Site icon Vistara News

Ram Navami: ಬಂಗಾಳದಲ್ಲಿ ರಾಮನವಮಿ ಮೆರವಣಿಗೆ ವೇಳೆ ಸ್ಫೋಟ, ಹಿಂದುಗಳಿಗೆ ಕಲ್ಲೇಟು!

Ram Navami

Blast in West Bengal's Murshidabad during Ram Navami procession, one person injured

ಕೋಲ್ಕೊತಾ: ಪಶ್ಚಿಮ ಬಂಗಾಳದಲ್ಲಿ (West Bengal) ಬುಧವಾರ (ಏಪ್ರಿಲ್‌ 17) ರಾಮನವಮಿ (Ram Navami) ಮೆರವಣಿಗೆ ವೇಳೆ ಸ್ಫೋಟ ಸಂಭವಿಸಿದ್ದು, ಮೆರವಣಿಗೆ ನಡೆಸುವವರ ಮೇಲೆ ಕಲ್ಲುತೂರಾಟವನ್ನೂ ನಡೆಸಲಾಗಿದೆ. ಇದರಿಂದ ಹಲವರು ಗಾಯಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಇನ್ನು ಶಂಕಾಸ್ಪದ ಸ್ಫೋಟ, ಕಲ್ಲುತೂರಾಟ ಸೇರಿ ಹಲವು ರೀತಿಯಲ್ಲಿ ಹಿಂಸಾಚಾರ ಭುಗಿಲೆದ್ದ ಕಾರಣ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್‌ ನಡೆಸಿದರು. ಅಶ್ರುವಾಯು ಮೂಲಕ ಜನರನ್ನು ಚದುರಿಸಲು ಯತ್ನಿಸಿದರು.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿರುವ ಶಕ್ತಿಪುರ ಪ್ರದೇಶದಲ್ಲಿ ಸಾವಿರಾರು ಹಿಂದುಗಳು ರಾಮನವಮಿ ಮೆರವಣಿಗೆ ನಡೆಸುತ್ತಿದ್ದರು. ಆದರೆ, ಇದೇ ವೇಳೆ ಚಾವಣಿ ಮೇಲೆ ನಿಂತು ಒಂದಷ್ಟು ದುಷ್ಕರ್ಮಿಗಳು ಕಲ್ಲುತೂರಾಟ ಮಾಡಿದ್ದಾರೆ. ಮುಸ್ಲಿಮರೇ ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕಲ್ಲು ತೂರಾಟ ನಡೆಸುತ್ತಲೇ ಹಿಂದುಗಳು ಕೂಡ ಆಕ್ರೋಶ ವ್ಯಕ್ತಪಡಿಸಿದರು. ಇವರು ಕೂಡ ಕಲ್ಲು ತೂರಾಟ ಮಾಡಿದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಹಿಂಸಾಚಾರದ ವೇಳೆ ಹಲವರು ಗಾಯಗೊಂಡಿದ್ದು, ಅವರನ್ನು ಮುರ್ಷಿದಾಬಾದ್‌ ಮೆಡಿಕಲ್‌ ಕಾಲೇಜು ಹಾಗೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಹಿಂಸಾಚಾರವನ್ನು ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಖಂಡಿಸಿದ್ದಾರೆ. “ಜಿಲ್ಲಾಡಳಿತದಿಂದ ಅನುಮತಿ ಪಡೆದೇ ರಾಮನವಮಿ ಮೆರವಣಿಗೆ ನಡೆಸಲಾಗುತ್ತಿತ್ತು. ಶಾಂತಿಯುತವಾಗಿಯೇ ಮೆರವಣಿಗೆ ನಡೆಸಲಾಗುತ್ತಿತ್ತು. ಆಗ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಆದರೆ, ಪೊಲೀಸರು ದುಷ್ಕರ್ಮಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಬದಲು ರಾಮ ಭಕ್ತರ ಮೇಲೆಯೇ ಲಾಠಿ ಚಾರ್ಜ್‌ ಮಾಡಿದ್ದಾರೆ. ಆ ಮೂಲಕ ರಾಮನವಮಿ ಯಾತ್ರೆಯನ್ನು ಮೊಟಕುಗೊಳಿಸಿದ್ದಾರೆ” ಎಂಬುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷವೂ ಹಿಂಸಾಚಾರ ನಡೆದಿತ್ತು

ಪಶ್ಚಿಮ ಬಂಗಾಳದಲ್ಲಿ ಕಳೆದ ವರ್ಷವೂ ರಾಮನವಮಿ ಮೆರವಣಿಗೆ ವೇಳೆ ಕಲ್ಲತೂರಾಟ ನಡೆದಿತ್ತು. ಪಶ್ಚಿಮ ಬಂಗಾಳದ ಹೌರಾದಲ್ಲಿ ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಸುಮಾರು 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಕಲ್ಲು ತೂರಾಟ, ಅಂಗಡಿ-ಮುಂಗಟ್ಟುಗಳ ಮೇಲೆ ದಾಳಿ ಸೇರಿ ಹಲವು ರೀತಿಯಲ್ಲಿ ಹಿಂಸಾಚಾರ ನಡೆಸಲಾಗಿತ್ತು. ಶಿಬ್‌ಪುರವೊಂದರಲ್ಲಿಯೇ ಪೊಲೀಸರು 36 ಜನರನ್ನು ಬಂಧಿಸಿದ್ದರು. “ಸೂಕ್ಷ್ಮ ಪ್ರದೇಶಗಳಲ್ಲಿ ರಾಮನವಮಿ ಮೆರವಣಿಗೆ ನಡೆಸುವುದೇ ತಪ್ಪು” ಎಂದು ಸಿಎಂ ಮಮತಾ ಬ್ಯಾನರ್ಜಿ ಅವರು ಬಳಿಕ ಹೇಳಿದ್ದರು.

ಇದನ್ನೂ ಓದಿ: Bharat Jodo Nyay Yatra: ಬಂಗಾಳದಲ್ಲಿ ರಾಹುಲ್‌ ಗಾಂಧಿ ಸಂಚರಿಸುತ್ತಿದ್ದ ವಾಹನದ ಮೇಲೆ ಕಲ್ಲು ತೂರಾಟ

Exit mobile version