Site icon Vistara News

Bypolls 2023: 7 ಕ್ಷೇತ್ರಗಳಲ್ಲಿ ಉಪಚುನಾವಣೆ ಮತದಾನ ಆರಂಭ, INDIA ಬ್ಲಾಕ್‌ಗೆ ಮೊದಲ ಪರೀಕ್ಷೆ

Bypolls 2023 on 7 seats

ಹೊಸದಿಲ್ಲಿ: ಉತ್ತರ ಪ್ರದೇಶ, ಉತ್ತರಾಖಂಡ, ಕೇರಳ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್ ಹೀಗೆ ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯ (Bypolls 2023) ಮತದಾನ ಪ್ರಕ್ರಿಯೆ ಮಂಗಳವಾರ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಿದೆ.

ಇದು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಮತ್ತು ವಿಪಕ್ಷಗಳ ಒಕ್ಕೂಟ INDIA bloc ನಡುವಿನ ಮೊದಲ ಸ್ಪರ್ಧೆಯಾಗಿದೆ. 2024ರಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಹೊಸದಾಗಿ ರೂಪುಗೊಂಡಿರುವ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟದ (ಇಂಡಿಯಾ) ಸಾಮರ್ಥ್ಯವನ್ನು ಸಾಬೀತುಪಡಿಸಬೇಕಿದೆ.

ತ್ರಿಪುರಾದ ಬೊಕ್ಸಾನಗರ್ ಮತ್ತು ಧನ್‌ಪುರ್ ಎಂಬ ಎರಡು ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದೆ. ಕೇರಳದ ಪುತ್ತುಪ್ಪಲ್ಲಿ ಕ್ಷೇತ್ರ ಉಮ್ಮನ್ ಚಾಂಡಿ ಅವರ ನಿಧನದಿಂದ ತೆರವಾಗಿದೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕ ಮತ್ತು ಒಬಿಸಿ ನಾಯಕ ದಾರಾ ಸಿಂಗ್ ಚೌಹಾಣ್ ಅವರು ಬಿಜೆಪಿಗೆ ಮರು ಸೇರ್ಪಡೆಗೊಂಡ ನಂತರ ರಾಜೀನಾಮೆ ನೀಡಿದ ನಂತರ ಘೋಸಿ ಸ್ಥಾನ ತೆರವಾಗಿತ್ತು.

ಉತ್ತರ ಬಂಗಾಳದ ಧುಪ್ಗುರಿ ವಿಧಾನಸಭಾ ಕ್ಷೇತ್ರ, ಜಾರ್ಖಂಡ್‌ನ ಡುಮ್ರಿ ಮತ್ತು ಉತ್ತರಾಖಂಡದ ಬಾಗೇಶ್ವರ್ ವಿಧಾನಸಭಾ ಕ್ಷೇತ್ರಗಳಿಗೂ ಮಂಗಳವಾರ ಮತದಾನ ನಡೆಯುತ್ತಿದೆ. ಶುಕ್ರವಾರ ಉಪಚುನಾವಣೆ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇದನ್ನೂ ಓದಿ: Udhayanidhi Stalin: ಉದಯನಿಧಿ ಹೇಳಿಕೆ ದುರದೃಷ್ಟಕರ ಎಂದ ಇಂಡಿಯಾ ಕೂಟದ ಪ್ರಮುಖ ಪಕ್ಷ ಟಿಎಂಸಿ

Exit mobile version