ಶ್ರೀನಗರ: 37 ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP jawans) ಮತ್ತು ಇಬ್ಬರು ಜಮ್ಮು-ಕಾಶ್ಮೀರ ಪೊಲೀಸರು, ಒಟ್ಟು 39 ಜನ ಪ್ರಯಾಣ ಮಾಡುತ್ತಿದ್ದ ಬಸ್ವೊಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನದಿ ಕಣಿವೆಗೆ ಬಿದ್ದಿದೆ. ಈ ದುರಂತದಲ್ಲಿ ಐಟಿಬಿಪಿಯ 10 ಸಿಬ್ಬಂದಿ ದುರ್ಮರಣಕ್ಕೀಡಾಗಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಯಾಗಿದೆ. ಅಮರನಾಥ ಯಾತ್ರೆ ಸಂಚರಿಸುವ ಮಾರ್ಗಗಳಲ್ಲಿ ಕರ್ತವ್ಯದಲ್ಲಿದ್ದ ಇವರು ಜಮ್ಮು-ಕಾಶ್ಮೀರ ಪೊಲೀಸ್ ಡಿಪಾರ್ಟ್ಮೆಂಟ್ಗೆ ಸೇರಿದ ಬಸ್ನಲ್ಲಿ ಚಂದನ್ವಾರಿಯಿಂದ ಶ್ರೀನಗರ ಪೊಲೀಸ್ ಕಂಟ್ರೋಲ್ ರೂಮ್ಗೆ ತೆರಳುತ್ತಿದ್ದರು. ಬಸ್ನ ಬ್ರೇಕ್ ಫೇಲ್ ಆಗಿ ಈ ದುರ್ಘಟನೆ ನಡೆದಿದೆ ಎಂದು ಐಟಿಬಿಪಿ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಬಗ್ಗೆ ಕಾಶ್ಮೀರ ವಲಯ ಪೊಲೀಸ್ ಟ್ವೀಟ್ ಮಾಡಿದ್ದು, ‘ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿರುವ ಚಂದನ್ವಾರಿ ಎಂಬಲ್ಲಿ ಪೊಲೀಸ್ ವಾಹನ ಅಪಘಾತಕ್ಕೀಡಾಗಿದೆ. ಇದರಲ್ಲಿ ಐಟಿಬಿಪಿಯ ಆರು ಜವಾನರು ಮೃತಪಟ್ಟಿದ್ದಾರೆ. ಇನ್ನೂ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲ್ಲರನ್ನೂ ಬಸ್ನಿಂದ ಹೊರಗೆ ತೆಗೆದು, ಶ್ರೀನಗರದಲ್ಲಿರುವ ಸೇನಾ ಆಸ್ಪತ್ರೆಗೆ ಏರ್ಲಿಫ್ಟ್ ಮಾಡಲಾಗಿದೆ. ತ್ವರಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ, ಬ್ಯಾಂಕ್ ಮ್ಯಾನೇಜರ್ ಬರ್ಬರ ಹತ್ಯೆ