Site icon Vistara News

Building Collapsed: 3 ಅಂತಸ್ತಿನ ಕಟ್ಟಡ ಕುಸಿತ; ಅವಶೇಷದ ಅಡಿಯಲ್ಲಿ ಹಲವರು ಸಿಕ್ಕಿ ಬಿದ್ದಿರುವ ಶಂಕೆ

Building Collapsed

ಮುಂಬೈ: ನವಿಮುಂಬೈಯ ಶಹಬಾಜ್‌ನಲ್ಲಿ ಇಂದು (ಜುಲೈ 27) ಬೆಳಿಗ್ಗೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಹಲವಾರು ಮಂದಿ ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ (Building Collapsed). ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್‌ ತಂಡಗಳು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಬೆಳಿಗ್ಗೆ 5 ಗಂಟೆ ಸುಮಾರಿಗೆ ಕಟ್ಟಡ ಕುಸಿದಿದೆ ಎಂದು ನವೀ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಆಯುಕ್ತ ಕೈಲಾಸ್ ಶಿಂಧೆ ತಿಳಿಸಿದ್ದಾರೆ. “ಇದು ಜಿ+3 ಕಟ್ಟಡ. ಈ ಕಟ್ಟಡ ಇರುವ ಶಹಬಾಜ್ ಗ್ರಾಮ ಬೇಲಾಪುರ ವಾರ್ಡ್ ವ್ಯಾಪ್ತಿಗೆ ಬರುತ್ತವೆ. ಕಟ್ಟಡದಲ್ಲಿ 13 ಫ್ಲ್ಯಾಟ್‌ಗಳಿವೆ. ಈಗಾಗಲೇ ಇಬ್ಬರನ್ನು ರಕ್ಷಿಸಲಾಗಿದೆ. ಎನ್‌ಡಿಆರ್‌ಎಫ್‌ ತಂಡಗಳು ಸ್ಥಳದಲ್ಲಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಕೈಲಾಸ್ ಶಿಂಧೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ರಕ್ಷಿಸಲಾದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ಕೈಲಾಸ್ ಶಿಂಧೆ ತಿಳಿಸಿದ್ದಾರೆ. “ಇದು 10 ವರ್ಷ ಹಳೆಯ ಕಟ್ಟಡ. ಯಾವ ಕಾರಣಕ್ಕಾಗಿ ಕುಸಿದಿದೆ ಎನ್ನುವ ಬಗ್ಗೆ ತನಿಖೆ ಮುಂದುವರೆದಿದೆ. ಕಟ್ಟಡದ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದುʼʼ ಎಂದು ಅವರು ಎಚ್ಚರಿಸಿದ್ದಾರೆ.

ವಾರದ ಹಿಂದೆಯೂ ನಡೆದಿತ್ತು

ಕಳೆದ ವಾರ ನಾಲ್ಕು ಅಂತಸ್ತಿನ ಕಟ್ಟಡ(Building Collapsed)ವೊಂದು ಏಕಾಏಕಿ ಕುಸಿದು ಬಿದ್ದು, ಮಹಿಳೆಯೊಬ್ಬಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮುಂಬೈ (Mumbai)ಯಲ್ಲಿ ನಡೆದಿತ್ತು. ಮುಂಬೈನ ಗ್ರಾಂಟ್ ರಸ್ತೆಯಲ್ಲಿರುವ ಕಟ್ಟಡವೊಂದರ ಮುಂಭಾಗದ ಭಾಗ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡಿದ್ದರು. ಆ ಘಟನೆ ಮರೆಯಾಗುವ ಮುನ್ನ ಇನ್ನೊಂದು ದುರಂತ ಸಂಭವಿಸಿದೆ.

ನಾಲ್ಕು ಅಂತಸ್ತಿನ ರುಬಿನಿಸಾ ಮಂಜಿಲ್ ಕಟ್ಟಡದ ಎರಡು ಮತ್ತು ಮೂರನೇ ಮಹಡಿಯ ಭಾಗಗಳು ಬಾಲ್ಕನಿಯೊಂದಿಗೆ ಬೆಳಗ್ಗೆ ಕುಸಿದು ಬಿದ್ದಿದ್ದವು. ಕಟ್ಟಡ ಕುಸಿತದ ವೇಳೆ ಸುಮಾರು 35-40 ಮಂದಿ ಕಟ್ಟಡದಲ್ಲಿದ್ದರು. ಅವರೆಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿತ್ತು. ಅವಶೇಷಗಳಡಿಯಲ್ಲಿ ಕಾಲು ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ರಕ್ಷಿಸಲು ಸ್ಥಳೀಯರು ಕಾಂಕ್ರೀಟ್ ಚಪ್ಪಡಿಗಳನ್ನು ಎತ್ತುತ್ತಿರುವ ದೃಶ್ಯ ಕಂಡು ಬಂದಿತ್ತು. ಪೊಲೀಸರು ಮತ್ತು ಆಂಬ್ಯುಲೆನ್ಸ್‌ಗಳೊಂದಿಗೆ ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಬೀಡು ಬಿಟ್ಟು ರಕ್ಷಣಾ ಕಾರ್ಯಾಚರಣೆ ನಡೆಸಿದ್ದವು. ಮುಂಬೈ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಈ ಕಟ್ಟಡ ಕುಸಿದಿತ್ತು ಎನ್ನಲಾಗಿದೆ. ಇನ್ನು ಈ ಕಟ್ಟಡ ಅತ್ಯಂತ ಹಳೆಯ ಕಟ್ಟಡವಾಗಿರುವ ಕಾರಣ ಅದನ್ನು ಸಂಪೂರ್ಣವಾಗಿ ತೆರವು ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: Building Collapsed: ಭಾರೀ ಮಳೆಗೆ ನಾಲ್ಕು ಅಂತಸ್ತಿಗೆ ಕಟ್ಟಡ ಧರಾಶಾಹಿ; ಮಹಿಳೆ ಬಲಿ

Exit mobile version