ಮಹಾರಾಷ್ಟ್ರ: ಭೀಕರ ಗಾಳಿಗೆ ದೋಣಿಯಿಂದು ಮಗುಚಿ(Boat Capsizes) ಬಿದ್ದಿದ್ದು, ದೋಣಿಯಲ್ಲಿದ್ದ ಆರು ಜನ ನೀರುಪಾಲಾಗಿರುವ ದಾರುಣ ಘಟನೆ ಮಹಾರಾಷ್ಟ್ರದ (Maharastra) ಪುಣೆಯಲ್ಲಿ ನಡೆದಿದೆ. ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ದುರ್ಘಟನೆ ಸಂಭವಿಸಿದ್ದು, ಇಬ್ಬರು ಪುಟ್ಟ ಮಕ್ಕಳು ಸೇರಿ ಆರು ಮಂದಿ ಕಣ್ಮರೆ ಆಗಿದ್ದಾರೆ. ನೀರು ಪಾಲಾಗಿರುವ ಆರು ಮಂದಿಗಾಗಿ ಶೋಧ ಕಾರ್ಯಾಚರಣೆ ಕೈಗೆತ್ತಿಕೊಳ್ಳಲಾಗಿದೆ.
ಘಟನೆ ವಿವರ:
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ದೋಣಿ (Boat) ಮುಗುಚಿ 6 ಮಂದಿ ನೀರು ಪಾಲಾಗಿದ್ದಾರೆ. ಉಜ್ಜನಿ ಜಲಾಶಯದ ಹಿನ್ನೀರಿನಲ್ಲಿ ಕುಟುಂಬಸ್ಥರು ದೋಣಿ ವಿಹಾರಕ್ಕೆ ತೆರಳಿದ್ದರು. ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಉಜ್ಜನಿ ಜಲಾಶಯದಲ್ಲಿ ಗೋಕುಳ ಜಾಧವ್(30) ಕೋಮಲ್ ಜಾಧವ್(26) ಶುಭ ಜಾಧವ್(1) ಮಾಹಿ ಜಾಧವ್(3) ನೀರು ಪಾಲಾಗಿದ್ದಾರೆ. ಇನ್ನೂ ಅದೇ ದೋಣಿಯಲ್ಲಿ ಮತ್ತಿಬ್ಬರು ವಿಹಾರಿಗಳು ಸಹ ಪಯಣಿಸುತ್ತಿದ್ದು, ಅವರೂ ನೀರು ಪಾಲಾಗಿದ್ದಾರೆ ಎನ್ನಲಾಗಿದೆ.
Search, rescue operation underway as boat capsizes in Pune's Ujani dam, six missing
— ANI Digital (@ani_digital) May 22, 2024
Read @ANI Story | https://t.co/2wEmVod3Jj#Pune #UjaniDam #NDRF #boat pic.twitter.com/e9llesXXfH
ಆ ಇಬ್ಬರು ದುರ್ದೈವಿಗಳನ್ನು ಕುಗ್ಗಾಂವ್ ಗ್ರಾಮದ ಅನುರಾಗ್ ಅವಘಡೆ, ಗೌರವ್ ಡೋಂಗರೆ ಎಂದು ಗುರುತಿಸಲಾಗಿದೆ. ನೀರುಪಾಲಾಗಿರುವವರ ಹುಡುಕಾಟಕ್ಕೆ ರಾಷ್ತ್ರೀಯ ವಿಪತ್ತು ನಿರ್ವಹಣಾ ದಳ (NDRF) ತಂಡದ ಸಿಬ್ಬಂದಿ ಆಗಮಿಸಿದ್ದಾರೆ. ಸ್ಥಳೀಯ ಪೊಲೀಸರ ಸಹಾಯದೊಂದಿಗೆ ಎನ್ ಡಿ ಆರ್ ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಹುಡುಕಾಟ ಮುಂದುವರಿಸಿದ್ದಾರೆ.
ಇನ್ನು ನಿನ್ನೆ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ನೀರುಪಾಲಾಗಿರುವ ಆರು ಜನರು ಬದುಕಿರುವ ಸಾಧ್ಯತೆ ಬಹಳಷ್ಟು ಕಡಿಮೆ ಇದೆ. ಇದಾಗ್ಯೂ ಇದುವರೆಗೆ ಯಾರೊಬ್ಬರ ಶವ ಪತ್ತೆ ಆಗಿಲ್ಲ.
#Maharashtra #Indapur #boatcapsized in #UjaniDam @5Ndrf @NDRFHQ has commenced the search operations in #UjaniDam aftr boat carrying passengers have capsized. pic.twitter.com/W0Bt59d9s4
— Mayuresh Ganapatye (@mayuganapatye) May 22, 2024
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಸಮೀಪ ಸಮುದ್ರದ ಹಿನ್ನೀರಿನಲ್ಲೂ ಮೂರು ದಿನಗಳ ಹಿಂದೆ ಪ್ರವಾಸಿಗರ ಬೋಟ್ ಮಗುಚಿದ್ದು, 40 ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ಅಳಿವೆ ಸಂಗಮ ಸ್ಥಳದಿಂದ ತುಸು ದೂರದಲ್ಲಿ ಘಟನೆ (Tourist Boat Capsizes) ನಡೆದಿದ್ದು, ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ರಕ್ಷಣಾ ತಂಡದಿಂದ ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ.
ಮೂಡಂಗಿಯ ಗಣೇಶ, ರಮೇಶ ಎಂಬುವವರ ಪ್ರವಾಸಿ ಬೋಟ್ ಮಗುಚಿದ್ದು, ದೋಣಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಂಡಿದ್ದರಿಂದ ಬೋಟ್ ಮಗುಚಿದೆ. ಸಕಾಲಕ್ಕೆ ಕರಾವಳಿ ಕಾವಲು ಪಡೆ ಆಗಮಿಸಿ ರಕ್ಷಣೆ ಮಾಡಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದೆ.
ಇದನ್ನೂ ಓದಿ: Prashant Kishor: 3ನೇ ಅವಧಿಯ ಮೋದಿ ಸರ್ಕಾರದಿಂದ ಈ 4 ಕ್ರಾಂತಿಕಾರಕ ಬದಲಾವಣೆ; ಪ್ರಶಾಂತ್ ಕಿಶೋರ್ ಭವಿಷ್ಯ
ಮತ್ತೊಂದೆಡೆ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲಿನಲ್ಲಿ ನಡೆದಿದೆ. ಮುಡ್ಡಾಯಿಗುಡ್ಡೆ ಹರೀಶ್ ಪೂಜಾರಿ (48), ಹೃತೇಶ್ ಪೂಜಾರಿ (18) ಮೃತಪಟ್ಟವರು. ಮೀನು ಹಿಡಿಯಲೆಂದು ಉಬ್ಬರಬೈಲು ಕೆರೆಗೆ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮೀನಿಗೆ ಬಲೆ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರೂ ನೀರುಪಾಲಾಗಿದ್ದಾರೆ. ಕಾರ್ಕಳ ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.