Site icon Vistara News

Bypoll Results: ಉಪ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗ; 13ರ ಪೈಕಿ 10ರಲ್ಲಿ ಇಂಡಿಯಾ ಒಕ್ಕೂಟಕ್ಕೆ ಜಯ!

Bypoll Results

Bypoll Results: INDIA bloc wins 10 of 13 seats, BJP gets 2

ನವದೆಹಲಿ: ಕಳೆದ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ (NDA) ಭಾರಿ ಪೈಪೋಟಿ ನೀಡಿದ್ದ ಇಂಡಿಯಾ ಒಕ್ಕೂಟವು (INDIA Bloc) ವಿಧಾನಸಭೆಯ 13 ಕ್ಷೇತ್ರಗಳ ಉಪಚುನಾವಣೆಯಲ್ಲೂ ಪ್ರಾಬಲ್ಯ ಸಾಧಿಸಿದೆ. ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭೆ ಕ್ಷೇತ್ರಗಳಿಗೆ ನಡೆದಿದ್ದ ಚುನಾವಣೆ ಫಲಿತಾಂಶವು (Bypoll Results) ಶನಿವಾರ (ಜುಲೈ 13) ಪ್ರಕಟವಾಗಿದ್ದು, ಇಂಡಿಯಾ ಒಕ್ಕೂಟವು 10 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ನರೇಂದ್ರ ಮೋದಿ (Narendra Modi) ವರ್ಚಸ್ಸಿನ ಬಿಜೆಪಿಯು ಕೇವಲ 2 ಕ್ಷೇತ್ರಗಳಲ್ಲಿ ಗೆದ್ದಿದೆ. ಒಬ್ಬ ಸ್ವತಂತ್ರ ಅಭ್ಯರ್ಥಿಯು ಗೆಲುವು ಸಾಧಿಸಿದ್ದಾರೆ.

ಯಾವ ರಾಜ್ಯದಲ್ಲಿ ಯಾರಿಗೆ ಮೇಲುಗೈ?

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಪಕ್ಷವು ಕ್ಲೀನ್‌ ಸ್ವೀಪ್‌ ಮಾಡಿದೆ. ಚುನಾವಣೆ ನಡೆದ ನಾಲ್ಕಕ್ಕೆ ನಾಲ್ಕೂ ಕ್ಷೇತ್ರಗಳಲ್ಲಿ ಟಿಎಂಸಿ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಇನ್ನು, ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ತಲಾ 2 ಕ್ಷೇತ್ರಗಳನ್ನು ವಶಪಡಿಸಿಕೊಂಡಿದೆ. ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷವು 1 ಕ್ಷೇತ್ರ ಹಾಗೂ ಬಿಹಾರದ ರುಪೌಲಿ ವಿಧಾನಸಭೆ ಕ್ಷೇತ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಅಭ್ಯರ್ಥಿಯು ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಗೆದ್ದಿದ್ದು ಎಲ್ಲಿ?

ಬಿಜೆಪಿಯು ಹಿಮಾಚಲ ಪ್ರದೇಶ ಹಾಗೂ ಮಧ್ಯಪ್ರದೇಶದಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿದೆ. ಹಿಮಾಚಲ ಪ್ರದೇಶದ ಹಮೀರ್‌ಪುರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪುಷ್ಪಿಂದರ್‌ ವರ್ಮಾ ವಿರುದ್ಧ ಬಿಜೆಪಿಯ ಆಶಿಶ್‌ ಶರ್ಮಾ ಅವರು 1,500 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಕಮಲೇಶ್‌ ಶಾ ಅವರು ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯ ಅಮರ್‌ವಾರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಇವರು ಕಾಂಗ್ರೆಸ್‌ನ ದೀರೆನ್‌ ಶಾ ವಿರುದ್ಧ 3,252 ಮತಗಳ ಅಂತರದಿಂದ ಗೆದ್ದಿದ್ದಾರೆ.

ಹಿಮಾಚಲ ಪ್ರದೇಶ ಸಿಎಂ ಪತ್ನಿಗೆ ಜಯ

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರ ಪತ್ನಿ ಕಾಂಗ್ರೆಸ್‌ನ ಕಮಲೇಶ್ ಠಾಕೂರ್ ಡೆಹ್ರಾದಲ್ಲಿ ಗೆಲುವು ಸಾಧಿಸಿದ್ದಾರೆ. ಪಂಜಾಬ್‌ನ ಜಲಂಧರ್ ಪಶ್ಚಿಮ ಕ್ಷೇತ್ರದಲ್ಲಿ ಆಮ್‌ ಆದ್ಮಿ ಪಕ್ಷ (AAP) ಮೊಹಿಂದರ್ ಭಗತ್ 23,000 ಮತಗಳಿಂದ ಗೆದ್ದಿದ್ದಾರೆ. ಪಶ್ಚಿಮ ಬಂಗಾಳದ ರಾಯ್‌ಗಂಜ್‌, ರಣಘತ್ ದಕ್ಷಿಣ, ಬಾಗ್ಡಾ ಮತ್ತು ಮಾನಿಕ್ತಾಲಾ ಕ್ಷೇತ್ರಗಳಲ್ಲಿ ಕಟಿಎಂಸಿ, ಉತ್ತರಾಖಂಡದ ಬದ್ರಿನಾಥ್ ಮತ್ತು ಮಂಗ್ಲೌರ್‌ನಲ್ಲಿ ಕಾಂಗ್ರೆಸ್, ಪಂಜಾಬ್‌ನ ಜಲಂಧರ್ ವೆಸ್ಟ್‌ನಲ್ಲಿ ಟಿಎಂಸಿ ಗೆಲುವು ಸಾಧಿಸಿದೆ.

ಇದನ್ನೂ ಓದಿ: MLC Election Result: ಮಹಾರಾಷ್ಟ್ರ ಎಂಎಲ್‌‌ಸಿ ಚುನಾವಣೆ; ಇಂಡಿ ಕೂಟಕ್ಕೆ ಕೈ ಕೊಟ್ಟ 7 ಕಾಂಗ್ರೆಸ್ ಶಾಸಕರು!

Exit mobile version