ಕೇಂದ್ರ ಸರ್ಕಾರ 2023-24ನೇ ಸಾಲಿನ ಕೇಂದ್ರ ಬಜೆಟ್ (Budget 2023 )ಬಜೆಟ್ ಮಂಡನೆ ಇಂದು ಬೆಳಗ್ಗೆ 11 ಗಂಟೆಯಿಂದ ನಡೆಯುತ್ತಿದ್ದು, ವಿತ್ತೀಯ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನಾ ಭಾಷಣ ಪ್ರಾರಂಭಿಸಿದ್ದಾರೆ. 2024ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಇದು ಪೂರ್ಣ ಪ್ರಮಾಣದ ಕೊನೆಯ ಬಜೆಟ್ ಆಗಿರುವುದರಿಂದ ಭಾರಿ ಕುತೂಹಲ ಮೂಡಿಸಿದೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರಕ್ಕಿದು 11ನೇ ಬಜೆಟ್ ಆಗಿದೆ. ಜನಸಾಮಾನ್ಯರ ನಿರೀಕ್ಷೆಗಳು ಹಲವು ಇವೆ. ಪ್ರಸ್ತುತ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಘೋಷಿಸುವ ಅಂಶಗಳ ಕ್ಷಣಕ್ಷಣದ ಮಾಹಿತಿ ಇಲ್ಲಿದೆ..
ಬಜೆಟ್‌ಗೆ ಮುನ್ನ ಎನ್ ಎಸ್‌ಇ ಸೂಚ್ಯಂಕ ನಿಫ್ಟಿ 130 ಅಂಕ ಜಿಗಿತ, 17,750ಕ್ಕೆ ಏರಿಕೆ
ಷೇರು ಮಾರುಕಟ್ಟೆ ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 400 ಅಂಕ ಜಿಗಿತ, ಗರಿಗೆದರಿದ ಬಜೆಟ್ ನಿರೀಕ್ಷೆ, ಐಎಚ್‌ಸಿಎಲ್, ಐಸಿಐಸಿಐ ಬ್ಯಾಂಕ್ ಷೇರು ದರ 5% ತನಕ ಏರಿಕೆ
ಆರ್ಥಿಕ ಸಮೀಕ್ಷೆ ಪ್ರಕಾರ 2023ರಲ್ಲಿ ಸಾಲದ ಬಡ್ಡಿ ದರ ಏರುಗತಿಯಲ್ಲಿಯೇ ಮುಂದುವರಿಯಲಿದೆ, ಹಣದುಬ್ಬರ ಇಳಿಕೆಗೆ ಬಜೆಟ್ ಆದ್ಯತೆ ನಿರೀಕ್ಷೆ
ಕೇಂದ್ರ ಬಜೆಟ್ ಮಂಡನೆಗೆ ಪೂರ್ವಭಾವಿಯಾಗಿ ಕೇಂದ್ರ ಸಚಿವ ಸಂಪುಟ ಸಭೆ ಆರಂಭ, ಬೆಳಗ್ಗೆ 11 ಗಂಟೆಗೆ ಹಣಕಾಸು ಸಚಿವರಿಂದ 2023-24 ಸಾಲಿನ ಆಯವ್ಯಯ ಮಂಡನೆ
ಮೇನಲ್ಲಿ ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಕರ್ನಾಟಕಕ್ಕೆ ಕೇಂದ್ರ ಬಜೆಟ್‌ನಲ್ಲಿ ಆದ್ಯತೆ ಸಿಗುವ ನಿರೀಕ್ಷೆ