ಚೆನ್ನೈ: ಇತ್ತೀಚೆಗೆ ಬಹುಜನ ಸಮಾಜ ಪಕ್ಷದ (BSP President) ತಮಿಳುನಾಡು ಘಟಕದ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್(K Armstrong) ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ. ತಿರುವೆಂಕಟಮ್ ಎಂಬಾತ ಪೊಲೀಸ್ ಮಹಜರು ವೇಳೆ ತಪ್ಪಿಸಿಕೊಂಡು ಓಡಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆತ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ.
ತನಿಖೆಯ ಭಾಗವಾಗಿ ಉತ್ತರ ಚೆನ್ನೈನಲ್ಲಿರುವ ಘಟನಾ ಸ್ಥಳಕ್ಕೆ ತಿರುವೆಂಕಟಮ್‌ನನ್ನು ಕರೆದೊಯ್ಯಲಾಗಿತ್ತು. ಈ ವೇಳೆ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆತ ತಪ್ಪಿಸಿಕೊಂಡು ಓಡಲು ಪ್ರಯತ್ನಿಸಿದ್ದಾನೆ. ಆಗ ಪೊಲೀಸರು ಆತನಿಗೆ ಗುಂಡು ಹಾರಿಸಿದ್ದಾರೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದಾನೆ. ಇನ್ನು ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣದ 11 ಜನ ಆರೋಪಿಗಳಲ್ಲಿ ತಿರುವೆಂಕಟಂ ಕೂಡ ಒಬ್ಬರು. ಕೆಲವು ದಿನಗಳ ಹಿಂದೆಯಷ್ಟೇ ಕೋರ್ಟ್ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿತ್ತು.
ಇನ್ನು ಆರ್ಮ್‌ಸ್ಟ್ರಾಂಗ್ ಹತ್ಯೆಯ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅದನ್ನೂ ಪೊಲೀಸರು ರಿಲೀಸ್ ಮಾಡಿದ್ದಾರೆ.
Chennai City police released the CCTV footage of #ArmstrongBSP,
— Vinodh Arulappan (@VinodhArulappan) July 14, 2024
after a prime suspect Thiruvenkadam
who was involved in the murder was shot dead in a police encounter.
Earlier, the local residents claimed that the CCTV adjacent to the murder spot was malfunction pic.twitter.com/Ib0kUXItMj
ರಾಜಕೀಯ ಹತ್ಯೆ, ಹಿಂಸಾಚಾರ, ಬೇರೆ ರಾಜಕೀಯ ಪಕ್ಷದ ನಾಯಕರ ಮೇಲೆ ಹಲ್ಲೆಗಳು ಕೇರಳ ಹಾಗೂ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಲೇ ಇರುತ್ತವೆ. ಈಗ ಇಂತಹ ರಾಜಕೀಯ ದ್ವೇಷದ ಹತ್ಯೆಗಳು ತಮಿಳುನಾಡಿಗೂ ಕಾಲಿಟ್ಟಿವೆ. ಇದಕ್ಕೆ ನಿದರ್ಶನ ಎಂಬಂತೆ, ಆರ್ಮ್‌ಸ್ಟ್ರಾಂಗ್ (Armstrong) ಅವರನ್ನು ಹತ್ಯೆ ಮಾಡಲಾಗಿತ್ತು. ಚೆನ್ನೈನಲ್ಲಿರುವ (Chennai) ಅವರ ನಿವಾಸದ ಬಳಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು.
ಚೆನ್ನೈನ ಪೆರಂಬೂರ್‌ನಲ್ಲಿರುವ ಸದಯಪ್ಪನ್ ಸ್ಟ್ರೀಟ್‌ನಲ್ಲಿರುವ ಅವರ ನಿವಾಸದ ಬಳಿ ಜುಲೈ 5ರಂದು ಸಂಜೆ 7.30ರ ವೇಳೆಗೆ ಸುಮಾರು 6 ಜನರ ಗ್ಯಾಂಗ್ ದಾಳಿ ಮಾಡಿದೆ. ಮಾರಕಾಸ್ತ್ರಗಳ ಸಮೇತ ಆಗಮಿಸಿದ ಅವರು ದಾಳಿ ನಡೆಸಿ, ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆರ್ಮ್‌ಸ್ಟ್ರಾಂಗ್ ಅವರನ್ನು ನಗರದಲ್ಲಿರುವ ಥೌಸಂಡ್ ಲ್ಯಾಂಪ್ಸ್ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು
ತಮಿಳುನಾಡು ಬಿಎಸ್‌ಪಿ ಘಟಕದ ಅಧ್ಯಕ್ಷರಾಗಿದ್ದ ಆರ್ಮ್‌ಸ್ಟ್ರಾಂಗ್ ಅವರು ಇದಕ್ಕೂ ಮೊದಲು ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನ ಕೌನ್ಸಿಲರ್ ಆಗಿದ್ದರು. ಚುನಾವಣಾ ರಾಜಕೀಯದಲ್ಲಿ ಹೆಚ್ಚು ತೊಡಗಿಸಿಕೊಳ್ಳದ ಆರ್ಮ್‌ಸ್ಟ್ರಾಂಗ್ ಅವರು ರಾಜ್ಯದಲ್ಲಿ ದಲಿತರ ಪರ ಚಿಂತಕ, ಅಂಬೇಡ್ಕರ್‌ವಾದಿ ಎಂಬುದಾಗಿಯೇ ಹೆಚ್ಚು ಗುರುತಿಸಿಕೊಂಡಿದ್ದರು. ಹಾಗಾಗಿ, ಆರ್ಮ್‌ಸ್ಟ್ರಾಂಗ್ ಅವರು ರಾಜಕೀಯದಲ್ಲಿ ಹೆಚ್ಚಿನ ಶತ್ರುಗಳನ್ನು ಹೊಂದಿರಲಿಲ್ಲ. ಇಷ್ಟಾದರೂ ಅವರ ಮೇಲೆ ಹಲ್ಲೆ ನಡೆಸಿ, ಹತ್ಯೆಗೈಯಲಾಗಿದೆ.
ಆರ್ಮ್‌ಸ್ಟ್ರಾಂಗ್ ಜತೆಗೆ ಇನ್ನಿಬ್ಬರ ಮೇಲೆಯೂ ಹಲ್ಲೆ ನಡೆದಿದ್ದು, ಅವರು ಗಾಯಗೊಂಡಿದ್ದಾರೆ. ದಾಳಿ ಮಾಡಿದ ಆರು ಮಂದಿಯ ಕುರಿತು ಇದುವರೆಗೆ ಪೊಲೀಸರಿಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದಾಗ್ಯೂ, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನೂನ ಓದಿ: World Record: ಒಂದೇ ದಿನ ಬರೋಬ್ಬರಿ 11 ಲಕ್ಷ ಗಿಡ ನೆಟ್ಟು ವಿಶ್ವ ದಾಖಲೆ ಬರೆದ ಇಂದೋರ್; ದೇಶದ ಸ್ವಚ್ಛ ನಗರಕ್ಕೆ ಇನ್ನೊಂದು ಗರಿ