ಪೂಂಚ್: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಬರೇರಿ ನಲ್ಲಾಹ್ ಎಂಬಲ್ಲಿ ಬಸ್ವೊಂದು ಕಂದಕಕ್ಕೆ ಉರುಳಿ (Bus falls into gorge )11 ಮಂದಿ ಮೃತಪಟ್ಟಿದ್ದಾರೆ ಮತ್ತು ಸುಮಾರು 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಬಸ್ ಸಾವ್ಜಿಯಾನ್ ನಿಂದ ಮಂಡಿಗೆ ತೆರಳುತ್ತಿತ್ತು. ಬಸ್ ಕಂದಕಕ್ಕೆ ಬೀಳುತ್ತಿದ್ದಂತೆ ಸ್ಥಳೀಯರು ಮೊದಲು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು, ಸೈನಿಕರು, ರಕ್ಷಣಾ ತಂಡದ ಜತೆ ತಾವೂ ಕೈಜೋಡಿಸಿದ್ದಾರೆ. ಸದ್ಯ ಗಾಯಗೊಂಡವರನ್ನೆಲ್ಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬಸ್ ದುರಂತದ ಬಗ್ಗೆ ಟ್ವೀಟ್ ಮಾಡಿದ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ‘ಪೂಂಚ್ನ ಸಾವ್ಜಿಯಾನ್ ನಲ್ಲಿ ನಡೆದ ಬಸ್ ಅಪಘಾತದಿಂದ ಮೃತಪಟ್ಟವರಿಗೆ ಸಂತಾಪಗಳು. ಅವರ ಕುಟುಂಬಕ್ಕೆ ನೋವು ಸಹಿಸುವ ಶಕ್ತಿಯನ್ನು ದೇವರು ನೀಡಲಿ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಹಾಗೇ, ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಇದನ್ನೂ ಓದಿ: ಬೀದರ್‌ನಲ್ಲಿ ಕಾರು-ಬಸ್ ಅಪಘಾತ: ಹೈದರಾಬಾದ್ ಮೂಲದ ಇಬ್ಬರು ಸ್ಥಳದಲ್ಲಿಯೇ ಸಾವು