Site icon Vistara News

Budget 2024: ರೈಲ್ವೆಗೆ 2.4 ಲಕ್ಷ ಕೋಟಿ ರೂ.! ಇತರ ನಗರಗಳಿಗೂ ನಮೋ, ಮೆಟ್ರೋ ರೈಲು!

Budget 2024, RS 2 lakh crore for Railway

railway

ನವದೆಹಲಿ: ಮೆಟ್ರೋ ರೈಲು (Metro Rail) ಮತ್ತು ನಮೋ ಭಾರತ್ ರೈಲು (Namo Bharat Rail) ಸೇವೆಯನ್ನು ಇತರ ಎಲ್ಲ ನಗರಗಳಿಗೂ ವಿಸ್ತರಿಸುವ ಬಗ್ಗೆ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ (Niramla Sitharaman) ಅವರು ಘೋಷಣೆ ಮಾಡಿದ್ದಾರೆ. ಹಾಗೆಯೇ, ವಂದೇ ಭಾರತ್ ಹಂತಕ್ಕೆ 40 ಸಾವಿರ ಬೋಗಿಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆಯೂ ವಾಗ್ದಾನ ಮಾಡಲಾಗಿದೆ. ಇದರ ಜೊತೆಗೆ, ಮೂರು ಪ್ರಮುಖ ಆರ್ಥಿಕ ರೈಲ್ವೇ ಕಾರಿಡಾರ್ ಕಾರ್ಯಕ್ರಮಗಳನ್ನು ಘೋಷಣೆ ಮಾಡಲಾಗಿದೆ. ಅನುಷ್ಠಾನ-ಶಕ್ತಿ, ಬಂದರು ಸಂಪರ್ಕ, ಹೆಚ್ಚಿನ ಸಂಚಾರ ಸಾಂದ್ರತೆ ಮತ್ತು ಖನಿಜ ಮತ್ತು ಸಿಮೆಂಟ್ ಕಾರಿಡಾರ್ ಬಗ್ಗೆ ಪ್ರಕಟಿಸಲಾಗಿದೆ(budget 2024).

ದಾಖಲೆಯ ಮಟ್ಟದಲ್ಲಿ ಈ ಬಾರಿ ರೈಲ್ವೆಗೆ ಅನುದಾನವನ್ನು ಒದಗಿಸಲಾಗಿದೆ. 2024-25ನೇ ಸಾಲಿಗೆ ಕೇಂದ್ರ ಸರ್ಕಾರವು ರೈಲ್ವೆ ಇಲಾಖೆಗೆ 2.4 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ. ಈ ವರ್ಷ ರೈಲ್ವೆ ಇಲಾಖೆಯಿಂದ ಸಾಕಷ್ಟು ನಿರೀಕ್ಷೆ ಕೂಡ ಇಟ್ಟುಕೊಳ್ಳಲಾಗಿದೆ.

