ನವ ದೆಹಲಿ : ದೇಶಾದ್ಯಂತ ಗುರುವಾರ (ಜನವರಿ 26ರಂದು) ಗಣರಾಜ್ಯೋತ್ಸವ (Republic Day) ಆಚರಣೆ ಮಾಡಲಾಯಿತು. ಅಂತೆಯೇ ಗಡಿಯಲ್ಲೂ ಭಾರತದ ಗಡಿ ಭದ್ರತಾ ಸಿಬ್ಬಂದಿಗಳು ಸಂಭ್ರಮಾಚರಣೆ ನಡೆಸಿದರು. ಇದೇ ವೇಳೆ ಭಾರತ ಹಾಗೂ ಪಾಕಿಸ್ತಾನದ (India-Pak soldiers) ಸೇನಾ ಸಿಬ್ಬಂದಿಗಳು ಪರಸ್ಪರ ಸಿಹಿ ಹಂಚಿಕೊಂಡು ಖುಷಿ ಹಂಚಿಕೊಂಡರು.
ಜಮ್ಮು ಕಾಶ್ಮೀರದ ಆರ್ಎಸ್ಪುರ ಪ್ರದೇಶದಲ್ಲಿ ಪಾಕಿಸ್ತಾನ ಹಾಗೂ ಭಾರತದ ಸೇನಾ ಸಿಬ್ಬಂದಿಗಳು ಸಿಹಿ ಹಂಚಿಕೊಂಡರು. ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೂ ಸಿಹಿ ಸೈನಿಕರಿಗೆ ಸಿಹಿ ವಿತರಣೆ ಮಾಡಿದರು. ಈ ಮಾಹಿತಿಯನ್ನು ಅವರು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ : ವಿಸ್ತಾರ TOP 10 NEWS : ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮದಿಂದ, ಹಾಸನದಲ್ಲಿ ʼದಳʼ ತಳಮಳವರೆಗಿನ ಪ್ರಮುಖ ಸುದ್ದಿಗಳಿವು
ಇದೇ ವೇಳೆ ಭಾರತ ಹಾಗೂ ಬಾಂಗ್ಲಾದೇಶದ ಗಡಿಭಾಗದ ಸಿಲಿಗುರಿಯ ಫುಲ್ಬಾರಿ ಪ್ರದೇಶದಲ್ಲೂ ಬಿಎಸ್ಎಫ್ ಹಾಗೂ ಬಾರ್ಡರ್ ಗಾರ್ಡ್ ಬಾಂಗ್ಲಾದೇಶ್ ಸಿಬ್ಬಂದಿಗಳು ಸಿಹಿ ಹಂಚಿಕೊಂಡರು. ಈ ಬಗ್ಗೆ ಮಾತನಾಡಿದ 176ನೇ ಬೆಟಾಲಿಯನ್ನ ಕಂಪನಿ ಕಮಾಂಡರ್ ಶೈಲೇಂದ್ರ ಸಿಂಗ್, ಎರಡೂ ದೇಶಗಳ ನಡುವಿನ ಸಂಬಂಧ ವೃದ್ಧಿಗಾಗಿ ಸಿಹಿ ಹಂಚಿಕೊಂಡಿದ್ದೇವೆ ಎಂದು ಹೇಳಿದರು.