ನವದೆಹಲಿ:ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿರುವ ಶಾಲೆಗಳು, ವಿಮಾನ ನಿಲ್ದಾಣಗಳನ್ನು ಬಾಂಬಿಟ್ಟು ಸ್ಫೋಟಿಸುವ ಕುರಿತು ಕೆಲ ತಿಂಗಳಿಂದ ಬೆದರಿಕೆ ಕರೆಗಳು (Bomb Threat) ಬರುತ್ತಲೇ ಇವೆ. ನಿನ್ನೆಯಷ್ಟೇ ಮುಂಬೈನಲ್ಲಿರುವ ತಾಜ್ ಹೋಟೆಲ್ (Taj Hotel) ಹಾಗೂ ಛತ್ರಪತಿ ಶಿವಾಜಿ ಮಹಾರಾಜ ಇಂಟರ್‌ನ್ಯಾಷನಲ್ ವಿಮಾನ ನಿಲ್ದಾಣವನ್ನು (Chhatrapati Shivaji Maharaj International Airport) ಸ್ಫೋಟಿಸುವ ಕುರಿತು ಮುಂಬೈ ಪೊಲೀಸರಿಗೆ ಬೆದರಿಕೆ ಕರೆ ಬಂದಿತ್ತು. ಇದೀಗ ಇಂದು ಬೆಳ್ಳಂ ಬೆಳಗ್ಗೆ ಇಂಡಿಯೋ ವಿಮಾನ(Indigo Flight)ಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದೆ.
ಘಟನೆ ವಿವರ:
ದಿಲ್ಲಿಯಿಂದ ವಾರಣಾಸಿಗೆ ಪ್ರಯಾಣಿಸಬೇಕಾಗಿದ್ದ ಇಂಡಿಗೋ ಏರ್‌ಲೈನ್ಸ್‌ನ 6E2211 ವಿಮಾನಕ್ಕೆ ಮಂಗಳವಾರ ಬೆಳಗ್ಗೆಬಾಂಬ್ ಬೆದರಿಕೆ ಕರೆ ಬಂದಿತ್ತು. ಇನ್ನೇನು ಟೇಕ್ ಆಫ್ ಆಗಬೇಕಾಗಿದ್ದ ವಿಮಾನವನ್ನು ಪ್ರತ್ಯೇಕ ರನ್ ವೇ ಒಯ್ದು ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಎಲ್ಲ ಪ್ರಯಾಣಿಕರನ್ನು ಎಮರ್ಜೆನ್ಸಿ ಎಕ್ಸಿಟ್ ಬಾಗಿಲಿನಿಂದ ಸುರಕ್ಷಿತವಾಗಿ ಹೊರಗೆ ಕರೆದೊಯ್ಯಲಾಗಿದೆ. ಇನ್ನು ಬೆಳಗ್ಗೆ 5:35ಕ್ಕೆ ಹೊರಡಬೇಕಾಗಿದ್ದ ವಿಮಾನ ಇದಾಗಿತ್ತು ಎನ್ನಲಾಗಿದೆ.
#Watch | दिल्ली से वाराणसी जा रही #IndiGo की एक फ्लाइट में बम होने की सूचना मिलने के बाद यात्रियों को आपातकालीन द्वार से बाहर निकाला गया।@DelFireService | #bombthreat pic.twitter.com/yxMLsCYusc
— डीडी न्यूज़ (@DDNewsHindi) May 28, 2024
ಸದ್ಯ ಏರ್ಪೋರ್ಟ್ ಭದ್ರತಾ ಸಿಬ್ಬಂದಿ ದೆಹಲಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದೆ. ಇನ್ನು ವಿಮಾನದಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂಬುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ.
ಇನ್ನು ನಿನ್ನೆಯಷ್ಟೇ ಮುಂಬೈನ ಮುಂಬೈನಲ್ಲಿರುವ ತಾಜ್ ಹೋಟೆಲ್ ಹಾಗೂ ಛತ್ರಪತಿ ಶಿವಾಜಿ ಮಹಾರಾಜ ಇಂಟರ್‌ನ್ಯಾಷನಲ್ ವಿಮಾನ ನಿಲ್ದಾಣವನ್ನು ಸ್ಫೋಟಿಸುವ ಕುರಿತು ಮುಂಬೈ ಪೊಲೀಸರಿಗೆ ಬೆದರಿಕೆ ಕರೆ ಬಂದಿತ್ತು. ಹಾಗಾಗಿ, ಮುಂಬೈ ತಾಜ್ ಹೋಟೆಲ್ ಹಾಗೂ ವಿಮಾನ ನಿಲ್ದಾಣದ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.
“ಮುಂಬೈ ಪೊಲೀಸ್ ಕಂಟ್ರೋಲ್ ರೂಮ್‌ಗೆ ಅನಾಮಧೇಯ ವ್ಯಕ್ತಿಯಿಂದ ಕರೆ ಬಂದಿದೆ. ತಾಜ್ ಹೋಟೆಲ್ ಹಾಗೂ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಲಾಗಿದೆ. ಯಾವುದೇ ಕ್ಷಣದಲ್ಲಿ ಬೇಕಾದರೂ ಬ್ಲಾಸ್ಟ್ ಆಗಬಹುದು” ಎಂದಷ್ಟೇ ಹೇಳಿ ಕರೆ ಕಟ್ ಮಾಡಿದ್ದಾನೆ. ಇದಾದ ಬಳಿಕ ಪೊಲೀಸರು ಅಲರ್ಟ್ ಆಗಿದ್ದಾರೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ತಾಜ್ ಹೋಟೆಲ್ ಮೇಲೆ 26/11ರ ಮಾದರಿಯಲ್ಲಿ ದಾಳಿ ನಡೆಯುವ ಭೀತಿಯಿಂದ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು ಎನ್ನಲಾಗಿದೆ.
ಇದನ್ನೂ ಓದಿ:Physical Abuse: ಮಧ್ಯಪ್ರದೇಶದಲ್ಲೂ ಬುಲ್ಡೋಜರ್ ಅಸ್ತ್ರ; ವಿದ್ಯಾರ್ಥಿನಿ ಅತ್ಯಾಚಾರ ಆರೋಪಿಯ ಮನೆ ನೆಲಸಮ
ಬಾಂಬ್ ಬೆದರಿಕೆ ಕರೆ ಬರುತ್ತಲೇ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಯು ಹೋಟೆಲ್ ಹಾಗೂ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಎರಡೂ ಕಡೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಉತ್ತರ ಪ್ರದೇಶದಿಂದ ಕರೆ ಬಂದಿದೆ ಎಂಬುದು ತಿಳಿದುಬಂದಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ, ದೇಶದ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸಲಾಗುವುದು ಎಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿಗೆ ಬೆದರಿಕೆಯ ಮೇಲ್ ಬಂದಿತ್ತು. ಬೆಂಗಳೂರು, ದೆಹಲಿ, ಅಹಮದಾಬಾದ್, ಚೆನ್ನೈ ಸೇರಿ ಹಲವು ನಗರಗಳ ಶಾಲೆಗಳನ್ನೂ ಸ್ಫೋಟಿಸುವ ಬೆದರಿಕೆ ಕರೆಗಳು ಬಂದಿದ್ದವು. ಬಳಿಕ ನಕಲಿ ಬಾಂಬ್ ಬೆದರಿಕೆ ಎಂಬುದಾಗಿ ತಿಳಿದುಬಂದಿತ್ತು.