Budget 2024 : ರಕ್ಷಣೆ ಇಲಾಖೆಗೆ ಅತಿ ಹೆಚ್ಚು, ಕೃಷಿ ಕ್ಷೇತ್ರಕ್ಕೆ ಕಡಿಮೆ ಹಂಚಿಕೆ

2024ರ (Budget 2024) ಲೋಕಸಭಾ ಚುನಾವಣೆಗೆ ಮುಂಚಿತವಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಮಧ್ಯಂತರ ಬಜೆಟ್​ ಪ್ರಕಟಿಸಿದ್ದಾರೆ. 2024-25ನೇ ಸಾಲಿಗೆ ಭಾರತದ ಬಂಡವಾಳ ವೆಚ್ಚವನ್ನು ಶೇಕಡಾ 11 ರಷ್ಟು ಹೆಚ್ಚಿಸಿ 11.11 ಲಕ್ಷ ಕೋಟಿ ರೂ.ಗೆ ಅಥವಾ ಜಿಡಿಪಿಯ ಶೇಕಡಾ 3.4 ಕ್ಕೆ ಹೆಚ್ಚಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಇದೇ ವೇಳೆ ಅವರು ಇಲಾಖಾವಾರು ಬಜೆಟ್​ಗಳ ಹಂಚಿಕೆಯನ್ನು ಪ್ರಕಟಿಸಿದ್ದಾರೆ. ಮಧ್ಯಂತರ ಬಜೆಟ್​ನಲ್ಲಿ ರಕ್ಷಣಾ ಸಚಿವಾಲಯಕ್ಕೆ ಹೆಚ್ಚಿನ ಹಂಚಿಕೆ ನೀಡಿರುವುದು ಖಾತರಿಯಾಗಿದ್ದು, ಕೃಷಿ ಇಲಾಖೆ ಕನಿಷ್ಠ ಪಾಲು ಪಡೆದುಕೊಂಡಿದೆ.

ಕಳೆದ ನಾಲ್ಕು ವರ್ಷಗಳಲ್ಲಿ ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಯ ಮೇಲೆ ದ್ವಿಗುಣ ಪರಿಣಾಮ ಬೀರಿದೆ ಎಂಬುದಾಗಿ ವಿತ್ತ ಸಚಿವರು ಹೇಳಿದ್ದಾರೆ. ಭಾರತೀಯ ವಿಮಾನಯಾನ ಸಂಸ್ಥೆಗಳು 1,000 ಹೊಸ ವಿಮಾನಗಳಿಗೆ ಆರ್ಡರ್ ನೀಡಿವೆ ಎಂದು ಸಚಿವರು ಇದೇ ವೇಳೆ ಪ್ರಕಟಿಸಿದ್ದಾರೆ.

ರಕ್ಷಣಾ ಕ್ಷೇತ್ರದಲ್ಲಿನ ತಂತ್ರಜ್ಞಾನವನ್ನು ಬಲಪಡಿಸಲು ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಸೀತಾರಾಮನ್ ಹೇಳಿದ್ದಾರೆ. ಕೃಷಿ ಚಟುವಟಿಕೆಗಳಲ್ಲಿ ಸಾರ್ವಜನಿಕ ಮತ್ತು ಖಾಸಗಿ ಹೂಡಿಕೆಯನ್ನು ಸರ್ಕಾರ ಉತ್ತೇಜಿಸುತ್ತದೆ ಎಂಬುದಾಗಿಯೂ ನುಡಿದಿದ್ದಾರೆ. ವಿವಿಧ ಬೆಳೆಗಳ ಮೇಲೆ ನ್ಯಾನೊ ಡಿಎಪಿಯ ಅನ್ವಯವನ್ನು ಕೃಷಿ-ಹವಾಮಾನ ವಲಯಗಳಲ್ಲಿ ವಿಸ್ತರಿಸಲಾಗುವುದು ಎಂದು ಅವರು ಹೇಳಿದ್ದಾರೆ. ಸಿಮೆಂಟ್ ಸೇರಿದಂತೆ ಮೂರು ಪ್ರಮುಖ ರೈಲ್ವೆ ಕಾರಿಡಾರ್​ಗಳನ್ನು ನಿರ್ಮಿಸಲಾಗುವುದು. 40,000 ಸಾಮಾನ್ಯ ರೈಲ್ವೆ ಬೋಗಿಗಳನ್ನು ವಂದೇ ಭಾರತ್ ಮಾನದಂಡಕ್ಕೆ ಪರಿವರ್ತಿಸಲಾಗುವುದು ಎಂದು ಹಣಕಾಸು ಸಚಿವರು ಹೇಳಿದರು.

ಈ ಸುದ್ದಿಯನ್ನೂ ಓದಿ: Central Budget 2024: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಬಜೆಟ್​ನಲ್ಲಿ ಪ್ರಕಟಿಸಿರುವ ಇಲಾಖಾವಾರು ಅನುದಾನ ವಿತರಣೆ ಹೀಗಿದೆ.

Exit mobile version