Site icon Vistara News

BJP Manifesto: ಯುಸಿಸಿ, ಒಂದು ಚುನಾವಣೆ, ವಿಶ್ವಸಂಸ್ಥೆ ಕಾಯಂ ಸ್ಥಾನ; ಮೋದಿ ಗ್ಯಾರಂಟಿಗಳ ಪಟ್ಟಿ ಇಲ್ಲಿದೆ

BJP Manifesto

BJP Manifesto: Big Focus On UCC Implementation, One Nation One Poll, Highlights Here

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಜನರ ವಿಶ್ವಾಸ ಗಳಿಸಿ ಹ್ಯಾಟ್ರಿಕ್‌ ಸಾಧಿಸುವ ಉತ್ಸಾಹದಲ್ಲಿರುವ ಬಿಜೆಪಿಯು ಪ್ರಣಾಳಿಕೆ (BJP Manifesto) ಬಿಡುಗಡೆಗೊಳಿಸಿದೆ. ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಸಂಕಲ್ಪ ಪತ್ರವನ್ನು (BJP Sankalp Patra) ಬಿಡುಗಡೆ ಮಾಡಲಾಗಿದೆ. ಅದರಲ್ಲೂ, ರೈತರು, ಬಡವರು, ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭರ್ಜರಿ ಕೊಡುಗೆ ಘೋಷಿಸಿದ್ದಾರೆ. ಏಕರೂಪ ನಾಗರಿಕ ಸಂಹಿತೆ, ಒಂದು ದೇಶ, ಒಂದು ಚುನಾವಣೆ ಜಾರಿ ಸೇರಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ಹಾಗಾದರೆ, ಬಿಜೆಪಿ ಪ್ರಣಾಳಿಕೆಯಲ್ಲಿ ಏನೇನಿದೆ? ಬಡವರು, ಯುವಕರು, ಮಹಿಳೆಯರು ಹಾಗೂ ರೈತರಿಗೆ ಕೇಂದ್ರ ಸರ್ಕಾರ ಘೋಷಿಸಿದ ಕೊಡುಗೆಗಳು ಏನು? ಇಲ್ಲಿದೆ ಮಾಹಿತಿ.

ಏಕರೂಪ ನಾಗರಿಕ ಸಂಹಿತೆ ಜಾರಿ

ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೊಳಿಸಲಾಗುವುದು ಎಂಬುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದೆ. “ಸಂವಿಧಾನದ 44ನೇ ವಿಧಿಯು ಏಕರೂಪ ನಾಗರಿಕ ಸಂಹಿತೆಯನ್ನು ಮೂಲಭೂತ ನಿರ್ದೇಶನ ಎಂಬುದಾಗಿ ತಿಳಿಸಿದೆ. ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗದ ಹೊರತು ಲಿಂಗ ಸಮಾನತೆ ಸಾಧ್ಯವಿಲ್ಲ ಎಂಬುದು ಬಿಜೆಪಿ ತತ್ವವಾಗಿದೆ. ಮಹಿಳೆಯರ ರಕ್ಷಣೆ ಸೇರಿ ಹಲವು ರೀತಿಯ ಸುಧಾರಣೆಗಾಗಿ ಬಿಜೆಪಿಯು ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುತ್ತದೆ” ಎಂದು ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಬಿಜೆಪಿ ಪ್ರಣಾಳಿಕೆಯ ಪ್ರತಿ

ಒಂದು ದೇಶ, ಒಂದು ಚುನಾವಣೆ

ದೇಶದಲ್ಲಿ ಈಗಾಗಲೇ ಒಂದು ದೇಶ, ಒಂದು ಚುನಾವಣೆ ನಡೆಸುವ ಕುರಿತು ಪರ ಹಾಗೂ ವಿರೋಧಗಳ ಚರ್ಚೆ ನಡೆಯುತ್ತಿದೆ. ಹಣ, ಸಮಯ ಉಳಿಸುವ ದಿಸೆಯಲ್ಲಿ ದೇಶಾದ್ಯಂತ ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ನಡೆಸುವ ಚಿಂತನೆಗಳು ಮುನ್ನೆಲೆಗೆ ಬರುತ್ತಿವೆ. ಇದರ ಬೆನ್ನಲ್ಲೇ, ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ತಜ್ಞರ ಸಮಿತಿ ರಚಿಸಿ, ಸಮಿತಿಯ ಶಿಫಾರಸುಗಳೊಂದಿಗೆ ಒಂದು ದೇಶ, ಒಂದು ಚುನಾವಣೆ ಯೋಜನೆ ಜಾರಿಗೊಳಿಸಲಾಗುವುದು ಎಂಬುದಾಗಿ ಬಿಜೆಪಿಯು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.

ವಿಶ್ವಸಂಸ್ಥೆಯಲ್ಲಿ ಕಾಯಂ ಸದಸ್ಯತ್ವ

ವಿಶ್ವಸಂಸ್ಥೆಯ ಕಾಯಂ ಸದಸ್ಯ ರಾಷ್ಟ್ರಗಳ ಸಾಲಿಗೆ ಭಾರತವನ್ನೂ ಸೇರಿಸಲು ಶ್ರಮಿಸಲಾಗುವುದು ಎಂಬುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ತಿಳಿಸಿದೆ. “ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಕಾಯಂ ಸದಸ್ಯ ರಾಷ್ಟ್ರವಾಗಿ ಭಾರತ ಹೊರಹೊಮ್ಮಲು ಹೆಚ್ಚಿನ ಆದ್ಯತೆ ನೀಡಲಾಗುವುದು” ಎಂದು ಪ್ರಣಾಳಿಕೆ ತಿಳಿಸಿದೆ.

ಪ್ರಣಾಳಿಕೆಯ ಪ್ರಮುಖ ಘೋಷಣೆಗಳು

ಇದನ್ನೂ ಓದಿ: BJP Manifesto: ಬಿಜೆಪಿ ಪ್ರಣಾಳಿಕೆ; ರೈತನಿಗೆ ಮೊದಲ ಪ್ರತಿ ನೀಡಿದ ಮೋದಿ, 14 ಗ್ಯಾರಂಟಿ ಘೋಷಣೆ

Exit mobile version