೆ; ಜುಲೈ 1ರಿಂದಲೇ ಹೊಸ ಕಾನೂನು ಜಾರಿ, ಏನೆಲ್ಲ ಬದಲು?

bankok
ವೈರಲ್ ನ್ಯೂಸ್1 hour ago

Guinness World Records: ಬರೋಬ್ಬರಿ 168 ಅಕ್ಷರಗಳನ್ನೊಳಗೊಂಡ ಈ ನಗರದ ಹೆಸರಿನಲ್ಲಿದೆ ವಿಶ್ವ ದಾಖಲೆ

Amazon Sweets
ವಾಣಿಜ್ಯ1 hour ago

Empower HER Exhibition : ಎಫ್‌ಕೆಸಿಸಿಐ ಆವರಣದಲ್ಲಿ ಮಹಿಳಾ ಉದ್ದಿಮೆದಾರರಿಂದ ಯಶಸ್ವಿ ವಸ್ತು ಪ್ರದರ್ಶನ ಮತ್ತು ಮಾರಾಟ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ4 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Varthur Santhosh
ಮಂಡ್ಯ4 hours ago

Varthur Santhosh: ಮತ್ತೆ ಹಳ್ಳಿಕಾರ್‌ ಒಡೆಯ ವಿವಾದ; ವರ್ತೂರ್‌ ಸಂತೋಷ್ ವಿರುದ್ಧ ಕಾನೂನು ಸಮರ

read your daily horoscope predictions for february 24 2024
ಭವಿಷ್ಯ11 hours ago

Dina Bhavishya : ಹೂಡಿಕೆ ವ್ಯವಹಾರದಲ್ಲಿ ಈ ರಾಶಿಯವರಿಗೆ ಸಿಗಲಿದೆ ಸಂಗಾತಿ ಸಾಥ್‌

Staff nurses attempt to convert at health centre in Ratagal village
ಕಲಬುರಗಿ24 hours ago

Forced Conversion : ಆಪರೇಶನ್‌ ಮತಾಂತರ; ನರ್ಸ್‌ಗಳಿಂದ ಹಿಂದೂಗಳ ಬ್ರೈನ್‌ ವಾಶ್‌

Fire breaks out in auto shed Burnt autos
ಬೆಂಗಳೂರು1 day ago

Fire Accident : ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ! 40-50 ಆಟೋಗಳು ಬೆಂಕಿಗಾಹುತಿ

He sent a private photo video of his girlfriend
ಬೆಳಗಾವಿ1 day ago

Belgavi News : ನವ ವಿವಾಹಿತೆಯ ಖಾಸಗಿ ವಿಡಿಯೊ ಹರಿಬಿಟ್ಟು ಹಳೇ ಪ್ರೇಮಿ ಕಿತಾಪತಿ!

read your daily horoscope predictions for february 23 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಫೀಸ್‌ನಲ್ಲಿ ಬಾಸ್‌ನ ಕಿರಿಕಿರಿಯಿಂದ ದಿನಪೂರ್ತಿ ಟೆನ್ಷನ್‌!

Catton Candy contain cancer Will there be a ban in Karnataka
ಬೆಂಗಳೂರು2 days ago

cotton candy Ban : ಕರ್ನಾಟಕದಲ್ಲಿ ಬ್ಯಾನ್‌ ಆಗುತ್ತಾ ಬಾಂಬೆ ಮಿಠಾಯಿ; ಕ್ಯಾನ್ಸರ್​​ ಕಾರಕ ವಿಷ ಪತ್ತೆ!

Swarnavalli Mutt appoints successor ceremony
ಕರ್ನಾಟಕ2 days ago

Swarnavalli Mutt: ಸ್ವರ್ಣವಲ್ಲೀ ಶ್ರೀಗಳ ಶಿಷ್ಯ ಸ್ವೀಕಾರ ಸಂಪನ್ನ; ಇಲ್ಲಿದೆ ಲೈವ್‌ ವಿಡಿಯೊ

read your daily horoscope predictions for february 21 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಸಂಗಾತಿಯ ವರ್ತನೆಯು ಕೋಪ, ಮುಜುಗರವನ್ನುಂಟು ಮಾಡುತ್ತೆ!

read your daily horoscope predictions for february 20 2024
ಭವಿಷ್ಯ4 days ago

Dina Bhavishya : ಈ ದಿನ ಆತುರದಲ್ಲಿ ಈ ರಾಶಿಯವರು ಯಾವ ತೀರ್ಮಾನವನ್ನು ಮಾಡ್ಬೇಡಿ!

ಟ್ರೆಂಡಿಂಗ್‌