ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರ ನಿವಾಸಕ್ಕೆ ಬಾಂಬ್ ದಾಳಿ ಮಾಡುವ ಕುರಿತು ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳಿಗೆ ಬೆದರಿಕೆ ಕರೆ ಬಂದಿದ್ದು, ಲಖನೌನಲ್ಲಿರುವ ಸಿಎಂ ಯೋಗಿ ನಿವಾಸದ ಸುತ್ತ ಭದ್ರತೆ ಹೆಚ್ಚಿಸಲಾಗಿದೆ.
ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳಿಗೆ ವ್ಯಕ್ತಿಯೊಬ್ಬ ಸಿಎಂ ಯೋಗಿ ನಿವಾಸದ ಸುತ್ತ ಬಾಂಬ್ ಇರಿಸಲಾಗಿದೆ ಎಂಬುದಾಗಿ ಮಾಹಿತಿ ನೀಡಿದ್ದಾನೆ. ಇದರಿಂದಾಗಿ, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಯು ನಿವಾಸದ ಸುತ್ತ ಭಾರಿ ತಪಾಸಣೆ ನಡೆಸಿದ್ದಾರೆ. ಇದಾದ ಬಳಿಕ ಯಾವುದೇ ಬಾಂಬ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.
ಆದಾಗ್ಯೂ, ಮುಂಜಾಗ್ರತಾ ದೃಷ್ಟಿಯಿಂದ ಯೋಗಿ ಆದಿತ್ಯನಾಥ್ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಹುಸಿ ಬಾಂಬ್ ಕರೆ ಮಾಡಿದವನ ಪತ್ತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕೆಲ ತಿಂಗಳ ಹಿಂದಷ್ಟೇ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ ಬಂದಿತ್ತು.
ಇದನ್ನೂ ಓದಿ: Suryakumar Yadav | ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ಮಾಡಿದ ಸೂರ್ಯಕುಮಾರ್ ಯಾದವ್