ಕೇಂದ್ರ ಸರ್ಕಾರ 2023-24ನೇ ಸಾಲಿನ ಕೇಂದ್ರ ಬಜೆಟ್ (Budget 2023 )ಬಜೆಟ್ ಮಂಡನೆ ಇಂದು ಬೆಳಗ್ಗೆ 11 ಗಂಟೆಯಿಂದ ನಡೆಯುತ್ತಿದ್ದು, ವಿತ್ತೀಯ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನಾ ಭಾಷಣ ಪ್ರಾರಂಭಿಸಿದ್ದಾರೆ. 2024ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಇದು ಪೂರ್ಣ ಪ್ರಮಾಣದ ಕೊನೆಯ ಬಜೆಟ್ ಆಗಿರುವುದರಿಂದ ಭಾರಿ ಕುತೂಹಲ ಮೂಡಿಸಿದೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರಕ್ಕಿದು 11ನೇ ಬಜೆಟ್ ಆಗಿದೆ. ಜನಸಾಮಾನ್ಯರ ನಿರೀಕ್ಷೆಗಳು ಹಲವು ಇವೆ. ಪ್ರಸ್ತುತ ಬಜೆಟ್ನಲ್ಲಿ ಕೇಂದ್ರ ಸರ್ಕಾರ ಘೋಷಿಸುವ ಅಂಶಗಳ ಕ್ಷಣಕ್ಷಣದ ಮಾಹಿತಿ ಇಲ್ಲಿದೆ..
ಉದ್ಯೋಗ ಸೃಷ್ಟಿಗೆ 10 ಲಕ್ಷ ಕೋಟಿ ರೂ.
ನಿರುದ್ಯೋಗ ಪ್ರಮಾಣ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ಕೊಡುವುದಾಗಿ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಈ ಕಾರಣಕ್ಕೆ 10 ಲಕ್ಷ ಕೋಟಿ ರೂಪಾಯಿ ಮೀಸಲಿಡುವುದಾಗಿ ಘೋಷಿಸಿದರು.
ಉತ್ತರ ಕರ್ನಾಟಕಕ್ಕೆ ಬಂಪರ್
ಉತ್ತರ ಕರ್ನಾಟಕದ ಏಳೆಂಟು ಜಿಲ್ಲೆಗಳಿಗೆ ನೀರಾವರಿ ವ್ಯವಸ್ಥೆ ಕಲ್ಪಿಸುವ ಮಹತ್ವದ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ. ಬರಗಾಲ ಪೀಡಿತ ಕರ್ನಾಟಕದ ಪ್ರದೇಶಗಳ ಅನುಕೂಲಕ್ಕಾಗಿ ಈ ಕ್ರಮ ಕೈಗೊಂಡಿದ್ದಾಗಿ ಅವರು ತಿಳಿಸಿದರು.
ಕೃಷಿ ಸಾಲದ ಟಾರ್ಗೆಟ್ ಏರಿಕೆ
ಕೃಷಿ ಸಾಲ ಗುರಿಯನ್ನು 20 ಲಕ್ಷ ಕೋಟಿ ರೂಪಾಯಿಗೆ ಏರಿಸುವುದಾಗಿ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ. ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆ ರೂಪಿಸಿದ್ದಾಗಿ ಸಚಿವೆ ಹೇಳಿದರು.
The agricultural credit target will be increased to Rs 20 lakh crores with a focus on animal husbandry, dairy and fisheries: FM Sitharaman pic.twitter.com/A8rOgufZK2
— ANI (@ANI) February 1, 2023
2023-2024ನೇ ಸಾಲಿನ ಬಜೆಟ್ನ ಸಪ್ತ ಸೂತ್ರಗಳು
1. ಒಳಗೊಳ್ಳುವಿಕೆಯ ಅಭಿವೃದ್ಧಿ
2. ಕೊನೆಯ ವ್ಯಕ್ತಿಯವರೆಗೂ ತಲುಪುವಿಕೆ
3. ಮೂಲಸೌಕರ್ಯ ಹಾಗೂ ಹೂಡಿಕೆ
4. ಸಾಮರ್ಥ್ಯವನ್ನು ಬಳಸಿಕೊಳ್ಳುವಿಕೆ
5. ಹಸಿರು ಬೆಳವಣಿಗೆ
6. ಯುವ ಶಕ್ತಿ
7. ಹಣಕಾಸು ಕ್ಷೇತ್ರ
ಅಮೃತ ಕಾಲದ ಬಜೆಟ್ ಎಂದ ನಿರ್ಮಲಾ ಸೀತಾರಾಮನ್
ಸ್ವಾತಂತ್ರ್ಯ ಬಂದು 75ನೇ ವರ್ಷದಲ್ಲಿ ಈ ಬಜೆಟ್ ಮಂಡನೆಯಾಗುತ್ತಿದ್ದು, ಪ್ರಸಕ್ತ ವರ್ಷದ್ದು ‘ಅಮೃತ ಕಾಲ’ದ ಬಜೆಟ್ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದರು.